ಕಾರ್ಕಳ (ಜ.6): ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಉಪ ನಿರ್ದೇಶಕರ ಕಛೇರಿ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬ್ರಹ್ಮಾವರ ತಾಲೂಕು ಸಹಭಾಗಿತ್ವದಲ್ಲಿ ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಬೈದೆಬೆಟ್ಟು – ಕೊಕ್ಕರ್ಣೆ ಇವರ ಸಂಘಟನಾ ಸಾರಥ್ಯದೊಂದಿಗೆ ನಡೆದ ೨೦೨೪-೨೫ನೇ ಸಾಲಿನ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆಯ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಬಾಲ ಸಂಸ್ಕಾರ ಮಕ್ಕಳಿಂದ ರಾಮಕೃಷ್ಣಾಶ್ರಮಕ್ಕೆ ಭೇಟಿ
ಬೈಲೂರು(ಜ,6) : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯುವ ಜ್ಞಾನಭಾರತ್ – ಬಾಲ ಸಂಸ್ಕಾರ ಸಾಪ್ತಾಹಿಕ ಸರಣಿಯಲ್ಲಿ ವಿಹಾರಾರ್ಥವಾಗಿ ಬೈಲೂರಿನ ಶ್ರೀ ರಾಮಕೃಷ್ಣಾಶ್ರಮಕ್ಕೆ ಮಕ್ಕಳು ಭೇಟಿ ನೀಡಿದರು. ಆಶ್ರಮದ ಪೂಜ್ಯ ಯತಿ ಸ್ವಾಮಿ ವಿನಾಯಕಾನಂದ ಮಹಾರಾಜ್ರವರು ಆಶೀರ್ವಚನ ನೀಡಿ, ವ್ಯಕ್ತಿಯ ಸಮಗ್ರ ಬೇಳವಣಿಗೆಯಲ್ಲಿ ದೈಹಿಕ, ಮಾನಸಿಕ, ಭಾವನಾತ್ಮಕ, ಬೌದ್ಧಿಕ ಹಾಗೂ ಆದ್ಯಾತ್ಮಿಕ ಅಂಶಗಳು ಮುಖ್ಯ. ಈ ನಿಟ್ಟಿನಲ್ಲಿ ಜ್ಞಾನಭಾರತ್ ತಂಡವು ಮಕ್ಕಳ ಶ್ರೇಯೋಭಿವೃದ್ದಿಗಾಗಿ ಇಂತಹ ಕಾರ್ಯವನ್ನು ಕೈಗೊಂಡಿರುವುದು ಪ್ರಶಂಸನೀಯ […]
ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳಲ್ಲಿ ರುಗ್ಮಯಾನ: ಸುವರ್ಣ ರಥದತ್ತ ಸಂಭ್ರಮದ ಪಥ
ಕುಂದಾಪುರ (ಜ.03): ಇಂದಿನ ಕಾಲಘಟ್ಟದ ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆಗೆಗೆ ಮಾತ್ರವೇ ಸೀಮಿತವಾಗಿರದೇ ಪಠ್ಯೇತರ ಚಟುವಟಿಕೆಗಳತ್ತ ಗಮನ ಹರಿಸಬೇಕು. ಅಂತಹ ಪ್ರಯತ್ನವನ್ನು ಈ ಸಂಸ್ಥೆ ಉತ್ತಮ ಶಿಕ್ಷಕರ ತಂಡದೊಂದಿಗೆ ಕಾರ್ಯ ನಿರ್ವಹಿಸುತ್ತಿದೆ ಎಂದು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಂಸ್ಥೆಯ ಹಳೆ ವಿದ್ಯಾರ್ಥಿ ಚಿಕಾಗೊ ಯು.ಎಸ್.ಎ ನ, ಜೆ.ಪಿ.ಮೊರ್ಗಾನ್ ಚೇಸ್ ಅಂಡ್ ಕಂಪೆನಿ ಇದರ ಉಪಾಧ್ಯಕ್ಷರಾದ ಭಾಸ್ಕರ್ ಎಚ್. ಮಾರುತಿ ಹೇಳಿದರು. ಅವರು ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ […]
ಬಿ.ಬಿ. ಹೆಗ್ಡೆಕಾಲೇಜು: ಕೆ. ಗಾಯತ್ರಿ ಶೇಟ್ ರವರಿಗೆ ಗೌರವಾರ್ಪಣೆ
