ಗಂಗೊಳ್ಳಿ( ಅ,31): ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳನ್ನು ಪೋಷಿಸುವಲ್ಲಿ ಪ್ರತಿಯೊಬ್ಬರು ಮನಸ್ಸು ಮಾಡಬೇಕಿದೆ. ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ತಮ್ಮನ್ನು ಹೆಚ್ಚು ಮುತುವರ್ಜಿಯಿಂದ ತೊಡಗಿಸಿಕೊಳ್ಳಬೇಕಿದೆ ಎಂದು ಲಿಫ್ಟ್ ನ್ ಒಲಿವೆರಾ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಗುಜ್ಜಾಡಿ ಗೋಪಾಲ್ ನಾಯಕ್ ರೋಟರಿ ಸಭಾಂಗಣದಲ್ಲಿ ಎಸ್ಎಂಎಲ್ ಫ್ರೆಂಡ್ಸ್ ವತಿಯಿಂದ ಆಯೋಜಿಸಲ್ಪಟ್ಟ ಉಡುಪಿ ಜಿಲ್ಲಾ ಮಟ್ಟದ ಪುರುಷರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಜಿಎಸ್ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಸರಕಾರಿ ಪದವಿ ಪೂರ್ವ ಕಾಲೇಜು ಹೊಸಂಗಡಿ: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಹೊಸಂಗಡಿ(ಅ,30): ಸರಕಾರಿ ಪದವಿ ಪೂರ್ವ ಕಾಲೇಜು ಹೊಸಂಗಡಿ ಇದರ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರವು ಸರಕಾರಿ ಪ್ರೌಢ ಶಾಲೆ, ಬಂಗ್ಲೆಗುಡ್ಡೆ ಇಲ್ಲಿ ಅ,29 ರ ಶನಿವಾರ ಉದ್ಘಾಟನೆಗೊಂಡಿತು. ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಭಾಸ್ಕರ ಶೆಟ್ಟಿ ಇವರು ಶಿಬಿರ ಉದ್ಘಾಟನೆ ಮಾಡಿ ವಿದ್ಯಾರ್ಥಿಗಳು ಆತ್ಮ ವಿಶ್ವಾಸ ಹಾಗೂ ಸ್ವಾವಲಂಬಿಯಾಗಿ ಬದುಕಬೇಕು, ಹಾಗೆ ಬದುಕಬೇಕಾದರೆ ಎನ್ ಎಸ್ ಎಸ್ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದರು. ಈ ಕಾರ್ಯಕ್ರಮದ […]
ಎಚ್. ಎಮ್. ಎಮ್ ಮತ್ತು ವಿ.ಕೆ.ಆರ್ ಶಾಲೆಯಲ್ಲಿ ಕನ್ನಡ ಕೋಟಿ ಕಂಠ ಗಾಯನ
ಕುಂದಾಪುರ (ಅ ,28) : ಕನ್ನಡದ ಅಸ್ಮಿತೆಯನ್ನು ಸಾರುವ ವಿನೂತನ ಅಭಿಯಾನ ʼಕೋಟಿ ಕಂಠ ಗಾಯನʼವು ಅ.28 ರಂದು ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿತು. ಕನ್ನಡ ,ನಾಡು -ನುಡಿಯ ಮಹತ್ವವನ್ನು ಸಾರುವ ಆರು ಹಾಡುಗಳನ್ನು ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಒಕ್ಕೊರಲಿನಿಂದ ಹಾಡಿ ಕನ್ನಡಾಭಿಮಾನವನ್ನು ಮೆರೆದರು.
