ಹೆಮ್ಮಾಡಿ( ಡಿ.01): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ದಿ ಜನತಾ ಗೀತೋತ್ಸವ -2022, ಕನ್ನಡ ಗೀತ ಗಾಯನ ಕಾರ್ಯಕ್ರಮ ನ.30 ರoದು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ವಹಿಸಿದ್ದರು.ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಉಪ ಪ್ರಾಂಶುಪಾಲರಾದ ಶ್ರೀ ರಾಮ ದೇವಾಡಿಗರವರು ಕನ್ನಡ ನಾಡು- ನುಡಿ-ಸಂಸ್ಕ್ರತಿಗೆ ಸಂಬಂಧಿಸಿದ ಗೀತ ಗಾಯನದಂತಹ ಕಾರ್ಯಕ್ರಮಗಳು ಅರ್ಥಪೂರ್ಣವಾದದ್ದು ಎನ್ನುತ್ತಾ ಕಾಲೇಜಿನ ವಿದ್ಯಾರ್ಥಿ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಶಾಲೆಯಲ್ಲಿ ಸಂವಿಧಾನ ದಿನಾಚರಣೆ
ಕುಂದಾಪುರ(ನ,30): ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ ನ.26 ರಂದು ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಎನ್.ಸಿ.ಸಿ. ಅಧಿಕಾರಿ ಕ್ಯಾಪ್ಟನ್ ಸುರೇಂದ್ರ ಶೆಟ್ಟಿ ಮಕ್ಕಳಿಗೆ ಸಂವಿಧಾನ ಪೂರ್ವ ಪೀಠಿಕೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಸಂವಿಧಾನದ ಅರ್ಥ, ಸಾರಾಂಶ ಮತ್ತು ಅದರ ಧ್ಯೇಯೋದ್ದೇಶವನ್ನು ಸವಿವರವಾಗಿ ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ […]
ಕೌಶಲ್ಯಗಳೊಂದಿಗೆ ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಿ : ಚೇತನ್ ಶೆಟ್ಟಿ ಕೋವಾಡಿ
ಕುಂದಾಪುರ (ನ,30): ವಿದ್ಯಾರ್ಥಿ ದೆಸೆಯಲ್ಲಿಯೇ ಮಾನವೀಯ ಮೌಲ್ಯ, ಆತ್ಮವಿಮರ್ಶೆ, ಆತ್ಮವಿಶ್ವಾಸ, ಸಮಯಪ್ರಜ್ಞೆ ,ಪುಸ್ತಕ ಪ್ರೀತಿ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು. ವ್ಯಕ್ತಿಗತ ಬದುಕಿನೊಂದಿಗೆ ಸಾಮಾಜಿಕ ಜವಾಬ್ದಾರಿ ಬಹಳ ಮುಖ್ಯ. ವರ್ತಮಾನದ ತಲ್ಲಣಗಳಿಗೆ ಸ್ಪಂದಿಸುತ್ತಾ, ಸಮಾಜದ ಕಡೆ ಗಮನಕೊಡಬೇಕು. ವಿದ್ಯಾರ್ಥಿಗಳು ಕೌಶಲ್ಯಗಳನ್ನು ವರ್ದಿಸಿಕೊಳ್ಳುವುದರ ಜೊತೆಗೆ ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಿ ಎಂದು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಶ್ರೀ ಚೇತನ್ ಶೆಟ್ಟಿ ಕೋವಾಡಿ ಹೇಳಿದರು. ಅವರು […]
ಯಕ್ಷಲೋಕದ ಅನನ್ಯ ಕಲಾವಿದ ಶ್ರೀ ಕುಂಬ್ಳೆ ಸುಂದರ ರಾವ್ ಇನ್ನಿಲ್ಲ
