ಬಾರ್ಕೂರು( ಏ.8): ಬಾರ್ಕೂರಿನ ಶ್ರೀ ಪಂಚ ಲಿಂಗೇಶ್ವರ ದೇವಾಲಯದ ರಥೋತ್ಸವದ ಸಂದರ್ಭದಲ್ಲಿ ಪಿ ಕಾಳಿಂಗ ರಾವ್ ಪ್ರತಿಷ್ಠಾನ ಬೆಂಗಳೂರು ಇವರು ಏರ್ಪಡಿಸಿದ “ಜಾನಪದ ವೈಭವ” ಕಾರ್ಯಕ್ರಮ ಏ.08 ರಂದು ನಡೆಯಿತು. ಈ ಕಾರ್ಯಕ್ರಮವನ್ನು ನಾಡಿನ ಖ್ಯಾತ ಸುಗಮ ಸಂಗೀತ ಗಾಯಕ ಡಾ.ಗಣೇಶ್ ಗಂಗೊಳ್ಳಿ ಹಾಗೂ ಬಳಗದವರು ಜಾನಪದ ವೈಭವ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಡಾ.ಗಣೇಶ್ ಗಂಗೊಳ್ಳಿ ಅವರನ್ನು ಕಾಳಿಂಗ ರಾವ್ ಪ್ರತಿಷ್ಠಾನದ ವತಿಯಿಂದ ಶ್ರೀ ರಾಮಚಂದ್ರ ನಾಯಕ್ ಸರ್ಕಲ್ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಮೇಲ್ ಗಂಗೊಳ್ಳಿ: ಏ.20 ರಂದು ವಿಶೇಷ ಕಾರ್ಯಕ್ರಮ
ಗಂಗೊಳ್ಳಿ (ಏ .11): ಡಾ. ಬಿ.ಆರ್. ಅಂಬೇಡ್ಕರ್ ಯುವಕ ಮಂಡಲ ಮೇಲ್ ಗಂಗೊಳ್ಳಿ ಇದರ 35 ನೇ ವಾರ್ಷಿಕೋತ್ಸವ ಮತ್ತು ಅಮೃತ ಯುವತಿ ಮಂಡಲ ಹಾಗೂ ಅರ್ಚನಾ ಮಹಿಳಾ ಮಂಡಲ ಮೇಲ್ ಗಂಗೊಳ್ಳಿಯ 29 ನೇ ವಾರ್ಷಿಕೋತ್ಸವ ಹಾಗೂ ಡಾ. ಬಿ ಆರ್. ಅಂಬೇಡ್ಕರ್ ಅವರ 131ನೇ ಜನ್ಮದಿನಾಚರಣೆಯ ಕಾರ್ಯಕ್ರಮವು ಮೇಲ್ ಗಂಗೊಳ್ಳಿಯ ಪೋರ್ಟ್ ಬಂಗ್ಲೆ ಮೈದಾನದಲ್ಲಿ ಏ.20 ರ ಬುಧವಾರದಂದು ಜರಗಲಿರುವುದು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀನಿವಾಸ […]
ರಸಪ್ರಶ್ನೆ ಸ್ಪರ್ಧೆಯಲ್ಲಿ ಡಾ.ಬಿ.ಬಿ ಹೆಗ್ಡೆ ಕಾಲೇಜಿಗೆ ಪ್ರಥಮ ಸ್ಥಾನ
ಕುಂದಾಪುರ (ಏ.10): ಜಿಲ್ಲಾ ಕ್ಷಯ ರೋಗ ನಿರ್ಮೂಲನ ಕಛೇರಿ- ಕ್ಷಯ ಘಟಕ ಕುಂದಾಪುರ, ತಾಲ್ಲೂಕು ಆರೋಗ್ಯ ಕೇಂದ್ರ ಕುಂದಾಪುರ ಇವರ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಕ್ಷಯ ರೋಗದ ಕುರಿತಾದ ಆಯ್ದ ಪದವಿ ಕಾಲೇಜುಗಳ ಅಂತರ್ ಕಾಲೇಜು ರಸಪ್ರಶ್ನೆ ಸ್ಪರ್ಧೆಯಲ್ಲಿ ಡಾ.ಬಿ.ಬಿ.ಹೆಗ್ಡೆ ಕಾಲೇಜು ಪ್ರಥಮ ಸ್ಥಾನ ಗಳಿಸಿದೆ. ವಿಜೇತರಿಗೆ ಕುಂದಾಪುರ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ರಾಜೇಶ್ವರಿಯವರು ಪ್ರಶಸ್ತಿ ನೀಡಿ ಗೌರವಿಸಿದರು. ತಂಡದಲ್ಲಿ ಭಾಗಿಯಾದ ಅಕ್ಷಯ್ ಶೆಟ್ಟಿ, ಅಕ್ಷತ್ , ಶ್ವೇತಾ,ಮೇಘನಾ […]
