ಕುಂದಾಪುರ(ಮಾ,15): ಕನ್ನಡ ನಾಟ್ಯ ರಂಗ (ರಿ.) ಹೈದರಾಬಾದ್ ಇದರ ವತಿಯಿಂದ ಮಾರ್ಚ್ 9ರಂದು ಹೈದರಾಬಾದ್ ನ ಸುಂದರಯ್ಯ ಕಲಾಭವನದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಯುವ ಸಂಘಟಕ ಕುಂದಾಪುರ ತಾಲೂಕು ಯುವ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಡಾ.ಅಂಪಾರು ನಿತ್ಯಾನಂದ ಶೆಟ್ಟಿ ಯವರನ್ನು ಕನ್ನಡ ನಾಟ್ಯ ರಂಗ(ರಿ.) ಇದರ ಅಧ್ಯಕ್ಷರಾದ ಶ್ರೀ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಸನ್ಮಾನಿಸಿ ಗೌರವಿಸಿದರು. ವೇದಿಕೆಯಲ್ಲಿ ಹೈದರಾಬಾದ್ ಬಂಟರ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಮೂಡ್ಲಕಟ್ಟೆ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಕುಂದಾಪುರ ( ಮಾ .13): ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಮಹಿಳಾ ಘಟಕದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಕೆಆರ್ ಎ ಎಮ್ ಕಾಲೇಜ್ನ ಹೆಚ್ಒಡಿ ಮತ್ತು ಪ್ರೊ. ಅಥರ್ವ ಆರ್ಗ್ಯಾನಿಕ್ಸ್ನ ಸಂಸ್ಥಾಪಕರು ಮತ್ತು ಸಿಇಒ ಆಗಿರುವ ಡಾ.ಅಪೇಕ್ಷ ರಾವ್ ಅವರು ಆಗಮಿಸಿದ್ದು “ಇತ್ತೀಚಿನ ದಿನಗಳಲ್ಲಿ ನಾವು ದೇಹದ ಮಾತು ಕೇಳುವ ಬದಲು ಅದನ್ನು ಗೊಂದಲಕ್ಕೆ ಸಿಲುಕಿಸುತ್ತಿದ್ದೇವೆ. ನಾವು ವಿಶ್ವದಲ್ಲಿ ಕೇವಲ ಒಂದು ಧೂಳಿನ ಕಣವಷ್ಟೇ.ಹಾಗಾಗಿ ಇರುವಷ್ಟು ದಿನ […]
ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಹೋಳಿ ಸಂಭ್ರಮ
ಕುಂದಾಪುರ (ಮಾ.13): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಆಶ್ರಯದಲ್ಲಿ ಹೋಳಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಸರಸ್ವತಿ ಮೂರ್ತಿಗೆ ಅರಶಿನ ಹಚ್ಚುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಶ್ರೀಮತಿ ರೇಷ್ಮಾ ಶೆಟ್ಟಿ, […]
ಬಿ.ಬಿ. ಹೆಗ್ಡೆ ಕಾಲೇಜು: ಮಾರ್ಚ್ 17 ರಿಂದ ‘ವಿ-ಗ್ರೋ’ಬ್ಯುಸಿನೆಸ್ ಡೇ
ಕುಂದಾಪುರ (ಮಾ,12): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ವಿ-ಗ್ರೋ ಬ್ಯುಸಿನೆಸ್ ಡೇ ಕಾರ್ಯಕ್ರಮ ಮಾರ್ಚ್ 17, 20 ಮತ್ತು 22 ರಂದು ಮೂರು ಹಂತದಲ್ಲಿ ನಡೆಯಲಿದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ, ಉದ್ಯಮಶೀಲತಾ ಕೌಶಲ್ಯಗಳನ್ನು ಬೆಳೆಸಿ ಜಾಗತಿಕ ಮಾರುಕಟ್ಟೆಯ ಪ್ರಾಯೋಗಿಕ ಜ್ಞಾನವನ್ನು ಪಡೆದರೆ ಭವಿಷ್ಯದಲ್ಲಿ ದೊಡ್ಡ ಉದ್ಯಮಿಗಳಾಗಬಹುದು ಎಂಬ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಮೊದಲನೇ ಹಂತ ವ್ಯವಹಾರ ಯೋಜನೆ […]