ಸಂಸ್ಕಾರ ಭಾರತೀಯ ಮುಖ್ಯಸ್ಥರು, ಸ್ನೇಹಜೀವಿ,ಅದ್ಭುತ ಕಲಾವಿದ, ಸುರತ್ಕಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರೂ ಸದಾ ಎಲ್ಲರೊಂದಿಗೆ ಬೆರೆಯುವ ಸಹಜ ಪ್ರೀತಿಯ ನಡೆನುಡಿಯ ಧೀಮಂತ ವ್ಯಕ್ತಿ ಶ್ರೀ ಕುಂಬ್ಳೆ ಸುಂದರ ರಾವ್ ಇನ್ನಿಲ್ಲ . ಎಂಬತ್ತು -ತೊಂಬತ್ತರ ದಶಕದ ಸ್ಟಾರ್ ಕಲಾವಿದ. ಧರ್ಮಸ್ಥಳ ಮಂಜುನಾಥೇಶ್ವರ ಮೇಳದಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ್ದರು. ತನ್ನ ವಿಶಿಷ್ಟ ಪ್ರಾಸಬದ್ಧ ಮಾತಿನ ಶೈಲಿಯ ಮೂಲಕ ಯಕ್ಷಗಾನ ಮತ್ತು ತಾಳಮದ್ದಳೆ ಕೂಟಗಳಲ್ಲಿ ರಂಗೇರಿಸುತ್ತಿದ್ದ ಮೇರು ಕಲಾವಿದ. ಮೂರ್ನಾಲ್ಕು ವರ್ಷಗಳ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ: ಡಿ.05 ರಂದು ಅoತರ್ ಕಾಲೇಜು ಮಟ್ಟದ ದೇಹದಾರ್ಢ್ಯ ಸ್ಪರ್ಧೆ
ಕುಂದಾಪುರ (ನ,29): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಅಶ್ರಯದಲ್ಲಿ ಪುರುಷರ ಅಂತರ್ ಕಾಲೇಜು ಮಟ್ಟದ ದೇಹದಾರ್ಢ್ಯ ಸ್ಪರ್ಧೆ ಡಿಸೆಂಬರ್ 05 ರಂದು ನಡೆಯಲಿದೆ. ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಉಡುಪಿ, ದಕ್ಷಿಣ ಕನ್ನಡ, ಕೊಡಗು ವ್ಯಾಪ್ತಿಯ ಕಾಲೇಜುಗಳ ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ನೆತ್ತರ ನೆರವು ಅಭಿಯಾನದ ಉದ್ಘಾಟನಾ ಸಮಾರಂಭ
ಕುಂದಾಪುರ(ನ,26) : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ಕ್ರಾಸ್ ಘಟಕದ ಜಂಟಿ ಆಶ್ರಯದಲ್ಲಿ ನೆತ್ತರ ನೆರವು ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ನವೆಂಬರ್ 23 ರಂದು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಇಂಡಿಯನ್ ರೆಡ್ಕ್ರಾಸ್ ಘಟಕದ ಸಭಾಪತಿಗಳಾದ ಶ್ರೀ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ರಕ್ತದ ವರ್ಗೀಕರಣ ಮಹತ್ವವನ್ನು ಮತ್ತು ರಕ್ತದ ಅನಿವಾರ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ಯುವ ರೆಡ್ಕ್ರಾಸ್ […]
ಶ್ರೀ ದವಲ ಕಾಲೇಜ್ ಮೂಡಬಿದ್ರೆ: ಸಂವಿಧಾನ ದಿನಾಚಾರಣೆ
ಮೂಡಬಿದ್ರೆ ( ನ,26): ಇಲ್ಲಿನ ಶ್ರೀ ದವಲ ಕಾಲೇಜಿನ ಮಾನವ ಹಕ್ಕುಗಳು ಘಟಕದ ವತಿಯಿಂದ ಕಾಲೇಜಿನ ಎ. ವಿ. ಕೊಠಡಿಯಲ್ಲಿ ಸಂವಿಧಾನ ದಿನ ವನ್ನು ನ.26 ರಂದು ಆಚರಿಸಲಾಯಿತು. ಕಾಲೇಜಿನ ಪ್ರಾಚಾರ್ಯರಾದ ಪ್ರೊಫೆಸರ್ ಮಹಾವೀರ ಆಜ್ರಿ ಅವರು ವಿದ್ಯಾರ್ಥಿಗಳಿಗೆ ಸಂವಿಧಾನದ ಪೀಠಿಕೆಯನ್ನು ಓದಿ ಹೇಳುವುದರೊಂದಿಗೆ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮವನ್ನು ನೆರವೇರಿಸಿದರು. ಅಲ್ಲದೆ ಸಂವಿಧಾನದ ಬಗೆಗಿನ ಜ್ಞಾನವನ್ನು ಪ್ರತಿ ಒಬ್ಬ ಭಾರತೀಯನು ಹೊಂದಿಸಿಕೊಳ್ಳುವುದರೊಂದಿಗೆ ಸಪ್ರಜೆಯಾಗಿ ಭಾರತದಲ್ಲಿ ಬದುಕುವ ಮನಸ್ಸು ಮಾಡಬೇಕು ಎನ್ನುವುದನ್ನು […]
