ಕುಂದಾಪುರ (ನ,4): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ಜಯಶ್ರೀ ತಂತ್ರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ನೇತೃತ್ವದಲ್ಲಿ ಅ,31 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿಯ ಜಾನಪದ ಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಡಾ | ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು:ಏಕತಾ ದಿವಸ ಆಚರಣೆ
ಕುಂದಾಪುರ(ಅ,31) : ಸ್ವತಂತ್ರ ಭಾರತವನ್ನು ಒಗ್ಗೂಡಿಸಿದ ದೇಶದ ಉಕ್ಕಿನ ಮನುಷ್ಯ ಹಾಗೂ ದೇಶದ ಮೊದಲ ಗೃಹ ಮಂತ್ರಿ ಸರ್ದಾರ ವಲ್ಲಭಬಾಯಿ ಪಟೇಲರ ಜನ್ಮದಿನವನ್ನು ಪ್ರತಿ ವರ್ಷ ಅಕ್ಟೋಬರ್ 31 ರಂದು ಏಕತಾ ದಿವಸ ಎಂದು ಆಚರಿಸಲಾಗುತ್ತಿದೆ. ಆ ಹಿನ್ನಲೆಯಲ್ಲಿ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ಸರ್ದಾರ ವಲ್ಲಭಬಾಯಿ ಪಟೇಲ್ರವರ ಕೊಡುಗೆಯನ್ನು ಸ್ಮರಿಸುತ್ತಾ ಏಕತಾ ದಿವಸವನ್ನು ಆಚರಿಸಲಾಯಿತು. ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಶ್ರೀ ಪ್ರವೀಣ ಮೊಗವೀರ ಗಂಗೊಳ್ಳಿ ಏಕತಾ ಪ್ರತಿಜ್ಞಾ ವಿಧಿಯನ್ನು […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಇ-ಮ್ಯಾಗಜಿನ್ ಬಿಡುಗಡೆ
ಕುಂದಾಪುರ(ನ,3):ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಅಂತರ್ಜಾಲ ಪತ್ರಿಕೆ ‘Digi-Campus ” ಇ-ಮ್ಯಾಗಜಿನ್ ನ ನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಮುಖ್ಯ ಅತಿಥಿಯಾಗಿ ಆಗಮಿಸಿದ ಬೆಂಗಳೂರಿನ ಗ್ಲೋಬಲ್ ಲಾಜಿಕ್ ಹಿಟಾಚಿ ಗ್ರೂಪ್ ಕಂಪೆನಿಯ ಮ್ಯಾನೇಜರಾದ ಶ್ರೀ ವಿಪಿನ್ ಕುಮಾರ್ ನಿಟ್ಟೂರು, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ: ಬಿ.ಸಿ.ಎ. ಮತ್ತು ಬಿ.ಎಸ್ಸಿ. ವಿದ್ಯಾರ್ಥಿಗಳಿಗೆ ಉದ್ಯೋಗ ಮಾಹಿತಿ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ
ಕುಂದಾಪುರ(ನ,03): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಭಾಗದ ವತಿಯಿಂದ ಅಂತಿಮ ವರ್ಷದ ಬಿ.ಸಿ.ಎ. ಮತ್ತು ಬಿ.ಎಸ್ಸಿ. ವಿದ್ಯಾರ್ಥಿಗಳಿಗೆ ಐಟಿ ಕಂಪೆನಿಗಳಲ್ಲಿ ದೊರೆಯುವ ಉದ್ಯೋಗ ಮಾಹಿತಿ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮವನ್ನು ನ,02 ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಬೆಂಗಳೂರಿನ ಗ್ಲೋಬಲ್ ಲಾಜಿಕ್ ಹಿಟಾಚಿ ಗ್ರೂಪ್ ಕಂಪೆನಿಯ ಮ್ಯಾನೇಜರಾದ ಶ್ರೀ ವಿಪಿನ್ ಕುಮಾರ್ ನಿಟ್ಟೂರು ಇವರು ಐ.ಟಿ. ಕಂಪೆನಿಗಳಲ್ಲಿ ವಿದ್ಯಾರ್ಥಿಗಳಿಗೆ ಇರುವಂತಹ ವಿಪುಲ ಅವಕಾಶಗಳ […]
