ಗಿಳಿಯಾರು(ಜೂ,13): ಅಭಿಮತ ಸಂಭ್ರಮದ ಮೂಲಕ ರಾಜ್ಯಾದ್ಯಂತ ಮನೆಮಾತಾಗಿರುವ ಸಮಾಜ ಸೇವಾ ಸಂಸ್ಥೆ ಜನಸೇವಾ ಟ್ರಸ್ಟ್ ಗಿಳಿಯಾರು ಇದರ ಪರಿಸರ ಕಾಳಜಿಯ ಕಾರ್ಯಕ್ರಮವಾದ ಹಸಿರು ಅಭಿಯಾನದ ಮೊದಲ ಕಾರ್ಯಕ್ರಮ ಟೀಮ್ ಅಭಿಮತ ನೇತೃತ್ವದಲ್ಲಿ ಐರೋಡಿ, ಗೋಳಿಬೆಟ್ಟು ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಔಷಧೀಯ ಗುಣವುಳ್ಳ ಲಕ್ಷ್ಮಣ ಫಲ ಗಿಡಗಳ ವಿತರಿಸುವ ಮೂಲಕ ಚಾಲನೆಗೊಂಡಿತು. ಸ್ಥಳೀಯರಾದ ರಮೇಶ್ ಕಾರಂತರು ಶಾಲೆಯ ಮುಖ್ಯ ಶಿಕ್ಷಕ ಮಹೇಶ್ ಗಿಳಿಯಾರು ರವರಿಗೆ ಸಸಿ ನೀಡುವ ಮೂಲಕ ಶುಭ […]
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ಗಂಗೊಳ್ಳಿ: ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ನೋಟ್ ಪುಸ್ತಕಗಳ ಉಚಿತ ವಿತರಣೆ
ಗಂಗೊಳ್ಳಿ (ಜೂ, 10) : ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ದೃಷ್ಟಿಯಿಂದ ಅವರಿಗೆ ಅನುಕೂಲವಾಗುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಯಾವುದೇ ಸಂಸ್ಥೆಗೆ ಘನತೆಯನ್ನು ತಂದು ಕೊಡುತ್ತದೆ. ಪ್ರತಿ ಸಂಘ- ಸಂಸ್ಥೆಗಳು ಈ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದು ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ವಿಶ್ವನಾಥ ಭಟ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ನಡೆದ ಉಚಿತ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿಗಳ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಬಿಲ್ಲವರ […]
ಕುಂದಾಪುರ: ಸ್ವಾತಂತ್ರ್ಯ ಹೋರಾಟಗಾರ ಸಟ್ವಾಡಿ ಬಿ.ಎಸ್.ಸೂರಪ್ಪ ಶೆಟ್ಟಿ ರವರ ಮನೆಯಲ್ಲಿ ನಾಮ ಫಲಕ ಅನಾವರಣ
ಕುಂದಾಪುರ(ಜೂ.10): ತಾಲೂಕಿನ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಟ್ವಾಡಿ ಬಿ.ಎಸ್.ಸೂರಪ್ಪ ಶೆಟ್ಟಿ ಯವರ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ಎಂದು ನಾಮ ಫಲಕ ಅಳವಡಿಸುವ ಕಾರ್ಯಕ್ರಮ ಇತ್ತೀಚೆಗೆ ಜರಗಿತು. ಸ್ವರಾಜ್ಯ 75 ತಂಡದ 24ನೇ ಸ್ವಾತಂತ್ರ್ಯ ಹೋರಾಟಗಾರರ ಮನೆ ನಾಮಫಲಕ ಅನಾವರಣ ಕಾಯ೯ಕ್ರಮಕ್ಕೆ ಕುಂದಾಪುರದ ಡಾ.ಬಿ.ಬಿ.ಹೆಗ್ಡೆ ಪ್ರಥಮ ದಜೆ೯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ,ಹಸ್ತ ಚಿತ್ರ ಫೌಂಡೇಶನ್ ಕ್ವಾಡಿ,ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಘಟಕ,ಜನಸೇವಾ ಟ್ರಸ್ಟ್ […]
