ಕುಂದಾಪುರ (ಜುಲೈ 26): ವೀರಯೋಧರ ತ್ಯಾಗ ಮತ್ತು ಬಲಿದಾನವನ್ನು ನೆನಪಿಸಿಕೊಳ್ಳುದು ನಮ್ಮ ಆಧ್ಯ ಕರ್ತವ್ಯ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಹೇಳಿದರು. ಅವರು ಕಾಲೇಜಿನ ಎನ್.ಸಿ.ಸಿ. ಘಟಕದ ಅಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ಅಪ್ರತಿಮ ಯಶಸ್ಸಿನ ವಿಜಯ ಪತಾಕೆ ಹಾರಿಸಿದ ದಿನವನ್ನು ನೆನಪಿಸಿಕೊಳ್ಳುವುದು, ಸಂಭ್ರಮಿಸುವುದು ಮತ್ತು ಭಾರತೀಯ ಸೈನ್ಯದ ಶೌರ್ಯ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಉಡುಪಿ ಜಿಲ್ಲಾ ಕನ್ನಡ ಉಪನ್ಯಾಸಕ ಸಂಘದ ಅಧ್ಯಕ್ಷರಾಗಿ ಉದಯ ಕುಮಾರ್ ಶೆಟ್ಟಿ ಆಯ್ಕೆ
ಕುಂದಾಪುರ (ಜು,28): 2022-24 ಸಾಲಿನ ಉಡುಪಿ ಜಿಲ್ಲಾ ಕನ್ನಡ ಉಪನ್ಯಾಸಕ ಸಂಘದ ಅಧ್ಯಕ್ಷರಾಗಿ ಕುಂದಾಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಉದಯ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಇವರಿಗೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಭೋಧಕ & ಭೋಧಕೇತರ ಸಿಬ್ಬಂದಿಗಳು ಅಭಿನಂದನೆ ಕೋರಿದ್ದಾರೆ.
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ: ಎನ್. ಎಸ್ . ಎಸ್ ಮಾಹಿತಿ ಕಾರ್ಯಕ್ರಮ
ಕುಂದಾಪುರ (ಜು,25): ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ರೂಪರೇಷೆಗಳ ಪರಿಚಯ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾIಬಿ.ಬಿ.ಹೆಗ್ಡೆ ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಯವರು ಎನ್.ಎಸ್.ಎಸ್ ಕಾರ್ಯ ಚಟುವಟಿಕೆಗಳ ರೂಪರೇಷೆಗಳ ಕುರಿತು ಉಪನ್ಯಾಸ ನೀಡಿದರು. ಕಾಲೇಜಿನ ಹಿರಿಯ ಉಪನ್ಯಾಸಕರಾದ ಶ್ರೀ ಭುಜಂಗ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎನ್.ಎಸ್.ಎಸ್ […]
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ : ಜೂನಿಯರ್ ರೆಡ್ಕ್ರಾಸ್- ಮಾಹಿತಿ ಕಾರ್ಯಕ್ರಮ
ಕುಂದಾಪುರ(ಜು,25): ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿನ ಜೂನಿಯರ್ ರೆಡ್ಕ್ರಾಸ್ ಘಟಕದ ವಿದ್ಯಾರ್ಥಿಗಳಿಗೆ ರೆಡ್ಕ್ರಾಸ್ ಸಂಸ್ಥೆ ಕುಂದಾಪುರ ಇದರ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಮಾಹಿತಿ ನೀಡಿದರು. ಕಾಲೇಜಿನ ಹಿರಿಯ ಉಪನ್ಯಾಸಕರಾದ ಶ್ರೀ ಭುಜಂಗ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರೆಡ್ಕ್ರಾಸ್ ಸಂಸ್ಥೆ ಕಾರ್ಯದರ್ಶಿ ಶ್ರೀ ಸೀತಾರಾಮ ಶೆಟ್ಟಿ, ಕೋಶಾಧಿಕಾರಿ ಶಿವರಾಮ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ಗಣೇಶ ಆಚಾರ್ಯ ಉಪಸ್ಥಿತರಿದ್ದರು. ಜೂನಿಯರ್ ರೆಡ್ಕ್ರಾಸ್ ಸಂಚಾಲಕರಾದ ಶ್ರೀ ದಿನಕರ ಆರ್ […]
