ಕುಂದಾಪುರ (ಡಿ. 23): ಕುಂದಾಪುರ ತಾಲೂಕು ಯುವ ಬಂಟರ ಸಂಘದಿಂದ 90 ರ ಸಂಭ್ರಮದಲ್ಲಿರುವ ನಾಡಿನ ಗಣ್ಯಮಾನ್ಯರಾದ ಶ್ರೀ ಬಸ್ರೂರು ಅಪ್ಪಣ್ಣ ಹೆಗ್ಡೆ ಯವರನ್ನು ಅವರ ಸ್ವಗ್ರಹದಲ್ಲಿ ಸಂಘದ ಗೌರವಾಧ್ಯಕ್ಷರಾದ ಶ್ರೀಮತಿ ವತ್ಸಲ ದಯಾನಂದ ಶೆಟ್ಟಿ ,ಸಂಘದ ಪೋಷಕರಾದ ವಿಜಯ ಶೆಟ್ಟಿ ಸಟ್ಟಾಡಿ ಮತ್ತು ಸಂಘದ ಸ್ಥಾಪಕಾಧ್ಯಕ್ಷರು ಮತ್ತು ದಶಮ ಸಂಭ್ರಮದ ಅಧ್ಯಕ್ಷರಾದ ಡಾ.ಅಂಪಾರು ನಿತ್ಯಾನಂದ ಶೆಟ್ಟಿ ಯವರು ಸನ್ಮಾನಿಸಿ ಗೌರವಿಸಿದರು. ಸಂಘದ ಅಧ್ಯಕ್ಷರಾದ ಶ್ರೀ ನಿತೀಶ್ ಶೆಟ್ಟಿ ಬಸ್ರೂರು […]
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ಡಿ.25 ರಂದು ಕೆಂಚನೂರಿನಲ್ಲಿ ಪ್ರೇಮ ಪಂಜರ ಯಕ್ಷಗಾನ
ಕೆಂಚನೂರು( ಡಿ.24): ಶ್ರೀ ಕ್ಷೇತ್ರ ಮೆಕ್ಕೆಕಟ್ಟು, ಶಿರಿಯಾರ ಇವರ ಶ್ರೀ ನಂದಿಕೇಶ್ವರ ಪ್ರಸಾದಿತ ಯಕ್ಷಗಾನ ಮಂಡಳಿ ವತಿಯಿಂದ ಡಿಸೆಂಬರ್ 25 ರಂದು ಕುಂದಾಪುರ ತಾಲೂಕಿನ ಕೆಂಚನೂರಿನಲ್ಲಿ ಅಂಬಿಕಾ ಪೂಜಾರಿ ಕಥಾ ಸಾಂಗತ್ಯದ ಬೇಳೂರು ವಿಷ್ಣುಮೂರ್ತಿ ನಾಯಕ್ ಪದ್ಯ ಸಾಹಿತ್ಯ ದ ಪ್ರೇಮ ಪಂಜರ ಯಕ್ಷಗಾನ ಅಂದು ರಾತ್ರಿ 9 ರಿಂದ ಪ್ರದರ್ಶನಗೊಳ್ಳಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಡಿ : ಶ್ರೀ ಮಾಸ್ತಿ ಸೂಲದ ಹೈಗುಳಿ ಮತ್ತು ಪರಿವಾರ ದೈವಗಳ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಮನವಿ
ಹೆಮ್ಮಾಡಿ (ಡಿ. 22): ಕುಂದಾಪುರ ತಾಲೂಕಿನ ದೇಲ್ಕುಂದ ಗ್ರಾಮದ ಇತಿಹಾಸ ಪ್ರಸಿದ್ದ ಜಾಡಿ ಕೋಟಿಮನೆ ಶ್ರೀಮಾಸ್ತಿ ಸೂಲದ ಹೈಗುಳಿ ಮತ್ತು ಪರಿವಾರ ದೈವಗಳ ದೈವಸ್ಥಾನ ಬಹಳ ವರ್ಷಗಳಿಂದ ಅಜೀರ್ಣ ವ್ಯವಸ್ಥೆಯಲ್ಲಿದ್ದು, ಕಟ್ಟಡ ಸಂಪೂರ್ಣ ಶಿತಿಲಗೊಂಡಿದೆ. ಆ ನಿಟ್ಟಿನಲ್ಲಿ ಊರ ಹಿರಿಯರು ಹಾಗೂ ದೈವವನ್ನು ನಂಬಿರುವ ಕುಟುಂಬಸ್ಥರು ಮತ್ತು ದಾನಿಗಳ ಸಹಕಾರದಿಂದ ಪುನರ್ನಿರ್ಮಾಣ ಮಾಡಿಸಲು ತೀರ್ಮಾನಿಸಿದ್ದು, ದೇವಸ್ಥಾನ ನಿರ್ಮಾಣಕ್ಕೆ ಅಂದಾಜು ಮೊತ್ತ 15,00,000/- ಬೇಕಾಗಿರುತ್ತದೆ. ಸದ್ಭಕ್ತರು ದೇಗುಲದಜೀರ್ಣೋದ್ಧಾರಕ್ಕೆ ಕೈಜೋಡಿಸಬೇಕೆಂದು ದೇಗುಲದ ಆಡಳಿತ […]
ಹೆಮ್ಮಾಡಿ: ವೆಲಾಸಿಟಿ ಅಕಾಡೆಮಿ ಇಂಡಿಯಾ ವತಿಯಿಂದ ಶ್ರೀ ಉದಯ್ ಕುಮಾರ್ ಹಟ್ಟಿಯಂಗಡಿಯವರಿಗೆ ಸನ್ಮಾನ