ಬೈಂದೂರು :ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ
ಬೈಂದೂರು (ಏ,10): ಸ್ವಾತಂತ್ರ್ಯ ಹೋರಾಟಗಾರ ಬಾಡಾ ದಿ.ಮಂಜುನಾಥ ಜೋಶಿ ಯವರ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ಎನ್ನುವ ನಾಮಫಲಕ ಅಳವಡಿಕೆ ಕಾರ್ಯಕ್ರಮ ಇತ್ತೀಚೆಗೆ ಬೈಂದೂರು ತಾಲೂಕು ವ್ಯಾಪ್ತಿಯ ಬಾಡಾದಲ್ಲಿ ನಡೆಯಿತು. ನಾಮ ಫಲಕ ಅನಾವರಣವನ್ನು ಉದ್ಯಮಿ ಶ್ರೀ ಸುಜೀತ್ ಶೆಟ್ಟಿ ಹಿಲಿಯಾಣ ರವರು ನೆರವೇರಿಸಿದರು. ಕಾರ್ಯಕ್ರಮದ ಅತಿಥಿಯಾಗಿ ಶ್ರೀ ಜಯಾನಂದ ಹೋಬಳಿದಾರ್, ನಾಗರತ್ನ ಹೇರಳೆ,ಶ್ರೀ ಜಯದೇವಿ ಭಟ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಅರುಣ ಶಿರೂರು ರವರು ವಹಿಸಿದ್ದರು.ಸ್ವರಾಜ್ಯ75 ಸಂಘಟನೆಯ ನೇತ್ರತ್ವದಲ್ಲಿ […]
ಗುಣಾತ್ಮಕ ಶಿಕ್ಷಣ ನೀಡಲು ಸಜ್ಜಾಗಿದೆ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು
“ ಶಿಕ್ಷಣ ಭಾರತದ ಗ್ರಾಮೀಣ ಪ್ರದೇಶಗಳನ್ನು ತಲುಪಬೇಕು. ದೇಶದ ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಗುರಿಯನ್ನು ಸಾಧಿಸುವಂತಾಗಬೇಕು ” ಎಂಬ ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ರವರ ನುಡಿಯಂತೆ ಸಮಾಜದ ಸಮಗ್ರ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಪ್ರಮುಖವಾದದ್ದು. ಸ್ಪರ್ಧಾತ್ಮಕ ಜಗತ್ತಿನ ವೇಗದ ಜೊತೆಗೆ ಹೆಜ್ಜೆ ಹಾಕಲು ಇಂದಿನ ಯುವ ಪೀಳಿಗೆಗೆ ಸ್ಪರ್ಧಾತ್ಮಕತೆಗೆ ಅನುಗುಣವಾಗಿ ಭವಿಷ್ಯವನ್ನು ರೂಪಿಸಿಕೊಳ್ಳಲು ಕುಂದಾಪುರ ತಾಲೂಕಿನ ಹೆಮ್ಮಾಡಿಯ ಹೃದಯ ಭಾಗದಲ್ಲಿರುವ ಪ್ರಕೃತಿ ರಮಣೀಯ ಪರಿಸರದಲ್ಲಿ ಮೈ ತಳೆದು ನಿಂತಿರುವ […]
