ಗಂಗೊಳ್ಳಿ: ಕುಂದಾಪುರ ತಾಲೂಕು ಗಂಗೊಳ್ಳಿ ಗ್ರಾಮದ ಪ್ರಸಿದ್ದ ಮಹಾಂಕಾಳಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿಜಾತ್ರೆಯ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಗಂಗೊಳ್ಳಿ ವತಿಯಿಂದ “ಚಾಯ್ ಪೇ ಜಾತ್ರಾ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಾರಿಜಾತ್ರೆಗೆ ಆಗಮಿಸಿದ ಸಾವಿರಾರು ಭಕ್ತಾಧಿಗಳಿಗೆ ಉಚಿತ ಚಹಾ ಹಾಗೂ ಲಘುಉಪಹಾರ ವ್ಯವಸ್ಥೆ ಮಾಡಲಾಗಿತ್ತು.ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಭಕ್ತಾಧಿಗಳಿಗೆ ಚಹಾ ನೀಡುವ ಮೂಲಕ ಕಾರ್ಯಕ್ರಮವನ್ನು ಉಧ್ಘಾಟಿಸಿದರು. ಬಿಜೆಪಿ ಮೀನುಗಾರರ ಪ್ರಕೋಷ್ಠ ರಾಜ್ಯ ಸಂಚಾಲಕರಾದ ಶ್ರೀ ಯಶ್ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಗಂಗೊಳ್ಳಿ ಜನೌಷಧ ಕೇಂದ್ರ ಉದ್ಘಾಟನೆ
ಗಂಗೊಳ್ಳಿಯ ಮುಖ್ಯರಸ್ತೆಯ ಮಹಿಳಾ ಕೋ ಆಪರೇಟಿವ್ ಸೊಸೈಟಿ ಕಟ್ಟಡದ ಉನ್ನತಿಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧ ಕೇಂದ್ರವನ್ನು ಜನವರಿ 30 ರಂದು ಬೈಂದೂರಿನ ಶಾಸಕರಾದ ಬಿ.ಎಂ ಸುಕುಮಾರ ಶೆಟ್ಟಿಯವರು ಉದ್ಘಾಟಿಸಿದರು.
ಯಕ್ಷಗಾನ ಕಲೆಯನ್ನು ಗೌರವಿಸಿ ಬೆಳೆಸಬೇಕು: ಡಾ. ಜಿ. ಶಂಕರ್
ಯಕ್ಷಗಾನ ಕರಾವಳಿ ಭಾಗದ ಸಾಂಸ್ಕೃತಿಕ ಶ್ರೀಮಂತಿಕೆ ಪ್ರತೀಕವಾಗಿದ್ದು, ಯಕ್ಷಗಾನ ಕಲೆ ಹಾಗೂ ಕಲಾವಿದರುಗಳನ್ನು ಗುರುತಿಸಿ ಗೌರವಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ) ಅಂಬಲಪಾಡಿ ಉಡುಪಿ ಇದರ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್ ಹೇಳಿದರು.
ಮಹಿಳೆಯರು ಬದುಕಿನ ಸೂಕ್ಷ್ಮತೆಯನ್ನು ಅರಿಯುವುದು ಅಗತ್ಯ : ಶ್ರೀಮತಿ ಸೌಜನ್ಯ ಶೆಟ್ಟಿ
ಮಹಿಳೆಯರು ತಮ್ಮ ಬದುಕಿನ ಸೂಕ್ಷ್ಮತೆಗಳನ್ನು ಅರಿತು ಇತರರೊಂದಿಗೆ ವ್ಯವರಿಸಬೇಕು. ಶೋಷಣೆ, ಕಿರುಕುಳಕ್ಕೊಳಗಾದಾಗ ಸೂಕ್ತ ಕಾನೂನಿನ ಸಲಹೆ ಪಡೆದುಕೊಂಡು ಶೋಷಣೆಯಿಂದ ಮುಕ್ತರಾಗಬೇಕು ಎಂದು ಡಾ. ಎ.ವಿ. ಬಾಳಿಗಾ ಸಮೂಹ ಸಂಸ್ಥೆ ಉಡುಪಿ ಇದರ ಆಡಳಿತಾಧಿಕಾರಿಯಾದ ಶ್ರೀಮತಿ ಸೌಜನ್ಯ ಶೆಟ್ಟಿ ಹೇಳಿದರು.
