ಕುಂದಾಪುರ( ಜೂ,11): ಎಸ್. ಎಸ್. ಎಲ್. ಸಿ. ೨೦೨೨ರ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಅನಿರುದ್ಧ ಎಸ್. ಹತ್ವಾರ್ 624 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ, ಆದಿತ್ಯ ಎಮ್. 623 ಅಂಕದೊoದಿಗೆ ರಾಜ್ಯಕ್ಕೆ ತೃತೀಯ ಸ್ಥಾನ ಮತ್ತು ಶಾನ್ವಿನ್ ರೋಯ್ಸ್ ಪಿರೇರಾ 620 ಅಂಕ ಗಳಿಸುವುದರೊಂದಿಗೆ ಶಾಲೆಗೆ ಕೀರ್ತಿ ತಂದಿರುತ್ತಾರೆ. ಈ ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕರಾದ ಶ್ರೀ ಬಿ. […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಎಚ್.ಎಮ್.ಎಮ್. ವಿ.ಕೆ.ಆರ್ :ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ
ಕುಂದಾಪುರ(ಜೂ,11): ವಿದ್ಯಾರ್ಥಿ ದೆಸೆಯಿಂದಲೇ ನಾಯಕತ್ವ ಗುಣವನ್ನು ಬೆಳೆಸಿಕೊಂಡಲ್ಲಿ ಭವಿಷ್ಯದಲ್ಲಿ ಭವ್ಯ ಭಾರತದ ನಿರ್ಮಾಣ ಸಾಧ್ಯ. ವಿದ್ಯಾರ್ಥಿ ಸಂಸತ್ತಿನ ಆಡಳಿತ ಪಕ್ಷದ ಸದಸ್ಯರು ಮತ್ತು ವಿರೋಧ ಪಕ್ಷದ ಸದಸ್ಯರು ಜೊತೆಜೊತೆಯಾಗಿ ಕೈಜೋಡಿಸಿದಲ್ಲಿ ಶಾಲಾ ಸಂಸತ್ತು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಬಲ್ಲದು ಎಂದು ಕುಂದಾಪುರದ ಪುರಸಭೆಯ ಅಧ್ಯಕ್ಷರಾದ ವೀಣಾ ಭಾಸ್ಕರ ಮೆಂಡನ್ ಹೇಳಿದರು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿ ಅಧ್ಯಕ್ಷತೆಯ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ […]
ಪಡು ಗೋಪಾಡಿ ಕಿರಿಯ ಪ್ರಾಥಮಿಕ ಶಾಲೆಗೆಅಗತ್ಯ ವಸ್ತುಗಳ ವಿತರಣೆ
ಗೋಪಾಡಿ(ಜೂ,11): ಗೋಪಾಡಿ ಪಡು ಶಾಲೆಗೆಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸುರೇಂದ್ರ ಕಾಂಚನ್ ಅವರ ಮನವಿಯ ಮೇರೆಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಡುಗೋಪಾಡಿ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ಅಗತ್ಯ ವಸ್ತುವಾದ ಬಟ್ಟಲು ಮತ್ತು ಲೋಟವನ್ನು ಹೋಟೆಲ್ ಉಡುಪಿ ರೆಸ್ಟೋರೆಂಟ್ ಕೊಲ್ಲಾಪುರ ಶಿರೋಲಿ ಉದ್ಯಮಿಯಾದ ಶ್ರೀಮತಿ ಸುನಿತಾ ಪ್ರಕಾಶ್ ಕೋಟೇಶ್ವರ ಮೇಪು ಇವರು ವಿತರಿಸಿದರು. ಈ ಸಂಧರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ ಶೆಟ್ಟಿ, ಗೋಪಾಡಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸರೋಜ ಪೂಜಾರಿ, […]
ಗಂಗೊಳ್ಳಿ: ಬಿಲ್ಲವ ಹಿತರಕ್ಷಣಾ ವೇದಿಕೆಯಿಂದ ಪುಸ್ತಕ ವಿತರಣಾ ಕಾರ್ಯಕ್ರಮ