ಕೋಟಿ ಕಂಠ ಗೀತ ಗಾಯನಕ್ಕೆ ಸಾಕ್ಷಿಯಾದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಶಾಲೆ ಕುಂದಾಪುರ
ಕುಂದಾಪುರ( ಅ,29): ನಾಡು ನುಡಿಯ ಕುರಿತು ಅಭಿಮಾನ ಮೂಡಿಸುವ , ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಮೂಡಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಅನುಷ್ಠಾನಗೊಳಿಸಿದ “ಕೋಟಿ ಕಂಠ ಗೀತಗಾಯನ” ಕಾರ್ಯಕ್ರಮವನ್ನು ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ಸಭಾಂಗಣದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪ್ರಾಂಶುಪಾಲರನ್ನು ಒಳಗೊಂಡoತೆ ಸಮೂಹ ಗೀತಗಾಯನ ಅ.28 ರಂದು ಯಶಸ್ವಿಯಾಗಿ ನೆರವೇರಿತು. ವಿದ್ಯಾರ್ಥಿಗಳೆಲ್ಲರೂ ಸಮವಸ್ತ್ರ ಧರಿಸಿ ಶಿಸ್ತು ಬದ್ಧವಾಗಿ ಸರ್ಕಾರವು ನಿಗದಿಪಡಿಸಿದ ಗೀತೆಗಳಾದ ಜಯಭಾರತ ಜನನಿಯ ತನುಜಾತೆ, […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ: ಸಹಸ್ರ ವಿದ್ಯಾರ್ಥಿಗಳ ಕಂಠ ಸಿರಿಯಲ್ಲಿ ಕೋಟಿ ಕಂಠ ಗಾಯನ
ಕುಂದಾಪುರ( ಅ,28): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ನಡೆದ ‘ಕೋಟಿ ಕಂಠ ಗಾಯನ’ದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಶ್ರೀ ರಕ್ಷಿತ್ ರಾವ್, ಕಾರ್ಯಕ್ರಮ ಸಂಯೋಜಕರಾದ ಶ್ರೀಮತಿ ರೇಷ್ಮಾ ಶೆಟ್ಟಿ, ಶ್ರೀ ಸುಕುಮಾರ್ ಶೆಟ್ಟಿ ಕಮಲಶಿಲೆ ಹಾಗೂ ಎಲ್ಲಾ ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಕನ್ನಡ ಪ್ರತಿಜ್ಞಾ ವಿಧಿ ಸ್ವೀಕರಿಸಿ, ಕನ್ನಡ ಮಾತೆಗೆ […]
ಕುಂದಾಪುರ : ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಕೋಟಿ ಕಂಠ ಗಾಯನ
ಕುಂದಾಪುರ (ಅ,28):ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಸ್ಕ್ರತಿ ಇಲಾಖೆಯ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಅ.28 ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ಆಯೋಜಿಸಲಾದ ‘ ಕೋಟಿ ಕಂಠ ಗಾಯನ ‘ ಕಾರ್ಯಕ್ರಮದಲ್ಲಿ ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡು ಕನ್ನಡ ನಾಡು- ನುಡಿಯ ಹಿರಿಮೆಗೆ ಸಂಬಂಧಿಸಿದ ಹಾಡುಗಳನ್ನು ಹಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ ಶೆಟ್ಟಿಯವರು ಹಾಗೂ ಬೋಧಕ- ಬೋಧಕೇತರ ಸಿಬ್ಬಂಧಿಗಳು ಕಾರ್ಯಕ್ರಮದಲ್ಲಿ […]
ಎಂ.ಜಿ.ಎಂ. ಕಾಲೇಜಿನಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವದ ಕೋಟಿ ಕಂಠ ಗಾಯನ