ಕುಂದಾಪುರ (ಜನವರಿ 3): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿ ಕ್ಷೇಮಪಾಲನ ಸಂಘದ ಆಶ್ರಯದಲ್ಲಿ ವಯೋನಿವೃತ್ತಿ ಹೊಂದಿದ ಕಾಲೇಜಿನ ಕಚೇರಿ ಅಧೀಕ್ಷಕರಾದ ಕೆ. ಗಾಯತ್ರಿ ಶೇಟ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ, ಕೆ. ಗಾಯತ್ರಿ ಶೇಟ್ ಅವರು ನಮ್ಮ ಸಂಸ್ಥೆ ಆರಂಭಗೊಂಡ ದಿನದಿಂದಲೇ ಕಚೇರಿ ಸಿಬ್ಬಂದಿಯಾಗಿ ಸೇರ್ಪಡೆಗೊಂಡು ಬೇರೆ-ಬೇರೆ ಹುದ್ದೆಗಳನ್ನು ನಿಭಾಯಿಸಿ, ಕಚೇರಿ […]
ಬೈಂದೂರು : ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಅರ್ನೋನ್ ಡಿ.ಅಲ್ಮೆಡ ಸಾಧನೆ
ಬೈಂದೂರು(ಜ. 07): ಬೈಂದೂರಿನಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ -2025 ನಲ್ಲಿ ಅರ್ನೋನ್ ಡಿ ಅಲ್ಮೆಡ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟ ವಿಭಾಗದಲ್ಲಿ ಬೆಳ್ಳಿಯ ಪದಕ ಪಡೆದಿರುತ್ತಾರೆ. ಈತ ಎಚ್ ಎಮ್ ಎಮ್ ಶಾಲೆಯ 5 ನೇ ತರಗತಿಯ ವಿದ್ಯಾರ್ಥಿಯಾಗಿದ್ದು ,ಕುಂದಾಪುರದ ಕೆ.ಡಿ.ಎಫ್. ಕರಾಟೆ ಶಾಲೆಯ ಕಿಯೋಷಿ ಕಿರಣ್ ಕುಂದಾಪುರ, ಶಿಹಾನ್ ಸಂದೀಪ್ ವಿ.ಕೆ., ಶಿಹಾನ್ ಕೀರ್ತಿ ಜಿ.ಕೆ., ಸೇನ್ ಸಾಯಿ […]
ಕ್ರಿಯೇಟಿವ್ ನುಡಿಹಬ್ಬ ಮತ್ತು ವಾರ್ಷಿಕೋತ್ಸವ- ಕ್ರಿಯೇಟಿವ್ ಆವಿರ್ಭವ
ಕಾರ್ಕಳ ( ಜ .6): ಇಲ್ಲಿನ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಕ್ರಿಯೇಟಿವ್ ನುಡಿಹಬ್ಬ ಮತ್ತು ವಾರ್ಷಿಕೋತ್ಸವ ಸಮಾರಂಭ ಕ್ರಿಯೇಟಿವ್ ಆವಿರ್ಭವವು ” ವಿವಿಧತೆಯಲ್ಲಿ ಏಕತೆ ” ಎಂಬ ಪರಿಕಲ್ಪನೆಯೊಂದಿಗೆ ಜನವರಿ 04 ರಂದು ವೈಭವಪೂರ್ಣವಾಗಿ ನಡೆಯಿತು. ಪ್ರೇಮಕವಿ ಎಂದೇ ಕರೆಯಲ್ಪಡುವ ಖ್ಯಾತ ಸಾಹಿತಿಗಳಾದ ಬಿ ಆರ್ ಲಕ್ಷ್ಮಣರಾವ್ ಹಾಗೂ ನಡೆದಾಡುವ ಗ್ರಂಥಾಲಯ ಎಂದೇ ಪ್ರಸಿದ್ಧರಾದ ಡಾ. ನಾ ಸೋಮೇಶ್ವರ ರವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ವಿದ್ಯಾರ್ಥಿಗಳ ಸಮ್ಮುಖದಲ್ಲಿ ಎರಡು ಹಂತಗಳಲ್ಲಿ […]
ಜ.14 ಮತ್ತು 15 ರಂದು ಶ್ರೀ ಹಾಡಿಗರಡಿ ದೈವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ
ಕುಂದಾಪುರ (ಜ. 03): ತಾಲೂಕಿನ ನಾಡದ ಶ್ರೀ ಹಾಡಿಗರಡಿ ದೈವಸ್ಥಾನದ ವಾರ್ಷಿಕ ವಾರ್ಷಿಕ ಜಾತ್ರಾ ಮಹೋತ್ಸವವು 2025 ರ ಜನವರಿ 14 ಮತ್ತು 15ರಂದು ನಡೆಯಲಿದೆ. ಜ.14 ಮಂಗಳವಾರ ಬೆಳಿಗ್ಗೆ 12ಕ್ಕೆ ಮಂಗಳಾರತಿ, ಮಹಾಪೂಜೆ, ಮಧ್ಯಾಹ್ನ 12.30ಕ್ಕೆ ಅನ್ನಸಂತರ್ಪಣೆ, ಸಂಜೆ 4 ಗಂಟೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ , 7.30ಕ್ಕೆ ದೈವದರ್ಶನ, ಗೆಂಡಸೇವೆ, 8 ಗಂಟೆಗೆ ಪ್ರಸಾದ ವಿತರಣೆ, ಮಹಾಅನ್ನಸಂತರ್ಪಣೆ, 9.30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಪ್ರತಿಭಾವಂತ […]
ಎಚ್. ಎಮ್. ಎಮ್. ವಿ.ಕೆ.ಆರ್ ನ ಕಂಚಿನ ಹುಡುಗ- ಅಥರ್ವಖಾರ್ವಿ
ಕುಂದಾಪುರ (ದಿ.30): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ 6ನೇ ತರಗತಿಯ ವಿಧ್ಯಾರ್ಥಿ ಅಥರ್ವ ಖಾರ್ವಿ ನವದೆಹಲಿಯಲ್ಲಿ ಜರುಗಿದ ಆಲ್ ಇಂಡಿಯಾ ಸಬ್ ಜೂನಿಯರ್ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಿ, ಕಂಚಿನ ಪದಕವನ್ನು ಗಳಿಸಿರುತ್ತಾನೆ. ಕಂಚಿನ ಪದಕ ವಿಜೇತ ಕರಾಟೆ ಪಟುವನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು.
ಬಿ. ಬಿ. ಹೆಗ್ಡೆ ಕಾಲೇಜಿನ ಸಾಂಸ್ಕೃತಿಕ ತಂಡದ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ (ಡಿ.30): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ದಾವಣಗೆರೆಯಲ್ಲಿ ನಡೆಯುವ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಜನಪದ ಗೀತೆ (ಗುಂಪು ವಿಭಾಗ) ಸ್ಪರ್ಧೆಗೆ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿರುವ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಸಾಂಸ್ಕೃತಿಕ ತಂಡದ ಸಂಯೋಜಕರಾದ ಶ್ರೀಮತಿ ದೀಪಿಕಾ ಜಿ., ಬೋಧಕ-ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಗಂಗೊಳ್ಳಿ : ಸರಸ್ವತಿ ವಿದ್ಯಾಲಯದಲ್ಲಿ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ
ಗಂಗೊಳ್ಳಿ(ಡಿ.31): ಮಾನವೀಯತೆಗಿಂತ ಮಿಗಿಲಾದ ಧರ್ಮ ಯಾವುದೂ ಇಲ್ಲ. ನಾವು ಬೆಳೆದು ಉಳಿದವರನ್ನು ಕೂಡ ಬೆಳೆಸುತ್ತಾ ಸಾಗುವಲ್ಲಿ ಜೀವನದ ನಿಜವಾದ ಸಾರ್ಥಕತೆ ಅಡಗಿದೆ ಎಂದು ಉದ್ಯಮಿ ಮೌಲಾನ ಇಬ್ರಾಹಿಂ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜಿ.ಎಸ್.ವಿ.ಎಸ್ ಅಸೋಸಿಯೇಷನ್ ವತಿಯಿಂದ ನಡೆದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡಿದರು. ಬದುಕಿನಲ್ಲಿ ಏರಿಳಿತಗಳು ಸಾಮಾನ್ಯ.. ಆದರೆ ಯಾವುದೇ ಪರಿಸ್ಥಿತಿಯಲ್ಲಿಯೂ ಧೃತಿ ಗೆಡದೆ ನಮ್ಮ […]










