ಕುಂದಾಪುರ(,ಮಾ.28):ಇಲ್ಲಿನ ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಜನಸೇವಾ ಟ್ರಸ್ಟ್ ಮೂಡುಗಿಳಿಯಾರು ಆಶ್ರಯದಲ್ಲಿ ‘ಹಸ್ತಿನಾವತಿ’ ಕಾದಂಬರಿಯ ಮರು ಅನಾವರಣ ಕಾರ್ಯಕ್ರಮ ಮಾ.26 ರಂದು ನಡೆಯಿತು. ಬೆಂಗಳೂರು ವಿಶ್ವವಿದ್ಯಾಲಯದ ವಿತ್ತಾಧಿಕಾರಿ ಅಜಿತ್ ಹೆಗ್ಡೆ ಶಾನಾಡಿಯವರು ಜೋಗಿಯವರ ಹಸ್ತಿನಾವತಿ ಕಾದಂಬರಿ ಅನಾವರಣಗೊಳಿಸಿ ಮಾತನಾಡಿದರು. ಈ ಕೃತಿಯಲ್ಲಿ ರಾಜಕೀಯ, ಧಾರ್ಮಿಕ, ಪ್ರೇಮಕತೆ ಎಲ್ಲವೂ ಇದೆ. ಮುಖ್ಯವಾಗಿ ಯುವ ಸಮುದಾಯ ಓದಬೇಕಾದ ಪುಸ್ತಕವಿದು. ಓದುಗರನ್ನು ಬಿಡದಂತೆ ಓದಿಸಿಕೊಂಡು ಹೋಗುವ ಕಲೆ ಜೋಗಿಯವರಿಗೆ ಜನ್ಮತಃ ಸಿದ್ಧಿಯಾಗಿದೆಎಂದರು. ಬದುಕಿನ ವಿಭಿನ್ನ ಪಾತ್ರಗಳನ್ನು […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಐ.ಎಂ.ಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಕಾಮರ್ಸ್ ಮೂಡ್ಲಕಟ್ಟೆ:ಶಿಕ್ಷಣ ಮತ್ತು ಜೀವನದ ಬಗ್ಗೆ ಗ್ರಹಿಕೆ ವಿಷಯದ ಕುರಿತು ಕಾರ್ಯಗಾರ
ಕುಂದಾಪುರ(ಮಾ 27): ಇಲ್ಲಿನ ಐ.ಎಂ.ಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಕಾಮರ್ಸ್ ಮೂಡ್ಲಕಟ್ಟೆಯಲ್ಲಿ ‘ಶಿಕ್ಷಣ ಮತ್ತು ಜೀವನದ ಬಗ್ಗೆ ಗ್ರಹಿಕೆ’ ಎಂಬ ವಿಷಯದ ಕುರಿತು ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಐ. ಎಂ. ಜೆ. ವಿದ್ಯಾ ಸಂಸ್ಥೆಗಳ ನಿರ್ದೇಶಕರಾದ ಪ್ರೊIದೋಮ ಚಂದ್ರಶೇಖರ್ ಅವರು ವಿಷಯದ ಕುರಿತು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. “ವೇಗವಾಗಿ ಬೆಳೆಯುತ್ತಿರುವ ಸ್ಪರ್ಧಾತ್ಮಕ ಪ್ರಪಂಚಕ್ಕೆ ವಿದ್ಯಾರ್ಥಿಗಳು ಅಣಿಯಾಗುತ್ತಿರುವ ನಿಟ್ಟಿನಲ್ಲಿ ವಿದ್ಯಾರ್ಥಿ ಜೀವನದಲ್ಲಿ ತೊಡಗಿಸಿಕೊಳ್ಳಬಹುದಾದ ವಿಷಯದ ಕುರಿತು ಮಾತನಾಡುತ್ತಾ, […]
ಮೂಡ್ಲಕಟ್ಟೆ:ವಿದ್ಯಾ ಅಕಾಡೆಮಿ ಸ್ಕೂಲ್ ವಾರ್ಷಿಕೋತ್ಸವ
