ವಂಡ್ಸೆ (ಮಾ. 1): ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹೆಸರಾಂತ ಶಿಲ್ಪಿ , ಕರ್ನಾಟಕದ ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಬೆಂಗಳೂರು ಇದರ ನಿರ್ದೇಶಕರಾದ ಕಳಿ ಚಂದ್ರಯ್ಯ ಆಚಾರ್ಯ ಇವರನ್ನು ಉಪ್ರಳ್ಳಿ ಶ್ರೀಕಾಳಿಕಾಂಬ ದೇವಸ್ಥಾನದ ವೇದಿಕೆಯಲ್ಲಿ ಬೈಂದೂರಿನ ಶಾಸಕ ಬಿಎಂ ಸುಕುಮಾರ್ ಶೆಟ್ಟಿ ಸನ್ಮಾನಿಸಿದರು. ಉಪ್ರಳ್ಳಿ ಮೂಡು ಮಠ ಶ್ರೀ ಕಾಳಿಕಾಂಬ ದೇವಸ್ಥಾನದ ಮುಕ್ತೇಶರರಾಗಿ ಸೇವೆ ಸಲ್ಲಿಸುತ್ತಿರುವ ಇವರು ವಿಶ್ವಕರ್ಮ ಸಮುದಾಯದ ಮುಖಂಡರಾಗಿದ್ದು ವಿವಿಧ ದೇವಾಲಯ ಅಡಳಿತ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಗುಂಡ್ಮಿ ಅಂಬಾಗಿಲು ಕಾರು – ಬೈಕ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಮ್ರತ್ಯು
ಉಡುಪಿ (ಫೆ.28) ಸಾಸ್ತಾನದ ಗುಂಡ್ಮಿ ಅಂಬಾಗಿಲು ಬಳಿ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಕೋಟ ಸಮೀಪದ ಬನ್ನಾಡಿಯ ಸುಭಾಷ್ ಅಮೀನ್ (45) ಮೃತ ಬೈಕ್ ಸವಾರ. ಈತ ಸಿವಿಲ್ ಕಾಂಟ್ರಾಕ್ಟ್ ರಾಗಿದ್ದು, ಕೆಲಸದ ಸಲುವಾಗಿ ಬನ್ನಾಡಿಯಿಂದ ಉಡುಪಿ ಕಡೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಅಪಘಾತ ನಡೆಸಿದ ಕಾರು ಚಾಲಕ ಕುಂದಾಪುರದ ಚರ್ಚ್ […]
ಹರೇಗೋಡು ಆರ್ಥಿಕ ಸಾಕ್ಷರತಾ ಆಂದೋಲನ ವಿಚಾರ ಸಂಕಿರಣ
ಆದಷ್ಟು ನಗದುರಹಿತ ವ್ಯವಹಾರ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಾಯಧನವನ್ನು ಪಡೆದು ದೇಶದ ಆರ್ಥಿಕ ಚೇತರಿಕೆಗೆ ಜನತೆ ಶ್ರಮಿಸ ಬೇಕು ಎಂದು ಹೆಮ್ಮಾಡಿ ಗ್ರಾಮೀಣ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ ರಾವ್ ಹೇಳಿದರು.
ಬಂಟಕಲ್ ಇಂಜಿನಿಯರಿಂಗ್ ಕಾಲೇಜು : ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿಜ್ಞಾನ ವಿಭಾಗ ಹಾಗೂ ಕಾಲೇಜಿನ ಐಎಸ್ಟಿಇ ಘಟಕದ ಸಹಯೋಗದೊಂದಿಗೆ “ನ್ಯಾನೋ ತಂತ್ರಜ್ಞಾನ ಮತ್ತು ಅದರ ಅನ್ವಯಿಕೆಗಳು” ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸವನ್ನು ಶ್ರೇಷ್ಠ ಭಾರತೀಯ ಭೌತವಿಜ್ಞಾನಿ ಸರ್. ಸಿ. ವಿ ರಾಮನ್ ಅವರ ನೆನಪಿಗಾಗಿ “ರಾಷ್ಟ್ರೀಯ ವಿಜ್ಞಾನ ದಿನಾಚರಣೆ”ಯ ಅಂಗವಾಗಿ 26 ಫೆಬ್ರವರಿ 2021ರಂದು ಸಂಸ್ಥೆಯಲ್ಲಿ ಆಯೋಜಿಸಲಾಗಿತ್ತು
ಪವರ್ ಲಿಪ್ಟರ್ ಸತೀಶ್ ಖಾರ್ವಿಗೆ ಚಿನ್ನದ ಪದಕ
ಇಂದು ಸಾಲಿಗ್ರಾಮ ದಲ್ಲಿ ನಡೆದ ರಾಜ್ಯಮಟ್ಟದ ಪುರುಷರ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕುಂದಾಪುರ ಹರ್ಕ್ಯುಲೆಸ್ ಜಿಮ್ ನ ವ್ಯವಸ್ಥಾಪಕ ಸತೀಶ್ ಖಾರ್ವಿ ಒಟ್ಟು 540 ಕೆ.ಜಿ. ಭಾರವನ್ನು ಎತ್ತಿ ಚಿನ್ನದ ಪದಕ ಪಡೆದಿದ್ದಾರೆ.
