ಪುತ್ತೂರು(ಜ.21): ಮಾನವನ ಪಾಲಿಗೆ ರಕ್ತ ಜೀವದ್ರವ, ರಕ್ತದಾನದ ಕುರಿತು ಅರಿವು ಅತ್ಯವಶ್ಯಕ ಎಂದು ಪುತ್ತೂರಿನ ರೋಟರಿ-ಕ್ಯಾಂಪ್ಕೋ ಬ್ಲಡ್ ಬ್ಯಾಂಕಿನ ವೈದ್ಯಾಧಿಕಾರಿ ಡಾ.ರಾಮಚಂದ್ರ ಭಟ್.ಕೆ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಯೂತ್ ರೆಡ್ಕ್ರಾಸ್ ಘಟಕ ಮತ್ತು ರೋಟರಿ ಕ್ಲಬ್ ಪುತ್ತೂರು ನಗರ ಇದರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ಏರ್ಪಡಿಸಿದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತಾಡಿದರು. ಕಾಯಿಲೆ, ಶಸ್ತ್ರಚಿಕಿತ್ಸೆ, ಅಪಘಾತಗಳ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಡಾ.ಬಿ.ಬಿ. ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಂದ ವಂಡ್ಸೆ ಎಸ್ಎಲ್ಆರ್ಎಂ ಘಟಕಕ್ಕೆ ಭೇಟಿ
ಕುಂದಾಪುರ (ಜ.21): ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿಗಳು ವಂಡ್ಸೆ ಗ್ರಾಮ ಪಂಚಾಯತ್ನ ಘನ ಮತ್ತು ದ್ರವ ತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದರು. ವಿಸ್ತರಣಾ ಚಟುವಟಿಕೆಯ ಅಂಗವಾಗಿ ಭೇಟಿ ನೀಡಿದ ವಿದ್ಯಾರ್ಥಿಗಳು, ತ್ಯಾಜ್ಯ ನಿರ್ವಹಣೆಯ ಕುರಿತಂತೆ ಸಂಪೂರ್ಣ ಮಾಹಿತಿಗಳನ್ನು ಪಡೆದರು. ಭೇಟಿಯ ಸಂದರ್ಭದಲ್ಲಿ ರಾಜ್ಯದಲ್ಲಿಯೇ ಮಾದರಿತ್ಯಾಜ್ಯ ನಿರ್ವಹಣಾ ಘಟಕವಾಗಿ ರೂಪಿಸಿದ ರೂವಾರಿಗಳು, ವಂಡ್ಸೆ ಗ್ರಾಮ ಪಂಚಾಯತ್ನ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ ಅಡಿಕೆಕೋಡ್ಲು ಅವರು ಉಪಸ್ಥಿತರಿದ್ದು […]
ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ
ಗಂಗೊಳ್ಳಿ(ಜ.20): ವಿವೇಕಾನಂದರ ಚಿಂತನೆಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಹೊಂದಿರುವಂಥವು. ಅವರ ಜೀವನವನ್ನು ಅಭ್ಯಸಿಸುವುದರ ಜೊತೆಗೆ ಅಂತಹ ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರತಿಯೊಬ್ಬರೂ ಪ್ರಯತ್ನಿಸಿದಾಗ ಜೀವನವು ಸಾರ್ಥಕವಾಗಲು ಸಾಧ್ಯ ಎಂದು ಜೆ.ಸಿ ರಾಷ್ಟ್ರೀಯ ತರಬೇತುದಾರರಾದ ಕೆ.ಕೆ ಶಿವರಾಮ ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. […]
ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ: ಸಿಎಸ್ ಪರೀಕ್ಷೆಯಲ್ಲಿ ಶ್ರೇಷ್ಠ ಸಾಧನೆ
