ಹೆಮ್ಮಾಡಿ( ಸೆ.15): ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ತಾಲ್ಲೂಕು ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಕೋರಿದ್ದಾರೆ.
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಖೋ-ಖೋ ಪಂದ್ಯಾಟ
ಕುಂದಾಪುರ(ಸೆ.13): ಶಾಲಾ ಶಿಕ್ಷಣ ಇಲಾಖೆ (ಪ.ಪೂ) ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಸೆಪ್ಟೆಂಬರ್ 12 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಖೋ-ಖೋ ಪಂದ್ಯಾಟ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಯವರು ಪಂದ್ಯಾಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ಧರು. ಶ್ರೀ ಮೋಹನದಾಸ ಶೆಣೈ – ಅಧ್ಯಕ್ಷರು ಪುರಸಭೆ ಕುಂದಾಪುರ […]
ಮೊಗವೀರ ಯುವ ಸಂಘಟನೆ, ಹೆಮ್ಮಾಡಿ ಘಟಕ : ವನ ಮಹೋತ್ಸವ ಹಾಗೂ ಗಿಡ ವಿತರಣೆ
. ಹೆಮ್ಮಾಡಿ (ಆ ,24): ಮೊಗವೀರ ಯುವ ಸಂಘಟನೆ(ರಿ.),ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕದ ನೇತೃತ್ವದಲ್ಲಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ),ಅಂಬಲಪಾಡಿ ಉಡುಪಿ ಸಹಯೋಗದೊಂದಿಗೆ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ವಠಾರದಲ್ಲಿ ಆಗಸ್ಟ್ 23 ರಂದು ವನಮಹೋತ್ಸವ ಹಾಗೂ ಗಿಡ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಹೆಮ್ಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಕಾಂಚನ್ ಬಾಳಿಕೆರೆ, ಮೊಗವೀರ ಮಹಾಜನ ಸೇವಾ ಸಂಘ (ರಿ.), ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಇದರ ಅಧ್ಯಕ್ಷರಾದ ಶ್ರೀ […]
ಹೆಮ್ಮಾಡಿಯಲ್ಲಿ ಅಗಸ್ಟ್ 31 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಹೆಮ್ಮಾಡಿ (ಆ.26): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ.)ಹೆಮ್ಮಾಡಿ ಇವರ ಸಹಕಾರದೊಂದಿಗೆ ರಕ್ತನಿಧಿ ವಿಭಾಗ ಮಣಿಪಾಲ ಹಾಗೂ ಜಿಲ್ಲಾಡಳಿತ ಉಡುಪಿ ಇವರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಇದೇ ಅಗಸ್ಟ್ 31 ರಂದು ಹೆಮ್ಮಾಡಿಯ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ). ದ ಮತ್ಸ್ಯಜ್ಯೋತಿ ಸಭಾಂಗಣದಲ್ಲಿ […]
ಯೋಗಾಸನಾ ಸ್ಪರ್ಧೆ: ಸಂದೀಪ್ ಪೂಜಾರಿ ತ್ರಾಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕುಂದಾಪುರ( ಆ,24): ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ (ನೊಂ.)ಬೆಂಗಳೂರು ಮತ್ತು ಮುರುಘ ರಾಜೇಂದ್ರ ಬೃಹನ್ಮಠ, ಚಿತ್ರದುರ್ಗ ಇವರ ಸಹಯೋಗದೊಂದಿಗೆ ರಾಜ್ಯ ಮಟ್ಟದ ಯೋಗಾಸನಾ ಸ್ಪರ್ಧೆ ಶ್ರೀ ಅನುಭವ ಮಂಟಪ ಮುರುಘ ರಾಜೇಂದ್ರ ಬೃಹನ್ಮಠ, ಚಿತ್ರದುರ್ಗ ದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಗ್ರಾಮ ಪಂಚಾಯತ್ ತ್ರಾಸಿ ಸಿಬ್ಬಂದಿ ಸಂದೀಪ್ ಪೂಜಾರಿಯವರು ವಿವಿಧ ಹಂತದ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದಿಂದ ರಾಷ್ಟ್ರ ಮಟ್ಟಕ್ಕೆ ಆಯ್ಕೆ […]
ಮಾನವತಾ ಧರ್ಮವೇ ಶ್ರೇಷ್ಠವಾದದ್ದು : ಉದಯಕುಮಾರ್ ಹಟ್ಟಿಯಂಗಡಿ
ಉಳ್ಳಾಲ (ಆ,09): ಧರ್ಮವನ್ನು ಇಂದು ವಿವಿಧ ಅರ್ಥದಲ್ಲಿ ವ್ಯಾಖ್ಯಾನಿಸಲಾಗುತ್ತದೆ. ಆದರೆ ಧರ್ಮದ ಮೂಲವನ್ನು ಹುಡುಕುತ್ತಾ ಹೋದರೆ ನಮಗೆ ಸತ್ಯದ ಅರಿವಾಗುತ್ತದೆ. ದಯೆಯೇ ಧರ್ಮದ ಮೂಲ ವೆಂದು ಬಸವಣ್ಣನವರು ಶತಶತಮಾನದ ಹಿಂದೆ ಹೇಳಿದ್ದಾರೆ. ಆ ನಿಟ್ಟಿನಲ್ಲಿ ದಯೆಯಿಂದ ಕೂಡಿದ ಮಾನವತಾ ಧರ್ಮವೇ ಶ್ರೇಷ್ಠ ಎಂದು ಮೊಗವೀರ ಮಹಾಜನ ಸೇವಾ ಸಂಘ( ರಿ.), ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಇದರ ಅಧ್ಯಕ್ಷರು ಸಹಕಾರಿ ರತ್ನ ಹಾಗು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ […]
