ಕುಂದಾಪುರ(ಡಿ.11): ಇಲ್ಲಿನ ಡಾ| ಬಿ.ಬಿ.ಹೆಗ್ಡೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ನೊವೇಷನ್ ಮ್ಯಾನೆಜ್ಮೆಂಟ್ ಫೆಸ್ಟ್- ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಅಂತರ್ ಕಾಲೇಜು ಸ್ಪರ್ಧೆಯನ್ನು ಡಿಸೆಂಬರ್.13 ರಂದು ಆಯೋಜಿಸಲಾಗಿದೆ. ಉಡುಪಿ ಜಿಲ್ಲಾ ವ್ಯಾಪ್ತಿಯ ಸರ್ಕಾರಿ,ಅನುದಾನಿತ ಹಾಗೂ ಖಾಸಗಿ ಪದವಿ ಪೂರ್ವ ಕಾಲೇಜಿನ ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ .ಉಮೇಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಡಾ|ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ವಿಜ್ಞಾನ ಮತ್ತು ಐ.ಟಿ. ಅಸೋಸಿಯೇಶನ್ ಉದ್ಘಾಟನೆ
ಕುಂದಾಪುರ (ಡಿ,9): ಡಾ|. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ಮತ್ತು ಐ.ಟಿ. ಅಸೋಸಿಯೇಶನ್ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಅನುಪಮಾ ಕೋಟ, ವೈಸ್-ಪ್ರೆಸಿಡೆಂಟ್ ಡೆಲಿವರಿ, ಇನ್ಪೊಇನಪೈನಿಟ್ ಟೆಕ್ನೋಲಜಿ, ಉಡುಪಿ ಇವರು ಆಗಮಿಸಿ ಐ.ಟಿ. ಕಂಪನಿಯಲ್ಲಿನ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ವಿವರವಾಗಿ ತಿಳಿಸಿದರು. ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಮಾತನಾಡಿ ತರಗತಿಯಲ್ಲಿ ಕಲಿಯುವ ವಿಷಯವನ್ನು ನಿಜ ಜೀವನದಲ್ಲಿಯೂ ಕೂಡ ಅಳವಡಿಸಿಕೊಳ್ಳಬೇಕೆಂದು ಹೇಳಿದರು. ಗಣಕ […]
ಡಾ| ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ: ‘ಬೆಳದಿಂಗಳ ಚಿಂತನ’
ಕುಂದಾಪುರ(ಡಿ,9): ಕನ್ನಡ ವಿಭಾಗ ಆಯೋಜಿಸಿದ ‘ಬೆಳದಿಂಗಳ ಚಿಂತನ’ ವಿಶಿಷ್ಟ ಕಾರ್ಯಕ್ರಮವನ್ನು ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಹುಂತ್ರಿಕೆ ಸುಧಾಕರ್ ಶೆಟ್ಟಿಯವರು ಉದ್ಘಾಟಿಸಿದರು. ಬೆಳದಿಂಗಳ ಚಿಂತನ ಕಾರ್ಯಕ್ರಮದ ಮಾಲಿಕೆ – ೧ ‘ವೃತ್ತಿ ಧರ್ಮ’ ವಿಷಯದ ಕುರಿತು ವಿಶ್ವ ಹಿಂದೂ ಪರಿಷತ್ ಕೇಂದ್ರೀಯ ವಿಶ್ವಸ್ಥ ಮಂಡಳಿಯ ಸದಸ್ಯರಾದ ಶ್ರೀ ಕಟ್ಕೆರೆ ಪ್ರೇಮಾನಂದ ಶೆಟ್ಟಿಯವರು ಉಪನ್ಯಾಸ ನೀಡಿದರು. ಶಿಕ್ಷಕರೆಂದರೆ ಕೇವಲ ಅಕ್ಷರ ಕಲಿಸುವವರಲ್ಲ, ಪಾಠ ಮಾಡುವವರಲ್ಲ, ಬುದ್ದಿವಾದ ಹೇಳುವವರಲ್ಲ, ಪದವಿ ನೀಡುವವರಲ್ಲ, […]
ರವಿಚಂದ್ರ ಹೊಸೂರು ರವರಿಗೆ ಪಿ ಹೆಚ್ ಡಿ ಪದವಿ
