ಕುಂದಾಪುರ ( ಆ,05): ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ಜರಗಿತು. ಉದ್ಘಾಟಕರಾಗಿ ಆಗಮಿಸಿದ ಉಡುಪಿ ಜಿಲ್ಲಾ ಎನ್ಎಸ್ಎಸ್ ಘಟಕದ ನೋಡಲ್ ಆಫೀಸರ್ ಡಾ. ಜಯಶಂಕರ ಕಂಗನಾರು ಮಾತನಾಡಿ ನಿಸ್ವಾರ್ಥ ಬದುಕು ಪ್ರತಿಯೊಬ್ಬರ ವ್ಯಕ್ತಿತ್ವಕ್ಕೂ ಮೆರುಗನ್ನು ನೀಡಿ ಹೆಚ್ಚಿನ ಸಂತೋಷವನ್ನು ನೀಡುತ್ತದೆ. ಹಾಗಾಗಿ ನಿಸ್ವಾರ್ಥಿಗಳಾಗಿ ಬದುಕಲು ಕಲಿಯಬೇಕು ಎಂದು ಅಭಿಪ್ರಾಯ ಪಟ್ಟರು. ಈ ಸಂದರ್ಭದಲ್ಲಿ ಕಳೆದ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಕುಂದಾಪುರ ತಾಲೂಕು ಮಟ್ಟದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ
ಕೋಡಿ, (ಆ ,04): ಹಾಜಿ. ಕೆ ಮೋಹಿದ್ದಿನ್ ಬ್ಯಾರಿ ಸ್ಮಾರಕ ಕನ್ನಡ ಅನುದಾನಿತ ಪ್ರೌಢಶಾಲೆ ಕೋಡಿ ಇಲ್ಲಿ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಹಾಜಿ. ಕೆ ಮೋಹಿದ್ದಿನ್ ಬ್ಯಾರಿ ಸ್ಮಾರಕ ಕನ್ನಡ ಅನುದಾನಿತ ಪ್ರೌಢಶಾಲೆ ಕೋಡಿ ಆಶ್ರಯದ ಕುಂದಾಪುರ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ನೆರವೇರಿತು. ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದ ಶ್ರೀ.ಜೀವನ್ ಕುಮಾರ್ ಶೆಟ್ಟಿ ಗೌರವಾಧ್ಯಕ್ಷರು ದೈಹಿಕ […]
ಶ್ರೀ ಗುರುಭ್ಯೋ ನಮಃ
ಶ್ರೀ ಗುರುಭ್ಯೋ ನಮಃ ಜ್ಞಾನ ಸಮ್ಮುದ್ರವ ಕಲಕಿಸ್ಮೃತಿಪಟಲದಲ್ಲಿ ತಲಪಿವಿದ್ಯೆ – ಬುದ್ಧಿ ವಿನಯ-ವಿಧೇಯ ನೀಡುವ ಶ್ರೇಷ್ಠನೆಶ್ರೀ ಗುರುಭ್ಯೋ ನಮಃಶ್ರೀ ಗುರುಭ್ಯೋ ನಮಃಶ್ರೀ ಗುರುಭ್ಯೋ ನಮಃಶ್ರೀ ಗುರುಭ್ಯೋ ನಮಃ. ಶಾರದೆಯ ನಿವಾಸ ನಿನ್ನ ಜಿಹ್ವವುಮಮತೆ ತುಂಬಿರುವ ಎದೆ ಭಾವವುಪ್ರೀತಿ ನೀತಿಯೇ ನಿನ್ನ ಕಣ್ಗಳುಕ್ಷಮೆ ತಾಳ್ಮೆಯೇ ನಿನ್ನ ಭುಜಗಳುಶಿಸ್ತು ಗತ್ತೆ ನಿನ್ನ ಕಾಲುಗಳುಧೈರ್ಯ ಸ್ಥೈರ್ಯವೇ ನಿನ್ನ ಕರಗಳುನಖ-ಶಿರ ತುಂಬಾ ಕೌಶಲ್ಯ ತುಂಬಿದ ಕುಂಜವೇಶ್ರೀ ಗುರುಭ್ಯೋ ನಮಃಶ್ರೀ ಗುರುಭ್ಯೋ ನಮಃಶ್ರೀ ಗುರುಭ್ಯೋ ನಮಃಶ್ರೀ ಗುರುಭ್ಯೋ […]
ಟೇಬಲ್ ಟೆನಿಸ್: ಕುಂದಾಪುರದ ಆರ್.ಎನ್ ಶೆಟ್ಟಿ ಸಂಯಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ತಂಡ ರಾಜ್ಯಮಟ್ಟಕ್ಕೆ ಆಯ್ಕೆ
ಕುಂದಾಪುರ(ಸೆ.05): ಪದವಿ ಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿದೆ. ರಾಜ್ಯಮಟ್ಟಕ್ಕೆ ಆಯ್ಕೆಯಾದ ಟೇಬಲ್ ಟೆನಿಸ್ ತಂಡದ ವಿದ್ಯಾರ್ಥಿನಿಯರಾದ ವಿಜ್ಞಾನ ವಿಭಾಗದ ಕ್ಷಮಾ ಗೌತಮ್, ಅಂಕಿತಾ ಹಾಗೂ ವಾಣಿಜ್ಯ ವಿಭಾಗದ ದೀಪ್ತಿಯವರಿಗೆ ಕಾಲೇಜಿನ ಸಂಚಾಲಕರಾದ ಶ್ರೀ ಬಿ.ಎಮ್.ಸುಕುಮಾರ್ ಶೆಟ್ಟಿಯವರು, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಬೋಧಕ ಬೋಧಕೇತರ ಸಿಬ್ಬಂಧಿಗಳು ಅಭಿನಂದನೆ […]