ಮೂಡ್ಲಕಟ್ಟೆ(ಮಾ.27): ಇಲ್ಲಿನ ವಿದ್ಯಾ ಅಕಾಡೆಮಿ ಸ್ಕೂಲಿನ ವಾರ್ಷಿಕೋತ್ಸವವು ಇತ್ತಿಚಿಗೆ ಶಾಲೆಯ ಆವರಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಯಾಗಿ ಕುಂದಾಪುರದ ಹೆಮ್ಮಾಡಿಯ ಲಕ್ಷ್ಯ ಕ್ಲಿನಿಕ್ ವೈದ್ಯರಾಗಿರುವ ಅಮ್ಮಾಜಿ ಪಿ ಅವರು ಮುಖ್ಯ ಅಥಿತಿಯಾಗಿ ಆಗಮಿಸಿದ್ದರು. ಶಾಲಾ ವಾರ್ಷಿಕೋತ್ಸವವು ಎಳೆಯರಿಗೆ ಜೀವನ ಪರ್ಯಂತ ಸ್ಮರಣೀಯ ಕ್ಷಣಗಳನ್ನು ನೀಡುವ ಅತ್ಯಂತ ಮಹತ್ವದ ದಿನ,ಶಾಲೆಯು ಮಕ್ಕಳಿಗೆ ಮನೆಯ ವಾತಾವರಣದ ಹೊರತಾಗಿ ಹೊರಗಿನ ವಾತಾವರಣವನ್ನು ಅರಿತುಕೋಳ್ಳಲು ಬಹಳ ಸಹಾಯವಾಗುತ್ತದೆ. ವಿದ್ಯಾರ್ಥಿಗಳ ಉನ್ನತಿಯನ್ನೆ ಧೈರ್ಯವಾಗಿಟ್ಟುಕೊಂಡು ಶಾಲೆಯು ಮುನ್ನಡೆಯುತ್ತಿರುವುದು ಪ್ರಶಂಸನೀಯ […]
ಎಕ್ಸಲೆಂಟ್ ಪ್ರೌಢಶಾಲೆ ಸುಣ್ಣಾರಿ: ಬೀಳ್ಕೊಡುಗೆ ಸಮಾರಂಭ
ಕೋಟೇಶ್ವರ (ಮಾ.27): ಮೌಲ್ಯಯುತ, ಪಠ್ಯ ಪಠ್ಯೇತರ ರಂಗದಲ್ಲಿಯೂ ಶಿಸ್ತುಬದ್ದ ಶಿಕ್ಷಣವನ್ನು ನೀಡಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ದಾರಿದೀಪವಾಗಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ದಿಗೆ ಪೂರಕವಾಗುವಂತಹ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಒಂದಾದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಇತ್ತೀಚೆಗೆ ನಡೆಯಿತು. ಸುಜ್ಞಾನ ಎಜುಕೇಶನ್ ಟ್ರಸ್ಟ ನ ಅಧ್ಯಕ್ಷರಾದ ಶ್ರಿ ರಮೇಶ್ ಶೆಟ್ಟಿಯವರು ಸಮಾರಂಭದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ “ವಿದ್ಯಾರ್ಥಿಗಳು ಪರೀಕ್ಷೆಯ […]
ಸಾಹಿತ್ಯಕ್ಕೆ ಭಾವನೆಗಳನ್ನು ಉದ್ದೀಪಿಸುವ ಶಕ್ತಿಯಿದೆ: ಶ್ರೀ ಮುನಿರಾಜ ರೆಂಜಾಳ