ಗಂಗೊಳ್ಳಿ (ಜೂ,11):ಶೈಕ್ಷಣಿಕ ಬೆಳವಣಿಗೆಯಿಂದ ಒಂದು ಸಮುದಾಯದ ಅಭಿವೃದ್ಧಿ ಸಾಧ್ಯವಾಗುತ್ತದೆ ಆ ನಿಟ್ಟಿನಲ್ಲಿ ಪೂರಕವಾಗಿ ಸಂಘಟನೆಗಳು ಶ್ರಮಿಸುತ್ತಿರುವುದು ಅಭಿನಂದನೀಯ ಸಂಗತಿ ಎಂದು ನಿವೃತ್ತ ಬಿಎಸ್ಎನ್ಎಲ್ ಇಂಜಿನಿಯರ್ ಅಣ್ಣಪ್ಪ ಬಿಲ್ಲವ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ಶ್ರೀ ಸೀತಾಳಿ ನವದುರ್ಗೆ ಅಮ್ಮನವರ ದೇವಸ್ಥಾನದ ವಠಾರದಲ್ಲಿ ನಡೆದ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸೀತಾಳಿ ನವದುರ್ಗೆ ಅಮ್ಮನವರ ದೇವಸ್ಥಾನದ ಪಾತ್ರಿ ಗಳಾದ ರಘು ಪೂಜಾರಿ, […]
ಸರಸ್ವತಿ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಆರಂಭೋತ್ಸವ
ಗಂಗೊಳ್ಳಿ (ಜೂ,11) : ಜ್ಞಾನಾರ್ಜನೆ ವಿದ್ಯಾರ್ಥಿಗಳ ಪ್ರಮುಖ ಗುರಿಯಾಗಬೇಕು. ಆ ನಿಟ್ಟಿನಲ್ಲಿ ಶ್ರದ್ಧೆ ಪ್ರಮಾಣಿಕತೆ ಛಲದೊಂದಿಗೆ ಸಾಗಿದಾಗ ಜೀವನದಲ್ಲಿ ಅದ್ಭುತ ಯಶಸ್ಸನ್ನು ಕಾಣಲು ಸಾಧ್ಯ ಎಂದು ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಷಿಯೆಷನ್ ಕಾರ್ಯದರ್ಶಿ ಹೆಚ್.ಗಣೇಶ್ ಕಾಮತ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ತರಗತಿಗಳ ಆರಂಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಸಂಸ್ಕøತ ಉಪನ್ಯಾಸಕ ವೆಂಕಟೇಶ ಮೂರ್ತಿ ಎನ್.ಸಿ. ಕಾಲೇಜಿನ ಶಿಸ್ತು ನೀತಿ ನಿಯಮಗಳ […]
ಶಿರ್ವ: ರೋವರ್ಸ & ರೇಂಜರ್ಸ್ ಪುನಶ್ಚೇತನಾ ಶಿಬಿರ
ಶಿರ್ವ(ಜೂ, 11): ಸಂತ ಮೇರಿ ಕಾಲೇಜು ಶಿರ್ವ ಇದರ ರೋವರ್ಸ & ರೇಂಜರ್ಸ್ ಘಟಕದ ವತಿಯಿಂದ ಕಾಲೇಜಿನ ರೋವರ್ಸ & ರೇಂಜರ್ಸ್ ಗಳಿಗೆ ಒಂದು ದಿನದ ಪುನಶ್ಚೇತನಾ ಶಿಬಿರವನ್ನು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ಶಿಬಿರಕ್ಕೆ ಮುಖ್ಯ ಅತಿಥಿಯಾಗಿ ಸಹಾಯಕ ರಾಜ್ಯ ಸಂಘಟನಾ ಆಯುಕ್ತರಾದ ಶ್ರೀಮತಿ ಸುಮನ ಶೇಖರ್ ಆಗಮಿಸಿ, ಕಾಲೇಜಿನಲ್ಲಿ ರೋವರ್ಸ & ರೇಂಜರ್ಸ್ ಮಹತ್ವ ಹಾಗೂ ರೋವರ್ಸ & ರೇಂಜರ್ಸ್ ಗಳಿಗೆ ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸಲು ಬೇಕಾದ ಮಾರ್ಗದರ್ಶನ […]
ಹೆಸಕುತ್ತೂರು : ಯಕ್ಷಗಾನ ಹೆಜ್ಜೆ ತರಗತಿ ಉದ್ಘಾಟನೆ
ತೆಕ್ಕಟ್ಟೆ (ಜೂ ,11): ಯಕ್ಷಗಾನ ಕಲೆಯನ್ನು ಪ್ರಾಥಮಿಕ ಶಿಕ್ಷಣದ ಹಂತದಲ್ಲಿಯೇ ಕಲಿಯುವ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಮುಂದೆ ಯಕ್ಷಗಾನದ ದೊಡ್ಡ ಕಲಾವಿದರಾಗದಿದ್ದರೂ, ಯಕ್ಷಗಾನದ ಅಭಿಮಾನಿಗಳಾಗಿ ಈ ಕಲೆಯನ್ನು ಉಳಿಸಿ ಬೆಳೆಸಿ” ಎಂದು ಯಕ್ಷಗಾನ ಕ್ಷೇತ್ರದ ಪ್ರಸಿದ್ಧ ಹಾಸ್ಯ ಕಲಾವಿದ ಶ್ರೀ ಹಳ್ಳಾಡಿ ಜಯರಾಮ ಶೆಟ್ಟಿ ಹೇಳಿದರು. ಅವರು ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಯಕ್ಷಗಾನದ ಹೆಜ್ಜೆ ತರಗತಿಯನ್ನು ಉದ್ಘಾಟಿಸಿ ಮಾತನಾಡಿದರು. ಶಾಲಾ ಮುಖ್ಯ ಶಿಕ್ಷಕರಾದ ಶೇಖರ ಕುಮಾರ ಅಧ್ಯಕ್ಷತೆ ವಹಿಸಿದ್ದರು. […]