ವರಸಿದ್ದಿ ವಿನಾಯಕ ಪದವಿ ಪೂರ್ವ ಕಾಲೇಜು ಕೆರಾಡಿ : ರಾಷ್ಟ್ರೀಯ ಮತದಾರರ ದಿನಾಚರಣೆ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರು ಸಕ್ರಿಯವಾಗಿ ಭಾಗವಹಿಸುವುದು ಅತ್ಯವಶ್ಯಕ. ಆ ನಿಟ್ಟಿನಲ್ಲಿ ಕಡ್ಡಾಯ ಮತದಾನದ ಕುರಿತು ಜನತೆಗೆ ಅರಿವು ಮೂಡಿಸಬೇಕು ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಕುಮಾರ್ ರವರು ಹೇಳಿದರು ಅವರು ಕಾಲೇಜಿನಲ್ಲಿ ಜನವರಿ 25 ರಂದು ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು ಕಾರ್ಯಕ್ರಮದಲ್ಲಿ ಕಾಲೇಜಿನ ಪದವಿಪೂರ್ವ ಮತ್ತು ಪದವಿ ವಿದ್ಯಾರ್ಥಿಗಳಿಗೆ ಚುನಾವಣಾ ಸಾಕ್ಷರತಾ ಸಂಘದ ಸಂಯೋಜಕ ರಾಗಿರುವ ರಾಜ್ಯಶಾಸ್ತ್ರ ಉಪನ್ಯಾಸಕರಾದ ರಾಜೇಶ್ವರಿಯವರು ಮತದಾರರ ಪ್ರತಿಜ್ಞಾ […]
ಇ. ಸಿ. ಆರ್. ಟ್ರಸ್ಟ್ – ಸಾಮಾಜಿಕ ಜಾಗೃತಿ : ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2021
ಇ . ಸಿ. ಆರ್. ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಮಧುವನ ಇದರ ಎನ್. ಎಸ್. ಎಸ್. ಘಟಕ, ಮಹಿಳಾ ದೌರ್ಜನ್ಯ ತಡೆ ಘಟಕ ಮತ್ತು ಐ.ಕ್ಯೂ.ಎ.ಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ಜನವರಿ 29 ರಂದು ಸಾಮಾಜಿಕ ಜಾಗೃತಿ ಕಾರ್ಯಕ್ರಮವಾದ “ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹ” ವನ್ನು ಆಯೋಜಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಆಕಾಶ್ ಸವಳಸಂಗ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಶ್ರೀ ಸಂತೋಷ್ ಬಿ .ಪಿ, ಸಬ್ ಇನ್ಸ್ಪೆಕ್ಟರ್ ಆಫ್ ಪೋಲಿಸ್ […]
ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಉಪ್ರಳ್ಳಿ ದೇವಸ್ಥಾನ ಕೂಡುವಿಕೆಗೆ ಸಂಬಂಧಪಟ್ಟ ವಿಶ್ವಕರ್ಮ ಸಮಾಜ ಬಾಂಧವರ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಪ್ರಳ್ಳಿ ಕಾಳಿಕಾಂಬಾ ಎಜುಕೇಶನಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ
ಉಡುಪಿ ಜಿಲ್ಲೆ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷರಾಗಿ ಶ್ರೀಮತಿ ಫಿಲೋಮಿನಾ ಆಯ್ಕೆ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ರಾಜ್ಯ ಪ್ರಶಸ್ತಿ ಪುರಸ್ಕ್ರತ ಶ್ರೀಮತಿ ಫಿಲೋಮಿನಾ ರವರು ಉಡುಪಿ ಜಿಲ್ಲೆ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ 2014 – 15 ನೇ ಸಾಲಿನಲ್ಲಿ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಎಂದು ಗುರುತಿಸಿದ ಕರ್ನಾಟಕ ಸರ್ಕಾರ ಇವರಿಗೆ ರಾಜ್ಯ ಪ್ರಶಸ್ತಿಯನ್ನು ನೀಡಿರುತ್ತದೆ. ಅಂಗನವಾಡಿ ಕಾರ್ಯಕರ್ತೆಯಾಗಿ 26 ವರ್ಷಗಳಿಂದ […]
ಮಂಗಳೂರು ವಿ. ವಿ. ಅಂತರ್ ಕಾಲೇಜು ರಸಪ್ರಶ್ನೆ ಸ್ಪರ್ಧೆ : ಡಾ. ಬಿ. ಬಿ. ಹೆಗ್ಡೆ ಕಾಲೇಜು ಪ್ರಥಮ ಸ್ಥಾನ
ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ ಶಾಖೆ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಉಡುಪಿ ಜಿಲ್ಲೆ ಶಾಖೆ. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕೊಡಗು ಜಿಲ್ಲಾ ಶಾಖೆಯ ಸಹಯೋಗದೊಂದಿಗೆ ಯೂಥ್ ರೆಡ್ ಕ್ರಾಸ್ ಮಂಗಳೂರು ವಿಶ್ವವಿದ್ಯಾನಿಲಯವು ಸ್ವಾಮಿ ವಿವೇಕಾನಂದರ 158 ನೇ ಜನ್ಮ ದಿನದ ಪ್ರಯುಕ್ತ ಜನವರಿ 12 ರಂದು ರವೀಂದ್ರ ಕಲಾಭವನ, ವಿಶ್ವವಿದ್ಯಾನಿಲಯ ಕಾಲೇಜು, ಹಂಪನ ಕಟ್ಟೆ, ಮಂಗಳೂರು ಇಲ್ಲಿ ನಡೆಸಿದ “ನ್ಯಾಷನಲ್ ಯೂಥ್ ಡೇ” […]
ಮಂಗಳೂರು ವಿಶ್ವವಿದ್ಯಾನಿಲಯ : ಫೆಬ್ರವರಿ 12 ಮತ್ತು 13 ರಂದು ವಿಶೇಷ ಕಾರ್ಯಗಾರ
ಮಂಗಳೂರು ವಿಶ್ವವಿದ್ಯಾನಿಲಯದ ಇನ್ ಕ್ಯೂಬೇಶನ್ ಸೆಂಟರ್ ಇವರ ಆಶ್ರಯದಲ್ಲಿ “ಫೆಬ್ರವರಿ 12 ಮತ್ತು 13 ರಂದು “Recent Trends in Artificial intelligence & Machine Learning using Python” ಎನ್ನುವ ವಿಷಯದ ಕುರಿತು ಎರಡು ದಿನಗಳ ವಿಶೇಷ ಕಾರ್ಯಗಾರ.