ಕಟ್ಟ್ ಬೆಲ್ತೂರು(ಜ.29): ಇಲ್ಲಿನ ಸುಳ್ಸೆ ಗ್ರಾಮದಲ್ಲಿ ರಾಷ್ಟ್ರೀಯ ಮತದಾರರ ದಿನ ಆಚರಣೆ, ಹೊಸ ಮತದಾರರಿಗೆ ಗುರುತಿನ ಚೀಟಿ ನೀಡಿ ಮತದಾರರ ಆದ್ಯ ಕರ್ತವ್ಯ ಮತ್ತು ರೀತಿ ನೀತಿ ನಿಯಮಗಳನ್ನು ಪ್ರತಿಜ್ಞಾ ವಿಧಿಯನ್ನು ಭೋಧಿಸುವ ಮೂಲಕ ತಿಳಿಸಲಾಯಿತು. ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ […]
Category: ರಾಜಕೀಯ
ಬೈಂದೂರು ಶಾಸಕರ ವಿರುದ್ಧ ಅವಾಚ್ಯ ಪದ ಬಳಕೆ : ಪ್ರಕರಣ ದಾಖಲು
ಶಂಕರನಾರಾಯಣ (ಜ.22): ಬೈಂದೂರು ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿಯವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಹಲವಷ್ಟು ದಿನಗಳಿಂದ ಕಂಡು ಬರುತ್ತಿದ್ದು, ಅವಾಚ್ಯ ಪದಬಳಕೆ ಮಾಡಿದ ಉದಯ ಬಿಜೂರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ತಕ್ಷಣಕ್ಕೆ ಆತನನ್ನು ಬಂಧಿಸಬೇಕು, ಇಲ್ಲದಿದ್ದಲ್ಲಿ ಎಲ್ಲಾ ಬಿಜೆಪಿ ಕಾರ್ಯಕರ್ತರು ಮತ್ತು ಶಾಸಕರ ಅಭಿಮಾನಿಗಳು ಠಾಣೆಗೆ ಮುತ್ತಿಗೆ ಹಾಕಲಿದ್ದಾರೆ ಎಂದು ಬೈಂದೂರು ಬಿಜೆಪಿಯ ಯುವ ನಾಯಕ ಕಲ್ಗದ್ದೆ ಉಮೇಶ್ ಶೆಟ್ಟಿಯವರು ಆಗ್ರಹಿಸಿದ್ದಾರೆ.
ಪ್ರಧಾನಿ ಮೋದಿಜಿಯ ದೀರ್ಘಾಯುಷ್ಯಕ್ಕಾಗಿ ಕುಂದೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಜಪ ಮತ್ತು ವಿಶೇಷಪೂಜೆ
ಕುಂದಾಪುರ (ಜ.8): ಪ್ರಧಾನಿ ನರೇಂದ್ರ ಮೋದಿಜಿಯ ದೀರ್ಘಾಯುಷ್ಯಕ್ಕಾಗಿ ಕುಂದೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಜಪ ಮತ್ತು ವಿಶೇಷಪೂಜೆಯನ್ನುಕುಂದಾಪುರ ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಜ.7 ರಂದು ಹಮ್ಮಿಕೊಳ್ಳಲಾಯಿತು. ಹಾಗೆಯೇ ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಭೇಟಿ ಸಂದರ್ಭದಲ್ಲಿ ನಿಗದಿತ ಭದ್ರತಾ ಸುರಕ್ಷಾ ಕ್ರಮಗಳನ್ನು ಕೈಗೊಳ್ಳದೇ ಅವಾಂತರ ಸ್ರಷ್ಠಿಸಿದ್ದ ಪಂಜಾಬ್ ಸರಕಾರದ ನಡೆಯನ್ನು ಖಂಡಿಸಲಾಯಿತು. ಈ ಸಂದರ್ಭದಲ್ಲಿ ಕುಂದಾಪುರ ಬಿಜೆಪಿ ಮಂಡಲದ ಕ್ಷೇತ್ರಾಧ್ಯಕ್ಷರಾದ ಶಂಕರ ಅಂಕದಕಟ್ಟೆ, ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಶೆಟ್ಟಿ, ಸತೀಶ್ […]
ಕೋಟತಟ್ಟು:ಪೊಲೀಸ್ ದೌರ್ಜನ್ಯ ಪ್ರಕರಣದ ಸಂತ್ರಸ್ತರಿಗೆ ಪರಿಹಾರಧನ ವಿತರಿಸಿದ ಗ್ರಹ ಸಚಿವ