ಡಾ.ಬಿ.ಬಿ.ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ
ಕುಂದಾಪುರ (ಜೂ,10): ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2021-22 ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಮೇ,27ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆಯಿತು. ಬೈಂದೂರು ಶಾಸಕ ,ಕುಂದಾಪುರ ಎಜುಕೇಶನ್ ಸೊಸೈಟಿ (ರಿ) ಇದರ ಅಧ್ಯಕ್ಷರಾದ ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರು ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಶೈಕ್ಷಣಿಕ ,ಸಾಹಿತ್ಯ ,ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಡಾ.ಬಿ.ಬಿ.ಹೆಗ್ಡೆ ಕಾಲೇಜು ಸರ್ವತೋಮುಖ ಬೆಳವಣಿಗೆಯನ್ನು ಕಾಣುತ್ತಿದ್ದು ,ವಿದ್ಯಾರ್ಥಿಗಳ ಕಲಿಕಾ ಆಸಕ್ತಿಗೆ ಪೂರಕವಾದ ಅವಕಾಶವನ್ನು ಸಂಸ್ಥೆ ಕಲ್ಪಿಸುತ್ತಿದೆ […]
ಡಾ.ಬಿ.ಬಿ.ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಸಂಪನ್ನ
ಕುಂದಾಪುರ (ಜೂ,10):. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2021-22 ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಮೇ,27ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ಸಂಪನ್ನಗೊಂಡಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಕೆ ಉಮೇಶ್ ಶೆಟ್ಟಿ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಾರ್ಷಿಕ ಕ್ರೀಡಾಕೂಟದಲ್ಲಿನ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯನ್ನು ಶ್ಲಾಘಿಸಿದರು. ಮುಖ್ಯ ಅತಿಥಿಗಳಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕುಂದಾಪುರದ ನಿರ್ದೇಶಕರಾದ ಶ್ರೀ ಕುಸುಮಾಕರ ಶೆಟ್ಟಿ ,ಸಂಚಲನ ಗ್ರೂಪ್ ಕುಂದಾಪುರದ ಅಧ್ಯಕರಾದ ಅಕ್ಷತ್ ಶೆಟ್ಟಿ ,ಕಾಲೇಜಿನ ದೈಹಿಕ ಶಿಕ್ಷಣ […]
ಡಾ.ಬಿ.ಬಿ.ಹೆಗ್ಡೆ ಕಾಲೇಜು: ಮೆಗಾ ಕೆರಿಯರ್ ಕೌನ್ಸಿಲಿಂಗ್ ಕಾರ್ಯಕ್ರಮ
ಕುಂದಾಪುರ(ಜೂ,08): ಸಿ.ಎ. ಸಿ ಎಸ್ ಪರೀಕ್ಷೆ ಬರೆಯಲಿಚ್ಚಿಸುವ ವಿದ್ಯಾರ್ಥಿಗಳು ಸಾಕಷ್ಟು ಪೂರ್ವ ಸಿದ್ದತೆ ನಡೆಸಬೇಕು.ನಿರಂತರ ಪರಿಶ್ರಮ ಹಾಗೂ ಸಾಧಿಸುವ ತುಡಿತವಿದ್ದರೆ ಖಂಡಿತವಾಗಿಯೂ ಸಿ.ಎ ಸಿ.ಎಸ್ ಕನಸ್ಸನ್ನು ನನಸಾಗಿಸಿಕೊಳ್ಳಲು ಸಾಧ್ಯ ಎಂದು ಐ ಸಿ ಎ ಐ ಸೆಂಟ್ರಲ್ ಕೌನ್ಸಿಲ್ ಮೆಂಬರ್ ಸಿ.ಎ ಕೋತಾ ಎಸ್ ಶ್ರೀನಿವಾಸ ಹೇಳಿದರು. ಅವರು ಐ ಸಿ ಎ ಐ ಉಡುಪಿ ಶಾಖೆಯ ಎಸ್ ಐ ಆರ್ ಸಿ ಹಾಗೂ ಕಾಲೇಜಿನ ವಾಣಿಜ್ಯ ವಿಭಾಗ ಜೂ,8 […]










