ಮಂಗಳೂರು (ಆ, 24) : ರಾಷ್ಟ್ರೀಯ ಮಟ್ಟದ ವೈಜ್ಞಾನಿಕ ಸಂಸ್ಥೆಯಾದ ವಿಜ್ಞಾನ ಭಾರತಿ ಯ ಕರ್ನಾಟಕದ ಘಟಕವಾದ ಸ್ವದೇಶಿ ವಿಜ್ಞಾನ ಆಂದೋಳನ – ಕರ್ನಾಟಕ’ ಸಂಸ್ಥೆ ಇದೇ ಸೆಪ್ಟೆಂಬರ್ 15 ರಿಂದ 17ರ ವರೆಗೆ 16ನೇ ಕನ್ನಡ ವಿಜ್ಞಾನ ಸಮ್ಮೇಳನವನ್ನು ಮಂಗಳೂರು ವಿಶ್ವವಿದ್ಯಾನಿಲಯ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಐಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಕಾರದೊಂದಿಗೆ, ಮಂಗಳ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ವಿದ್ಯಾರ್ಥಿಗಳು ಆಂತರಿಕ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಬೇಕು: ಲೆಫ್ಟಿನೆಂಟ್ ಶ್ರೀ ಕೆ ಪ್ರವೀಣ್ ಕುಮಾರ್
ಪುತ್ತೂರು(ಆ,22): ವಿದ್ಯಾರ್ಥಿಗಳು ಉತ್ತಮ ಉದ್ಯೋಗವನ್ನು ಪಡೆಯಬೇಕಾದರೆ ವಿದ್ಯಾರ್ಥಿ ಜೀವನದಲ್ಲಿ ತಮ್ಮ ಆಂತರಿಕ ಶೈಕ್ಷ ಣಿಕ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಬೇಕಾದದು ಇಂದು ಅನಿವಾರ್ಯವಾಗಿದೆ. ಇದಕ್ಕೆ ವಿದ್ಯಾರ್ಥಿಗಳು ಪೂರ್ವ ತಯಾರಿಯನ್ನು ಮಾಡುವುದರ ಜೊತೆಗೆ, ಸರಿಯಾದ ಮಾಹಿತಿ ಮತ್ತು ವೃತ್ತಿ ಮಾರ್ಗದರ್ಶನವನ್ನು ಪಡೆದು, ನಿರ್ದಿಷ್ಟ ಗುರಿಯನ್ನು ತಲುಪಬೇಕೇಂದು ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಲೆಫ್ಟಿನೆಂಟ್ ಶ್ರೀ ಕೆ ಪ್ರವೀಣ್ ಕುಮಾರ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜಿನ ಗಣಕವಿಜ್ಞಾನ ವಿಭಾಗ […]
ಡಾ.ಬಿ.ಬಿ.ಹೆಗ್ಡೆ ಕಾಲೇಜು, ಕುಂದಾಪುರ: ಓಣಂ ಸಂಭ್ರಮ
ಕುಂದಾಪುರ (ಆ,21): ಇಲ್ಲಿನ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಓಣಂ ಹಬ್ಬವನ್ನು ಕಾಲೇಜಿನ ಐಕ್ಯೂಎಸಿ ಘಟಕ ಹಾಗೂ ಹಿಂದಿ ವಿಭಾಗದ ಆಯೋಜನೆಯಲ್ಲಿ ಆಗಸ್ಟ್,21 ರಂದು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಕೆ ಉಮೇಶ್ ಶೆಟ್ಟಿ ಯವರು ದೀಪ ಬೆಳಗಿಸುವ ಮೂಲಕ ಓಣಂ ಆಚರಣೆಗೆ ಶುಭಹಾರೈಸಿದರು.ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ.ಚೇತನ್ ಶೆಟ್ಟಿ ಕೋವಾಡಿ,ಐಕ್ಯೂಎಸಿ ಘಟಕದ ಸಂಯೋಜಕಿ ಅವಿತಾ ಕೋರೆಯಾ,ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ.ದೀಪಾ ಹಾಗೂ ಕಾಲೇಜಿನ ಬೋಧಕ ,ಬೋಧಕೇತರ ವ್ರಂದ ಹಾಗೂ ವಿದ್ಯಾರ್ಥಿಗಳು […]
ಡಾ.ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ
ಕುಂದಾಪುರ (ಆ,21): ಮಾಜಿ ಪ್ರಧಾನಿ ದಿವಂಗತ ಶ್ರೀ ರಾಜೀವ್ ಗಾಂಧಿಯವರ ಜನ್ಮ ದಿನವನ್ನು ಸದ್ಭಾವನಾ ದಿನವಾಗಿ ಆಗಸ್ಟ್,20ರಂದು ದೇಶದಲ್ಲೆಡೆ ಆಚರಿಸಲಾಗುತ್ತದೆ. ದೇಶದ ಜನರಲ್ಲಿ ಭಾಷೆ,ಧರ್ಮ ಪ್ರಾದೇಶಿಕತೆ ಕುರಿತಾಗಿ ಸದ್ಭಾವನೆ ಮೂಡಿಸಲು ಈ ಕಾರ್ಯಕ್ರಮ ಆಚರಿಸಲಾಗುತ್ತಿದ್ದು, ಕುಂದಾಪುರದ ಡಾ.ಬಿ.ಬಿ.ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್ ಘಟಕದ ಆಶ್ರಯದಲ್ಲಿ ಸದ್ಭಾವನಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಪ್ರತಿಜ್ಞೆಯನ್ನು ಸ್ವೀಕರಿಸುವ ಮೂಲಕ ಆಚರಿಸಲಾಯಿತು . ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಕೆ.ಉಮೇಶ್ ಶೆಟ್ಟಿ ,ಉಪಪ್ರಾಂಶುಪಾಲರಾದ ಶ್ರೀ.ಚೇತನ್ ಶೆಟ್ಟಿ ಕೋವಾಡಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಎನ್.ಎಸ್.ಎಸ್ […]
ಡಾ|ಬಿ.ಬಿ. ಹೆಗ್ಡೆ ಕಾಲೇಜು ಕುಂದಾಪುರ: ಯೋಧ ಪ್ರದೀಪ್ ಖಾರ್ವಿ ಯವರಿಗೆ ಸನ್ಮಾನ
ಕುಂದಾಪುರ (ಆ,20): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್ಸಿಸಿ ಘಟಕದ ವತಿಯಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕುಂದಾಪುರದ ಯೋಧ ಪ್ರದೀಪ್ ಖಾರ್ವಿ ಯವರನ್ನು ಸಂಸ್ಥೆಯ ಸಂಸ್ಥಾಪಕರು ಮತ್ತು ಬೈಂದೂರು ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿಯವರು ಸನ್ಮಾನಿಸಿ ಗೌರವಿಸಿದರು. ನಂತರ ಮಾತನಾಡಿದ ಅವರು ಪ್ರದೀಪ್ ಖಾರ್ವಿಯವರು ಯುವ ಸಮುದಾಯಕ್ಕೆ ಪ್ರೇರಣೆ, ನಮ್ಮ ಭಾಗದಲ್ಲಿ ಇನ್ನಷ್ಟು ಸಂಖ್ಯೆಯ ಯುವಕ ಯುವತಿಯರು ಸೈನ್ಯಕ್ಕೆ ಸೇರುವಂತಾಗಲಿ […]
ಶ್ರೀ ಶಾರದಾ ಕಾಲೇಜು, ಬಸ್ರೂರು: 75ನೇ ಸ್ವಾತಂತ್ರ್ಯ ದಿನಾಚರಣೆ
ಬಸ್ರೂರು (ಆ,19): ಶ್ರೀ ಶಾರದಾ ಕಾಲೇಜಿನಲ್ಲಿ ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಲೇಜು ಟ್ರಸ್ಟ್ ಸದಸ್ಯರಾದ ಶ್ರೀಮತಿ ಅನುಪಮಾ ಎಸ್. ಶೆಟ್ಟಿ ಧ್ವಜಾರೋಹಣ ಗೈದು ಕಾರ್ಯಕ್ರಮನುದ್ದೇಶಿಸಿ ಮಾತನಾಡಿ, ಇಂದು ಸ್ವಾತಂತ್ರ್ಯ ಜೊತೆ ಜೊತೆಗೆ ದೇಶದ ಶ್ರೀಮಂತ ಸಂಸ್ಕೃತಿ ಹಾಗೂ ಆಚರಣೆಯನ್ನು ಆಚರಿಸಲಾಗುತ್ತದೆ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಚಂದ್ರಾವತಿ ಶೆಟ್ಟಿ ಸ್ವಾಗತಿಸಿದರು. ಎನ್.ಸಿ.ಸಿ ಅಧಿಕಾರಿ ಸಂದೀಪ್ .ಕೆ ಕಾರ್ಯಕ್ರಮ ನಿರೂಪಿಸಿದರು. ರೋವರ್ಸ್ & ರೇಂಜರ್ಸ ಅಧಿಕಾರಿ […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸದ್ಭಾವನ ದಿನಾಚರಣೆ- ಪ್ರತಿಜ್ಞಾ ಸ್ವೀಕಾರ
ಶಿರ್ವ(ಆ,19): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ 2021ರ ಆಗಸ್ಟ್ 18ರಂದು ರಾಷ್ಟ್ರೀಯ ಸದ್ಭಾವನ ದಿನಾಚರಣೆ ಹಾಗೂ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸರವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿ, ಎಲ್ಲಾ ಧರ್ಮ, ಭಾಷೆಗಳ ಜನರಲ್ಲಿ ರಾಷ್ಟ್ರೀಯ ಏಕೀಕರಣ, ಕೋಮು ಸೌಹಾರ್ದತೆಯನ್ನು ಉತ್ತೇಜಿಸಿ, ಎಲ್ಲರಲ್ಲೂ ಸದ್ಭಾವನೆಯನ್ನು ಮೂಡಿಸಿ ಹಿಂಸಾಚಾರವನ್ನು ತ್ಯಜಿಸುವಂತೆ ಮಾಡಲು ಪ್ರತಿವರ್ಷಆಗಸ್ಟ್ 20ರಂದು ಸದ್ಭಾವನಾ ದಿನವನ್ನು ಆಚರಿಸಲಾಗುತ್ತದೆ. ಆದರೆ ಈ ವರ್ಷ ಆಗಸ್ಟ್ 20ರಂದು […]
