ಕುಂದಾಪುರ(ಡಿ,04): ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ, ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಡಿ.01 ರoದು ಜೂನಿಯರ್ ರೆಡ್ ಕ್ರಾಸ್ ಘಟಕಉದ್ಘಾಟನೆಗೊಂಡಿತು. ಕುಂದಾಪುರದ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಜಯಕರ್ ಶೆಟ್ಟಿ ಸಂಸ್ಥೆಯ ಜೂನಿಯರ್ ರೆಡ್ ಕ್ರಾಸ್ ಘಟಕವನ್ನು ಉದ್ಘಾಟಿಸಿ, ಮಾತನಾಡಿ,ರೆಡ್ ಕ್ರಾಸ್ ಸಂಸ್ಥೆಯ ಮಹತ್ವ ಮತ್ತು ಕಾರ್ಯವೈಖರಿಯನ್ನು ವಿವರಿಸಿದರು. ಶಾಲೆಯ ಶಿಕ್ಷಕಿ ರೇಖಾ ಕೆ.ಯು ರವರಿಗೆ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಕುಂದಾಪುರ:ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ ಕ್ರೀಡಾಂಗಣದ ಭೂಮಿ ಪೂಜೆ
ಕುಂದಾಪುರ( ಡಿ,4): ಕರ್ನಾಟಕ ಸರ್ಕಾರ ಪದವಿ ಪೂರ್ವ ಶಿಕ್ಷಣ ಇಲಾಖೆ ಮಲ್ಲೇಶ್ವರಂ ಬೆಂಗಳೂರು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಸುಣ್ಣಾರಿ ಕುಂದಾಪುರ ಇದರ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ 8,9 ಮತ್ತು10 ರಂದು ಆಯೋಜನೆಗೊಂಡಿರುವ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದ ಕ್ರೀಡಾಂಗಣ ಭೂಮಿ ಪೂಜೆಯನ್ನು ಡಿಸೆಂಬರ್ 01 ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನೆರವೆರಿತು. ಪುರೋಹಿತರಾದ ಶಂಕರನಾರಾಯಣ ಉಡುಪ ಅವರ ನೇತೃತ್ವದಲ್ಲಿ […]
ಆರ್.ಎನ್.ಶೆಟ್ಟಿ ಪಿ ಯು ಕಾಲೇಜಿನ ವಿದ್ಯಾರ್ಥಿನಿಯರು ಫೀಲ್ಡ್ ಇವೆಂಟ್ ಗಳಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಕುಂದಾಪುರ(ಡಿ,4): ಇಲ್ಲಿನ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ವಿವಿಧ ಕ್ಷೇತ್ರ ಕ್ರೀಡೆ( ಫೀಲ್ಡ್ ಇವೆಂಟ್) ಗಳಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಶೆರಿಲ್ ಡಿಸೋಜಾ ಇವರು ಶಾಟ್ ಪುಟ್ ತ್ರೋ ನಲ್ಲಿ, ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಶ್ರಾವ್ಯ ಜ್ಯಾವೆಲಿನ್ ತ್ರೋನಲ್ಲಿ ಹಾಗೂ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ಸಂಹಿತಾ. ಕೆ. ಶೆಟ್ಟಿ ಹ್ಯಾಮರ್ ತ್ರೋ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈ […]