ಹೆಮ್ಮಾಡಿಯ ಹೆಮ್ಮೆಯ ಕ್ರೀಡಾಪಟು ರೈಸನ್ ಕರ್ನಾಟಕ ವಾಲಿಬಾಲ್ ತಂಡದ ನಾಯಕನಾಗಿ ಆಯ್ಕೆ
ಮಾರ್ಚ್5ರಿಂದ 11ರ ವರೆಗೆ ಒಡಿಶಾದ ಭುವನೇಶ್ವರದಲ್ಲಿ ನಡೆಯಲಿರುವ 69ನೇ ರಾಷ್ಟ್ರೀಯ ಸೀನಿಯರ್ ವಾಲಿಬಾಲ್ ಪಂದ್ಯಾಕೂಟದಲ್ಲಿ ಕರ್ನಾಟಕ ರಾಜ್ಯ ವಾಲಿಬಾಲ್ ತಂಡವನ್ನು ಈ ಬಾರಿ ಕುಂದಾಪುರದ ಹೆಮ್ಮಾಡಿಯ ರೈಸನ್ ಬೆನೆಟ್ ರೆಬೆಲ್ಲೊ ನಾಯಕನಾಗಿ ಮುನ್ನಡೆಸಲಿದ್ದಾರೆ.
ಗಂಗೊಳ್ಳಿ ಮೀನುಗಾರಿಕಾ ಬಂದರು ಸಮಗ್ರ ಅಭಿವೃದ್ಧಿ – ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ
ಜಿಲ್ಲೆಯ ಪ್ರಮುಖ ಮೀನುಗಾರಿಕಾ ಬಂದರುಗಳಲ್ಲಿ ಒಂದಾಗಿರುವ ಗಂಗೊಳ್ಳಿ ಮೀನುಗಾರಿಕಾ ಬಂದರಿನ ಮೀನುಗಾರಿಕೆ ಜೆಟ್ಟಿಯ ಸುಮಾರು 12 ಕೋಟಿ ರೂ. ವೆಚ್ಚದ ಪುನರ್ ನಿರ್ಮಾಣ ಕಾಮಗಾರಿ ಮತ್ತು ಒಂದು ಕೋಟಿ ರೂ. ವೆಚ್ಚದ ಮೀನುಗಾರಿಕಾ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.
ರಾಜ್ಯ ಮಟ್ಟದ ಭಾವ ಗೀತೆ ಗಾಯನ ಸ್ಪರ್ಧೆ
ಖಿದ್ಮಾ ಫೌಂಡೇಶನ್ ಕರ್ನಾಟಕ ಇವರ ಆಶ್ರಯದಲ್ಲಿ ಅಂಬಿಕಾ ತನಯದತ್ತ ನಾಮಾಂಕಿತ ದ.ರಾ. ಬೇಂದ್ರೆಯವರ ಸಾಹಿತ್ಯ ಆಧಾರಿತ ರಾಜ್ಯ ಮಟ್ಟದ ಭಾವ ಗೀತೆ ಗಾಯನ ಸ್ಪರ್ಧೆಯನ್ನು ಆಯೋಜಿಸಿದ್ದಾರೆ.
ಸ್ಪರ್ಧಾತ್ಮಕ ಜಗತ್ತಿನಲ್ಲಿ ತಂತ್ರಜ್ಞಾನದ ಪಾತ್ರ ಅತಿಮುಖ್ಯ : ಪ್ರೊ. ಕೆ. ಉಮೇಶ್ ಶೆಟ್ಟಿ
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ತಂತ್ರಜ್ಞಾನ ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಅನೇಕ ಅವಕಾಶಗಳಿದ್ದು ವಿದ್ಯಾರ್ಥಿಗಳು ತಮಗೆ ಲಭ್ಯವಿರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.
ಕೊಲ್ಲೂರು : ಸಪ್ತಪದಿ ಯೋಜನೆಯಡಿ ಸಾಮೂಹಿಕ ವಿವಾಹ
ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲೊಂದಾದ ಸಪ್ತಪದಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈ ಯೋಜನೆಯಡಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಫೆ.25ರಂದು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು.