ಬೈoದೂರು (ಅ,18): ಬೈಂದೂರು ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಉದ್ಯಮಿ ಹಾಗೂ ಸಮಾಜ ಸೇವಕರಾದ ಡಾ. ಗೋವಿಂದ ಬಾಬು ಪೂಜಾರಿಯವರ ಸಾರಥ್ಯದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಇದೇ ಅಕ್ಟೋಬರ್ ,30 ರಂದು ಉಪ್ಪುಂದ ನಂದನವನದ ಹೊಟೇಲ್ ಪ್ರಜ್ನಾ ಸಾಗರ ಹಾಲ್ ನಲ್ಲಿ ಆಯೋಜಿಸಲಾಗಿದೆ. 30ಕ್ಕೂ ಅಧಿಕ ಪ್ರತಿಷ್ಟಿತ ಕಂಪೆನಿಗಳು ವರಲಕ್ಷ್ಮಿ ಬೃಹತ್ ಉದ್ಯೋಗ ಮೇಳ- 2022 ರ ಒಂದೇ ವೇದಿಕೆಯಲ್ಲಿ ಆಯೋಜನೆಗೊಳ್ಳಲಿದ್ದು , ಪಿ ಯು ಸಿ , ಬಿಕಾಂ, ಬಿಬಿಎ/ಬಿಬಿಎಂ, […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಎಂ.ಜಿ.ಎಂ. ಕಾಲೇಜಿನಲ್ಲಿ ‘ಏಕ್ ದಿನ್ ಎನ್.ಸಿ.ಸಿ ಆರ್ಮಿ ಕೆ ನಾಮ್
ಉಡುಪಿ( ಅ,18): ಎಂ.ಜಿ.ಎಂ. ಕಾಲೇಜಿನಲ್ಲಿ ‘ಏಕ್ ದಿನ್ ಎನ್.ಸಿ.ಸಿ ಆರ್ಮಿ ಕೆ ನಾಮ್’ ಕಾರ್ಯಕ್ರಮ ಇತ್ತೀಚೆಗೆ ಗೀತಾಂಜಲಿ ಸಭಾಂಗಣದಲ್ಲಿ ನಡೆಯಿತು.ಎಂ.ಐ.ಟಿ, ಮಾಹೆಯ ಲೈಪ್ಟಿನ್ಂಟ್ ಕಮಾಂಡರ್ ಗೀತಾಲಕ್ಷ್ಮೀ ಪಿ.ಎಂ. ಮಾತನಾಡಿ ಎನ್.ಸಿ.ಸಿ.ಯು ವಿದ್ಯಾರ್ಥಿಗಳಿಗೆ ಶಿಸ್ತುಬದ್ಧ ಜೀವನವನ್ನು ನಡೆಸಲು, ನಾಯಕತ್ವವನ್ನು ಬೆಳೆಸಲು ಹಾಗೂ ಪ್ರತಿಭೆಯನ್ನು ಪ್ರದರ್ಶಿಸಲು ಇರುವ ಒಂದು ಅತ್ಯುತ್ತಮ ವೇದಿಕೆ ಎಂದು ಹೇಳಿದರು. ಕೆಡೆಟ್ ಹಾಗೂ ಕೆಡೆಟ್ಗಳ ಪೋಷಕರನ್ನು ಅಭಿನಂದಿಸಿ ಇನ್ನೂ ಅತ್ಯುತ್ತಮ ಸಾಧನೆ ಮಾಡಿ ಎಂದು ಹುರಿದುಂಬಿಸಿದರು. ಎಂ.ಜಿ.ಎಂ. ಕಾಲೇಜಿನ […]
ಡಾIಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಬಿಸಿಎ ಹಾಗೂ ಬಿಎಸ್ಸಿ ವಿದ್ಯಾರ್ಥಿಗಳಿಗೆ ಪೂರ್ವಪರಿಚಯ ಕಾರ್ಯಕ್ರಮ
ಕುಂದಾಪುರ (ಅ,17):ಕಾಲೇಜಿಗೆ 2022-23 ನೇ ಶೈಕ್ಷಣಿಕ ಸಾಲಿನಲ್ಲಿ ನೂತನವಾಗಿ ಸೇರ್ಪಡೆಯಾದ ಪ್ರಥಮ ವರ್ಷದ ಬಿಸಿಎ ಹಾಗೂ ಬಿಎಸ್ಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅವಕಾಶಗಳ ಜೊತೆಗೆ ಭವಿಷ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಕಾಲೇಜಿನ ಗಣಕ ವಿಜ್ಞಾನ ಹಾಗೂ ವಿಜ್ಞಾನ ವಿಭಾಗದ ವತಿಯಿಂದ ಪೂರ್ವಪರಿಚಯ ಕಾರ್ಯಕ್ರಮವನ್ನು ಅ .15 ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ .ಉಮೇಶ್ ಶೆಟ್ಟಿ ಯವರು ಮಾತನಾಡಿ ವಿದ್ಯಾರ್ಥಿಗಳಿಗೆ ಮಾಹಿತಿ ತಂತ್ರಜ್ಞಾನ ಹಾಗೂ […]
ವಿ. ಕೆ. ಆರ್. ಶಾಲೆಯಲ್ಲಿ ವೃತ್ತಿಪರ ಮಾರ್ಗದರ್ಶನ ಕಾರ್ಯಾಗಾರ
ಕುಂದಾಪುರ(ಅ,16): ಎಸ್. ಎಸ್. ಎಲ್. ಸಿ ಶಿಕ್ಷಣ ವಿದ್ಯಾರ್ಥಿಗಳ ವೃತ್ತಿಪರ ಬದುಕಿನ ಹಾದಿಗೆ ಮೊದಲ ಮೈಲಿಗಲ್ಲಿನ ಹಂತ. ಇದು ವಿದ್ಯಾರ್ಥಿಗಳ ಭವಿಷ್ಯದ ಸಾಧನೆಗೆ ಹೇಗೆ ಪೂರಕವಾದದ್ದು ಮತ್ತು ಆ ಹಾದಿಯ ವಿವಿಧ ಮಜಲುಗಳು ಹೇಗಿರುತ್ತದೆ ಎನ್ನುವುದನ್ನು ಸವಿಸ್ತಾರವಾಗಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ನಾಗರಾಜ ಕಟೀಲ್ ವಿದ್ಯಾರ್ಥಿಗಳಗೆ ಮಾರ್ಗದರ್ಶನ ನೀಡಿದರು. ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ […]
ಮಿಲಾಗ್ರಿಸ್ ಕಾಲೇಜಿನಲ್ಲಿ ವಿಶ್ವ ವಿದ್ಯಾರ್ಥಿಗಳ ದಿನಾಚರಣೆ
ಕಲ್ಯಾಣಪುರ( ಅ,16): ಇಲ್ಲಿನ ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘ ಮತ್ತು ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಇದರ ಜಂಟಿ ಆಶ್ರಯದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಮತ್ತು ಕ್ಷಿಪಣಿ ತಂತ್ರಜ್ಞಾನದ ವಿಜ್ಞಾನಿ ದಿ. ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ಅವರ ಜನ್ಮ ದಿನವಾದ ಅಕ್ಟೋಬರ್ 15ನ್ನು ವಿಶ್ವ ವಿದ್ಯಾರ್ಥಿಗಳ ದಿನಾಚರಣೆಯಾಗಿ ಆರ್ಥಪೂರ್ಣವಾಗಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್ ಆಳ್ವ ಅವರು ಅಧ್ಯಕ್ಷ ಸ್ಥಾನದಿಂದ ಮಾತನಾಡಿ ಕಲಾಂ […]
ಬೈಂದೂರು:ಅ.16 ರಂದು ಉಚಿತ ನೇತ್ರ ತಪಾಸಣೆ ಹಾಗೂ ಉಚಿತ ಕನ್ನಡಕ ವಿತರಣಾ ಶಿಬಿರ
ಬೈಂದೂರು(ಅ,15): ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಬೈಂದೂರು – ಶಿರೂರು ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ), ಅಂಬಲಪಾಡಿ ಉಡುಪಿ ,ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ ಇವರ ವತಿಯಿಂದ ನಾಡೋಜ ಡಾ. ಜಿ . ಶಂಕರ್ ರವರ ಹುಟ್ಟು ಹಬ್ಬದ ಪ್ರಯುಕ್ತ ಅಕ್ಟೋಬರ್ .16 ರ […]
ಶಿಕ್ಷಣದಿಂದ ಜಗತ್ತನ್ನೇ ಬದಲಾಯಿಸಲು ಸಾಧ್ಯ: ಸುಪ್ರೀಯಾ ಕಾಮತ್ ಬ್ಯಾನರ್ಜಿ
ಕುಂದಾಪುರ (ಅ.15):ಶಿಕ್ಷಣ ಪ್ರತಿಯೊಬ್ಬರಿಗೂ ಅತ್ಯವಶ್ಯಕ. ಶಿಕ್ಷಣ ನಮ್ಮ ಬದುಕನ್ನು ಬದಲಾಯಿಸುವುದರ ಜೊತೆಗೆ ಇಡೀ ಜಗತ್ತನ್ನೇ ಬದಲಿಸುವ ಶಕ್ತಿಯನ್ನು ಹೊಂದಿದೆ ಎಂದು ಅಂತರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ (ICC) ಇದರ ಮಾನವ ಸಂಪನ್ಮೂಲ ವಿಭಾಗದ ನಿವೃತ್ತ ಅಧಿಕಾರಿ ಕುಂದಾಪುರ ಮೂಲದ ಶ್ರೀಮತಿ ಸುಪ್ರೀಯಾ ಕಾಮತ್ ಬ್ಯಾನರ್ಜಿ ಹೇಳಿದರು. ಅವರು ಕುಂದಾಪುರದ ಡಾ.ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ರೋಟರಿ ಕ್ಲಬ್ ಕುಂದಾಪುರ ದಕ್ಷಿಣ ವಲಯದ ವತಿಯಿಂದ ಹಮ್ಮಿಕೊಂಡ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ […]