ಕಾರ್ಕಳ( ಮಾ.17): ಸಾಹಿತ್ಯ ಸರ್ವವ್ಯಾಪಿಯಾದುದು. ಸಾಹಿತ್ಯದ ರಸಭಾವಗಳನ್ನು ಅರಿತರೆ ಬದುಕಿನ ದಾರಿ ದೀಪವಾಗಬಲ್ಲದು. ಜೀವನದಲ್ಲಿ ನಾವು ಸಾಹಿತ್ಯ ಮತ್ತು ನೈತಿಕ ಮೌಲ್ಯಗಳಿಗೆ ತೆರೆದುಕೊಂಡಾಗ ಹೊಸ ದೃಷ್ಟಿ ಗೋಚರಿಸುತ್ತದೆ. ಮನಸ್ಸಿನ ತೃಪ್ತಿಗಾಗಿ ನಾವೆಲ್ಲ ಪುಸ್ತಕ ಪ್ರೀತಿಯನ್ನು, ಓದುವಿಕೆಯನ್ನು ಅಳವಡಿಸಿಕೊಳ್ಳಬೇಕಾಗಿದೆ. ಎಂದು ನಿವೃತ್ತ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳರು ನುಡಿದರು. ಅವರು ಹಿರ್ಗಾನದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಾಹಿತ್ಯ ಸಾಂಗತ್ಯ ಸರಣಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. […]
ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್& ಕಮ್ಯುನಿಕೇಷನ್ ವಿಭಾಗದ ವತಿಯಿಂದ ವಿಎಲ್ಎಸ್ಐ ಸಿಸ್ಟಮ್ ವಿನ್ಯಾಸ
ಕುಂದಾಪುರ(ಮಾ,16): ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ವಿಭಾಗದ ವತಿಯಿಂದ ವಿಎಲ್ಎಸ್ಐ ಸಿಸ್ಟಮ್ ವಿನ್ಯಾಸ ಎಂಬ ವಿಷಯದ ಬಗ್ಗೆ ಒಂದು ದಿನದ ತಾಂತ್ರಿಕ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಸಿಐಯೆಂಟ್ ಸೆಮಿಕಂಡಕ್ಟರ್ ಇದರ ಪ್ರೋಗ್ರಾಮ್ ಮ್ಯಾನೇಜರ್ ಆಗಿರುವ ರಿಝ್ವಾನ್ ರೋಶನ್ ಹಾಗೂ ಕಾರ್ಮಿಕ್ ಡಿಸೈನ್ ಪ್ರೈವೇಟ್ ಲಿಮಿಟೆಡ್ ಇದರ ನಿರ್ದೇಶಕರಾದ ದಿಲೀಪ್ ಮೊಗವೀರ ಇವರು ಆಗಮಿಸಿ ವಿಧ್ಯಾರ್ಥಿಗಳಿಗೆ ಕಾರ್ಯಗಾರ ನಡೆಸಿಕೊಟ್ಟರು. ಸೆಮಿಕಂಡಕ್ಟರ್ ತಂತ್ರಜ್ಞಾನದ ಪ್ರಾಮುಖ್ಯತೆಯನ್ನು ತಿಳಿಸುತ್ತ, ಚಿಪ್ […]
ಕುಂದಾಪುರ: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಮಹಿಳಾ ದಿನಾಚರಣೆ
ಕುಂದಾಪುರ(ಮಾ.13): ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫ಼ೆಸರ್ ಜೆನಿಫರ್ ಮೆನೇಜಸ್ ಲಿಂಗ ಸಮಾನತೆ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ವಿವಿಧ ಮನರಂಜನಾ ಸ್ಪರ್ದೆಗಳನ್ನು ಆಯೋಜಿಸಲಾಗಿದ್ದು ಕಾಲೇಜಿನ ಎಲ್ಲ ಮಹಿಳೆಯರು ಉತ್ಸಾಹದಿಂದ ಪಾಲ್ಗೊಂಡರು.