ಕಂಡ್ಲೂರು : ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಯಶಸ್ವಿ-104 ಯೂನಿಟ್ ರಕ್ತ ಸಂಗ್ರಹ
ಕಂಡ್ಲೂರು(ಜೂ, 27): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಕುಂದಾಪುರ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ವಿವಿಧ ಸಂಘ -ಸಂಸ್ಥೆಗಳ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಜೂನ್, 29 ರಂದು ಕಂಡ್ಲೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು. ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾದ ಶ್ರೀ ಜಯಂತ್ ಅಮೀನ್ ಕೋಡಿ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. […]
ಕಾರ್ಕಳ : ಸಿ ಎ ಟಿ ಸಿ ಶಿಬಿರದಲ್ಲಿ ಎನ್ ಸಿ ಸಿ ಕ್ಯಾಡೆಟ್ಗಳಿಗೆ ವಿಪತ್ತು ಪರಿಹಾರ ನಿರ್ವಹಣ ಕೌಶಲ ತರಬೇತಿ
ಕಾರ್ಕಳ (ಜೂ 10): 21 ಕರ್ನಾಟಕ ಬೆಟಾಲಿಯನ್ ಎನ್ ಸಿ ಸಿ ಅಯೋಜಿಸಿದ ಹತ್ತು ದಿನಗಳ ಕಂಬೈನ್ಡ್ ಆನ್ಯುವಲ್ ಟ್ರೈನಿಂಗ್ ಕ್ಯಾಂಪ್ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಸಂಪನ್ನಗೊಂಡಿತು. ಈ ತರಬೇತಿ ಶಿಬಿರದಲ್ಲಿ 592 ಎನ್.ಸಿ.ಸಿ ಕ್ಯಾಡೆಟ್ಗಳು ಭಾಗಹಿಸಿದ್ದು ಸೇನಾ ತರಬೇತಿ, ಶಿಬಿರ ಜೀವನ, ದೈಹಿಕ ತರಬೇತಿ (ಕಸರತ್ತು) , ಫೈರಿಂಗ್, ಅಡೆತಡೆಗಳನ್ನೆದುರಿಸುವ ಕೋರ್ಸಿನ ತರಬೇತಿಯ ಪ್ರಯೋಜನ ಪಡೆದುಕೊಂಡರು. ಯುವ ಆಪದ ಮಿತ್ರ ಯೋಜನೆಯಡಿಯಲ್ಲಿ ಜಿಲ್ಲಾ ವಿಪತ್ತು ಪರಿಹಾರ […]
ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ: 80 ನೇ ಶಿವರಾತ್ರಿ ಮಹೋತ್ಸವ ಹಾಗೂ ಕುಣಿತ ಭಜನಾ ಸ್ಪರ್ಧೆ
ಗಂಗೊಳ್ಳಿ ( ಫೆ .216): ಇಲ್ಲಿನ ಶ್ರೀ ಇಂದುಧರ ದೇವಸ್ಥಾನ ಇದರ 80ನೇ ಮಹಾಶಿವರಾತ್ರಿ ಮಹೋತ್ಸವದ ಪ್ರಯುಕ್ತ ಫೆಬ್ರವರಿ 25ರಂದು ಸಂಜೆ, 7:00ರಿಂದ ಅಂತರ್ ಜಿಲ್ಲಾ ಮಟ್ಟದ ಕುಣಿತ ಸ್ಪರ್ಧೆಯನ್ನು ಆಯೋಜಿಸಲಾಯಿತು. ಧಾರ್ಮಿಕ ಮುಖಂಡರಾದ ಬಿ. ಸದಾನಂದ ಶೆಣೈಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗಂಗೊಳ್ಳಿ ಪರ್ಶಿನ್ ಬೋಟ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷರಾದ ಶ್ರೀ ಲಕ್ಷ್ಮಿನಾರಾಯಣ ಮಡಿವಾಳರವರು ಕುಣಿತ ಭಜನೆ ಸ್ಪರ್ಧೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ […]
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಂಪಾರು ಮೂರು ಕೈ : ಸ್ಮಾರ್ಟ್ ಕ್ಲಾಸ್ ಉದ್ಘಾಟನೆ
ಅoಪಾರು(ಫೆ,13): ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಂಪಾರು ಮೂರು ಕೈ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಕಾರ್ಯಕ್ರಮ ಫೆಬ್ರವರಿ 08 ರಂದು ನಡೆಯಿತು. ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶ್ರೀಮತಿಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಭಾ ಕಾರ್ಯಕ್ರಮವನ್ನು ಪಂಚಾಯಿತಿ ಅಧ್ಯಕ್ಷರಾದ ಶ್ರೀಯುತ ಗೋಪಾಲಕೃಷ್ಣ ಕಿಣಿ ಇವರು ಉದ್ಘಾಟಿಸಿದರು. ಸ್ಮಾರ್ಟ್ ಕ್ಲಾಸ್ ಶ್ರೀಯುತ ತಿಮ್ಮಪ್ಪ ಶೆಟ್ಟಿ ಉದ್ಘಾಟಿಸಿದರು. ಸಿದ್ವಿನ್ ಔಟೋ ಟೆಕ್ ಕಂಪನಿ ಬೆಂಗಳೂರು ಇಲ್ಲಿಯ ಇಂಜಿನಿಯರ್ ಮನೀಶ್ ನಾಯಕ್ […]










