ಉಡುಪಿ : ಪ್ರಗತಿಪರ ಕೃಷಿಕ, ದೇಶಿಯ ಗೋವುಗಳ ರಕ್ಷಣೆ ಮತ್ತು ಪಂಚಗವ್ಯ ಉತ್ಪನ್ನಗಳ ಮಹತ್ವದ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸುತ್ತಿರುವ ಕುಂದಾಪುರ ತಾಲೂಕಿನ ಬೀಜಾಡಿ ಗ್ರಾಮದ ಕಪಿಲೆ ಗೋ ಸಮೃದ್ಧಿ ಟ್ರಸ್ಟ್ (ರಿ) ಇದರ ಪ್ರವರ್ತಕರಾದ ಶ್ರೀಕುಮಾರ್. ಎಸ್. ಕಾಂಚನ್ ರವರಿಗೆ ಕರ್ನಾಟಕ ಸರ್ಕಾರ 2020-21 ನೇ ಸಾಲಿನ ಆತ್ಮ ಯೋಜನೆಯಡಿ, ಕೃಷಿ ಸಂಸ್ಕರಣೆ ವಿಭಾಗದಲ್ಲಿ ಉಡುಪಿ ಜಿಲ್ಲಾ ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಿ ಗೌರವಿಸಿದೆ. ಕರ್ನಾಟಕ ಸರಕಾರದ ಮೀನುಗಾರಿಕೆ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಡಾ. ಬಿ. ಬಿ. ಹೆಗ್ಡೆ ಕಾಲೇಜು: ವಿದ್ಯಾರ್ಥಿಗಳಿಂದ ಶಾನಾಡಿ ಆಲೆಮನೆಗೆ ಭೇಟಿ
ತಾಲೂಕಿನ ಪ್ರಸಿದ್ಧ ನೈಸರ್ಗಿಕ ಬೆಲ್ಲ ತಯಾರಿಕಾ ಕೇಂದ್ರವಾಗಿರುವ ಕೆದೂರು- ಶಾನಾಡಿ ಆಲೆಮನೆ ಬೆಲ್ಲ ತಯಾರಿಕಾ ಘಟಕಕ್ಕೆ ಕಾಲೇಜಿನ ಪ್ರಥಮ ವರ್ಷದ ಬಿ.ಕಾಂ. ಪ್ರೊಫೆಷನಲ್ (ಸಿಎ, ಸಿಎಸ್, ಸಿ.ಎಮ್.ಎ.) ಬ್ಯಾಚಿನ ವಿದ್ಯಾರ್ಥಿಗಳು ವಿಸ್ತರಣಾ ಚಟುವಟಿಕೆಯ ಹಿನ್ನೆಲೆಯಲ್ಲಿ ಭೇಟಿ ನೀಡಿದರು.
ಗೋಪಾಡಿ ಕಡಲ ತೀರ- ಕಡಲಾಮೆ ಮೊಟ್ಟೆ ರಕ್ಷಣೆ
ಕುಂದಾಪುರ: ಕುಂದಾಪುರ ತಾಲೂಕು ಗೋಪಾಡಿ ಗ್ರಾಮದ ಮಲಸಾವರಿ ಪಂಜುರ್ಲಿ ದೈವಸ್ಥಾನದ ಚೆರ್ಕಿ ಕಡು ಸಮುದ್ರತೀರದಲ್ಲಿ ಫೆಬ್ರುವರಿ 03 ರ ಬುಧವಾರ ರಾತ್ರಿ ಸಮಯದಲ್ಲಿ ಕಡಲಾಮೆ ಮೊಟ್ಟೆ ಪತ್ತೆಯಾಗಿದ್ದು, ಕರಾವಳಿ ಫ್ರೆಂಡ್ಸ್ ನ ಸಂತೋಷ್ ಪೂಜಾರಿ ಹಾಗೂ ಲೋಕೇಶ್ ಪೂಜಾರಿಯವರು ಕಡಲಾಮೆ ಮೊಟ್ಟೆಯನ್ನು ಪತ್ತೆಹಚ್ಚಿದ್ದು, ಇದೀಗ ಸರಿ ಸುಮಾರು 130 ಮೊಟ್ಟೆಗಳನ್ನು ಸಂರಕ್ಷಿಸಲಾಗಿದೆ. ಕ್ಲೀನ್ ಕುಂದಾಪುರ ಪ್ರೊಜೆಕ್ಟ್ ಹಾಗೂ ಎಫ್.ಎಸ್.ಎಲ್. ಇಂಡಿಯಾದ ಸದಸ್ಯರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಡಿ.ಸಿ.ಎಫ್ ಆಶಿಶ್ ರೆಡ್ಡಿ, […]
ಡಾ|ಬಿ. ಬಿ. ಹೆಗ್ಗೆ ಕಾಲೇಜು, ಕುಂದಾಪುರ – ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಉದ್ಘಾಟನೆ
ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಅಗತ್ಯ. ಆ ಮೂಲಕ ವಿದ್ಯಾರ್ಥಿದೆಸೆಯಲ್ಲಿಯೇ ಆತ್ಮ ಸ್ಥೈರ್ಯದಿಂದ ಕಾರ್ಯಪ್ರವೃತ್ತರಾದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಬಿ.ಎಸ್. ಸುರೇಶ್ ಶೆಟ್ಟಿ ಹೇಳಿದರು.
