ಕುಂದಾಪುರ(ಸೆ,20):ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇವರು ಸೆಪ್ಟೆಂಬರ್ 17 ರಂದು ಉಡುಪಿಯ ಪೂರ್ಣ ಪ್ರಜ್ಞಾ ಕಾಲೇಜಿನಲ್ಲಿ ಆಯೋಜಿಸಿದ ಜಿಲ್ಲಾಮಟ್ಟದ ಕಾಲೇಜು ವಿದ್ಯಾರ್ಥಿಗಳ ಕರಾಟೆ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿಶೇಷ ಸಾಧನೆಗೈದಿದ್ದು, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಸುಜನ್ ಶೆಟ್ಟಿ ಪ್ರಥಮ ಸ್ಥಾನಿಯಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿಘ್ನೇಶ್ ಹಾಗೂ ವಿಜ್ಞಾನ ವಿಭಾಗದ ನಿಶಾನ್ ಮೆಸ್ತಾ ದ್ವಿತೀಯ ಸ್ಥಾನವನ್ನು ಪಡೆದು […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಸಂತ ಮೇರಿ ಕಾಲೇಜು ಶಿರ್ವ : ಜಾವ ಮೇಡ್ ಈಜಿ – ಪ್ರಶ್ನೋತ್ತರ ಮಾಲಿಕೆ ಪುಸ್ತಕ ಬಿಡುಗಡೆ
ಶಿವ೯(ಸೆ,20): ಇಲ್ಲಿನ ಶಿರ್ವ ಸಂತಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ವತಿಯಿಂದ ಏರ್ಪಡಿಸಿದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಂಗಳೂರಿನ ಯುನೈಟೆಡ್ ಏಜೆನ್ಸಿ ಇದರ ಸಂಪಾದಕರಾದ ಶ್ರೀ ಕೃಷ್ಣನ್ ಅಯ್ಯರ್ ಅವರು ಉಪನ್ಯಾಸಕ ಕೆ.ಪ್ರವೀಣ್ ಕುಮಾರ ರವರ “ಜಾವ ಮೇಡ್ ಈಜಿ” – ಪ್ರಶ್ನೋತ್ತರ ಮಾಲಿಕೆ ಪುಸ್ತಕ ಬಿಡುಗಡೆಗೊಳಿಸಿದರು. ಪರೀಕ್ಷಾ ತಯಾರಿಕೆಯಲ್ಲಿ ಇಂದಿನ ವಿದ್ಯಾರ್ಥಿಗಳಿಗೆ ಹೊಸ ಹೊಸ ಸವಾಲುಗಳು ಎದುರಾಗುವುದು ಸಹಜ. ಈ ನಿಟ್ಟಿನಲ್ಲಿ ಪರೀಕ್ಷಾ ಪೂವ೯ ತಯಾರಿಯಾಗಿ […]
ಕ್ರಿಯೇಟಿವ್ ಪಿಯು ಕಾಲೇಜು ಕಾರ್ಕಳ :ಕ್ರಿಯೇಟಿವ್ ಕೆಸರ್ಡೊಂಜಿ ದಿನ ಕಾರ್ಯಕ್ರಮ
ಕಾರ್ಕಳ(ಸೆ,20): ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಹಸಿರೊಡನೆ ಕಲಿಕೆಯ ಕಲರವ ಕಾರ್ಯಕ್ರಮ ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹತ್ತಿರ ಇತ್ತೀಚೆಗೆ ಜರುಗಿತು. ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಶ್ರೀ ಹರಿಶ್ಚಂದ್ರ ಕುಲಾಲ್ ಇಂದು ನಾವು ವಿದ್ಯಾಭ್ಯಾಸದಲ್ಲಿ ಶೈಕ್ಷಣಿಕ ಪ್ರಗತಿಯನ್ನು ಮಾತ್ರ ಗಮನಿಸುತ್ತಿದ್ದೇವೆ ಆದರೆ ನಮಗೆ ಅನ್ನ ನೀಡುವ ಕೃಷಿ ಭೂಮಿ ಮತ್ತು ಕೃಷಿಕರ ಕುರಿತು ತಿಳುವಳಿಕೆ ಪಡೆಯಲು ವಿದ್ಯಾರ್ಥಿಗಳಿಗೆ ಇದೊಂದು ಉತ್ತಮ ಕಾರ್ಯಕ್ರಮ. ವಿದ್ಯಾರ್ಥಿಗಳು ಕೆಸರನ್ನು ಅಸಹ್ಯ ಎಂದು ಭಾವಿಸದೇ […]
ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ನಲ್ಲಿ ಲಿಮಿಟ್ ಲೆಸ್ ಸೈನ್ಸ್
ಕುಂದಾಪುರ (ಸೆ,19): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ಶಿಕ್ಷಕರಿಗಾಗಿ ಆಯೋಜಿಸಲ್ಪಟ್ಟ ಪ್ರೇರಣಾ – 2022 ಸರಣಿ ಕಾರ್ಯಾಗಾರದ ಮುಂದಿನ ಭಾಗದಲ್ಲಿ ” ಲಿಮಿಟ್ ಲೆಸ್ ಸೈನ್ಸ್ ” ಎನ್ನುವ ವಿಷಯವಾಗಿ ಶಿಕ್ಷಕ ಪುನಶ್ಚೇತನ ಕಾರ್ಯಾಗಾರ ಜರುಗಿತು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿಯ ವಿ.ಕೆ.ಆರ್ ಆಚಾರ್ಯ ಮೆಮೋರಿಯಲ್ ಹೈಸ್ಕೂಲ್ ನ ನಿವೃತ್ತ ವಿಜ್ಞಾನ ಶಿಕ್ಷಕರಾಗಿರುವ ಶ್ರೀ […]
ಕರಾಟೆಯಲ್ಲಿ ಅನ್ಸಿಟಾಗೆ ದ್ವಿತೀಯ ಸ್ಥಾನ
ಗಂಗೊಳ್ಳಿ(ಸೆ,19): ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಪದವಿಪೂರ್ವ ವಿಭಾಗದ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಪಂದ್ಯಾಟ 2022-23ರಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅನ್ಸಿಟಾ ಮರಿಯಾ ರೆಬೆಲ್ಲೊ ಕರಾಟೆಯ ಕುಮಿಟೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಇವರು ಗಂಗೊಳ್ಳಿಯ ಟ್ರೆವರ್ ರೋಮನ್ ರೆಬೆಲ್ಲೊ ಮತ್ತು ಅನಿತಾ ಸ್ಟೆಫಾನಿಯ ರೆಬೆಲ್ಲೊ ದಂಪತಿಯ ಪುತ್ರಿ ಹಾಗೂ ಕಿರಣ್ ಕುಂದಾಪುರ ಇವರಿಂದ ತರಬೇತಿ ಪಡೆದಿದ್ದಾಳೆ.
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ: ಹುಡುಗರ ಕಬಡ್ಡಿ ತಂಡ ಜಿಲ್ಲಾ ಮಟ್ಟಕ್ಕೆ
ಕುಂದಾಪುರ (ಸೆ,19): ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿ ಇತ್ತೀಚೆಗೆ ನಡೆದ ಕುಂದಾಪುರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರ ಇದರ ಹುಡುಗಿಯರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ, ತಂಡದ ವ್ಯವಸ್ಥಾಪಕರಾದ ಕಾಳಾವರ ಶ್ರೀ ಉದಯ ಕುಮಾರ್ ಶೆಟ್ಟಿ, ಶ್ರೀಮತಿ ಪೂರ್ಣಿಮಾ ಪಿ ನಾಯಕ್, ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಪ್ರಕಾಶ್ಚಂದ್ರ […]
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ: ಹುಡುಗಿಯರ ಕಬಡ್ಡಿ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕುಂದಾಪುರ (ಸೆ,19): ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿ ಇತ್ತೀಚೆಗೆ ನಡೆದ ಕುಂದಾಪುರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರ ಇದರ ಹುಡುಗಿಯರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ, ತಂಡದ ವ್ಯವಸ್ಥಾಪಕರಾದ ಕಾಳಾವರ ಶ್ರೀ ಉದಯ ಕುಮಾರ್ ಶೆಟ್ಟಿ, ಶ್ರೀಮತಿ ಪೂರ್ಣಿಮಾ ಪಿ ನಾಯಕ್, ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಪ್ರಕಾಶ್ಚಂದ್ರ […]