ಫಿನಿಶಿಂಗ್ ಟಚ್ : ಟಾಪರ್ಸ್ ವಿದ್ಯಾರ್ಥಿಗಳೊಂದಿಗೆ ಸಂವಾದ
ಕುಂದಾಪುರ(ಮಾ.14): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ ಮಾರ್ಚ್ 13ರಂದು “ಫಿನಿಶಿಂಗ್ ಟಚ್ : ಟಾಪರ್ಸ್ ವಿದ್ಯಾರ್ಥಿಗಳೊಂದಿಗೆ ಸಂವಾದ” ಕಾರ್ಯಕ್ರಮ ನಡೆಯಿತು. ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಉನ್ನತ ಸ್ಥಾನ ಗಳಿಸಿದ ಶಾಲೆಯ ಹಳೆವಿದ್ಯಾರ್ಥಿಗಳಾದ ಅಭಿಲಾಷ್ ಎಸ್. ಹತ್ವಾರ್, ಅಶ್ವಿನಿ ಕೆ. ಮತ್ತು ಅನಿರುದ್ಧ ಎಸ್. ಹತ್ವಾರ್ ಮಾತನಾಡಿ ತಮ್ಮ […]
ಡಾ|ಬಿ. ಬಿ.ಹೆಗ್ಡೆ ಕಾಲೇಜು: ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ತರಬೇತಿಯ ಉದ್ಘಾಟನೆ
ಕುಂದಾಪುರ ( ಮಾ.14): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ನರೇನ್ ಅಕಾಡೆಮಿ ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ತರಬೇತಿ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸರಕಾರಿ ಕ್ಷೇತ್ರದಲ್ಲಿ ಲಭ್ಯವಿರುವ ವಿವಿಧ ಉದ್ಯೋಗಾವಕಾಶಗಳನ್ನು ತಮ್ಮದಾಗಿಸಿಕೊಳ್ಳಲು ಅಗತ್ಯವಿರುವ ಸ್ಪರ್ಧಾತ್ಮಕ ಪರೀಕ್ಷಾ ಕೌಶಲ್ಯಗಳನ್ನು ಹೆಚ್ಚಿಸುವ ಉದ್ಧೇಶದಿಂದ ಆರಂಭಗೊAಡಿರುವ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನಿರಂತರ ಕಠಿಣ ಪರಿಶ್ರಮ ವಹಿಸಿ, ಪರೀಕ್ಷೆಯಲ್ಲಿ ಯಶಸ್ಸು ತಮ್ಮದಾಗಿಸಿಕೊಳ್ಳಲಿ ಎಂದು ಕಾಲೇಜಿನ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ವಿಶ್ವ ಮಹಿಳಾ ದಿನಾಚರಣೆ-ಸಾಧಕ ಮಹಿಳೆಯರಿಗೆ ಸನ್ಮಾನ
ಕುಂದಾಪುರ(ಮಾ.,08): ವಿಶ್ವ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರ ಸಿಟಿ ಜೆಸಿಐ ಹಾಗೂ ಕಾಲೇಜಿನ ಎನ್.ಎಸ್.ಎಸ್. ಘಟಕ, ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಾದ ಶರ್ಮಿಳಾ ಬುತೆಲ್ಲೋ (ಉದ್ಯಮ ಕ್ಷೇತ್ರ), ಜ್ಯೋತಿ (ಕೃಷಿ ಮತ್ತು ಹೈನುಗಾರಿಕೆ), ಶ್ರೀನಿಧಿ ಖಾರ್ವಿ(ಸಾಂಸ್ಕೃತಿಕ), ಅಂಕಿತಾ ಸಿ. ಶೇಟ್ (ಬಹುಮುಖ ಪ್ರತಿಭೆ), ಪ್ರತೀಕ್ಷಾ (ಶೈಕ್ಷಣಿಕ), ದಿವ್ಯಾ (ಕ್ರೀಡೆ) ಇವರನ್ನು ಸನ್ಮಾನಿಸಲಾಯಿತು ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ […]










