ಕುಂದಾಪುರ( ಅ,10): 2022-23ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಚೆಸ್ ಪಂದ್ಯಾವಳಿಯು ಅಕ್ಟೋಬರ್ 7 ಮತ್ತು 8 ರಂದು ಶ್ರೀ ಬಸವೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜು ಬಿಡದಿ ರಾಮನಗರ ಜಿಲ್ಲೆಯಲ್ಲಿ ನಡೆದಿದ್ದು ಕುಂದಾಪುರ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಮಾನಸ ದೇವಾಡಿಗ ಮತ್ತು ನಿಹಾಲ್ ಎನ್ ಶೆಟ್ಟಿ ಉಡುಪಿ ಜಿಲ್ಲೆಯನ್ನು ರಾಜ್ಯಮಟ್ಟದಲ್ಲಿ ಪ್ರತಿನಿಧಿಸಿ ದ್ವಿತೀಯ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ತಾಲೂಕು ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾದ ಸರ್ವ ಜಿಷ್ಟು
ಕುಂದಾಪುರ(ಅ,10): ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮಾಸೆಬೈಲು ಇವರ ಜಂಟಿ ಆಯೋಜನೆಯಲ್ಲಿ ನಡೆದ ಪ್ರಾಥಮಿಕ ಶಾಲಾ ಮಟ್ಟದ ಹಾಲಾಡಿ ಸಂಯೋಜಕ ವೃತ್ತ ಮಟ್ಟದ ಕ್ರೀಡಾಕೂಟದಲ್ಲಿ ಎಕ್ಸಲೆಂಟ್ ಶಾಲೆ ಹಾಗೂ ಕುಂದಾಪುರ ಟ್ರಾಕ್ & ಫೀಲ್ಡ್ ಅಥ್ಲೆಟಿಕ್ ತರಬೇತಿ ಸಂಸ್ಥೆಯ ವಿದ್ಯಾರ್ಥಿ ಸರ್ವ ಜಿಷ್ಟು ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾರೆ.
ಸರಸ್ವತಿ ವಿದ್ಯಾಲಯ ಗಂಗೊಳ್ಳಿ: ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ
ಗಂಗೊಳ್ಳಿ(ಅ,8): ಎನ್ಎಸ್ಎಸ್ ಶಿಬಿರದಲ್ಲಿ ಕಲಿತ ಮೌಲಿಕವಾದ ಅಂಶಗಳನ್ನು ತಮ್ಮ ಜೀವನದಲ್ಲಿ ವಿದ್ಯಾರ್ಥಿಗಳು ಅಳವಡಿಸಿಕೊಳ್ಳುವುದರ ಮೂಲಕ ವ್ಯಕ್ತಿತ್ವವನ್ನು ಸದೃಢಗೊಳಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲರು ,ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಶ್ರೀ ಚೇತನ್ ಶೆಟ್ಟಿ ಕೋವಾಡಿ ಅವರು ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಹಮ್ಮಿಕೊಂಡಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ […]
ಅಕ್ಷಯ ಹೆಗ್ಡೆ ಮೊಳಹಳ್ಳಿಯವರಿಗೆ ಸನ್ಮಾನ
ಹೆಬ್ರಿ (ಅ,8): ಇತ್ತೀಚೆಗೆ ಹೆಬ್ರಿ ಸಮೀಪದ ಹೊರ್ಲಾಳಿಯಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರೂಪಕ,ಮಲ್ಟಿಪಲ್ ಯಂಗ್ ಲಯನ್ ಆ್ಯಂಡ್ ಸ್ಟಾರ್ ಲಯನ್ ಆವಾರ್ಡ್ ,ಇಂಟರ್ನ್ಯಾಷನಲ್ ಲಯನ್ಸ್ ಲೀಡರ್ ಶಿಪ್ ಅವಾರ್ಡ್ , ರಾಷ್ಟ್ರೀಯ ರತ್ನ ಸೇರಿದಂತೆ ಹಲವು ಪ್ರಶಸ್ತಿಗೆ ಭಾಜನರಾದ ಉಪನ್ಯಾಸಕ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ, ಯುವ ವಾಗ್ಮಿ ,ಸಂಘಟಕ,ಹತ್ತು ಹಲವು ಸಂಘಟನೆಗಳ ಅಧ್ಯಕ್ಷರಾಗಿ, ತಾಲೂಕು ,ಜಿಲ್ಲಾಧ್ಯಕ್ಷರಾಗಿ, ರಾಜ್ಯ ಸಮಿತಿ ಸದಸ್ಯರಾಗಿ ಕಾರ್ಯ ನಿರ್ವಹಿಸಿರುವ, ಕಲೆ, ಕ್ರೀಡೆ, ಸಾಮಾಜಿಕ ,ಧಾರ್ಮಿಕ ಮತ್ತು […]
ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ
ಗಂಗೊಳ್ಳಿ (ಅ,8): ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಇವರ ವತಿಯಿಂದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ನನ್ನ ಜೀವನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರಭಾವ ಈ ವಿಷಯದ ಕುರಿತಂತೆ ವಿದ್ಯಾರ್ಥಿಗಳು A4 ಅಳತೆಯ ಕಾಗದದಲ್ಲಿ ಮೂರು ಪುಟಗಳಿಗೆ ಮೀರದಂತೆ ಕಾಗದದ ಒಂದೇ ಮಗ್ಗುಲಿನಲ್ಲಿ ಕನ್ನಡದ ಹಸ್ತಾಕ್ಷರದಲ್ಲಿ ಬರೆದು ಕಳುಹಿಸಬೇಕು. ಪ್ರಥಮ ದ್ವಿತೀಯ ಮತ್ತು ತೃತೀಯ ಬಹುಮಾನಗಳಿದ್ದು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಡಿಜಿಟಲ್ […]
ಕುಸ್ತಿ ಪಂದ್ಯಾಟದಲ್ಲಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ(ಅ.9): ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಭಂಡಾರ್ಕಾರ್ಸ್ ಪದವಿಪೂರ್ವ ಕಾಲೇಜು ಕುಂದಾಪುರ ಇವರಸಂಯುಕ್ತ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು 61 ಕೆ.ಜಿ ವಿಭಾಗದಲ್ಲಿ ನಿಶ್ಚಲ್ ಫಿಲಿಪ್ ಬೆಳ್ಳಿ ಪದಕ, 65 ಕೆ.ಜಿ ವಿಭಾಗದಲ್ಲಿ ಕ್ರಮವಾಗಿ ಅನುಲ್ ಚಿನ್ನದ ಪದಕ ಹಾಗೂ ಡೆನ್ಜಿಲ್ ಡಯಸ್ ಬೆಳ್ಳಿಯ ಪದಕ, 70ಕೆ.ಜಿ ಮೇಲ್ಪಟ್ಟ ವಿಭಾಗದಲ್ಲಿ ಸೂರಜ್ ಡಯಾಸ್ ಕಂಚಿನ ಪದಕ, 79 […]
ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಗಾಂಧಿ-ಶಾಸ್ತ್ರಿ ಜಯಂತಿ
ಕಾರ್ಕಳ(ಅ.07): ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಮತ್ತು ದೇಶದ ದ್ವಿತೀಯ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಅ.02 ರಂದು ಆಚರಿಸಲಾಯಿತು. ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಮಾತನಾಡಿ ಇಂದು ಗಾಂಧೀಜಿಯವರ ಸಾಮರಸ್ಯ ಚಿಂತನೆ ಜೀವನದ ಆದರ್ಶ ನಮಗೆ ದಾರಿದೀಪವಾಗಬೇಕಿದೆ ಮತ್ತು ದೇಶ ಕಂಡ ಅಪ್ರತಿಮ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ “ಜೈ ಜವಾನ್ ಜೈ ಕಿಸಾನ್” ಘೋಷಣೆ ಹಾಗೂ ಪ್ರಬುದ್ಧತೆಯನ್ನು ಯುವಜನತೆ ಅರಿತು […]
ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್ ಶಾಲೆಯಲ್ಲಿ ಗಾಂಧಿ & ಶಾಸ್ತ್ರಿಜಿ ಜಯಂತಿ
ಕುಂದಾಪುರ (ಅ,7) : ಕುಂದಾಪುರದ ಪ್ರತಿಷ್ಠಿತ ವಿದ್ಯಾಸಂಸ್ಥೆ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚರ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಉಪ ಪ್ರಾಂಶುಪಾಲೆ ಹಾಗೂ ಹೈಸ್ಕೂಲ್ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶುಭಾ ಕೆ. ಎನ್ ಮತ್ತು ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ, ಮಹಾತ್ಮರ ಭಾವಚಿತ್ರಕ್ಕೆ […]
ನಮ್ಮ ನಡಿಗೆ ಗ್ರಾಮದೆಡೆಗೆ-ಸ್ವಾತಂತ್ರ್ಯಹೋರಾಟಗಾರರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ “ಹೊಂಬೆಳಕು”
ಕುಂದಾಪುರ (ಅ.05) : ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಸ್ವರಾಜ್ಯ 75 ಸಂಘಟನೆಯ ಸಹಭಾಗಿತ್ವದಲ್ಲಿ ಸ್ವಾತಂತ್ರ್ಯಹೋರಾಟಗಾರ ತಲ್ಲೂರು ಎಸ್.ಎನ್. ಸುಬ್ಬಣ್ಣ ಗುಪ್ತ ಅವರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ ಅ.02 ರಂದು ನಡೆಯಿತು. ರಾಷ್ಟ್ರ ಧ್ವಜಕ್ಕೆ ಪುಪ್ಪಾರ್ಚನೆಯ ಮೂಲಕ ತಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭೀಮವ್ವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಶ್ವದಾಖಲೆಯ ಯೋಗಪಟು ತಲ್ಲೂರು ನಿರಂಜನ ಶೆಟ್ಟಿ ನಾಮಫಲಕ […]
ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಮತ್ತು ಶಾಸ್ತ್ರೀ ಜಯಂತಿ ಆಚರಣೆ
ಕುಂದಾಪುರ (ಅ.04):ಗಾಂಧಿ ಮತ್ತು ಶಾಸ್ತ್ರೀ ಇಬ್ಬರು ರಾಷ್ಟ್ರ ನಾಯಕರ ನಾಯಕತ್ವದ ಗುಣಗಳು ಮತ್ತು ದೇಶದ ಬಗೆಗಿನ ಕಾಳಜಿ ಅವರ ಬಗ್ಗೆ ನಮ್ಮ ವೈಯುಕ್ತಿಕ ಒಲವು-ನಿಲುವುಗಳನ್ನು ಮೀರಿ ನಿಲ್ಲುತ್ತವೆ.ಈ ನಿಟ್ಟಿನಲ್ಲಿ ಮಹಾತ್ಮಾ ಗಾಂಧೀ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಯವರನ್ನು ನಾವೆಲ್ಲರೂ ಸದಾ ನೆನಪಿಸಿಕೊಳ್ಳಬೇಕು” ಎಂದು ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ ಶೆಟ್ಟಿಯವರು ತಿಳಿಸಿದರು. ಗಾಂಧೀಜಿ- ಶಾಸ್ತ್ರೀಜಿ ಜಯಂತಿಯ ಅಂಗವಾಗಿ ಇಬ್ಬರೂ ಮಹಾನ್ […]