ಜೆಸಿಐ ಕುಂದಾಪುರ ಸಿಟಿ: ಅಗ್ನಿಶಾಮಕ ಠಾಣೆಯ ಕೃಷ್ಣ ನಾಯ್ಕ್ ರವರಿಗೆ ಸನ್ಮಾನ
ಕುಂದಾಪುರ (ಜೂ,04) : ಇಲ್ಲಿನ ಅಗ್ನಿಶಾಮಾಕ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕೃಷ್ಣ ನಾಯ್ಕ್ ರವರಿಗೆ ಜೆಸಿಐ ಕುಂದಾಪುರ ಸಿಟಿ ವತಿಯಿಂದ ಸನ್ಮಾನ ಕಾರ್ಯಕ್ರಮ ಕೋಟೇಶ್ವರದ ಸಹನಾ ಕನ್ವೆನ್ಷನ್ ನ ಕೃಷ್ಣ ಸಭಾಭವನದಲ್ಲಿ ಇತ್ತೀಚೆಗೆ ಜರುಗಿತು ವೃತ್ತಿಯನ್ನು ನಾವು ಗೌರವಿಸಬೇಕು ಅದನ್ನು ಪ್ರೀತಿ ಯಿಂದ ಸೇವೆ ಮಾಡಬೇಕು. ನಾವು ಮಾಡುತ್ತಿರುವ ಕೆಲಸ ಅದು ಎಷ್ಟೇ ಕಷ್ಟವಾದರೂ ಅದನ್ನು ಚಾಲೆಂಜ್ ಆಗಿ ತೆಗೆದುಕೊಂಡರೆ ಮಾತ್ರ ಯಶಸ್ಸು ಸಿಗುತ್ತದೆ ಎಂದು ಸನ್ಮಾನ ಸ್ವೀಕರಿಸಿ ಕೃಷ್ಣ […]
ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ: ಜೂನ್ 10ರಂದು ಉಚಿತ ನೋಟ್ ಬುಕ್ ವಿತರಣೆ
ಗಂಗೊಳ್ಳಿ(ಜೂ,4 ): ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಇವರ ವತಿಯಿಂದ ಗಂಗೊಳ್ಳಿಯ ಬಿಲ್ಲವ ಸಮುದಾಯದ ವಿದ್ಯಾರ್ಥಿಗಳಿಗಾಗಿ ಉಚಿತ ನೋಟ್ ಬುಕ್ ವಿತರಣಾ ಸಮಾರಂಭವು ಜೂನ್ 10ರಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಲಿದೆ. ಗೋಪಾಲ ಪೂಜಾರಿಯವರು ಅಧ್ಯಕ್ಷತೆ ವಹಿಸಲಿದ್ದು, ಬಿ. ಎಸ್ ಎನ್ ಎಲ್ ನಿವೃತ್ತ ಇಂಜಿನಿಯರ್ ಅಣ್ಣಪ್ಪ ಬಿಲ್ಲವ, ಉದ್ಯಮಿಗಳಾದ ಲಕ್ಷ್ಮಣ ಬಿಲ್ಲವ ಮತ್ತು ದಿನೇಶ್ ಬಿಲ್ಲವ, ವಿಶ್ವನಾಥ್ ಭಟ್, ಜಿ.ಕೆ ವೆಂಕಟೇಶ, ಜಿ ಎ […]
ಶಂಕರನಾರಾಯಣ : ಹಳೆ ವಿದ್ಯಾರ್ಥಿಗಳ ಪುನರ್ಮಿಲನ ಮತ್ತು ಗುರುವಂದನಾ ಕಾರ್ಯಕ್ರಮ
ಶಂಕರನಾರಾಯಣ( ಮೇ,16): ಸರಕಾರಿ ಪದವಿಪೂರ್ವ ಕಾಲೇಜು ಶಂಕರನಾರಾಯಣ ಪ್ರೌಢ ಶಾಲಾ ವಿಭಾಗದ 1990ನೇ ಸಾಲಿನ ಎಸ್ .ಎಸ್ .ಎಲ್. ಸಿ .ವಿದ್ಯಾರ್ಥಿಗಳ ಪುನರ್ಮಿಲನ ಮತ್ತು ಗುರುವಂದನೆ ಕಾರ್ಯಕ್ರಮವು ಕಾಲೇಜಿನ ಶ್ರೀ ಸುಬ್ರಹ್ಮಣ್ಯ ಜೋಯಿಷ ಸುವರ್ಣ ಸಭಾಂಗಣದಲ್ಲಿ ಇತ್ತೀಚೆಗೆ ನೆರವೇರಿತು. ಸುಮಾರು 45ಕ್ಕೂ ಅಧಿಕ ಹಳೆ ವಿದ್ಯಾರ್ಥಿಗಳು ತಮ್ಮ ಕುಟುಂಬ ಸಮೇತ ಈ ಪುನರ್ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಈ ಕಾರ್ಯಕ್ರಮದಲ್ಲಿ ಅಂದಿನ ಪ್ರೌಢಶಾಲಾ ಶಿಕ್ಷಕರಾದ ಶ್ರೀ ಗೋಪಾಲ್ ಶೆಟ್ಟಿಗಾರ್ , […]
ಯುವ ಬಂಟರ ಸಂಘದ ವತಿಯಿಂದ ಆರ್ಥಿಕ ನೆರವು ವಿತರಣೆ
