ಕುಂದಾಪುರ (ಸೆ.02): ಇಲ್ಲಿನ ಡಾ|ಬಿ.ಬಿ.ಹೆಗ್ಡೆ ಕಾಲೇಜಿನ ಬಿಬಿಎ ವಿಭಾಗದ ವತಿಯಿಂದ ಪ್ರಥಮ ವರ್ಷದ ಪದವಿಗೆ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಸೆಪ್ಟೆಂಬರ್ 02 ರಂದು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಕೆ ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಶುಭಾಶಂಸನೆಗೈದರು.ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ ಪ್ರಸ್ತಾವಿಕ ಮಾತುಗಳಾಡಿದರು. ವಿಭಾಗದ ಪ್ರಾಧ್ಯಾಪಕರಾದ ಹರೀಶ್.ಬಿ. ಪ್ರವೀಣ್ ಮೊಗವೀರ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಸರ್ಕಾರಿ ಪಿ ಯು ಕಾಲೇಜು ಬಿದ್ಕಲ್ ಕಟ್ಟೆ: ವಿದ್ಯಾರ್ಥಿಗಳ ಹಾಗೂ ಪೋಷಕರ ಸಭೆ
ಬಿದ್ಕಲ್ ಕಟ್ಟೆ(ಆ,31): ಇಲ್ಲಿನ ಸರ್ಕಾರಿ ಪಿ ಯು ಕಾಲೇಜಿನಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ಕಲಾ,ವಾಣಿಜ್ಯಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಹಾಗೂ ಪೋಷಕರ ಸಭೆಯನ್ನು ಸಂಸ್ಥೆಯ ಪ್ರಾಂಶುಪಾಲ ರಾದ ಶ್ರೀ ವಿಘ್ನೇಶ್ವರ ಭಟ್ ರವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿತು. ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು. ಮುಂಬರುವ ಮದ್ಯವಾರ್ಷಿಕ ಪರೀಕ್ಷೆಯನ್ನು ಹೇಗೆ ಎದುರಿಸಬೇಕೆಂದು ಮಾರ್ಗದರ್ಶನ ಮಾಡಲಾಯಿತು. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ಗಮನ ಹರಿಸಿ ಶೇಕಡಾ 100%ರಷ್ಟು […]
ಗಂಗೊಳ್ಳಿ :ಸರಸ್ವತಿ ವಿದ್ಯಾಲಯ ಪಿ ಯು ಕಾಲೇಜಿನ ವಿದ್ಯಾರ್ಥಿ ಅಬ್ದುಲ್ ರಾಜಿಕ್ ರಾಜ್ಯಮಟ್ಟಕ್ಕೆ ಆಯ್ಕೆ
ಗಂಗೊಳ್ಳಿ(ಆ,31): ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಶ್ಯಾಮಿಲಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕರಾಟೆ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಬ್ದುಲ್ ರಾಜಿಕ್ ಎಪ್ಪತ್ತು ಕೆ.ಜಿ ಕೆಳಗಿನ ವಿಭಾಗದಲ್ಲಿ ಸ್ಪರ್ಧಿಸಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಲು ಉಡುಪಿ ಜಿಲ್ಲೆಯಿಂದ ಆಯ್ಕೆ ಆಗಿರುತ್ತಾರೆ . ಸರಸ್ವತಿ […]