ಉಡುಪಿ(ಅ,28): ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನ ಕಾರ್ಯಕ್ರಮವು ಕಾಲೇಜಿನ ನೂತನ ರವೀಂದ್ರ ಮಂಟಪದ ಬಳಿ ಬೆಳಿಗ್ಗೆ 11 ಗಂಟೆಗೆ ಜರುಗಿತು. ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಕಾರ್ಯಕ್ರಮದ ಬಗ್ಗೆ ವಿವರಣೆ ನೀಡಿ ಕೋಟಿ ಕಂಠ ಗಾಯನಕ್ಕೆ ಚಾಲನೆ ನೀಡಿದರು. ಪದವಿ ಪೂರ್ವ ವಿಭಾಗದ ಪ್ರಾಂಶುಪಾಲೆ ಮಾಲತಿದೇವಿ ಎ. ಶುಭಹಾರೈಸಿದರು. ಸಂಸ್ಕೃತ ವಿಭಾಗದ ಮುಖ್ಯಸ್ಥೆ ಡಾ| ವಸುಮತಿ ಭಟ್ ನೇತೃತ್ವದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ಕನ್ನಡದ ಆರು […]
ಕುಂದಾಪುರ: ಡಾ | ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ದೀಪಾವಳಿ ಸಂಭ್ರಮಾಚರಣೆ
ಕುಂದಾಪುರ (ಅ,27): ನೆಲದ ಸೊಗಡಿನ ಹಬ್ಬ ದೀಪಾವಳಿ. ಇದೊಂದು ಜನಪದ ಆಚರಣೆ, ಕೃಷಿ ಸಂಸ್ಕೃತಿಯನ್ನು ಬಿಂಬಿಸುದರ ಜೊತೆಗೆ ಕತ್ತಲೆಯ ಮೇಲೆ ಬೆಳಕಿನ ವಿಜಯವನ್ನು ಸಾಧಿಸುವ ಹಬ್ಬ ಎಂದು ಹಿರಿಯ ಜಾನಪದ ಕಲಾವಿದರಾದ ಶ್ರೀ ನಾಗರಾಜ ಪಾಣ ಮೂಡುವಾಲ್ತೂರು ಅವರು ಹೇಳಿದರು. ಅವರು ಅಕ್ಟೊಬರ್25 ರಂದು ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಯೋಜಿಸಿದ “ದೀಪಾವಳಿ ಆಚರಣೆ” ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ. […]
ರಾಜ್ಯಮಟ್ಟದ ಭಾವ ಬರಹ ಸ್ಪರ್ಧೆ
ಕುಂದಾಪುರ (ಅ,27): ಸಾಹಿತ್ಯ ತಂಗುದಾಣ ಬಳಗ ರಾಜ್ಯಮಟ್ಟದ ಭಾವ ಬರಹ ಸ್ಪರ್ಧೆಯನ್ನು ಏರ್ಪಡಿಸಿದೆ. ಆಸಕ್ತರು ತಮ್ಮ ಜೀವನಕ್ಕೆ ಸಂಬಂಧಿಸಿದ ಯಾವುದೇ ವಸ್ತು ವಿಚಾರ ವ್ಯಕ್ತಿ ಸಂಬಂಧ ಕನಸು ಸ್ಥಳ ಸನ್ನಿವೇಶ ಇತ್ಯಾದಿ ವಿಷಯಗಳ ಬಗೆಗೆ ಭಾವನೆಗಳನ್ನು ಪ್ರಕಟಪಡಿಸುವಂತಹ ಬರಹವನ್ನು ಬರೆಯಬಹುದು. ಪ್ರಥಮ ಮತ್ತು ದ್ವಿತೀಯ ನಗದು ಬಹುಮಾನಗಳ ಜೊತೆಗೆ ಪ್ರಮಾಣ ಪತ್ರಗಳನ್ನು ನೀಡಲಾಗುವುದು. ಬರಹಗಳನ್ನು ವಾಟ್ಸಪ್ ಮೂಲಕ 9242127307 ಅಥವಾ ಇಮೇಲ್ ಮೂಲಕ sahithyathangudana@gmail.com ಗೆ ಕಳುಹಿಸಬಹುದಾಗಿದೆ. ಬರಹವನ್ನು ಕಳಿಸಲು ಕೊನೆಯ ದಿನಾಂಕ […]
ಬದ್ಧತೆಯ ಸಿದ್ಧತೆಯಿಂದಲೇ ಸಾಧ್ಯತೆ: ಶ್ರೀ ಗಣೇಶ್ ಶೆಣೈ
ಕುಂದಾಪುರ(ಅ,25): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ಕಾರ್ಯಾಗಾರ ಶ್ರೀ ಸಾಲಿಗ್ರಾಮ ಗಣೇಶ್ ಶೆಣೈ ಅವರಿಂದ ನೆರವೇರಿತು. ಬದ್ಧತೆಯ ಸಿದ್ಧತೆಯಿಂದಲೇ ಸಾಧ್ಯತೆ ಎನ್ನುವ ವಿಚಾರದ ಕುರಿತಾಗಿ ವಿದ್ಯಾರ್ಥಿಗಳಲ್ಲಿ ಪ್ರೇರಣೆ ಮೂಡಿಸಿದ ಸಂಪನ್ಮೂಲ ವ್ಯಕ್ತಿಗಳು ತಮ್ಮ ಕಲಾ ಕುಂಚ ವೇದಿಕೆಯ ಮೂಲಕ ಹತ್ತನೇ […]