ಬಿ.ಬಿ. ಹೆಗ್ಡೆ ಕಾಲೇಜಿನ ಶ್ರದ್ಧಾ ಆರ್. ಮಂಗಳೂರು ವಿ.ವಿ. ಶೈಕ್ಷಣಿಕ ಮಂಡಳಿಗೆ ಆಯ್ಕೆ
ಕುಂದಾಪುರ (ಮಾ.12): ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕಿ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಪ್ರತಿಭೆ ಅಂತಿಮ ಬಿ.ಬಿ.ಎ. ವಿದ್ಯಾರ್ಥಿನಿ ಶ್ರದ್ಧಾ ಆರ್. ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿಗೆ ವಿದ್ಯಾರ್ಥಿ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ. ಇವರಿಗೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ.ಎಂ. ಸುಕುಮಾರ ಶೆಟ್ಟಿ, ಆಡಳಿತ ಮಂಡಳಿಯವರು, ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಬೋಧಕ-ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಎಚ್.ಎಮ್.ಎಮ್ ಪೂರ್ವ ಪ್ರಾಥಮಿಕ ಶಾಲೆ : ಗ್ರ್ಯಾಜುಯೇಷನ್ ಡೇ
ಕುಂದಾಪುರ (ಮಾ. 8) : ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕುಂದಾಪುರ ಎಜುಕೇಶನ್ ಸೊಸೈಟಿ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದಲ್ಲಿಮಾರ್ಚ್ 08 ರ ಶನಿವಾರದಂದು ಗ್ರ್ಯಾಜುಯೇಷನ್ ಡೇ ನಡೆಯಿತು. ಸಂಸ್ಥೆಯ ಹಳೆ ವಿದ್ಯಾರ್ಥಿ, ಅಡ್ವೊಕೇಟ್ , ಚಿದಾನಂದ ರಾವ್ ಪಿ ಉದ್ಘಾಟಿಸಿದರು. ಪೋಷಕರು ಮಕ್ಕಳ ಮನಸ್ಸು ಮತ್ತು ಭಾವನೆಗಳನ್ನು ಅರಿತು ಅದಕ್ಕೆ ಪೂರಕವಾದ ಪ್ರತಿಕ್ರಿಯೆಗಳನ್ನು ನೀಡಬೇಕು. ಮಕ್ಕಳೆಲ್ಲರೂ ಮುಂದೆ ಬರುವ ರಜೆಯನ್ನು ಆನಂದಿಸಿ ಎಂದು ಹೇಳಿದರು. […]
ಬಿ.ಕಾಂ.ಮತ್ತು ಬಿ.ಸಿ.ಎ.ಪದವಿಯಲ್ಲಿ ಬಿ .ಬಿ .ಹೆಗ್ಡೆ ಕಾಲೇಜಿಗೆ ರ್ಯಾಂಕ್ಗಳು
ಕುಂದಾಪುರ, (ಮಾ.08): ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಬಿ.ಕಾಂ. ಮತ್ತು ಬಿ.ಸಿ.ಎ. ಪದವಿಯಲ್ಲಿ ರ್ಯಾಂಕ್ ಗಳಿಸಿದ್ದಾರೆ. ಮೊಳಹಳ್ಳಿಯ ಶ್ರೀ ನಾಗೇಶ್ವರ ಉಡುಪ ಹಾಗೂ ಸವಿತಾ ಎನ್. ಉಡುಪ ದಂಪತಿಗಳ ಪುತ್ರಿ ರಶ್ಮಿ ಉಡುಪ ಬಿ.ಕಾಂ. ಪದವಿಯಲ್ಲಿ 6ನೇ ರ್ಯಾಂಕ್, ಯಡಮೊಗೆಯ ಶ್ರೀ ಪುರುಷೋತ್ತಮ ಕನ್ನಂತ ಹಾಗೂ ನಾಗರತ್ನ ದಂಪತಿಗಳ ಪುತ್ರಿ ಕೀರ್ತನಾ ಬಿ.ಸಿ.ಎ. ಪದವಿಯಲ್ಲಿ 5ನೇ ರ್ಯಾಂಕ್ಗಳಿಸಿದ್ದಾರೆ. […]