ಗೀತಗಾಯನ ಸ್ಪರ್ಧೆ : ಎಚ್.ಎಮ್.ಎಮ್ & ವಿ.ಕೆ.ಆರ್ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕುಂದಾಪುರ(ಆ,26): ಇಲ್ಲಿನ ಭಾರತ್ ಸ್ಕೌಟ್ ಮತ್ತು ಗೈಡ್ಸ್ ನ ಆಶ್ರಯದಲ್ಲಿ ಕುಂದಾಪುರದ ವ್ಯಾಸರಾಯ ಸಭಾ ಭವನದಲ್ಲಿ ಹಮ್ಮಿಕೊಂಡ ಗೀತಗಾಯನ ಸ್ಪರ್ಧೆಯಲ್ಲಿ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ ವಿಜೇತರಾಗಿರುತ್ತಾರೆ. ಸಂಸ್ಥೆಯ ಬುಲ್ ಬುಲ್ ತಂಡದ ವಿದ್ಯಾರ್ಥಿಗಳಾದ ರಿನೊಲಾ, ಸಂಹಿತಾ, ಪ್ರಕೃತಿ, ಸಿಂಚನಾ ಮತ್ತು ಗೋಪಿಕಾ, ಸ್ಕೌಟ್ ತಂಡದ ವಿದ್ಯಾರ್ಥಿಗಳಾದ ಕೌಸ್ತುಭ, ಶ್ರವಣ್, ಕೌಶಿಕ್, ಅರುಶ್, ಸಾತ್ವಿಕ್, ನಿರಂಜನ್ ಉಡುಪ, ತ್ರಿಶೂಲ್ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು:ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ – 2023 ಉದ್ಘಾಟನೆ
ಕುಂದಾಪುರ (ಆ, 22): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ’ವನ್ನು ಆಯೋಜಿಸಲಾಯಿತು. ಕಾರ್ಕಳದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಶ್ರೀ ಕೆ. ರಾಜೇಂದ್ರ ಭಟ್ ಉದ್ಘಾಟಿಸಿ ವಿದ್ಯಾರ್ಥಿ ಬದುಕು ಹಸನಾಗಬೇಕಾದರೆ ನಿರ್ದಿಷ್ಟ ಗುರಿ, ಶ್ರದ್ಧೆ, ಸತತ ಪ್ರಯತ್ನ ಅಗತ್ಯ, ಆ ಮೂಲಕ ಉತ್ತಮ ಭವಿಷ್ಯ ನಿಮ್ಮದಾಗಲಿ ಎಂದು ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ […]
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ: ಬೀಳ್ಕೊಡುಗೆ ಕಾರ್ಯಕ್ರಮ
ಕುಂದಾಪುರ(ಆ,26): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸುಮಾರು ಎಂಟು ವರ್ಷಗಳಿಂದ ಆಂಗ್ಲಭಾಷಾ ಉಪನ್ಯಾಸಕರಾಗಿ ಕೆಲಸ ನಿರ್ವಹಿಸಿದ್ದ ಶ್ರೀಮತಿ ಮೇರಿ ಅಶ್ವಿನಿ ವಿ ಅವರ ಸ್ವಂತ ಊರು ಮೈಸೂರಿಗೆ ವರ್ಗಾವಣೆ ಹೊಂದಿದ್ದು, ಆ ಪ್ರಯುಕ್ತ ಅವರಿಗೆ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ ಜಿ ಅಧ್ಯಕ್ಷತೆ ವಹಿಸಿ ಶ್ರೀಮತಿ ಮೇರಿ ಅಶ್ವಿನಿ ವಿ ರವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಹಿರಿಯ ಉಪನ್ಯಾಸಕರಾದ ಶ್ರೀ ಭುಜಂಗ […]
ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ.ಶಾಲೆ ಖಾರ್ವಿಕೇರಿ ಗಂಗೊಳ್ಳಿ: ಬಿಳ್ಕೋಡುಗೆ ಸಮಾರಂಭ