ಕುಂದಾಪುರ(ಜ.20): ಇಲ್ಲಿನ ಕುಂದೇಶ್ವರ ರಸ್ತೆಯ ಸಿರಿ ಬಿಲ್ಡಿಂಗ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಸಿಎ/ಸಿಎಸ್ ಮತ್ತು ಬ್ಯಾಂಕಿಂಗ್ ತರಬೇತಿ ಸಂಸ್ಥೆ (ಸ್ಪೇಸ್) ಇದರ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ಜನವರಿ 2022 ರಲ್ಲಿ ನಡೆಸಿದ ಸಿಎಸ್ ಫೌಂಡೇಶನ್ (ಸಿಎಸ್ಇಇಟಿ) ಪರೀಕ್ಷೆ ಬರೆದ 6 ವಿದ್ಯಾರ್ಥಿಗಳಲ್ಲಿ 5 ವಿದ್ಯಾರ್ಥಿಗಳು ತೇರ್ಗಡೆ ಹೊಂದುವುದರ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಮಿಥುನ್ ಪೂಜಾರಿ […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಕ್ಯಾಂಪಸ್ ಸಂದರ್ಶನ
ಶಿರ್ವ(ಜ.17): ಮಂಗಳೂರಿನ ಪ್ರತಿಷ್ಠಿತ ದಿಯಾ ಸಿಸ್ಟಮ್ ಸಂಸ್ಥೆ(ಗ್ಲೋಟಚ್ ಟೆಕ್ನಾಲಜೀಸ್) ಯು ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನ ಈಗಾಗಲೇ ಬಿಸಿಎ, ಬಿಎಸ್ಸಿ (ಸಿ.ಎಸ್),ಬಿಇ(ಸಿವಿಲ್ ಮತ್ತು ಮೆಕಾನಿಕಲ್ ಹೊರತುಪಡಿಸಿ), ಬಿಕಾಂ( ಕಂಪ್ಯೂಟರ್ ಅಪ್ಲಿಕೇಶನ್), ಡಿಪ್ಲೋಮಾ(ಸಿಎಸ್),ಎಂಎಸ್ಸಿ (ಸಿಎಸ್), ಎಂಸಿಎ ಮುಗಿಸಿಕೊಂಡಿರುವ ಅಭ್ಯರ್ಥಿಗಳಿಗೆ ಶಿರ್ವ ಸಂತ ಮೇರಿ ಕಾಲೇಜಿನ ಗಣಕ ವಿಜ್ಞಾನ ವಿಭಾಗ,ವೃತ್ತಿ ಸಮಾಲೋಚನೆ ಮತ್ತು ನಿಯೋಜನೆ ಕೋಶ ವತಿಯಿಂದ ಜನವರಿ 13 ರಂದು ಕಾಲೇಜಿನ ಫಾ. ಹೆನ್ರಿ ಕ್ಯಾಸ್ಟಲಿನೊ ಸಭಾಂಗಣದಲ್ಲಿ ನಡೆಯಿತು. ಇದು ಸ್ಪರ್ಧಾತ್ಮಕ ಯುಗ […]
ಶಿರ್ವ ಸಂತ ಮೇರಿ ಕಾಲೇಜಿನಲ್ಲಿ 74ನೇ ಸೇನಾ ದಿನಾಚರಣೆ
ಶಿರ್ವ(ಜ.17): ರಾಷ್ಟ್ರದ ಭದ್ರತೆಯನ್ನು ಕಾಪಾಡುವುದು ಪ್ರತಿಯೊಬ್ಬ ಯುವ ನಾಗರಿಕನ ಕರ್ತವ್ಯವಾಗಿದೆ. ರಾಷ್ಟ್ರೀಯ ಆಸ್ತಿಗಳು, ನೈಸರ್ಗಿಕ ಸಂಪನ್ಮೂಲಗಳು, ಕಾನೂನು ಮತ್ತು ಸುವ್ಯವಸ್ಥೆಯನ್ನು ರಕ್ಷಿಸಲು ಇಂದು ನಾವು ಸಶಸ್ತ್ರ ಪಡೆಗಳನ್ನು ಹೆಚ್ಚಿಸಬೇಕಾಗಿದೆ. ಸೇನೆ ತನ್ನ ನೆಲೆಯಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಪ್ರಜೆಗಳು ಮತ್ತು ಸರ್ಕಾರ ತಮ್ಮ ಸಂಪೂರ್ಣ ಸಹಕಾರವನ್ನು ನೀಡಿ ರಾಷ್ಟ್ರದ ಪ್ರಗತಿಗೆ ಕೈಜೋಡಿಸಬೇಕಾಗಿರುವುದು ಇಂದು ಅತಿ ಅಗತ್ಯವಾಗಿದೆ ಎಂದು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಕಾಲೇಜಿನ ಎನ್.ಸಿ.ಸಿ ಭೂಯುವ ಸೇನಾ ದಳದಿಂದ […]
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶೇಡಿಮನೆ:ವಿವೇಕಾನಂದ ಜಯಂತಿಯ ಪ್ರಯುಕ್ತ ಪುಸ್ತಕ ಕೊಡುಗೆ
ಆಜ್ರಿ(ಜ.13): ಕುಂದಾಪುರ ತಾಲೂಕಿನ ಶೇಡಿಮನೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶೇಡಿಮನೆ ಅರಸಮ್ಮಕಾನು ಇಲ್ಲಿನ ಹಳೆ ವಿದ್ಯಾರ್ಥಿಗಳು ಸುಮಾರು ಮುನ್ನೂರಕ್ಕೂ ಹೆಚ್ಚು ಪುಸ್ತಕಗಳನ್ನು ಶಾಲೆಯ ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿದರು .ಜ.12 ರಂದು ನಡೆದ ಸ್ವಾಮಿ ವಿವೇಕಾನಂದ ಜಯಂತಿಯ ಯುವದಿನದ ಈ ಸಂಭ್ರಮದ ರೂವಾರಿ ಹಳೆ ವಿದ್ಯಾರ್ಥಿ ವೆಂಕಟರಮಣ ಪೂಜಾರಿ ಇವರ ನೇತೃತ್ವದಲ್ಲಿ ಪುಸ್ತಕಗಳನ್ನು ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ವಸಂತ ಪೂಜಾರಿ ಯವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. […]
