ಹೆಮ್ಮಾಡಿ(ಸೆ .12) ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ತಾಲ್ಲೂಕು ಮಟ್ಟದ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕ, ಬಾಲಕಿಯರ ಎರಡು ತಂಡ ಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಬಾಲಕರ ತಂಡದ ವಿದ್ಯಾರ್ಥಿಗಳಾದ ನಿಹಾಲ್,ಸಾಯಿಮ್ (ಉತ್ತಮ ದಾಳಿಗಾರ)ಓoಕಾರ್, ಯೂನಸ್, ಶಶಾಂಕ್, ಸಾಗರ್ (ಉತ್ತಮ ಹಿಡಿತಗಾರ)ಅಯಾನ್, ಹಾಗೂ ಬಾಲಕಿಯರ ತಂಡದ ನವ್ಯ (ಉತ್ತಮ ದಾಳಿಗಾರ್ತಿ), ರಕ್ಷಾ,ಸಿಂಚನ, ಸಂಜನಾ, ಅನುಷಾ, ಮೋನಿಷಾ (ಉತ್ತಮ ಹಿಡಿತಗಾರ್ತಿ)ಶ್ರಾವ್ಯ ಕ್ರೀಡಾ ಸ್ಫೂರ್ತಿಯಿಂದ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಸಪ್ಟೆಂಬರ್ 20 ರಂದು ಜನತಾ ಕ್ರೀಡಾoಗಣದಲ್ಲಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ
ಹೆಮ್ಮಾಡಿ ( ಸೆ .12): ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಪದವಿ ಪೂರ್ವ ಕಾಲೇಜು ವಿಭಾಗದ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ಜನತಾ ಪದವಿ ಪೂರ್ವ ಕಾಲೇಜು ಇಲ್ಲಿಯ ಜನತಾ ಕ್ರೀಡಾoಗಣದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಮೊಗವೀರರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬಿ. ಬಿ. ಹೆಗ್ಡೆ ಕಾಲೇಜು: “ನೋವೆಷನ್” – ಮ್ಯಾನೇಜ್ಮೆಂಟ್ ಫೆಸ್ಟ್- ಉದ್ಘಾಟನೆ
ಕುಂದಾಪುರ (ಸೆ.09): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಆಯೋಜನೆಯಲ್ಲಿ ಸೆಪ್ಟೆಂಬರ್ 09 ಹಾಗೂ 10ರಂದು ನಡೆಯಲಿರುವ “ನೋವೆಷನ್” ಕಾರ್ಪೊರೇಟ್ ಬ್ಯಾಟಲ್ ಮ್ಯಾನೇಜ್ಮೆಂಟ್ ಫೆಸ್ಟ್ ಇಂಟರ್ ಕಂಪನಿ ಸ್ಪರ್ಧೆಯನ್ನು ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಉದ್ಘಾಟಿಸಿದರು. ಕಾಲೇಜಿನ ಡೀನ್ಸ್ಗಳಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಶ್ರೀ ಗಿರಿರಾಜ್ ಭಟ್, ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ, […]
ಬಿ. ಬಿ. ಹೆಗ್ಡೆ ಕಾಲೇಜು: “ನೋವೆಷನ್”ಮ್ಯಾನೇಜ್ಮೆಂಟ್ ಫೆಸ್ಟ್ ಸಂಪನ್ನ
ಕುಂದಾಪುರ (ಸೆ.10): ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಆಯೋಜನೆಯಲ್ಲಿ ನಡೆದ “ನೋವೆಷನ್” ಮ್ಯಾನೇಜ್ಮೆಂಟ್ ಫೆಸ್ಟ್ ಇಂಟರ್ ಕಂಪೆನಿ ಸ್ಪರ್ಧೆಯ ಸಮಾರೋಪ ಸಮಾರಂಭ ಸೆಪ್ಟೆಂಬರ್ 10ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಸಂಪನ್ನಗೊoಡಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾದ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಜಿ. ಎಸ್. ಹೆಗ್ಡೆ […]
ಬಿ.ಬಿ.ಹೆಗ್ಡೆಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ
ಕುಂದಾಪುರ (ಸೆ.06): ವಿದ್ಯಾರ್ಥಿಗಳ ಬದುಕು ರೂಪಿಸುವಲ್ಲಿ ಮಹತ್ವದ ಪಾತ್ರವಹಿಸುವ ಶಿಕ್ಷಕನ ಪಾತ್ರ, ಶಿಕ್ಷಣ ಪದ್ಧತಿ ಬದಲಾದ ಈ ಕಾಲಘಟ್ಟದಲ್ಲಿ ಅತೀಮುಖ್ಯ. ತಂತ್ರಜ್ಞಾನಗಳು ಮಾಹಿತಿಯನ್ನಷ್ಟೇ ನೀಡುತ್ತವೆ. ಆದರೆ ಶಿಕ್ಷಕ ಸಂಸ್ಕಾರಯುತವಾದ ವಿದ್ಯೆಯನ್ನು ಕಲಿಸುವಾತ. ಈ ನಿಟ್ಟಿನಲ್ಲಿ ತಂದೆ ತಾಯಿಯನ್ನು ಗೌರವಿಸುವಂತೆ ವಿದ್ಯಾರ್ಥಿಗಳು ಗುರುಗಳನ್ನು ಗೌರವಿಸುವಂತಾಗಬೇಕು ಎಂದು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವೆಂಕಟರಮಣ ಬಿ. ನಾಯಕ್ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ […]
ದಾವಣಗೆರೆಯಲ್ಲಿ ರಾಜ್ಯಮಟ್ಟದ “ಕುಪ್ಮಾ” ಸಮಾವೇಶ