ಗಂಗೊಳ್ಳಿ( ಆ,26): ಇಲ್ಲಿನ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ. ಶಾಲೆ ಖಾರ್ವಿಕೇರಿ ಯಲ್ಲಿ 7 ವರ್ಷಗಳ ಕಾಲ ತಮ್ಮ ಸೇವೆಯನ್ನು ಸಲ್ಲಿಸಿ ಇತ್ತೀಚಿಗಷ್ಟೆ ಸ.ಹಿ.ಪ್ರಾ.ಶಾಲೆ ಕುಂಭಾಶಿಗೆ ವರ್ಗಾವಣೆಗೊಂಡ ಶಿಕ್ಷಕಿ ಶ್ರೀಮತಿ ಸರಿತಾ ಕೆ.ಎಸ್. ರವರಿಗೆ ಬಿಳ್ಕೋಡುಗೆ ಸಮಾರಂಭ ನಡೆಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ರವಿಶಂಕರ್ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಶ್ರೀನಿವಾಸ್ ಖಾರ್ವಿ, ಶ್ರೀಮತಿ ಸರಿತಾ, ಶಿಕ್ಷಣ ಸಂಯೋಜಕರಾದ ಶೇಖರ್ ಯು. […]
ಕ್ರಿಯೇಟಿವ್ ಪಿ.ಯು ಕಾಲೇಜು ಕಾರ್ಕಳ : ಕೆಸರ್ಡೊಂಜಿ ದಿನ-ಮಣ್ಣಿನೊಂದಿಗೆ ಕಲಿಕಾ ಅನುಭವ ಕಾರ್ಯಕ್ರಮ
ಕಾರ್ಕಳ(ಆ,26): ಇಲ್ಲಿನ ಹಿರ್ಗಾನ ಗ್ರಾಮದಲ್ಲಿರುವ ಬೆಂಗಾಲ್ ಕೃಷಿ ಭೂಮಿಯಲ್ಲಿ ಕ್ರಿಯೇಟಿವ್ ಪಿ.ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗೆ ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ವಸ್ತುಗಳ ಪ್ರದರ್ಶನದೊಂದಿಗೆ ಕೆಸರಿನಲ್ಲಿ ಜೀವನದ ಕಲಿಕೆ ಮತ್ತು ವಿವಿಧ ಆಟೋಟ ಕಾರ್ಯಕ್ರಮಗಳು ಇತ್ತೀಚೆಗೆ ನಡೆಯಿತು. ಕೆಸರ್ಡೊಂಜಿ ದಿನ ಕಾರ್ಯಕ್ರಮವನ್ನು ನೇಜಿ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಹಿರ್ಗಾನ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷರಾದ ಸಂತೋಷ್ ಶೆಟ್ಟಿಯವರು ಇಂದು ನಮಗೆ ಧನ ಸಂಪಾದನೆಗೆ ಅನೇಕ ಮಾರ್ಗಗಳಿವೆ ಆದರೆ ಹೊಟ್ಟೆ […]
ಕನ್ನಡ ಭಾಷಣ ಸ್ಪರ್ಧೆಯಲ್ಲಿ ಜನತಾ ಸ್ವತಂತ್ರ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ
ಕುಂದಾಪುರ (ಆ,26): ಬಿ. ಎಮ್ . ಆರ್ ಬಿಲ್ಡ್ ರ್ಸ್ & ಡೆವೆಲೋಪೆರ್ಸ್ ಮಂಗಳೂರು ಇವರ ವತಿಯಿಂದ 76ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ “ನನ್ನ ಕಲ್ಪನೆಯ ಭಾರತ” ಈ ವಿಷಯದ ಕುರಿತಾಗಿ ಆಯೋಜಿಸಿದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕುಮಾರಿ ಶ್ರುತಿಕಾ ಉಭಯ ಜಿಲ್ಲೆಗೆ ದ್ವಿತೀಯ*ಸ್ಥಾನ ಹಾಗೂ ದ್ವಿತೀಯ ಪಿ.ಯು.ಸಿ.ವಿಜ್ಞಾನ […]
ಹೆಮ್ಮಾಡಿ: ಜನತಾ ಪಿ ಯು ಕಾಲೇಜಿನ ಛಾಯಾ ಸಿ ಪೂಜಾರಿ ಚೆಸ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ (ಆ,26): ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ತ್ರಿಷಾ ಪದವಿಪೂರ್ವ ಕಾಲೇಜು ಉಡುಪಿಯಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಛಾಯಾ ಸಿ.ಪೂಜಾರಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.