ಕುಂದಾಪುರ(ಮೇ7): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಮಾಂಗಲ್ಯ ಸೂತ್ರ ಮತ್ತು ಆರೋಗ್ಯ ಭಾಗ್ಯ ಯೋಜನೆಯಡಿಯಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಆಯ್ದ ಫಲಾನುಭವಿಗಳಿಗೆ ಚೆಕ್ ವಿತರಿಸುವ ಕಾರ್ಯಕ್ರಮ ಮೇ 06 ರ ಶನಿವಾರ ಸಂಜೆ ಆರ್. ಎನ್. ಶೆಟ್ಟಿ ಸಭಾಭವನದಲ್ಲಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು. ಸಂಘದ ದಶಮ ಸಂಭ್ರಮ ಮಹಾಪೋಷಕರಾದ ಬಿ. ವಿನಯ್ […]
ಹೈಕಾಡಿ: ಗುಬ್ಬಚ್ಚಿ ಬೇಸಿಗೆ ಶಿಬಿರ ಸಂಪನ್ನ
ಬ್ರಹ್ಮಾವರ (ಮೇ,07): ಜೆಸಿಐ ಬ್ರಹ್ಮಾವರ ಸೇವಾಮೆ ಬ್ರಹ್ಮಾವರ ಮತ್ತು ಸ್ಮಾರ್ಟ್ ಕ್ರೀಯೇಶನ್ಸ್ ಎಜ್ಯುಕೇಶನ್ ಟ್ರಸ್ಟ್(ರಿ) ಹೈಕಾಡಿ ಇದರ ವತಿಯಿಂದ ಏಪ್ರಿಲ್ 19ರಿಂದ 29 ರ ವರೆಗೆ ಹಾಯ್ಕಾಡಿಯಲ್ಲಿ ನಡೆದ ಗುಬ್ಬಚ್ಚಿ ಬೇಸಿಗೆ ಶಿಬಿರ ಸಮಾರೋಪ ಗೊಂಡಿತು. ಕಾರ್ಯಕ್ರಮದಲ್ಲಿ ಕಲಾವಿದರು ಮತ್ತು ಚಿತ್ರ ನಟರು ಆಗಿರುವ ಶ್ರೀ ಓಂಗುರು ಬಸ್ರೂರು ಇವರು ಮುಖ್ಯ ಅತಿಥಿಯಾಗಿ ಗ್ರಾಮೀಣ ಭಾಗದ ಮಕ್ಕಳಿಗೆ ಶಿಬಿರ ಅತ್ಯಂತ ಉಪಯುಕ್ತವಾದುದು ಮತ್ತು ಪ್ರತಿ ವರ್ಷ ಇದೇ ರೀತಿಯ ಶಿಬಿರಗಳು […]
ಡಾ| ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ : ಟೆಕ್ ಮಂಥನ್ 2.0 ಐ ಟಿ ಫೆಸ್ಟ್
ಕುಂದಾಪುರ(ಏ, 27): ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವತಿಯಿಂದ ಟೆಕ್ ಮಂಥನ್ 2.0 ಐ ಟಿ ಫೆಸ್ಟ್ ಎ .29ರಂದು ನಡೆಯಲಿದೆ. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸುವುದರ ಮೂಲಕ ಅವರಲ್ಲಿನ ಪ್ರತಿಭೆಯನ್ನು ಅನಾವರಣಗೊಳಿಸಲು ಹಾಗೂ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಬೇಕಾಗಿರುವ ಕೌಶಲ್ಯವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಹಾಗೂ […]
ಗಂಗೊಳ್ಳಿ ಪ್ರಬಂಧ ಸ್ಪರ್ಧೆ ಫಲಿತಾಂಶ
ಗಂಗೊಳ್ಳಿ( ಎ,17): ಡಾ.ಬಿ.ಆರ್ ಅಂಬೇಡ್ಕರ್ ಯುವಕ ಮಂಡಲ(ರಿ),ಅಮೃತಾ ಯುವತಿ ಮಂಡಲ (ರಿ) ಮತ್ತು ಅರ್ಚನಾ ಮಹಿಳಾ ಮಂಡಲ ಮೇಲ್ ಗಂಗೊಳ್ಳಿ. ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆಯ ಪ್ರಯುಕ್ತ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಪದವಿ ಪೂರ್ವ ಮತ್ತು ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ನನ್ನ ಅರಿವಿನ ಅಂಬೇಡ್ಕರ್ ವಿಷಯದ ಕುರಿತಾದ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ಕುಂದಾಪುರದ ಡಾ. ಬಿ […]