ಪ್ರೊ. ಲೋಕೇಶ್ ರಾಠೋಡ್ ರವರಿಗೆ ಪಿ.ಹೆಚ್ ಡಿ ಪದವಿ
ಮುಧೋಳ(ಜು,25): ಬಾಗಲಕೋಟೆಯ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ, ಶ್ರೀ ಎಸ್. ಆರ್. ಕಂಠಿ ಮಹಾವಿದ್ಯಾಲಯದ ಮುಧೋಳ, ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೊ. ಲೋಕೇಶ ರಾಠೋಡ ರವರಿಗೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ ಪಿ.ಹೆಚ್ ಡಿ ಪದವಿ ನೀಡಿದೆ. ದಾವಣಗೆರೆ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರು ಹಾಗೂ ಸಂಶೋಧನಾ ಮಾರ್ಗದರ್ಶಕರಾದ ಡಾ. ಹುಚ್ಚೇಗೌಡ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಎ ಸ್ಟಡಿ ಆಫ್ ಲೇಬರ್ ಮೈಗ್ರೇಶನ್ ಫ್ರಮ್ ನಾರ್ತ್ ಕರ್ನಾಟಕ ಟು […]
ನಾವುಂದ ಕಾಲೇಜಿನ ಅಗ್ರಸ್ಥಾನಿ ರಾಹುಲ್ ಗೆ ನಗದು ಬಹುಮಾನ
ನಾವುಂದ (ಜು,20): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಾಲೇಜಿಗೆ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದದ್ದು ಮಾತ್ರವಲ್ಲದೆ ಬೈಂದೂರು ತಾಲೂಕಿಗೂ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ರಾಹುಲ್ ಅವರಿಗೆ 1995 -96ನೇ ಸಾಲಿನ ಕಾಲೇಜಿನ ವಿಜ್ಞಾನ ವಿಭಾಗದ ಹಳೆಯ ವಿದ್ಯಾರ್ಥಿಗಳು ನೀಡಿದ 15000 ರೂಪಾಯಿ ಪ್ರೋತ್ಸಾಹ ಧನವನ್ನು ಕಾಲೇಜಿನಲ್ಲಿ ವಿತರಿಸಲಾಯಿತು. ಹಳೆ ವಿದ್ಯಾರ್ಥಿಗಳ ಪರವಾಗಿ ಮಣಿಪಾಲದ ನವಿತಾಸ್ ಲೈಫ್ ಸೈನ್ಸ್ ನಲ್ಲಿ […]
ಗಂಗೊಳ್ಳಿಯಲ್ಲಿ ಮತ್ತೊಮ್ಮೆ ಮನ ರಂಜಿಸಿದ ಮರಣಿ ಮಾಂಟೆ
ಗಂಗೊಳ್ಳಿ(ಜು,20): ಇಲ್ಲಿನ ಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಕ್ತನ ಮತ್ತು ಹಳೆ ವಿದ್ಯಾರ್ಥಿಗಳು ಇಲ್ಲಿನ ಸರಸ್ವತಿ ವಿದ್ಯಾಲಯದ ರೋಟರಿ ಸಭಾಂಗಣದಲ್ಲಿ ಪ್ರದರ್ಶಿಸಿದ ‘ಮರಣಿ ಮಾಂಟೆ’ ನಾಟಕವು ತನ್ನ ವಿಶೇಷವಾದ ಕಥಾ ವಸ್ತು ಮತ್ತು ಕಥನ ಶೈಲಿಯಿಂದ ಗಮನ ಸೆಳೆದು ಜನ ಮನ ಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು. ಸಾವು ಬಾರದಂತೆ ಔಷಧಿ ಕಂಡು ಹುಡುಕಿ ಸಾವಿನ ದೇವತೆಗೆ ಸವಾಲು ಹಾಕುವ ವೈದ್ಯನೊಬ್ಬ ಕೊನೆಯಲ್ಲಿ […]