ಕಾರ್ಕಳ (ಸೆ. 9): ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘ (ಕುಪ್ಮಾ) ಶಿಕ್ಷಣ ವ್ಯವಸ್ಥೆಯಲ್ಲಿ ಹಲವಾರು ಮಾರ್ಪಾಡುಗಳು ಮತ್ತು ಬದಲಾವಣೆಗಳನ್ನು ಸರಕಾರದೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಮಹತ್ತರ ಪಾತ್ರ ನಿರ್ವಹಿಸುತ್ತಿದೆ. ಈ ಸಂಘಟನೆಯು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರಂಭಗೊoಡು ಇದೀಗ ರಾಜ್ಯವ್ಯಾಪಿ ತನ್ನ ಸದಸ್ಯತ್ವವನ್ನು ವಿಸ್ತರಿಸಿಕೊಂಡಿದೆ. ಅಂತೆಯೇ ಬೇರೆ ಬೇರೆ ಕಾಲೇಜುಗಳ ಸಾರ್ವತ್ರಿಕ ಸಮಸ್ಯೆಗಳು ಎದುರಾದಾಗ ಕುಪ್ಮಾವು ಸರಕಾರದೊಂದಿಗೆ ಆರೋಗ್ಯಕರವಾದ ಚರ್ಚೆ, ಸಲಹೆ, ಸೂಚನೆಗಳೊಂದಿಗೆ ಆ ಸಮಸ್ಯೆಯನ್ನು ಬಗೆಹರಿಸುವಲ್ಲಿ […]
ಬಿ. ಬಿ. ಹೆಗ್ಡೆ ಕಾಲೇಜು :ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ( ಸೆ .10): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 03 ರಂದು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಇಂಡಿಯನ್ ರೆಡ್ ಕ್ರಾಸ್ ಘಟಕದ ಸಭಾಪತಿಗಳಾದ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕದ ಕಾರ್ಯವೈಖರಿ ಕುರಿತು ಸಂಕ್ಷಿಪ್ತವಾಗಿ ವಿವರಿಸಿ ಕಾಲೇಜಿನ ರೆಡ್ ಕ್ರಾಸ್ ಘಟಕ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ […]
ಯುವ ಬಂಟರ ಸಂಘದ ವತಿಯಿಂದ ಶಿಕ್ಷಕರ ದಿನಾಚರಣೆ
ಕುಂದಾಪುರ (ಸೆ, 5) : ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆಯ ಸಹ ಶಿಕ್ಷಕರಾದ ಶ್ರೀ ವಸಂತರಾಜ ಶೆಟ್ಟಿ ಅವರನ್ನು ಸಂಘದ ಅಧ್ಯಕ್ಷರಾದ ಶ್ರೀ ನಿತೀಶ್ ಶೆಟ್ಟಿ ಬಸ್ರೂರು ಸನ್ಮಾನಿಸಿ ಗೌರವಿಸುವ ಮೂಲಕ ಆಚರಣೆ ಮಾಡಲಾಯಿತು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಶ್ರೀ ವಸಂತರಾಜ ಶೆಟ್ಟಿ ಯುವ ಬಂಟರ ಸಂಘದ ಪ್ರತಿಯೊಂದು ಕಾರ್ಯಕ್ರಮಗಳನ್ನು ಬಹಳ ಹತ್ತಿರದಿಂದ […]
ಕೋಟ : ಗುರುವಂದನೆ- ಸಾಧಕ ದಂಪತಿಗಳಿಗೆ ಸನ್ಮಾನ
ಕೋಟೇಶ್ವರ( ಸೆ .08):ಕರ್ಣಾಟಕ ಯಕ್ಷಧಾಮ ಮಂಗಳೂರು, ಸಾಲಿಗ್ರಾಮ ಮಕ್ಕಳ ಮೇಳ ಕೋಟ, ಕಲ್ಕೂರ ಪ್ರತಿಷ್ಠಾನ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಗುರುವಂದನೆ, ಸಾಧಕ ದಂಪತಿಗಳಿಗೆ ಸನ್ಮಾನ ಮತ್ತು ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ಭಾನುವಾರ ಕೋಟ ಶ್ರೀ ಹಂದೆ ಮಹಾಗಣಪತಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು. ಕಲ್ಕೂರ ಪ್ರತಿಷ್ಠಾನದ ಎಸ್. ಪ್ರದೀಪ ಕುಮಾರ ಕಲ್ಕೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ಮಕ್ಕಳು ಕಂಪ್ಯೂಟರ್ ಗೊಂಬೆಗಳಾಗಿದ್ದಾರೆ, ಸನಾತನ ಶ್ರದ್ಧೆ, ನಂಬಿಕೆ ದೂರವಾಗಿದೆ. […]
ಹೆಮ್ಮಾಡಿ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಸಂಪನ್ನ
ಹೆಮ್ಮಾಡಿ (ಸೆ.01): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ,ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ರಕ್ತನಿಧಿ ವಿಭಾಗ ಮಣಿಪಾಲ ಹಾಗೂ ಜಿಲ್ಲಾಡಳಿತ ಉಡುಪಿ ಇವರ ಸಹಯೋಗದೊಂದಿಗೆ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ.) ಹೆಮ್ಮಾಡಿ, ಇವರ ಸಹಕಾರದೊಂದಿಗೆ ಹಮ್ಮಿಕೊಂಡ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಅಕ್ಟೋಬರ್ 31 ರಂದು ಹೆಮ್ಮಾಡಿಯ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ)ದ ಮತ್ಸ್ಯ ಜ್ಯೋತಿ ಸಭಾಂಗಣದಲ್ಲಿ […]