ಇಂಜಿನಿಯರ್ಸ್ ಡೇ: ಸನ್ಮಾನ ಕಾರ್ಯಕ್ರಮ
ಗಂಗೊಳ್ಳಿ( ಸೆ.18): ಇಂಜಿನಿಯರ್ಸ್ ಡೇ ಪ್ರಯುಕ್ತ ಹಕ್ಲಾಡಿಯ ಚೆನ್ನಕೇಶವ ಲಯನ್ಸ್ ಕ್ಲಬ್ ಹಾಗೂ ರೋಟರಿ ಕ್ಲಬ್ ಗಂಗೊಳ್ಳಿ ಜಂಟಿ ಸಭೆಯನ್ನು ಇತ್ತೀಚೆಗೆ ಆಯೋಜಿಸಲಾಯಿತು . ಕಾರ್ಯಕ್ರಮದಲ್ಲಿ ಇಂಜಿನಿಯರ್ ಲಯನ್ಸ್ ಸತೀಶ್ ಶೆಟ್ಟಿ ಇವರಿಗೆ ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು. ಲಯನ್ಸ್ ಕ್ಲಬ್ಬಿನ ಅಧ್ಯಕ್ಷರಾದ ನಾಗೇಶ್ ಪೂಜಾರಿ ಹಾಗೂ ರೋಟರಿ ಕ್ಲಬ್ ನ ಅಧ್ಯಕ್ಷರಾದ ಸುಗುಣ ಆರ್ ಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಲಯನ್ ಕಿಶೋರ್ ಕುಮಾರ್ ಶೆಟ್ಟಿ ಹಾಗೂ […]
ಅಂತರ್ ಶಾಲಾ ಮಟ್ಟದ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್-2022 : ಪ್ರಥಮೇಶ್ ಡಿ. ಪೂಜಾರಿಗೆ ಬೆಳ್ಳಿ ಪದಕ
ಕುಂದಾಪುರ (ಸೆ,18): ಸಿದ್ದಾಪುರದ ಸರಸ್ವತಿ ವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಅಂತರ್ ಶಾಲಾ ಮಟ್ಟದ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್-2022 ರಲ್ಲಿ ಶ್ರೀರಾಮ ವಿದ್ಯಾ ಕೇಂದ್ರ ಕೋಡಿ ಇಲ್ಲಿನ ವಿದ್ಯಾರ್ಥಿ ಪ್ರಥಮೇಶ್ ಡಿ.ಪೂಜಾರಿ 400 ಮೀ ಓಟದಲ್ಲಿ ಬೆಳ್ಳಿ ಪದಕ ಪಡೆದಿರುತ್ತಾರೆ. ಇವರು ಕುಂದಾಪುರದ ಕುಂದಾಪುರ ಟ್ರ್ಯಾಕ್ & ಫಿಲ್ಡ್ ಅಥ್ಲೆಟಿಕ್ಸ್ ತರಬೇತಿ ಸಂಸ್ಥೆ ಯ ಶ್ರೀ ಪ್ರಶಾಂತ್ ಶೆಟ್ಟಿಯವರಿಂದ ತರಬೇತಿಯನ್ನು ಪಡೆದಿರುತ್ತಾರೆ.
ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಉತ್ತಮ ಸಾಧನೆ
ಹೆಮ್ಮಾಡಿ(ಸೆ,17): ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಇವರು ಆಯೋಜಿಸಿದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿಯ ವಿದ್ಯಾರ್ಥಿಗಳು ಭಾಗವಹಿಸಿ ವ್ಯಯಕ್ತಿಕ ಸ್ಪರ್ಧಾ ವಿಭಾಗದಲ್ಲಿ ಪ್ರಮುಖವಾಗಿ ಅರೆಬಿಕ್ ಧಾರ್ಮಿಕ ಪಠಣ, ಚಿತ್ರಕಲೆ ಮತ್ತು ಬಣ್ಣ ಹಚ್ಚುವಿಕೆ,ಕನ್ನಡ ಮತ್ತು ಹಿಂದಿ ಭಾಷಣ, ರಂಗೋಲಿ, ಭಾವಗೀತೆ, ಜನಪದ ಗೀತೆ,ಭರತನಾಟ್ಯ, ಚರ್ಚೆ,ಗಝಲ್ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಸಂಸ್ಕ್ರತ ಧಾರ್ಮಿಕ ಪಠಣ ಹಾಗೂ ಮಿಮಿಕ್ರಿಯಲ್ಲಿ […]