ಯು .ಸಿ .ಇ .ಇ .ಡಿ ಸಾಮಾನ್ಯ ಪ್ರವೇಶ ಪರೀಕ್ಷೆ : ಅಖಿಲ ಭಾರತ ಮಟ್ಟದಲ್ಲಿ ಉನ್ನತ ಸ್ಥಾನ ಪಡೆದ ಹೆಮ್ಮಾಡಿ ಜನತಾ ಪಿ ಯು ಕಾಲೇಜಿನ ಅಮೂಲ್ಯ
ಕುಂದಾಪುರ (ಮಾ .11): ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ನಡೆಸುವ UCEED(ವಿನ್ಯಾಸಕ್ಕಾಗಿ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆ) ಪ್ರವೇಶ ಪರೀಕ್ಷೆ ಬರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಅಖಿಲ ಭಾರತ ಮಟ್ಟದಲ್ಲಿ AIR-3827 Rank ಪಡೆಯುವುದರ ಮೂಲಕ ಅತ್ಯುನ್ನತ ಸಾಧನೆ ಮೆರೆದಿದ್ದಾಳೆ. ಪದವಿಪೂರ್ವ ಶಿಕ್ಷಣಕ್ಕೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುವುದರ ಮೂಲಕ ಕಾಲೇಜು ವಿಶೇಷವಾಗಿ ಗುರುತಿಸಿಕೊಂಡಿದೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, […]
ಶ್ರೀ ಗಣೇಶ ಮೊಗವೀರರಿಗೆ ಮಂತ್ರಾಲಯ ಪರಿಮಳ ಪ್ರಶಸ್ತಿ 2025
ಕುಂದಾಪುರ (ಮಾ.11): ಸ್ಪೇಸ್ ಮೀಡಿಯಾ DCX ಸಿಸ್ಟಮ್ಸ್ ಲಿಮಿಟೆಡ್ ಅರ್ಷಿಸುವ,ಜಗದ್ಗುರು ಶ್ರೀ ಮನ್ಮಧ್ವಾಚಾರ್ಯರ ಮೂಲ ಮಹಾಸಂಸ್ದಾನ ಶ್ರೀ ರಾಘವೇಂದ್ರ ಸ್ವಾಮೀಜಿಗಳ ಮಂತ್ರಾಲಯ,ಪರಮಪೂಜ್ಯ ಶ್ರೀ ಶ್ರೀ ಶ್ರೀ 1008 ಶ್ರೀ ಮತ್ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಕೊಡ ಮಾಡುವ ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ 2025ನ್ನು ಪ್ರಶಸ್ತಿಗೆ ಹೆಮ್ಮಾಡಿಯ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ (ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ […]
ಸಿ. ಎ ಫೌಂಡೇಷನ್ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು
ಕುಂದಾಪುರ (ಮಾ. 5): ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆAಟ್ಸ್ ಆಫ್ ಇಂಡಿಯಾ ನಡೆಸುವ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ ಸಾಧನೆಗೈದಿದ್ದಾರೆ. ವಿಘ್ನೇಶ್, ಶ್ರದ್ಧಾ, ಸಿಂಚನ, ಮನೀಷ್, ಕೌಶಲ್, ಸುರಕ್ಷಾ ಹಾಗೂ ಶ್ರೇಯಸ್ ಇವರು ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ ರೀಚ್ ಸಂಸ್ಥೆಯ ಪಠ್ಯ […]