ಇ ಸಿ ಆರ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೆಜ್ಮೆಂಟ್ ಸ್ಟಡೀಸ್ : 75ನೇ ಸ್ವಾತಂತ್ರ್ಯೋತ್ಸವ
ಮಧುವನ(ಆ,18): ಸ್ವತಂತ್ರ ದಿನದ ಅಮೃತ ಮಹೋತ್ಸವದ ಶುಭ ಸಂದರ್ಭದಲ್ಲಿ ಇ ಸಿ ಆರ್ ಗ್ರೂಪ್ ಅಫ್ ಇನ್ಸ್ಟಿಟ್ಯೂಶನ್ಸ್ನ ಆವರಣದಲ್ಲಿ ಇ ಸಿ ಆರ್ ಟ್ರಸ್ಟ್ನ ಅಧ್ಯಕ್ಷರಾದ ಶ್ರೀ ಮಧು ಟಿ ಭಾಸ್ಕರನ್ ಹಾಗೂ ಉಪಾಧ್ಯಕ್ಷರಾದ ಶ್ರೀ ಕೀರ್ತಿ ಶೆಟ್ಟಿ ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳು ದೇಶಕ್ಕೆ ಮೊದಲ ಆದ್ಯತೆ ನೀಡಿ, ಭಾರತವನ್ನು ಸ್ವತಂತ್ರಗೊಳಿಸಲು ದುಡಿದು ಮಡಿದವರ ತ್ಯಾಗ ಬಲಿದಾನವನ್ನು ಸ್ಮರಿಸಿಕೊಳ್ಳುತ್ತಾ ಭವಿಷ್ಯದಲ್ಲಿ ದೇಶಕ್ಕಾಗಿ ದುಡಿಯುವ ಅವಕಾಶ ಒದಗಿ ಬರಲಿ ಎಂದು ಹಾರೈಸುತ್ತಾ […]
ಇ ಸಿ ಆರ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೆಜ್ಮೆಂಟ್ ಸ್ಟಡೀಸ್ : ಬಹುಮಾನ ವಿತರಣಾ ಕಾರ್ಯಕ್ರಮ
ಮಧುವನ ( ಆ, 18): ಇಲ್ಲಿನ ಇ ಸಿ ಆರ್ ಕಾಲೇಜಿನಲ್ಲಿ ಸ್ವತಂತ್ರ ದಿನದ ಅಮೃತ ಮಹೋತ್ಸವದ ಅಂಗವಾಗಿ ನಡೆಸ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನುಆಯೋಜಿಸಲಾಗಿತ್ತು. ವಿಶ್ವ ಯೋಗದಿನದ ಅಂಗವಾಗಿ ನಡೆದ “ಮನೆಯಲ್ಲಿಯೇ ಯೋಗ” ಎಂಬ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಪ್ರಥಮ ವರ್ಷದ ಬಿ. ಬಿ. ಎ ವಿದ್ಯಾರ್ಥಿನಿ ಕುಮಾರಿ ಬಿಂದುಶ್ರೀ ಯವರಿಗೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಮಧು ಟಿ ಭಾಸ್ಕರ್ ಅವರು ರೂ. 5000 ನಗದು ಬಹುಮಾನ […]
ಸ್ಪರ್ಧೆಯಲ್ಲಿ ಭಾಗವಹಿಸಲು ಸ್ವಂತಿಕೆ ಹಾಗೂ ಸೃಜನಶೀಲತೆ ಪ್ರಮುಖವಾದುದು – ನರೇಂದ್ರ .ಎಸ್ .ಗಂಗೊಳ್ಳಿ
ಗಂಗೊಳ್ಳಿ (ಆ,18) :ಯಾವುದೇ ಸ್ಪರ್ಧೆಗಳಲ್ಲಿ ಭಾಗವಹಿಸುವಾಗ ಅದರ ನೀತಿ-ನಿಯಮಗಳನ್ನು ಸರಿಯಾಗಿ ಪಾಲಿಸಬೇಕು. ವಿಷಯ ಸಂಗ್ರಹಣೆಗಾಗಿ ವಿವಿಧ ಆಕರಗಳನ್ನು ಬಳಸಿಕೊಂಡರೂ ಕೂಡ ಸ್ವಂತಿಕೆ ಸೃಜನಶೀಲತೆ ಮುಖ್ಯವಾಗಬೇಕು ಎಂದು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಶ್ರೀ ಸಂಪಿಗೆ ಜಟ್ಟಿಗೇಶ್ವರ ದೇವಸ್ಥಾನದ ವಠಾರದಲ್ಲಿ ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿ(ರಿ)ಯ ವತಿಯಿಂದ ಭಾರತದ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪ್ರೌಢಶಾಲಾ […]