ಹೆಮ್ಮಾಡಿ( ಡಿ.19): ಹೆಮ್ಮಾಡಿ ಮೀನುಗಾರರ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸಹಕಾರ ರತ್ನ ರಾಜ್ಯ ಪ್ರಶಸ್ತಿ ಪುರಸ್ಕ್ರತ ಶ್ರೀ ಉದಯ್ ಕುಮಾರ್ ಹಟ್ಟಿಯಂಗಡಿಯವರನ್ನು ವೆಲಾಸಿಟಿ ಅಕಾಡೆಮಿ ಇಂಡಿಯಾ ಕರಾಟೆ ತರಭೇತಿ ಸಂಸ್ಥೆಯ ಮುಖ್ಯಸ್ಥರಾದ ಅಕ್ಷಯ ಹೆಮ್ಮಾಡಿಯವರು ತಮ್ಮ ಸಂಸ್ಥೆಯ ವತಿಯಿಂದ ಡಿಸೆಂಬರ್ 15 ರಂದು ಹೆಮ್ಮಾಡಿಯ ಮತ್ಸ್ಯ ಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯೋಗೀಶ್ ಗುಡ್ರಿ […]
ಹೆಮ್ಮಾಡಿಯಲ್ಲಿ ಜಿ. ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ನವೀಕರಣ ಹಾಗೂ ನೋಂದಾವಣೆ ಅಭಿಯಾನ
ಹೆಮ್ಮಾಡಿ (ಡಿ,016): ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ [ರಿ.] ಅಂಬಲಪಾಡಿ, ಉಡುಪಿ ಮತ್ತು ಮೊಗವೀರ ಯುವ ಸಂಘಟನೆ [ರಿ.] ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಮಾಹೆ- ಮಣಿಪಾಲ ಇವರ ಸಹಯೋಗದೊಂದಿಗೆ ಅತ್ಯುತ್ತಮ ಸೌಲಭ್ಯಗಳನ್ನು ಹೊಂದಿರುವ ಆಕರ್ಷಕ ಯೋಜನೆಯಾದ ಜಿ. ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಯೋಜನೆಯ ನವೀಕರಣ ಹಾಗೂ ನೋಂದಾವಣೆ ಅಭಿಯಾನ ಡಿಸೆಂಬರ್ 17 ರಿಂದ ಜನವರಿ 10 ರ ತನಕ ಹೆಮ್ಮಾಡಿಯ ಬಸ್ ನಿಲ್ದಾಣ ದ ಸಮೀಪದ ಮೀನುಗಾರರ […]
ಗೋವಾ ಬಂಟರ ಸಂಘ ರಜತ ಸಂಭ್ರಮದ ಲಾಂಛನ ಬಿಡುಗಡೆ
ಪಣಜಿ(ಡಿ, 05): ಗೋವಾ ಬಂಟರ ಸಂಘದ ವತಿಯಿಂದ 2025 ರ ಜನವರಿ 19ರಂದು ನಡೆಯಲಿರುವ ರಜತ ಸಂಭ್ರಮ ಕಾರ್ಯಕ್ರಮದ ಲಾಂಛನ ಬಿಡುಗಡೆ ಡಿಸೆಂಬರ್ 01 ರಂದು ನಡೆದ ಸಂಘದ ವಾರ್ಷಿಕ ಕ್ರೀಡಾಕೂಟದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಕಾವಡಿ ಸದಾಶಿವ ಶೆಟ್ಟಿ ಅನಾವರಣ ಮಾಡಿದರು. ಗೋವಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ಸುನಿಲ್ ಶೆಟ್ಟಿ ಬೆಳ್ಳಂಪಳ್ಳಿ, ಕೋಶಾಧಿಕಾರಿ ಶ್ರೀ ಪ್ರಶಾಂತ್ ಶೆಟ್ಟಿ, ಸಂಘದ ಉಪಾಧ್ಯಕ್ಷರಾದ ಶ್ರೀ ವಿಜಯೇಂದ್ರ ಶೆಟ್ಟಿ ಕಬ್ಯಾಡಿ, […]
ಸ್ನೇಹಿತರ ಬಳಗದಿಂದ ಭಾಸ್ಕರ್ ಶೆಟ್ಟಿ ಅವರಿಗೆ ಅಭಿಮಾನದ ಸನ್ಮಾನ
ಗಂಗೊಳ್ಳಿ( ಡಿ .3) : ಉತ್ತಮ ಸ್ನೇಹಿತರನ್ನು ಹೊಂದುವುದು ಜೀವನದಲ್ಲಿ ನಾವು ಮಾಡುವ ಅತಿ ದೊಡ್ಡ ಆಸ್ತಿ. ಉತ್ತಮ ಸ್ನೇಹಿತರನ್ನು ಪಡೆದುಕೊಳ್ಳುವಂತಹ ವ್ಯಕ್ತಿತ್ವವನ್ನು ನಾವು ನಮ್ಮದಾಗಿಸಿಕೊಳ್ಳಬೇಕು ಎಂದು ಕುಂದಾಪುರದ ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಉಮೇಶ್ ಪುತ್ರನ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯಲ್ಲಿ ಸ್ನೇಹಿತರ ಬಳಗ ಹಮ್ಮಿಕೊಂಡಿದ್ದ ಸರಸ್ವತಿ ವಿದ್ಯಾಲಯದ ನಿವೃತ್ತ ಇತಿಹಾಸ ಉಪನ್ಯಾಸಕ ಹೆಚ್ ಭಾಸ್ಕರ್ ಶೆಟ್ಟಿ ಅವರ ಅಭಿಮಾನದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ […]
