ಕುಂದಾಪುರ (ಸೆ.20): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು ಪೊಲೀಸ್ ಠಾಣೆ, ಗಂಗೊಳ್ಳಿಗೆ ಭೇಟಿ ನೀಡಿ ಅಲ್ಲಿ ನಡೆದ ವಿವಿಧ ಆಯುಧಗಳ ಪ್ರಾಯೋಗಿಕ ಪ್ರದರ್ಶನದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಕರಾವಳಿ ಕಾವಲುಪಡೆಯ ಪೊಲೀಸ್ ಇನ್ಸ್ಪೆಕ್ಟರ್ ವಸಂತ್ ರಾಮ್ ಆಚಾರ್ಯ ಅವರು ಪೋಕ್ಸೋ ಕಾಯಿದೆ, ಡ್ರಗ್ಸ್ ನಿಯಂತ್ರಣ ಹಾಗೂ ಸಾಮಾಜಿಕ ಜಾಲತಾಣದ ದುಷ್ಪರಿಣಾಮಗಳ ಬಗ್ಗೆ ಉದಾಹರಣೆಗಳೊಂದಿಗೆ ವಿವರಿಸಿದರು. ಇದೇ ಸಂದರ್ಭ ವಿದ್ಯಾರ್ಥಿಗಳು […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಜಂಪ್ ರೋಪಿಂಗ್ ಸ್ಪರ್ಧೆ:ರಾಜ್ಯಮಟ್ಟಕ್ಕೆ ಆಯ್ಕೆಯಾದ ಕ್ರಿಯೇಟಿವ್ ನ ವಿದ್ಯಾರ್ಥಿಗಳು
ಕಾರ್ಕಳ( ಸೆ.24): ಜಿಲ್ಲಾಮಟ್ಟದ ಜಂಪ್ ಹಗ್ಗ ಪಂದ್ಯಾವಳಿಯು ಬಾರಕೂರಿನ ರಾಷ್ಟ್ರೀಯ ಪಿಯು ಕಾಲೇಜಿನಲ್ಲಿ ನಡೆಯಿತು. ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಉತ್ತಮ ಫಲಿತಾಂಶಗಳೊಂದಿಗೆ ಜಯಗಳಿಸಿದ್ದಾರೆ. ಹುಡುಗಿಯರ ವಿಭಾಗದಲ್ಲಿ ವಿದ್ಯಾರ್ಥಿನಿಯರಾದ ಪ್ರಥಮ ಪಿ ಸಿ ಎಂ ಬಿ ವಿಭಾಗದ ವೇದ ಎಂ. ಪಚ್ಚೆನ್ನವರ್ 30 ಸೆಕೆಂಡುಗಳ ವೇಗದ ಜಂಪ್ ರೋಪಿಂಗ್ ಸ್ಪರ್ಧೆಯಲ್ಲಿ ಕಂಚು, 30 ಸೆಕೆಂಡುಗಳ ಡಬಲ್ ಅಂಡರ್ ನಲ್ಲಿ ಪ್ರಥಮ ಪಿ ಸಿ ಎಂ ಬಿ ವಿಭಾಗದ […]
ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ -ಜನತಾ ಪಿಯು ಕಾಲೇಜಿನ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ( ಸೆ .24): ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಜಿಲ್ಲಾ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಶಿಕ್ಷಕ ಕೆ ಪ್ರದೀಪ್ ಕುಮಾರ್ ಶೆಟ್ಟಿ ಕಾವ್ರಾಡಿಯವರಿಗೆ ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ
ಕುಂದಾಪುರ (ಸೆ. 19): ಕೊಡಗಿನ ನಾಟ್ಯಮಯೂರಿ ನೃತ್ಯ ಟ್ರಸ್ಟ್,ವೀರಾಜಪೇಟೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ರಾಷ್ಟ್ರದ ಪ್ರಥಮ ಮಹಿಳಾ ಶಿಕ್ಷಕಿಯಾಗಿರುವ ಸಾವಿತ್ರಿ ಬಾ ಫುಲೆಯವರ ಹೆಸರಿನಲ್ಲಿ ಕೊಡಮಾಡುವ ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿಗೆ ಬಸ್ರೂರಿನ ನಿವೇದಿತಾ ಪ್ರೌಢಶಾಲೆಯ ಶಿಕ್ಷಕ ಕೆ ,ಪ್ರದೀಪ್ ಕುಮಾರ್ ಶೆಟ್ಟಿ ಕಾವ್ರಾಡಿ ಆಯ್ಕೆಯಾಗಿದ್ದಾರೆ. ಇದೇ ಸೆಪ್ಟೆಂಬರ್, 27ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿಯ ನಯನಾ ಸಭಾ ಭವನದಲ್ಲಿ ಸೇವಾ ರತ್ನ ಪ್ರಶಸ್ತಿ ಸ್ವೀಕರಿಸಲಿದ್ದಾರೆ.ಇವರು ನರಸಿಂಹ ಶೆಟ್ಟಿ ಹಾಗೂ ಸಲ್ವಾಡಿ […]
ರಾಷ್ಟ ಮಟ್ಟದ ಯೋಗಾಸನ ಸ್ಪರ್ಧೆ: ಸಂದೀಪ್ ಪೂಜಾರಿ ತ್ರಾಸಿ ಉತ್ತಮ ಸಾಧನೆ
ಕುಂದಾಪುರ (ಸೆ.15): ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ಮತ್ತು ಯೋಗಾಸನ ಭಾರತ್ ಹಮ್ಮಿಕೊಂಡ 2025-26 ನೇ ಸಾಲಿನ 6ನೇ ರಾಷ್ಟ್ರೀಯ ಯೋಗಾಸನ ಚಾಂಪಿಯನ್ ಶಿಪ್ ಛತ್ತೀಸ್ ಘಡ ಅಗ್ರಸೇನ್ ಭವನದಲ್ಲಿ ನಡೆದ್ದಿದ್ದು ಬ್ಯಾಕ್ ಬೆಂಡಿಂಗ್ ಯೋಗಾಸನದಲ್ಲಿ ಕುಂದಾಪುರ ತಾಲೂಕಿನ ತ್ರಾಸಿ ಪಂಚಾಯತ್ ಸಿಬ್ಬಂದಿ ಸಂದೀಪ್ ಪೂಜಾರಿ ತ್ರಾಸಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಸೆಮಿ ಫೈನಲ್ ನಲ್ಲಿ 4 ನೇ ಸ್ಥಾನ ಹಾಗೂ ಫೈನಲ್ ನಲ್ಲಿ 5 ನೇ […]
ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ -ಜನತಾ ಪಿಯು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ( ಸೆ.15): ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ತಾಲ್ಲೂಕು ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಕೋರಿದ್ದಾರೆ.
ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟ : ಕ್ರಿಯೇಟಿವ್ ನ ಐದು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ
ಉಡುಪಿ ( ಸೆ.15): ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ, ಹಾಗೂ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು ಶಿರ್ವ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಕಾರ್ಕಳ ತಾಲೂಕು ತಂಡವನ್ನು ಪ್ರತಿನಿಧಿಸಿ, ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿನಿಯಾರಾದ ಮಾನಸ ವಿನಾಯಕ್, ಹರ್ಷಿತ ವಿನಾಯಕ್, ಆದ್ಯ ಎಸ್. […]
ಲಯನ್ಸ್ ಕ್ಲಬ್ ಕೋಸ್ಟಲ್ ವತಿಯಿಂದ ಇಂಜಿನಿಯರ್ಸ್ ಡೇ
ಕುಂದಾಪುರ(ಸೆ,15): ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮದಿನಾಚರಣೆ ಪ್ರಯುಕ್ತ ದೇಶದಾದ್ಯಂತ ಆಚರಿಸುತ್ತಿರುವ ಇಂಜಿನಿಯರ್ಸ್ ಡೇ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನವರು ಸೆಪ್ಟೆಂಬರ್ 15 ರಂದು ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ಕುಂದಾಪುರದ ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಶ್ರೀ ಯಶವಂತ ಅವರನ್ನು ಲಯನ್ಸ್ ಕ್ಲಬ್ ನ ಹಿರಿಯ ಸದಸ್ಯರು, ನಿವೃತ್ತ ಬ್ಯಾಂಕ್ ಉದ್ಯೋಗಿ ಹಳ್ನಾಡು ಬಿ.ಜಯರಾಮ ಶೆಟ್ಟಿ ಫಲ ಪುಷ್ಪ ನೀಡಿ ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಕೋಸ್ಟಲ್ […]
ಯುವ ಬಂಟರ ಸಂಘದ ವತಿಯಿಂದ ಇಂಜಿನಿಯರ್ಸ್ ಡೇ
ಕುಂದಾಪುರ( ಸೆ,15): ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮದಿನಾಚರಣೆ ಪ್ರಯುಕ್ತ ದೇಶದಾದ್ಯಂತ ಆಚರಿಸುತ್ತಿರುವ ಇಂಜಿನಿಯರ್ಸ್ ಡೇ ಕಾರ್ಯಕ್ರಮವನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಸೆಪ್ಟೆಂಬರ್ 15 ರಂದು ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ಕುಂದಾಪುರದ ಪುರಸಭಾ ಇಂಜಿನಿಯರ್ (ಪರಿಸರ) ಶ್ರೀ ಗುರುಪ್ರಸಾದ್ ಶೆಟ್ಟಿ ಶಿರೂರು ಅವರನ್ನು ಯುವ ಬಂಟರ ಸಂಘದ ಪೋಷಕ ಸದಸ್ಯರು ,ಹೈದರಾಬಾದ್ ನ ಹಿರಿಯ ಉದ್ಯಮಿ ನೆಲಗೊಂಡ ಸುಧಾಕರ ಶೆಟ್ಟಿ ಜನ್ಸಾಲೆ ಫಲ ಪುಷ್ಪ ನೀಡಿ […]
ಬಿ.ಬಿ. ಹೆಗ್ಡೆ ಕಾಲೇಜು: ಕೈಗಾರಿಕಾ ಭೇಟಿ ಹಾಗೂ ಶೈಕ್ಷಣಿಕ ಒಡಂಬಡಿಕೆ
ಕುಂದಾಪುರ (ಆ.23): ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ವಂಡಾರಿನ ಶ್ರೀ ಕೃಷ್ಣ ಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಗೇರುಬೀಜ ಕಾರ್ಖಾನೆಗೆ ಕೈಗಾರಿಕಾ ಭೇಟಿಯನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕೃಷ್ಣ ಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್ ನ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾದ ಈ ಸಂಪತ್ ಕುಮಾರ್ ಶೆಟ್ಟಿ ಗೇರು ಉದ್ಯಮದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಕಾಲೇಜಿನ ವ್ಯವಹಾರ […]