ಕುಂದಾಪುರ ತಾಲ್ಲೂಕು ಪತ್ರಕರ್ತರ ಸಂಘ(ರಿ): ನೂತನ ಪದಾಧಿಕಾರಿಗಳ ಆಯ್ಕೆ
ಕುಂದಾಪುರ(ಏ.7): ಕುಂದಾಪುರ ತಾಲ್ಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಂಘದ ಕಚೇರಿಯಲ್ಲಿ ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ಕಿರಣ್ ಪೂಜಾರಿ,ಕಾರ್ಯದರ್ಶಿಯಾಗಿ ಸಂತೋಷ ಪಟೇಲ್, ಗೌರವಾಧ್ಯಕ್ಷರಾಗಿ ಎಸ್ ಸತೀಶ್ ಕುಮಾರ್ ಕೋಟೇಶ್ವರ ರವರನ್ನು ಆಯ್ಕೆ ಮಾಡಲಾಯಿತು. ಕಾನೂನು ಸಲಹೆಗಾರರಾಗಿ ಶ್ರೀ ರವಿಕಿರಣ್ ಮುರ್ಡೇಶ್ವರ ಮತ್ತು ಶ್ರೀ ಸೋಮನಾಥ ಹೆಗ್ಡೆ ಮತ್ತು ಸಂಘದ ಗೌರವ ಸಲಹೆಗಾರರಾಗಿ ಕುಂದಾಪುರ ಮಿತ್ರ ಪತ್ರಿಕೆಯ ಸಂಪಾದಕರಾದ ಟಿ. ಪಿ. ಮಂಜುನಾಥ್, ಉಪಾಧ್ಯಕ್ಷರಾಗಿ ಪ್ರದೀಪ್ ಪಟೇಲ್, ದಯಾನಂದ್ ನಾಯಕ್ ಮತ್ತು […]
ಎ.16ಕ್ಕೆ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ರಥೋತ್ಸವ
ಹೆಮ್ಮಾಡಿ (ಏ,7): ಕುಂದಾಪುರ ತಾಲೂಕಿನ ಪ್ರಮಖ ದೇವಾಲಯಗಳಲ್ಲಿ ಒಂದಾದ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ವಾರ್ಷಿಕ ಬ್ರಹ್ಮ ರಥೋತ್ಸವ ಇದೇ ಎಪ್ರಿಲ್ 16 ರ ಶನಿವಾರ ದಂದು ನಡೆಯಲಿದೆ. ರಥೋತ್ಸವದ ಪ್ರಯುಕ್ತ ಎ.14ರಿಂದ 18ರ ವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ನಾವು ನೋಡಿದ ” ದಿ ಕಾಶ್ಮೀರ್ ಫೈಲ್ “
ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಅನ್ನೋ ಗಾದೆ ಮಾತು ಅಕ್ಷರಸಹ ನಿಜ. ಭಾರತೀಯರಿಗೆ ಕಾಶ್ಮೀರ ಕಣಿವೆ ದೂರದಿಂದ ನೋಡಿದಾಗ ಅದೆಷ್ಟು ಸುಂದರ ಅನ್ನಿಸುತ್ತೆ…. ಕವಿ ಮನಗಳಿಗೆ ವರ್ಣಿಸಲು ಅಲ್ಲಿ ಸಾಕಷ್ಟು ಪದಗಳ ಸಾಲುಗಳೇ ಅಡಗಿದೆ. ಇಷ್ಟೊಂದು ಸುಂದರ ತಾಣದ ಇತಿಹಾಸ ಹುಡುಕುತ್ತ ಹೊರಟರೆ ಕಾಶ್ಮೀರ ಕಣಿವೆ ಕರಾಳ ಅದ್ಯಾಯ ಬಗೆದಷ್ಟು ರೋಚಕತೆ ಹೆಚ್ಚಾಗುತ್ತದೆ. ಬನ್ನಿ ಅದರ 30 ವರ್ಷದ ಹಿಂದಿನ ಸತ್ಯ ಘಟನೆ ಕುರಿತು ತಿಳಿದುಕೊಳ್ಳೋಣ. ಯಾವುದೇ ಅಬ್ಬರವಿಲ್ಲದೇ ಮಾರ್ಚ್ […]