ಶಿರ್ವ ಸಂತ ಮೇರಿ ಕಾಲೇಜಿನಲ್ಲಿ 74ನೇ ಎನ್.ಸಿ.ಸಿ ಹಾಗೂ 73ನೇ ಸಂವಿಧಾನ ದಿನಾಚರಣೆ
ಶಿರ್ವ( ನ,26): ಇಂದು ಯುವಜನರಲ್ಲಿ ರಾಷ್ಟ್ರಪ್ರೇಮ,ಸಮಾಜ ಸೇವಾಗುಣಗಳನ್ನು, ತಮ್ಮ ವ್ಯಕ್ತಿತ್ವ ವಿಕಸನ,ಆರೋಗ್ಯವನ್ನು ವೃದ್ಧಿಸಿಕೊಳ್ಳಲು ಹಾಗೂ ಉತ್ತಮ ಉದ್ಯೋಗ ಅವಕಾಶಗಳನ್ನು ಪಡೆದುಕೊಳ್ಳಲು ಕಾಲೇಜಿನಲ್ಲಿ ವಿವಿಧ ಘಟಕಗಳು ಲಭ್ಯವಿರುವುದು ಎಲ್ಲರಿಗೂ ತಿಳಿದಿದೆ. ಆದರೆ ಯುವಜನರಲ್ಲಿ ದೇಶಭಕ್ತಿ, ಶಿಸ್ತು, ಸಮಯ ಪ್ರಜ್ಞೆ ಮೂಡಿಸುವ ಸಂಘಟನೆಗಳಲ್ಲಿ ವಿಶ್ವದ ಅತಿ ದೊಡ್ಡ ಯುವ ಸಂಘಟನೆಯಾದ ನ್ಯಾಷನಲ್ ಕೆಡೆಟ್ ಕಾರ್ಪ್ಸ್(ಎನ್.ಸಿ.ಸಿ) ಪ್ರಥಮವಾಗಿರುತ್ತದೆ. ಇದಕ್ಕೆ ಕಾರಣವೆಂದರೆ ಇಲ್ಲಿಯ ವಿದ್ಯಾರ್ಥಿಗಳಿಗೆ ಎಲ್ಲಾ ಚಟುವಟಿಕೆಗಳಲ್ಲಿಯೂ ದೇಶ ಕಾಯುವ ಯೋಧರಿಂದ ತರಬೇತಿಗಳನ್ನು ನೀಡಿ ಅವರಲ್ಲಿ ಈ ಭಾವನೆಗಳನ್ನು ಕಾರ್ಯರೂಪಗೊಳಿಸುವರಲ್ಲಿ […]
ಶಿರ್ವ ಸಂತ ಮೇರಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ
ಶಿರ್ವ(ನ,26): ಇಲ್ಲಿನ ಸಂತ ಮೇರಿ ಕಾಲೇಜಿನಲ್ಲಿ ನ,26 ರ ಸಂವಿಧಾನ ದಿನಾಚರಣೆ ಅಂಗವಾಗಿ ಮಾನವ ಹಕ್ಕುಗಳು ಮತ್ತು ಕಾನೂನು ಅರಿವು ಜಾಗ್ರತಿ ಘಟಕ, ಎನ್. ಎಸ್. ಎಸ್ ಘಟಕ, ರೋವರ್ಸ್ ಮತ್ತು ರೆಂಜೆರ್ಸ್ ಘಟಕದ ಸಹಾಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನದ ಪ್ರತಿಜ್ನಾ ವಿಧಿಯನ್ನು ಭೋದಿಸಿ ಅವರಲ್ಲಿ ಮೂಲಭೂತ ಹಕ್ಕುಗಳ ಅರಿವು ಮತ್ತು ಮಹತ್ವವನ್ನು ತಿಳಿದು ಯುವಕರು ಕಾನೂನು ಚೌಕಟ್ಟಿನಲ್ಲಿ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಅಧ್ಯಕ್ಷ ಸ್ಥಾನವನ್ನು ವಹಿಸಿದ ಡಾ. ಹೆರಾಲ್ಡ್ ಐವನ್ […]
ಸರಕಾರಿ ಪೌಢಶಾಲೆ ಜಾನುವಾರು ಕಟ್ಟೆ: ಸಂವಿಧಾನ ದಿನಾಚರಣೆ
ಬ್ರಹ್ಮಾವರ(ನ,26): ಸರಕಾರಿ ಪೌಢಶಾಲೆ ಜಾನುವಾರು ಕಟ್ಟೆ ಬ್ರಹ್ಮಾವರ ವಲಯದಲ್ಲಿ ನ,26 ರಂದು ರಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮ ಜರುಗಿತು. ಈ ಪ್ರಯುಕ್ತ ನಾಡಿನ ಪ್ರಸಿದ್ಧ ಗಾಯಕರಾದ ಡಾ.ಗಣೇಶ್ ಗಂಗೊಳ್ಳಿ ಯವರು ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಕುರಿತಾದ ಹಾಡುಗಳನ್ನು ಹಾಡಿ ವಿದ್ಯಾರ್ಥಿಗಳಲ್ಲಿ ಸಂವಿಧಾನ ಕುರಿತು ಅರಿವು ಮೂಡಿಸಿದರು.ಮುಖ್ಯ ಶಿಕ್ಷಕರಾದ ಶ್ರೀ ರಾಮಕೃಷ್ಣ ನಾಯಕ್ ರವರು ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ವಿಧ್ಯಾರ್ಥಿಗಳಿಗೆ ಭೋದಿಸಿದರು.ಸಹ ಶಿಕ್ಷಕರಾದ ಶ್ರೀಮತಿ ಮಮತಾ ಧನ್ಯವಾದ […]