ಡಾI ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಫಿಟ್ ಇಂಡಿಯಾ ಫ್ರೀಡಮ್ ರನ್ 3.0
ಕುಂದಾಪುರ (ಅ,31 ): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ನಡೆದ ಫಿಟ್ ಇಂಡಿಯಾ ಫ್ರೀಡಮ್ ರನ್ 3.0 ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿ ಚಾಲನೆ ನೀಡಿದರು. ಎನ್.ಎಸ್.ಎಸ್. ಸ್ವಯಂ ಸೇವಕರು ಕಾಲೇಜಿನ ಕ್ಯಾಂಪಸ್ನಿoದ ನಗರದ ರಾಷ್ಟ್ರೀಯ ಹೆದ್ದಾರಿ ಸಂಗಮ್ವರೆಗೆ ಜಾಥಾದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಕಾಲೇಜಿನ ಎನ್.ಎಸ್.ಎಸ್. ಯೋಜನಾಧಿಕಾರಿ ಹಾಗೂ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಟ್ಯಾಲಿ ಕಾರ್ಯಗಾರ
ಶಿರ್ವ(ನ,2): ಆಧುನಿಕ ತಂತ್ರಜ್ಞಾನದಲ್ಲಿ ಗಣಕ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವಿಪುಲ ಅವಕಾಶಗಳಿದ್ದು, ವಾಣಿಜ್ಯ ಕ್ಷೇತ್ರದಲ್ಲಿ ಅಕೌಂಟ್ಸ್ ಬಗ್ಗೆ ಅಪಾರ ಜ್ಞಾನ ಹೊಂದಿದರಲ್ಲಿ ಟ್ಯಾಲಿ ಮತ್ತು ಎಸ್ಎಪಿ ಅಂತ ಸಾಫ್ಟ್ವೇರ್ ಕಲಿಕೆ ಸರಳವಾಗುವುದು, ತನ್ಮೂಲಕ ಚಾರ್ಟರ್ಡ್ ಅಕೌಂಟೆನ್ಸಿ ವಿಷಯದ ಬಗ್ಗೆ ಜ್ಞಾನ ಪಡೆದುಕೊಳ್ಳಬಹುದು. ಬಿಸಿಎ ವಿದ್ಯಾರ್ಥಿಗಳಿಗೆ ಅವರ ಶೈಕ್ಷಣಿಕ ವಿದ್ಯಾಭ್ಯಾಸದ ಜೊತೆಗೆ ವಿವಿಧ ಸಂಸ್ಥೆಯಲ್ಲಿ ಲಭ್ಯವಿರುವ ಅಕೌಂಟೆಂಟ್ ಹಾಗೂ ಎಸ್ಎಪಿ ಇಂಜಿನಿಯರ್ ಉದ್ಯೋಗ ಪಡೆಯಲು ಈ ಕಾರ್ಯಗಾರ ಸಹಾಯಕಾರಿ ಎಂದು ಇಲ್ಲಿನ […]
ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ
ಹೆಮ್ಮಾಡಿ(ನ,1): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 67 ನೇ ಕನ್ನಡ ರಾಜ್ಯೋತ್ಸವವ ನ್ನು ಸಂಭ್ರಮದಿಂದ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ವಹಿಸಿ ಕನ್ನಡ ಅಭಿಮಾನದ ಬಗ್ಗೆ ಮಹತ್ವ ಸಾರುವ ಸಂದೇಶವನ್ನು ನೀಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಜನತಾ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ನಂದಿ ಇವರು ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಿ […]