ಆರ್. ಎನ್. ಶೆಟ್ಟಿ ಪಿ ಯು ಕಾಲೇಜಿನ ಪೂರ್ವಿಕಾ ಪ್ರತಿಭಾ ಕಾರಂಜಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಕುಂದಾಪುರ(ಡಿ,4): ಇಲ್ಲಿನ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪೂರ್ವಿಕಾ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭರತನಾಟ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಭರತನಾಟ್ಯ ಕಲಾವಿದೆ ಪೂರ್ವಿಕಾಳ ಈ ಸಾಧನೆಯನ್ನು ಮೆಚ್ಚಿ ಕಾಲೇಜಿನ ಸಂಚಾಲಕರಾದ ಶ್ರೀ ಬಿ. ಎಮ್. ಸುಕುಮಾರ್ ಶೆಟ್ಟಿಯವರು, ಆಡಳಿತ ಮಂಡಳಿ ಸದಸ್ಯರು […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ: ಏಡ್ಸ್ ಅರಿವು ಕಾರ್ಯಕ್ರಮ
ಕುಂದಾಪುರ: (ಡಿ,04) : ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ಕುಂದಾಪುರ ಘಟಕ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಯುವ ರೆಡ್ಕ್ರಾಸ್ ಘಟಕದ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಪ್ರಯುಕ್ತ ಎಚ್.ಐ.ವಿ. ಮತ್ತು ಏಡ್ಸ್ ಕುರಿತು ಅರಿವು ಕಾರ್ಯಕ್ರಮ ನಡೆಯಿತು. ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಘಟಕದ ಕಾರ್ಯಕ್ರಮಾಧಿಕಾರಿ ಶ್ರೀ ಮಹಾಬಲೇಶ್ ಅವರು ಎಚ್.ಐ.ವಿ. ಮತ್ತು ಏಡ್ಸ್ ಹರಡುವ ಬಗೆ, ತಡೆಗಟ್ಟುವ ಕ್ರಮಗಳು ಹಾಗೂ ಚಿಕಿತ್ಸೆಯ […]
ಹೆಮ್ಮಾಡಿ: ಜನತಾ ಸ್ವತಂತ್ರ ಪಿ . ಯು ಕಾಲೇಜಿನಲ್ಲಿ ಜನತಾ ಗೀತೋತ್ಸವ -2022
ಹೆಮ್ಮಾಡಿ( ಡಿ.01): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ದಿ ಜನತಾ ಗೀತೋತ್ಸವ -2022, ಕನ್ನಡ ಗೀತ ಗಾಯನ ಕಾರ್ಯಕ್ರಮ ನ.30 ರoದು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ವಹಿಸಿದ್ದರು.ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಉಪ ಪ್ರಾಂಶುಪಾಲರಾದ ಶ್ರೀ ರಾಮ ದೇವಾಡಿಗರವರು ಕನ್ನಡ ನಾಡು- ನುಡಿ-ಸಂಸ್ಕ್ರತಿಗೆ ಸಂಬಂಧಿಸಿದ ಗೀತ ಗಾಯನದಂತಹ ಕಾರ್ಯಕ್ರಮಗಳು ಅರ್ಥಪೂರ್ಣವಾದದ್ದು ಎನ್ನುತ್ತಾ ಕಾಲೇಜಿನ ವಿದ್ಯಾರ್ಥಿ […]
ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಶಾಲೆಯಲ್ಲಿ ಸಂವಿಧಾನ ದಿನಾಚರಣೆ
ಕುಂದಾಪುರ(ನ,30): ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ ನ.26 ರಂದು ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಎನ್.ಸಿ.ಸಿ. ಅಧಿಕಾರಿ ಕ್ಯಾಪ್ಟನ್ ಸುರೇಂದ್ರ ಶೆಟ್ಟಿ ಮಕ್ಕಳಿಗೆ ಸಂವಿಧಾನ ಪೂರ್ವ ಪೀಠಿಕೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಸಂವಿಧಾನದ ಅರ್ಥ, ಸಾರಾಂಶ ಮತ್ತು ಅದರ ಧ್ಯೇಯೋದ್ದೇಶವನ್ನು ಸವಿವರವಾಗಿ ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ […]