ಬೈಂದೂರು (ಡಿ,9): ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಇಲ್ಲಿನ ನಿರ್ವಹಣಾ ಶಾಸ್ತ್ರ ವಿಭಾಗದ ಉಪನ್ಯಾಸಕರಾಗಿರುವ ಶ್ರೀ ರವಿಚಂದ್ರ ಹೊಸೂರು ಇವರು ಅಭಿವೃದ್ಧಿ ಅಧ್ಯಯನ ವಿಭಾಗದಲ್ಲಿ ಮಂಡಿಸಿದ “ರೋಲ್ಆಫ್ ಬ್ಯಾಂಕ್ಸ್ ಇನ್ ರೂರಲ್ ಡೆವೆಲಪಮೆಂಟ – ಏ ಸ್ವಡಿ ಇನ್ ಉಡುಪಿ ಡಿಸ್ಟ್ರಿಕ್ಟ್” ಎನ್ನುವ ಸಂಶೋಧನಾ ಮಹಾಪ್ರಬಂದಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿ ಹೆಚ್ ಡಿ ಪದವಿ ನೀಡಿ ಗೌರವಿಸಿದೆ. ಇವರು ಡಾ.ರೇಣುಕಾ.ಕೆ ಇವರ ಮಾರ್ಗದರ್ಶನದಲ್ಲಿ ಮಹಾಪ್ರಬಂಧವನ್ನು ಮಂಡಿಸಿದ್ದರು. ಇವರು […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಅoತರ್ ಕಾಲೇಜು ಮಟ್ಟದ ದೇಹದಾರ್ಢ್ಯ ಸ್ಪರ್ಧೆ-ಮಿಸ್ಟರ್ ಮಂಗಳೂರು ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜಿಗೆ ಪ್ರಶಸ್ತಿ
ಕುಂದಾಪುರ(ಡಿ,06): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಅಶ್ರಯದಲ್ಲಿ ನಡೆದ ಪುರುಷರ ಅಂತರ್ ಕಾಲೇಜು ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ಗೌತಮ್ ಪ್ರಥಮ ಸ್ಥಾನ ಪಡೆದಿರುತ್ತಾರೆ. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಕ್ರೀಡಾ ವಿಭಾಗದ ಸಹನಿರ್ದೇಶಕ ಶ್ರೀ ಹರಿದಾಸ ಕೂಳೂರು, ಹಿರಿಯ ದೇಹದಾರ್ಢ್ಯ ತರಬೇತುದಾರ ಶ್ರೀ ಪ್ರೇಮನಾಥ್ […]
ಮೂಡುಬಿದಿರೆ: ಶ್ರೀ ಧವಲಾ ಕಾಲೇಜಿನಲ್ಲಿ ಕಲಾಸಂಘದ ಉದ್ಘಾಟನೆ
ಮೂಡುಬಿದಿರೆ(ಡಿ,06): ಇಲ್ಲಿನ ಶ್ರೀ ಧವಲಾ ಕಾಲೇಜಿನ ಕಲಾಸಂಘದ ಉದ್ಘಾಟನಾ ಕಾರ್ಯಕ್ರಮವು ನವೆಂಬರ್ 30 ರಂದು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಶ್ರೀ ಸುನಿಲ್ ಪಲ್ಲಮಜಲು , ಕನ್ನಡ ಪ್ರಾಧ್ಯಾಪಕರು, ವೈಬ್ರೆಂಟ್ ಪದವಿಪೂರ್ವ ಕಾಲೇಜು, ಕಲ್ಲಬೆಟ್ಟು, ಮೂಡುಬಿದಿರೆ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾನವಿಕ ಶಾಸ್ತ್ರಗಳ ಅಧ್ಯಯನಗಳು ಕಟ್ಟುವ ಸ್ವಾವಲಂಬಿ ಬದುಕು ಎಂಬ ವಿಷಯದ ಕುರಿತು ಹಲವಾರು ಉದಾಹರಣೆಗಳ ಸಹಿತ ವಿಸ್ತೃತವಾಗಿ ವಿವರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಮಹಾವೀರ ಅಜ್ರಿಯವರು ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳಿಗೆ ಭವಿಷ್ಯ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಅಂತರ್ ಕಾಲೇಜು ಮಟ್ಟದ ದೇಹದಾರ್ಢ್ಯ ಸ್ಪರ್ಧೆ ಸಂಪನ್ನ