ಎಕ್ಸಲೆಂಟ್ ಪಿ ಯು ಕಾಲೇಜು ಕುಂದಾಪುರ: ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಆಯ್ಕೆ
ಕುಂದಾಪುರ( ಅ,10): 2022-23ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಚೆಸ್ ಪಂದ್ಯಾವಳಿಯು ಅಕ್ಟೋಬರ್ 7 ಮತ್ತು 8 ರಂದು ಶ್ರೀ ಬಸವೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜು ಬಿಡದಿ ರಾಮನಗರ ಜಿಲ್ಲೆಯಲ್ಲಿ ನಡೆದಿದ್ದು ಕುಂದಾಪುರ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಮಾನಸ ದೇವಾಡಿಗ ಮತ್ತು ನಿಹಾಲ್ ಎನ್ ಶೆಟ್ಟಿ ಉಡುಪಿ ಜಿಲ್ಲೆಯನ್ನು ರಾಜ್ಯಮಟ್ಟದಲ್ಲಿ ಪ್ರತಿನಿಧಿಸಿ ದ್ವಿತೀಯ […]
ತಾಲೂಕು ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾದ ಸರ್ವ ಜಿಷ್ಟು
ಕುಂದಾಪುರ(ಅ,10): ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮಾಸೆಬೈಲು ಇವರ ಜಂಟಿ ಆಯೋಜನೆಯಲ್ಲಿ ನಡೆದ ಪ್ರಾಥಮಿಕ ಶಾಲಾ ಮಟ್ಟದ ಹಾಲಾಡಿ ಸಂಯೋಜಕ ವೃತ್ತ ಮಟ್ಟದ ಕ್ರೀಡಾಕೂಟದಲ್ಲಿ ಎಕ್ಸಲೆಂಟ್ ಶಾಲೆ ಹಾಗೂ ಕುಂದಾಪುರ ಟ್ರಾಕ್ & ಫೀಲ್ಡ್ ಅಥ್ಲೆಟಿಕ್ ತರಬೇತಿ ಸಂಸ್ಥೆಯ ವಿದ್ಯಾರ್ಥಿ ಸರ್ವ ಜಿಷ್ಟು ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾರೆ.
ಸರಸ್ವತಿ ವಿದ್ಯಾಲಯ ಗಂಗೊಳ್ಳಿ: ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ
ಗಂಗೊಳ್ಳಿ(ಅ,8): ಎನ್ಎಸ್ಎಸ್ ಶಿಬಿರದಲ್ಲಿ ಕಲಿತ ಮೌಲಿಕವಾದ ಅಂಶಗಳನ್ನು ತಮ್ಮ ಜೀವನದಲ್ಲಿ ವಿದ್ಯಾರ್ಥಿಗಳು ಅಳವಡಿಸಿಕೊಳ್ಳುವುದರ ಮೂಲಕ ವ್ಯಕ್ತಿತ್ವವನ್ನು ಸದೃಢಗೊಳಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲರು ,ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಶ್ರೀ ಚೇತನ್ ಶೆಟ್ಟಿ ಕೋವಾಡಿ ಅವರು ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಹಮ್ಮಿಕೊಂಡಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ […]