ಕೌಶಲ್ಯಗಳೊಂದಿಗೆ ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಿ : ಚೇತನ್ ಶೆಟ್ಟಿ ಕೋವಾಡಿ
ಕುಂದಾಪುರ (ನ,30): ವಿದ್ಯಾರ್ಥಿ ದೆಸೆಯಲ್ಲಿಯೇ ಮಾನವೀಯ ಮೌಲ್ಯ, ಆತ್ಮವಿಮರ್ಶೆ, ಆತ್ಮವಿಶ್ವಾಸ, ಸಮಯಪ್ರಜ್ಞೆ ,ಪುಸ್ತಕ ಪ್ರೀತಿ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು. ವ್ಯಕ್ತಿಗತ ಬದುಕಿನೊಂದಿಗೆ ಸಾಮಾಜಿಕ ಜವಾಬ್ದಾರಿ ಬಹಳ ಮುಖ್ಯ. ವರ್ತಮಾನದ ತಲ್ಲಣಗಳಿಗೆ ಸ್ಪಂದಿಸುತ್ತಾ, ಸಮಾಜದ ಕಡೆ ಗಮನಕೊಡಬೇಕು. ವಿದ್ಯಾರ್ಥಿಗಳು ಕೌಶಲ್ಯಗಳನ್ನು ವರ್ದಿಸಿಕೊಳ್ಳುವುದರ ಜೊತೆಗೆ ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಿ ಎಂದು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಶ್ರೀ ಚೇತನ್ ಶೆಟ್ಟಿ ಕೋವಾಡಿ ಹೇಳಿದರು. ಅವರು […]
ಯಕ್ಷಲೋಕದ ಅನನ್ಯ ಕಲಾವಿದ ಶ್ರೀ ಕುಂಬ್ಳೆ ಸುಂದರ ರಾವ್ ಇನ್ನಿಲ್ಲ
ಸಂಸ್ಕಾರ ಭಾರತೀಯ ಮುಖ್ಯಸ್ಥರು, ಸ್ನೇಹಜೀವಿ,ಅದ್ಭುತ ಕಲಾವಿದ, ಸುರತ್ಕಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರೂ ಸದಾ ಎಲ್ಲರೊಂದಿಗೆ ಬೆರೆಯುವ ಸಹಜ ಪ್ರೀತಿಯ ನಡೆನುಡಿಯ ಧೀಮಂತ ವ್ಯಕ್ತಿ ಶ್ರೀ ಕುಂಬ್ಳೆ ಸುಂದರ ರಾವ್ ಇನ್ನಿಲ್ಲ . ಎಂಬತ್ತು -ತೊಂಬತ್ತರ ದಶಕದ ಸ್ಟಾರ್ ಕಲಾವಿದ. ಧರ್ಮಸ್ಥಳ ಮಂಜುನಾಥೇಶ್ವರ ಮೇಳದಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ್ದರು. ತನ್ನ ವಿಶಿಷ್ಟ ಪ್ರಾಸಬದ್ಧ ಮಾತಿನ ಶೈಲಿಯ ಮೂಲಕ ಯಕ್ಷಗಾನ ಮತ್ತು ತಾಳಮದ್ದಳೆ ಕೂಟಗಳಲ್ಲಿ ರಂಗೇರಿಸುತ್ತಿದ್ದ ಮೇರು ಕಲಾವಿದ. ಮೂರ್ನಾಲ್ಕು ವರ್ಷಗಳ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ: ಡಿ.05 ರಂದು ಅoತರ್ ಕಾಲೇಜು ಮಟ್ಟದ ದೇಹದಾರ್ಢ್ಯ ಸ್ಪರ್ಧೆ
ಕುಂದಾಪುರ (ನ,29): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಅಶ್ರಯದಲ್ಲಿ ಪುರುಷರ ಅಂತರ್ ಕಾಲೇಜು ಮಟ್ಟದ ದೇಹದಾರ್ಢ್ಯ ಸ್ಪರ್ಧೆ ಡಿಸೆಂಬರ್ 05 ರಂದು ನಡೆಯಲಿದೆ. ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಉಡುಪಿ, ದಕ್ಷಿಣ ಕನ್ನಡ, ಕೊಡಗು ವ್ಯಾಪ್ತಿಯ ಕಾಲೇಜುಗಳ ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