ಕುಂದಾಪುರ (ಡಿ,6): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಅಶ್ರಯದಲ್ಲಿ ಡಿ.05 ರಂದು ನಡೆದ ಪುರುಷರ ಅಂತರ್ ಕಾಲೇಜು ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಮೂಡಬಿದಿರೆಯ ಆಳ್ವಾಸ್ ಕಾಲೇಜಿಗೆ ಪ್ರಥಮ ಸ್ಥಾನ, ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್ ದ್ವಿತೀಯ ಸ್ಥಾನ ,ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೃತೀಯ ಸ್ಥಾನ […]
ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಆರ್ಯ ಮೊಗವೀರ ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ( ಡಿ,06): ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಉಡುಪಿ ಆಯೋಜಿಸಿದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆರ್ಯ ಮೊಗವೀರ ‘ಗುಂಡು ಎಸೆತ’ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿದ್ದಾರೆ. ವಿದ್ಯಾರ್ಥಿಯ ಕ್ರೀಡಾ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಬೋಧಕ, ಬೋದಕೇತರ ವೃಂದದವರು ಅಭಿನಂದಿಸಿದ್ದಾರೆ.
ನಾವುಂದ: ಸರಕಾರಿ ಪಿ ಯು ಕಾಲೇಜಿನ ವಿದ್ಯಾರ್ಥಿನಿ ಪ್ರತಿಮಾ ದ್ವಿತೀಯ ಸ್ಥಾನ
ನಾವುಂದ( ಡಿ,6): ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ ಮತ್ತು ಶ್ರೀ ಸೋಂಧಾ ಸ್ವರ್ಣವಲ್ಲಿ ಮಹಾ ಸಂಸ್ಥಾನ ವತಿಯಿಂದ ನಡೆದ ಶ್ರೀ ಭಗವದ್ಗೀತಾ ಕಂಠಪಾಠ ಸ್ಪರ್ಧೆಯ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ವಿಭಾಗದಲ್ಲಿ ನಾವುಂದದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರತಿಮಾ ಇವರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಪಾಲಕ-ಶಿಕ್ಷಕರ ಸಭೆ
ಕಾರ್ಕಳ(ಡಿ,6): ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ 2022-23 ನೇ ಸಾಲಿನ ಪಾಲಕರ-ಶಿಕ್ಷಕರ ಸಭೆ ಡಿಸೆಂಬರ್ 04 ರಂದು ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಂಸ್ಥಾಪಕರಾದ ಅಶ್ವತ್ ಎಸ್ ಎಲ್, ಕ್ರಿಯೇಟಿವ್ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮತ್ತು ವಿವಿಧ ಚಟುವಟಿಕೆಗಳಿಗೆ ಪ್ರಾಧಾನ್ಯತೆ ನೀಡಿ ತರಬೇತಿ ನೀಡಲಾಗುತ್ತಿದೆ. ಆಯಾ ವಿದ್ಯಾರ್ಥಿಯ ಶೈಕ್ಷಣಿಕ ಪ್ರಗತಿಯನ್ನು ಅತ್ಯಂತ ಪಾರದರ್ಶಕವಾಗಿ ಪರಿಶೀಲಿಸಿ, ಲೋಪದೋಷಗಳನ್ನು ಪರಿಹರಿಸಲಾಗುತ್ತಿದೆ. ಮುಂಬರುವ NEET,CET, KVPY, NATA, NDA, IIT ಪರೀಕ್ಷೆಗಳಿಗೆ ನುರಿತ ಅನುಭವಿ ಪ್ರಾಧ್ಯಾಪಕರು […]