‘ಸಂವಿಧಾನಾತ್ಮಕ ಮೌಲ್ಯಗಳು’: ರಾಜ್ಯ ಪಠ್ಯಕ್ರಮದ ಕಾರ್ಯಾಗಾರ
ಮೂಡುಬಿದಿರೆ(ಸೆ04): ‘ಸಂವಿಧಾನಾತ್ಮಕ ಮೌಲ್ಯಗಳು’ ರಾಜ್ಯ ಪಠ್ಯಕ್ರಮದ ಕಾರ್ಯಾಗಾರವು ಇಲ್ಲಿನ ಶ್ರೀ ದವಳ ಕಾಲೇಜಿನಲ್ಲಿ ಸೆ. 2ರಂದು ನಡೆಯಿತು. ಶ್ರೀ ಧವಳ ಕಾಲೇಜು ಮತ್ತು ಮಂಗಳೂರು ವಿ.ವಿ. ರಾಜ್ಯಶಾಸ್ತ್ರ ಶಿಕ್ಷಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಶ್ರೀ ದವಳ ಕಾಲೇಜಿನ ಕಾನ್ಫರೆನ್ಸ್ ಹಾಲಿನಲ್ಲಿ ನಡೆದ ಕಾರ್ಯಾಗಾರವನ್ನು ಉದ್ಘಾಟಿಸಿದ ಡಿ ಜೆ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಅಭಿಜಿತ್ ಎಂ. ಅವರು ಮಾತನಾಡಿ ಸಂವಿಧಾನಾತ್ಮಕ ಮೌಲ್ಯಗಳು ಪ್ರತಿಯೊಬ್ಬನಿಗೆ ಕೂಡ ಬಹಳ ಅಗತ್ಯವಾದ ವಿಚಾರವಾಗಿದ್ದು ಸಾಮಾಜಿಕವಾಗಿ ಅದು […]
ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗೆ ಖ್ಯಾತ ವಕೀಲೆ ಅಂಜಲಿ ರಾಮಣ್ಣ ಭೇಟಿ
ಕುಂದಾಪುರ (ಸೆ.2) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ಇಂದು ವಿದ್ಯಾರ್ಥಿಗಳಿಗಾಗಿ ” ಮಕ್ಕಳು ಮತ್ತು ಕಾನೂನಿನ ಅರಿವು “ ಎಂಬ ವಿಷಯದ ಆಧಾರದ ಮೇಲೆ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಾಗಾರ ನಡೆಯಿತು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ವಕೀಲೆ, ಲೇಖಕಿ, ಅಂಕಣಗಾರ್ತಿ, ಜೀವನ ಕೌಶಲ್ಯ ತರಬೇತುದಾರೆ ಹಾಗೂ […]
ಬಿ. ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್. ಯುವಜನೋತ್ಸವದಲ್ಲಿ ಸುಜಯ್ ಶೆಟ್ಟಿಗೆ ಪ್ರಶಸ್ತಿ
ಕುಂದಾಪುರ (ಆ, 31): ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಆಗಸ್ಟ್ 27ರಿಂದ 31ರವರೆಗೆ ನಡೆದ ರಾಜ್ಯಮಟ್ಟದ ಎನ್.ಎಸ್.ಎಸ್. ಯುವಜನೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸಿದ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕ ಸುಜಯ್ ಶೆಟ್ಟಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ವೈಯಕ್ತಿಕವಾಗಿ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ, ಗುಂಪು ಸ್ಪರ್ಧೆಯಲ್ಲಿ ಪ್ರಹಸನ ಮತ್ತು ಸಮೂಹಗಾನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. 21 ವಿಶ್ವವಿದ್ಯಾನಿಲಯಗಳು […]
ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ (ಸೆ ,04): ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಮಂಗಳೂರು, ಇವರು ಆಗಸ್ಟ್ ,31 ರಂದು ಆಯೋಜಿಸಿದ ರಾಷ್ಟ್ರಮಟ್ಟದ ಐಟಿ ಮತ್ತು ಕಲ್ಚರಲ್ ಫೆಸ್ಟ್ ‘ಟೆಕ್ನೋ ಕಾರ್ಟ್ಸ್ ಜೋಶಿಯಾನ 13.0’ ಕಾರ್ಯಕ್ರಮದಲ್ಲಿ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿ, ಐಟಿ ವೆಬ್ ಡಿಸೈನ್ ಸ್ಪರ್ಧೆಯಲ್ಲಿ ಅಂತಿಮ ಬಿಸಿಎ ವಿದ್ಯಾರ್ಥಿಗಳಾದ ರೋಹನ್ ಮತ್ತು ನಿತಿನ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ ಹಾಗೂ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ಅಂತಿಮ […]
ಬ್ಯಾರಿಸ್ ಪ್ರಥಮ ದರ್ಜೆ ಕಾಲೇಜು ಕೋಡಿ : ಯುವ ರೆಡ್ ಕ್ರಾಸ್ ಘಟಕ ಉದ್ಘಾಟನೆ
ಕುಂದಾಪುರ( ಸೆ: 3): ಬ್ಯಾರಿಸ್ ಪ್ರಥಮ ದರ್ಜೆ ಕಾಲೇಜು ಕೋಡಿ ಕುಂದಾಪುರ ಮತ್ತು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರದ ಸಹಯೋಗದೊಂದಿಗೆ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನೆ ನೆರವೇರಿತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರದ ಅಧ್ಯಕ್ಷರಾದ ಶ್ರೀಯುತ ಜಯಕರ್ ಶೆಟ್ಟಿಯವರು ಉದ್ಘಾಟಿಸಿ, ‘ಪ್ರತಿಯೊಂದು ಕಾಲೇಜುಗಳಲ್ಲಿ ಯುವ ರೆಡ್ ಕ್ರಾಸ್ ಘಟಕಗಳು ಪ್ರಾರಂಭಗೊಳ್ಳಬೇಕು. ಮಾನವೀಯತೆಯ ನೆಲೆಯಲ್ಲಿ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದು. ಯಾವುದೇ ಜಾತಿ, ಮತ, ಧರ್ಮ ಭೇದವಿಲ್ಲದೆ ಯಾರು […]
ರಾಮಕೃಷ್ಣ ಬಿ.ಜಿ.ಯವರಿಗೆ ಉತ್ತಮ ಪ್ರಾಚಾರ್ಯ ರಾಜ್ಯ ಪ್ರಶಸ್ತಿ
ಕುಂದಾಪುರ (ಸೆ. 04): 2024-25ನೇ ಸಾಲಿನ ಉತ್ತಮ ಪ್ರಾಚಾರ್ಯ ರಾಜ್ಯ ಪ್ರಶಸ್ತಿಗೆ ಕುಂದಾಪುರದ ಪ್ರತಿಷ್ಠಿತ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ರಾಮಕೃಷ್ಣ ಬಿ.ಜಿ.ಯವರು ಭಾಜನರಾಗಿದ್ದಾರೆ. ಇವರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೆಳೆಯೂರಿನ ಶ್ರೀ ಗಣಪತಿ ಬಿ.ಆರ್. ಹಾಗೂ ಶ್ರೀಮತಿ ಜಯಲಕ್ಷ್ಮಿಯವರ ಪುತ್ರ. ತಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಬೆಳೆಯೂರಿನಲ್ಲಿ, ಪದವಿ ಮತ್ತು ಸ್ನಾತಕೋತ್ತರ ಅಧ್ಯಯನವನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದರು. ತತ್ವಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು ಪ್ರಥಮ […]