ಮೂಡ್ಲಕಟ್ಟೆ ಎಂ ಐ ಟಿ -ಜೆ ಸಿ ಐ ವತಿಯಿಂದ ಅರೋಗ್ಯ ಮಾಹಿತಿ ಕಾರ್ಯಾಗಾರ
ಕುಂದಾಪುರ( ಏ.07 ): ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜು ಮತ್ತು ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು ಇವರ ಆಶ್ರಯದಲ್ಲಿ ಜೆಸಿಐ ಕುಂದಾಪುರ ಇವರ ಪ್ರಾಯೋಜಕತ್ವದ ವಿಶ್ವ ಅರೋಗ್ಯ ದಿನಾಚರಣೆಯ ಪ್ರಯುಕ್ತ ಪ್ರಯಾಸ ಕಾರ್ಯಕ್ರಮದ ಅಡಿಯಲ್ಲಿ ಮಹಿಳೆಯರ ಅರೋಗ್ಯ ಮತ್ತು ಸಮಸ್ಯೆಗಳು ಎಂಬ ವಿಷಯದ ಮೇಲೆ ತಜ್ಞ ವೈದ್ಯರಿಂದ ಮಾಹಿತಿ ಕಾರ್ಯಾಗಾರ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರ ಮನೀಶ್ ಆಸ್ಪತ್ರೆಯ ಸಂಸ್ಥಾಪಕಿ, ಡಾ. ಪ್ರಮೀಳಾ ನಾಯಕ್ ಫೆರ್ನಾಂಡಿಸ್ ಅವರು ಭಾಗವಹಿಸಿದ್ದರು.ಕಾರ್ಯಾಗಾರದಲ್ಲಿ ಮಹಿಳೆಯರ ದೇಹಕ್ಕೆ […]
ಕುಂದಾಪುರ: ಬಿಜೆಪಿ ಮಹಿಳಾ ಮೋರ್ಚಾ ಮಂಡಲದ ಕಾರ್ಯಕಾರಿಣಿ ಸಭೆ
ಕುಂದಾಪುರ (ಏ.7): ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಕುಂದಾಪುರ ಮಂಡಲದ ಕಾರ್ಯಕಾರಿಣಿ ಸಭೆ ಏ.07 ರಂದು ಕುಂದಾಪುರದ ಬಿಜೆಪಿ ಕಚೇರಿಯಲ್ಲಿ ಮಹಿಳಾ ಮೋರ್ಚಾ ಮಂಡಲ ಅಧ್ಯಕ್ಷೆ ರೂಪಾ ಪೈ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮಹಿಳಾ ಮೋರ್ಚಾದ ಕಾರ್ಯಗಳ ಬಗ್ಗೆ ಅವಲೋಕನ ನಡೆಸಲಾಯಿತು. ಮುಂದಿನ ದಿನಗಳಲ್ಲಿ ಚುನಾವಣಾ ದೃಷ್ಟಿಯಿಂದ ಪಕ್ಷ ಸಂಘಟನೆ ಬಗ್ಗೆ, ಮಹಿಳಾ ಮೋರ್ಚಾದ ಪಾತ್ರದ ಬಗ್ಗೆ ಮತ್ತು ಸರ್ಕಾರದ ವಿವಿಧ ಯೋಜನೆಯನ್ನು ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ […]