ಪ್ರೊ.ಎಂ.ಕೆ.ಗವಿಮಠಗೆ ಪಿಎಚ್ಡಿ ಪದವಿ ಪ್ರದಾನ
ಮುಧೋಳ(ಜು,20): ಬಾಗಲಕೋಟ ಬಿವಿವಿ ಸಂಘದ ಮುಧೋಳ ಎಸ್.ಆರ್.ಕಂಠಿ ಮಹಾವಿದ್ಯಾಲಯದ ಗಣಿತಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಪ್ರೊ. ಮೃತ್ಯು೦ಜಯ ಕೆ.ಗವಿಮಠ ಅವರಿಗೆ ಬೆಳಗಾವಿ ವಿಶ್ವೇಶ್ವರ ತಾಂತ್ರಿಕ ವಿಶ್ವವಿದ್ಯಾನಿಲಯ (ವಿಟಿಯು) ಪಿಎಚ್ಡಿ ಪದವಿ ನೀಡಿದೆ. ಅವರು ದಾವಣಗೆರೆಯ ಜೈನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿಕಲ್ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸದಾನಂದ ಎನ್.ಪಾಟೀಲ ರವರ ಮಾರ್ಗದರ್ಶನದಲ್ಲಿ ಮಂಡಿಸಿದ್ದ ದಿ ಸ್ಟಡಿ ಆನ್ ರಿಸೆಂಟ್ ಜನರಾಲಿಜೇಷನ್ ಇನ್ ಕಂಟಿನೂಯಸ್ ಹೋಮಯೋಮ್ ರಿಜಮ್ ಮ್ಯಾಪ್ಸ್ ಯೂಸಿಂಗ್ ಬೈ-ಟೋಪೋಲೋಜಿ […]
ಕ್ರಿಯೇಟಿವ್ ಪಿ ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ.ಎ, ಸಿ.ಎಸ್.ಇ.ಇ.ಟಿ ಮಾಹಿತಿ ಕಾರ್ಯಗಾರ
ಕಾರ್ಕಳ (ಜು,20): ಜುಲೈ 17 ಮತ್ತು ಜುಲೈ 19 ರಂದು ಕ್ರಿಯೇಟಿವ್ ಪಿಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ.ಎ, ಸಿ.ಎಸ್.ಇ.ಇ.ಟಿ ಮಾಹಿತಿ ಕಾರ್ಯಗಾರವನ್ನು ಕ್ರಿಯೇಟಿವ್ ಪಿ ಯು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಿ.ಎ ಕಾರ್ಯಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರೋಫೆಸರ್ ರಾಜ್ ಗಣೇಶ್ ಕಾಮತ್ ಆಗಮಿಸಿ, ಪ್ರಸ್ತುತ ವಿದ್ಯಮಾನದಲ್ಲಿ ಚಾರ್ಟರ್ಡ್ ಅಕೌಂಟ್ ಕೋರ್ಸ್ ಗೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ವಿಫುಲ ಅವಕಾಶಗಳಿದ್ದು ವಿದ್ಯಾರ್ಥಿಗಳು ಕಾಲೇಜುನಲ್ಲಿ ಒದಗಿಸುವ ಈ ಕೋರ್ಸ್ ನ್ನು […]
ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಂಗ್ಲ ಮಾಧ್ಯಮ ಶಾಲೆ: ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ
ಕುಂದಾಪುರ (ಜುಲೈ,19): ಬಿ ಎಂ ಸುಕುಮಾರ ಶೆಟ್ಟಿ ಯವರ ಅಧ್ಯಕ್ಷತೆಯ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಪ್ರಾಥಮಿಕ ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಗಣೇಶ್ ಶೆಟ್ಟಿ, ಶಿಕ್ಷಕರು, ಕರ್ನಾಟಕ ಪಬ್ಲಿಕ್ ಸ್ಕೂಲ್, ನೆಂಪು ಇವರು ಕುಂದಾಪ್ರ ಭಾಷೆಯ ವೈವಿಧ್ಯತೆ ಮತ್ತು ಸಾಂಸ್ಕೃತಿಕ ಮಹತ್ವದ ಕುರಿತು ಮಾತನಾಡಿದರು. […]