ಗಂಗೊಳ್ಳಿ: ಜಿಲ್ಲಾ ಮಟ್ಟದ ಪುರುಷರ ಶೆಟಲ್ ಬ್ಯಾಡ್ಮಿಂಟನ್ ಉದ್ಘಾಟನೆ
ಗಂಗೊಳ್ಳಿ( ಅ,31): ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳನ್ನು ಪೋಷಿಸುವಲ್ಲಿ ಪ್ರತಿಯೊಬ್ಬರು ಮನಸ್ಸು ಮಾಡಬೇಕಿದೆ. ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ತಮ್ಮನ್ನು ಹೆಚ್ಚು ಮುತುವರ್ಜಿಯಿಂದ ತೊಡಗಿಸಿಕೊಳ್ಳಬೇಕಿದೆ ಎಂದು ಲಿಫ್ಟ್ ನ್ ಒಲಿವೆರಾ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಗುಜ್ಜಾಡಿ ಗೋಪಾಲ್ ನಾಯಕ್ ರೋಟರಿ ಸಭಾಂಗಣದಲ್ಲಿ ಎಸ್ಎಂಎಲ್ ಫ್ರೆಂಡ್ಸ್ ವತಿಯಿಂದ ಆಯೋಜಿಸಲ್ಪಟ್ಟ ಉಡುಪಿ ಜಿಲ್ಲಾ ಮಟ್ಟದ ಪುರುಷರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಜಿಎಸ್ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. […]
ಸರಕಾರಿ ಪದವಿ ಪೂರ್ವ ಕಾಲೇಜು ಹೊಸಂಗಡಿ: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಹೊಸಂಗಡಿ(ಅ,30): ಸರಕಾರಿ ಪದವಿ ಪೂರ್ವ ಕಾಲೇಜು ಹೊಸಂಗಡಿ ಇದರ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರವು ಸರಕಾರಿ ಪ್ರೌಢ ಶಾಲೆ, ಬಂಗ್ಲೆಗುಡ್ಡೆ ಇಲ್ಲಿ ಅ,29 ರ ಶನಿವಾರ ಉದ್ಘಾಟನೆಗೊಂಡಿತು. ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಭಾಸ್ಕರ ಶೆಟ್ಟಿ ಇವರು ಶಿಬಿರ ಉದ್ಘಾಟನೆ ಮಾಡಿ ವಿದ್ಯಾರ್ಥಿಗಳು ಆತ್ಮ ವಿಶ್ವಾಸ ಹಾಗೂ ಸ್ವಾವಲಂಬಿಯಾಗಿ ಬದುಕಬೇಕು, ಹಾಗೆ ಬದುಕಬೇಕಾದರೆ ಎನ್ ಎಸ್ ಎಸ್ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದರು. ಈ ಕಾರ್ಯಕ್ರಮದ […]
ಎಚ್. ಎಮ್. ಎಮ್ ಮತ್ತು ವಿ.ಕೆ.ಆರ್ ಶಾಲೆಯಲ್ಲಿ ಕನ್ನಡ ಕೋಟಿ ಕಂಠ ಗಾಯನ
ಕುಂದಾಪುರ (ಅ ,28) : ಕನ್ನಡದ ಅಸ್ಮಿತೆಯನ್ನು ಸಾರುವ ವಿನೂತನ ಅಭಿಯಾನ ʼಕೋಟಿ ಕಂಠ ಗಾಯನʼವು ಅ.28 ರಂದು ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿತು. ಕನ್ನಡ ,ನಾಡು -ನುಡಿಯ ಮಹತ್ವವನ್ನು ಸಾರುವ ಆರು ಹಾಡುಗಳನ್ನು ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಒಕ್ಕೊರಲಿನಿಂದ ಹಾಡಿ ಕನ್ನಡಾಭಿಮಾನವನ್ನು ಮೆರೆದರು.