ಅಂತರ್ ಕಾಲೇಜು ಪ್ರಬಂಧ ಸ್ಪರ್ಧೆ: ಡಾ ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಜೇಶ್ ಪ್ರಥಮ
ಕುಂದಾಪುರ: ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ವಿವೇಕಾನಂದ ಜಯಂತಿ ಪ್ರಯುಕ್ತ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರ್ ಕಾಲೇಜು ಪ್ರಬಂಧ ಸ್ಪರ್ಧೆಯಲ್ಲಿ ಕುಂದಾಪುರದ ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ರಾಜೇಶ್ ಪ್ರಥಮ ಸ್ಥಾನ ಪಡೆದಿರುತ್ತಾರೆ. ಈ ಹಿಂದೆ ಇದೇ ಶೈಕ್ಷಣಿಕ ವರ್ಷ ಯುವ ರೆಡ್ ಕ್ರಾಸ್ ಘಟಕ ಆಯೋಜಿಸಿದ ಅಂತರ್ ಕಾಲೇಜು ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಸಹ ರಾಜೇಶ್ ಪ್ರಥಮ ಸ್ಥಾನವನ್ನು […]
ಪ್ಲಾಸ್ಟಿಕ್ನ ದುರ್ಬಳಕೆ: ಜಾಗೃತಿ ಕಾರ್ಯಕ್ರಮ
ಕೋಟೇಶ್ವರ : ಇ. ಸಿ. ಆರ್. ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಮಧುವನ, ಬ್ರಹ್ಮಾವರ ಇಲ್ಲಿ ದಿನಾಂಕ 30-01-2021 ರಂದು ‘ಹುತಾತ್ಮರ ದಿನ’ದ ಅಂಗವಾಗಿ ನೇಚರ್ ಕ್ಲಬ್ ವತಿಯಿಂದ ಪ್ಲಾಸ್ಟಿಕ್ ದುರ್ಬಳಕೆ ಕುರಿತು ವಿದ್ಯಾರ್ಥಿಗಳಿಂದ ನೃತ್ಯ ರೂಪಕದ ಮೂಲಕ ಜಾಗೃತಿ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ಶ್ರೀ ಆಕಾಶ್ ಸವಳಸಂಗ್ ಹಾಗೂ ಏವಿಯೇಷನ್ ವಿಭಾಗ ಮುಖ್ಯಸ್ಥರಾದ ಶ್ರೀ ಮಿರ್ ತಾಜ್ದಾರ್ ಹುಸೇನ್ ಇವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಪ್ಲಾಸ್ಟಿಕ್ನ ಅತಿಯಾದ ಬಳಕೆಯಿಂದ ಪ್ರಕೃತಿ ಮೇಲಾಗುವ […]
ಹೆಸ್ಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಮಾಣಿಕತಾ ಮಳಿಗೆ (HONESTY SHOP) ವಿನೂತನ ಪ್ರಯೋಗ
ವಿದ್ಯಾರ್ಥಿಗಳನ್ನು ಸದಾ ಕ್ರಿಯಾಶೀಲರನ್ನಾಗಿ ರೂಪಿಸಲು ಶ್ರಮಿಸುತ್ತಿರುವ ರಾಜ್ಯ ಪ್ರಶಸ್ತಿ ಪುರಸ್ಕೃತ ಹೆಸ್ಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಜೆ.ಸಿ.ಐ ಕುಂದಾಪುರ ಜೊತೆಗೂಡಿ ಶಾಲೆಯ ವಿದ್ಯಾರ್ಥಿಗಳಿಗಾಗಿ ಪ್ರಾಮಾಣಿಕತಾ ಮಳಿಗೆ”.(HONESTY SHOP) ಪ್ರಾರಂಭಿಸಿದೆ.