ಡಿ. 07 ರಂದು ಕುಂದಾಪುರದಲ್ಲಿ ಮೊಗವೀರರ ಸಾಂಸ್ಕೃತಿಕ ಸಿಂಚನ -“ಹೆಜ್ಜೆ ಗೆಜ್ಜೆ ” ಸಾಂಸ್ಕೃತಿಕ ಸ್ವರ್ಧೆ
ಕುಂದಾಪುರ (ಡಿ. 03): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ.) ಅಂಬಲಪಾಡಿ, ಉಡುಪಿ ಹಾಗೂ ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯ ಅಂತರ್ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ “ಹೆಜ್ಜೆ -ಗೆಜ್ಜೆ” -ಮೊಗವೀರ ಸಾಂಸ್ಕೃತಿಕ ಸಿಂಚನವು ಡಿಸೆಂಬರ್ 07 ರಂದು ಕುಂದಾಪುರದ ಮೊಗವೀರ ಭವನದಲ್ಲಿ ನಡೆಯಲಿದೆ. ನಾಡೋಜ ಡಾ. ಜಿ ಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮೊಗವೀರ ಯುವ […]
ಕೋಟ ಸುಜಯೀಂದ್ರ ಹಂದೆಯವರಿಗೆ ಯಕ್ಷಗಾನ ಅಕಾಡೆಮಿ ಪುರಸ್ಕಾರ
ಮಂಗಳೂರು ( ನ .22): 2023 ರ ಸಾಲಿನ ಯಕ್ಷಗಾನ ಅಕಾಡೆಮಿ ಕೊಡಮಾಡುವ ಪುಸ್ತಕ ಬಹುಮಾನ ಪ್ರಶಸ್ತಿಯನ್ನು ಉಪನ್ಯಾಸಕ, ಲೇಖಕ, ಸಾಲಿಗ್ರಾಮ ಮಕ್ಕಳ ಮೇಳದ ನಿರ್ದೇಶಕ ಕೋಟದ ಎಚ್. ಸುಜಯೀಂದ್ರ ಹಂದೆಯವರಿಗೆ ಮಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಹಂದೆಯವರ ‘ಯಕ್ಷ ದೀವಟಿಕೆ’ ಕೃತಿ ಬಹುಮಾನಕ್ಕೆ ಆಯ್ಕೆಯಾಗಿತ್ತು. ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು. ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ […]
ಹೆಜ್ಜೆ ಗೆಜ್ಜೆ -ಮೊಗವೀರ ಸಾಂಸ್ಕೃತಿಕ ಸಿಂಚನ -2024: ಪೋಸ್ಟರ್ ಬಿಡುಗಡೆ
ಹೆಮ್ಮಾಡಿ ( ನ,07): ಮೊಗವೀರ ಯುವ ಸಂಘಟನೆ(ರಿ.), ಉಡುಪಿ ಜಿಲ್ಲೆಯ ಹಿರಿತನದಲ್ಲಿ, ಜಿ ಶಂಕರ್ ಪ್ಯಾಮಿಲಿ ಟ್ರಸ್ಟ್ (ರಿ.), ಅಂಬಲಪಾಡಿ ಉಡುಪಿ ಇವರ ಸಹಯೋಗದಲ್ಲಿ, ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ಇವರ ಆತಿಥ್ಯದಲ್ಲಿ ಡಿಸೆಂಬರ್ ,07 ರಂದು ಕುಂದಾಪುರ ಮೊಗವೀರದ ಭವನದಲ್ಲಿ ನಡೆಯುವ ಉಡುಪಿ ಜಿಲ್ಲಾ ಮಟ್ಟದ ಅಂತರ್ ಘಟಕ ಗಳ ಸಂಸ್ಕೃತಿಕ ಕಾರ್ಯಕ್ರಮ “ಹೆಜ್ಜೆ ಗೆಜ್ಜೆ “ಮೊಗವೀರ ಸಾಂಸ್ಕೃತಿಕ ಸಿಂಚನ -2024 ಇದರ […]