ಸಂತ ಮೇರಿ ಕಾಲೇಜು ಶಿರ್ವ: ರಾಷ್ಟ್ರೀಯ ಯುವ ದಿನಾಚರಣೆ
ಶಿರ್ವ(ಜ.13): ಇಲ್ಲಿನ ಸಂತ ಮೇರಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ರೋವರ್- ರೇಂಜರ್ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದರ 159 ನೇ ಜನ್ಮ ದಿನದ ಅಂಗವಾಗಿ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಜ.12 ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀ ರವಿನಂದನ್ ಭಟ್ ರವರು ಮಾತನಾಡಿ ಸ್ವಾಮಿ ವಿವೇಕಾನಂದರು ಯುವ ಸಮುದಾಯದ ಆದರ್ಶ, ಅವರ […]
ಡಾ.ಬಿ. ಬಿ. ಹೆಗ್ಡೆ ಕಾಲೇಜು: ಎನ್ಎಸ್ಎಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ(ಜ.13): ಡಾ.ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆಯನ್ನು ಎನ್.ಎಸ್.ಎಸ್ ಉಡುಪಿ ಜಿಲ್ಲಾ ನೋಡಲ್ ಅಧಿಕಾರಿ ಶ್ರೀ ಪ್ರವೀಣ್ ಶೆಟ್ಟಿಯವರು ಜ.12 ರಂದು ನೆರವೆರಿಸಿದರು. ಉದ್ಘಾಟನಾ ನೆಲೆಯ ಮಾತುಗಳನ್ನಾಡಿ ಅವರು ಎನ್.ಎಸ್.ಎಸ್ ನ ಮಹತ್ವ ಹಾಗೂ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಎನ್.ಎಸ್.ಎಸ್ ನ ಪಾತ್ರದ ಕುರಿತು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿ ತನ್ನ ಎನ್.ಎಸ್.ಎಸ್ ಅನುಭವವನ್ನು ಹಂಚಿಕೊಂಡರು. […]
ಡಾ.ಬಿ. ಬಿ. ಹೆಗ್ಡೆ ಕಾಲೇಜು : ರಾಷ್ಟ್ರೀಯ ಯುವ ದಿನಾಚರಣೆ
ಕುಂದಾಪುರ(ಜ.13): ಡಾ.ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕದ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮ ದಿನದ ಅಂಗವಾಗಿ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಜ.12 ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.ಎನ್.ಎಸ್.ಎಸ್ ಉಡುಪಿ ಜಿಲ್ಲಾ ನೋಡಲ್ ಅಧಿಕಾರಿ ಶ್ರೀ ಪ್ರವೀಣ್ ಶೆಟ್ಟಿಯವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ದೇಶ ನಿರ್ಮಾಣದಲ್ಲಿ ಎನ್.ಎಸ್.ಎಸ್.ನ ಪಾತ್ರ ಹಾಗೂ ಸ್ವಾಮಿ ವಿವೇಕಾನಂದರ ತತ್ವಾದರ್ಶವನ್ನು ವಿದ್ಯಾರ್ಥಿಗಳು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ […]