ಕೋಟ(ಜ.2): ಕೋಟತಟ್ಟು ಗ್ರಾಮದಲ್ಲಿ ಪೊಲೀಸ್ ಲಾಠಿಚಾರ್ಜ್ ಗೊಳಗಾದ ಕೊರಗ ಸಮುದಾಯವರನ್ನು ರಾಜ್ಯ ಗ್ರಹ ಸಚಿವ ಅರಗ ಜ್ಙಾನೇಂದ್ರರವರು ಜ.01 ರಂದು ಭೇಟಿ ಮಾಡಿ ಸಾಂತ್ವನ ಹೇಳಿದರು. ಗಾಯಗೊಂಡವರಿಗೆ ₹2 ಲಕ್ಷ ಪರಿಹಾರ ಘೋಷಿಸಿ, ಪ್ರತಿ ಕುಟುಂಬಕ್ಕೆ ₹50,000 ಪರಿಹಾರ ನೀಡಿದರು. ಪೊಲೀಸ್ ದೌರ್ಜನ್ಯ ಪ್ರಕರಣ ಕುರಿತು ಸಿ.ಓ.ಡಿ ತನಿಖೆ ನಡೆಸಲಾಗುವುದು ಎಂದು ತಿಳಿಸುತ್ತಾ, ಕೊರಗ ಕುಟುಂಬದವರ ವಿವಾಹ ಸಮಾರಂಭದಲ್ಲಿ ಲಾಠಿಚಾರ್ಜ್ ಮಾಡಿ ದೌರ್ಜನ್ಯ ಎಸಗಿದ ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು,ಕೊರಗ […]
ವಿಶೇಷ ಮಕ್ಕಳ ಶಾಲೆಗೆ ಬೈಂದೂರು ಶಾಸಕರಿಂದ ಐದು ಲಕ್ಷ ರೂಪಾಯಿ ಕೊಡುಗೆ
ಬೈಂದೂರು(ಡಿ.31):ತಲ್ಲೂರು ಫ್ಯಾಮಿಲಿ ಟ್ರಸ್ಟ್ ಪ್ರಾಯೋಜಿತ ನಾರಾಯಣ ವಿಶೇಷ ಮಕ್ಕಳ ಶಾಲೆ ತಲ್ಲೂರು, ಕುಂದಾಪುರ ಇಲ್ಲಿಗೆ ಭೇಟಿ ನೀಡಿದ ಬೈಂದೂರಿನ ಶಾಸಕರಾದ ಶ್ರೀ ಬಿ.ಎಮ್.ಸುಕುಮಾರ ಶೆಟ್ಟಿಯವರು ಶಾಸಕರ ನಿಧಿಯಿಂದ ಐದು ಲಕ್ಷ ರೂಪಾಯಿ ಬಿಡುಗಡೆಗೊಳಿಸಿದರು. ಇಲ್ಲಿ ಸುಮಾರು 39 ವಿಶೇಷ ಮಕ್ಕಳು ತರಬೇತಿಯನ್ನು ಪಡೆಯುತ್ತಿದ್ದಾರೆ. ಆ ಮಕ್ಕಳೊಂದಿಗೆ ಶಾಸಕರು ಸಮಯ ಕಳೆದು, ಶುಭ ಹಾರೈಸಿದರು.
ಕೆಮ್ಮಣ್ಣು ಪಂ.ಉಪಚುನಾವಣೆ : ಮಹೇಶ್ ಪೂಜಾರಿಗೆ ಗೆಲುವು
ಉಡುಪಿ( ಡಿ.30): ಉಡುಪಿಯ ತೋನ್ಸೆ ಗ್ರಾಮ ಪಂಚಾಯತ್ ಪಡುಕುದ್ರು ವಾರ್ಡಿನ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಹೇಶ್ ಪೂಜಾರಿ ಅವರು 108 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ನಿತ್ಯಾನಂದ ಕೆಮ್ಮಣ್ಣರವರ ನಿಧನದಿಂದ ತೆರವಾದ ಸ್ಥಾನಕ್ಕೆ ಡಿ.27 ರಂದು ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಮಹೇಶ್ ಪೂಜಾರಿ ಯವರು ಬಿಜೆಪಿ ಬೆಂಬಲಿತ ಅಭ್ಯರ್ಥಿ ವೆಂಕಟೇಶ್ ಕುಂದರ್ ಎದುರು 108 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಬೈಂದೂರು: ಫಲಾನುಭವಿಗಳಿಗೆ ಸಹಾಯಧನ ವಿತರಿಸಿದ ಶಾಸಕ ಶ್ರೀ ಬಿ.ಎಮ್.ಸುಕುಮಾರ ಶೆಟ್ಟಿ