ಫೆಬ್ರವರಿ 12 ರಿಂದ 14 ಶ್ರೀ ಕ್ಷೇತ್ರ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜಾತ್ರಾ ಮಹೋತ್ಸವ
ಕುಂದಾಪುರ ತಾಲೂಕಿನ ಪ್ರಸಿದ್ಧ ಕ್ಷೇತ್ರ ಮಂದಾರ್ತಿ ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವ ಇದೇ ಫೆಬ್ರವರಿ 12 ರಿಂದ 14 ರ ವರೆಗೆ ನಡೆಯಲಿದೆ.
ಈಜು ಪಟು ನಾಗರಾಜ ಖಾರ್ವಿ ಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಮಾಣ ಪತ್ರ
ರಾಷ್ಟ್ರೀಯ ದಾಖಲೆಯ ಸಾಧನೆಗೈದ ಈಜು ಪಟು ನಾಗರಾಜ ಖಾರ್ವಿಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಂಸ್ಥೆ ಪ್ರಮಾಣ ಪತ್ರ ನೀಡಿದೆ.
ಜಿ. ಶಂಕರ್ ಆರೋಗ್ಯ ಸುರಕ್ಷಾ ಕಾರ್ಡ ವಿತರಣೆ
ಸಮಾಜದ ಎಲ್ಲಾ ವರ್ಗದವರಿಗೂ ಜಾತಿ, ಮತ, ಧರ್ಮ ಭೇಧಭಾವವಿಲ್ಲದೆ ಆರೋಗ್ಯ ಭದ್ರತೆ ನೀಡುವ ಸಲುವಾಗಿ ಪ್ರಾರಂಭಿಸಿದ ಡಾ. ಜಿ. ಶಂಕರ್ ರವರ ಮಹತ್ವಾಕಾಂಕ್ಷೆಯ ಯೋಜನೆಯಾದ ಜಿ. ಶಂಕರ್ ಆರೋಗ್ಯ ಸುರಕ್ಷಾ ವಿಮಾ ಯೋಜನೆಯ ಕಾರ್ಡುಗಳನ್ನು ಮೊಗವೀರ ಯುವ ಸಂಘಟನೆಯ ಪ್ರಧಾನ ಕಛೇರಿ ಮಾಧವ ಮಂಗಲ ಸಮುದಾಯ ಭವನ ಅಂಬಲಪಾಡಿ – ಉಡುಪಿ ಹಾಗೂ ಮೊಗವೀರ ಯುವ ಸಂಘಟನೆಗಳ ವಿವಿಧ ಘಟಕಗಳ ಕಛೇರಿ ಯಲ್ಲಿ ಫೆಬ್ರವರಿ 01 ನೇ ತಾರೀಕಿನಿಂದಲೇ ವಿತರಣೆ ಪ್ರಾರಂಭಿಸಿದ್ದು, […]