ಬೈಂದೂರು(ಡಿ.28): ರಾಜ್ಯ ನಗರಾಭಿವೃದ್ಧಿ ಇಲಾಖೆ ಪೌರಾಡಳಿತ ನಿರ್ದೇಶನಾಲಯ, ಬೈಂದೂರು ಪ.ಪಂ. ಉಡುಪಿ ಜಿಲ್ಲೆ ಹಾಗೂ ತಾಲೂಕು ಆಡಳಿತ ಕಚೇರಿ ಬೈಂದೂರು ಇವರ ವತಿಯಿಂದ ಬೈಂದೂರು ರೋಟರಿ ಭವನದಲ್ಲಿ ಡಿ.27 ರಂದು ನಡೆದ 2021-22ನೇ ಸಾಲಿನ ಎಸ್.ಎಫ್.ಸಿ. ಅನುದಾನದಡಿಯಲ್ಲಿ ಫಲಾನುಭವಿಗಳಿಗೆ ಸಹಾಯಧನ ಚೆಕ್ ನ್ನು ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ವಿತರಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಶಾಸಕರು ರಾಜ್ಯ ಸರ್ಕಾರ ಮತ್ತು ಸಂಸದರ ವಿಶೇಷ ಪ್ರಯತ್ನದಿಂದ ಬೈಂದೂರು ಕ್ಷೇತ್ರಕ್ಕೆ ಅಭಿವೃದ್ಧಿ ವಿಷಯದಲ್ಲಿ […]
ಇಂಡಿಯ ಬುಕ್ ಅಫ್ ರೆಕಾರ್ಡ್ ಸಾಧಕಿ ಬಾಲ ಪ್ರತಿಭೆ ಅಗಮ್ಯ ಎಂ ಶೆಟ್ಟಿ ಯನ್ನು ಅಭಿನಂದಿಸಿದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ
ವಂಡ್ಸೆ (ಡಿ,2): ಉಪ್ಪುಂದದ ನಿವಾಸಿ , ಉದ್ಯಮಿ ಶ್ರೀ ಗುರುದತ್ತ ಶೆಟ್ಟಿ ಹಾಗೂ ಶ್ರೀಮತಿ ಮಮತಾ ಶೆಟ್ಟಿ ದಂಪತಿಯ ಒಂದು ವರ್ಷದ ಆರು ತಿಂಗಳ ಪುತ್ರಿ ಅಗಮ್ಯ ಎಂ ಶೆಟ್ಟಿ ತನ್ನ ವಿಶೇಷ ಬುದ್ಧಿಶಕ್ತಿ ಹಾಗೂ ನೆನಪಿನ ಶಕ್ತಿಯಿಂದ ಭಾರತದ ಪ್ರತಿಷ್ಠಿತ ಇಂಡಿಯ ಬುಕ್ ಅಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದ್ದಾರೆ . ಈ ಬಾಲಪ್ರತಿಭೆಯ ವಿಶೇಷ ಸಾಧನೆಯನ್ನು ಗುರುತಿಸಿ ಬೈಂದೂರು ಶಾಸಕ ಬಿ ಎಂ ಸುಕುಮಾರ ಶೆಟ್ಟಿಯವರು ತಮ್ನ ಸ್ವಗ್ರಹದಲ್ಲಿ ಅಗಮ್ಯ […]
ಭಾರತೀಯ ಜನತಾ ಪಾರ್ಟಿ ಉಡುಪಿ : ಸಂವಿಧಾನ ದಿನಾಚರಣೆ & ಸನ್ಮಾನ ಕಾರ್ಯಕ್ರಮ
ಉಡುಪಿ (ನ,28); ಉಡುಪಿ ಜಿಲ್ಲಾ ಬಿಜೆಪಿ ಪಕ್ಷದ ಕಛೇರಿಯಲ್ಲಿ ಸಂವಿಧಾನ ದಿನಾಚರಣೆಯನ್ನು ನ,26 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರಸಿದ್ಧ ಜಾನಪದ ಗಾಯಕರು ಹಾಗೂ ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಇದರ ಜಿಲ್ಲಾಧ್ಯಕ್ಷರಾದ ಡಾ.ಗಣೇಶ್ ಗಂಗೊಳ್ಳಿ ಯವರನ್ನು ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಯವರು ಸನ್ಮಾನಿಸಿ ಗೌರವಿಸಿದರು.
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಸಿದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ
ವಂಡ್ಸೆ(ನ,7): ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ವಿಜ್ಞಾನಿ ಡಾ. ದಿನೇಶ್ ಶೆಟ್ಟಿ, ಶ್ರೀ ಬಿ. ರಾಮ ಟೈಲರ್ ಹಾಗೂ ಉಪ್ಪುಂದ ಶ್ರೀಧರ ಗಾಣಿಗರನ್ನು ಬೈಂದೂರು ಶಾಸಕ ಶ್ರೀ ಬಿ.ಎಂ ಸುಕುಮಾರ ಶೆಟ್ಟಿಯವರು ತಮ್ಮ ಗ್ರಹ ಕಛೇರಿಯಲ್ಲಿ ಗೌರವಪೂರ್ವಕವಾಗಿ ಅಭಿನಂದಿಸಿದರು.