ಕುಂದಾಪುರ(ಜ.13): ಡಾ.ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆಯನ್ನು ಎನ್.ಎಸ್.ಎಸ್ ಉಡುಪಿ ಜಿಲ್ಲಾ ನೋಡಲ್ ಅಧಿಕಾರಿ ಶ್ರೀ ಪ್ರವೀಣ್ ಶೆಟ್ಟಿಯವರು ಜ.12 ರಂದು ನೆರವೆರಿಸಿದರು. ಉದ್ಘಾಟನಾ ನೆಲೆಯ ಮಾತುಗಳನ್ನಾಡಿ ಅವರು ಎನ್.ಎಸ್.ಎಸ್ ನ ಮಹತ್ವ ಹಾಗೂ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಎನ್.ಎಸ್.ಎಸ್ ನ ಪಾತ್ರದ ಕುರಿತು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿ ತನ್ನ ಎನ್.ಎಸ್.ಎಸ್ ಅನುಭವವನ್ನು ಹಂಚಿಕೊಂಡರು. […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಡಾ.ಬಿ. ಬಿ. ಹೆಗ್ಡೆ ಕಾಲೇಜು : ರಾಷ್ಟ್ರೀಯ ಯುವ ದಿನಾಚರಣೆ
ಕುಂದಾಪುರ(ಜ.13): ಡಾ.ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕದ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮ ದಿನದ ಅಂಗವಾಗಿ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಜ.12 ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.ಎನ್.ಎಸ್.ಎಸ್ ಉಡುಪಿ ಜಿಲ್ಲಾ ನೋಡಲ್ ಅಧಿಕಾರಿ ಶ್ರೀ ಪ್ರವೀಣ್ ಶೆಟ್ಟಿಯವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ದೇಶ ನಿರ್ಮಾಣದಲ್ಲಿ ಎನ್.ಎಸ್.ಎಸ್.ನ ಪಾತ್ರ ಹಾಗೂ ಸ್ವಾಮಿ ವಿವೇಕಾನಂದರ ತತ್ವಾದರ್ಶವನ್ನು ವಿದ್ಯಾರ್ಥಿಗಳು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ […]
ನಿವೇದಿತಾ ಪ್ರೌಢಶಾಲೆ ಬಸ್ರೂರು: ಕೋವಿಡ್ ಲಸಿಕಾಕರಣ ಅಭಿಯಾನ
ಬಸ್ರೂರು (ಜ.10): ಇಲ್ಲಿನ ನಿವೇದಿತಾ ಪ್ರೌಢಶಾಲೆಯಲ್ಲಿ 5 ರಿಂದ 18 ರವರೆಗಿನ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕಾಕರಣ ಅಭಿಯಾನ ಪ್ರಾಥವಿುಕ ಆರೋಗ್ಯ ಕೇಂದ್ರ ಬಸ್ರೂರು ಇವರ ಸಹಕಾರದಿಂದ ಜ.10 ರಂದು ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಸಂಚಾಲಕ ಶ್ರೀ.ಬಿ ಅಪ್ಪಣ್ಣ ಹೆಗ್ಡೆಯವರು ನೆರವೇರಿಸಿದರು. ಸಭೆಯ ಅಧ್ಯಕ್ಷತೆಯನ್ನು ಬಸ್ರೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಇಂದಿರಾ ಪೂಜಾರಿಯವರು ವಹಿಸಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳಾದ ಡಾ. ವಿದ್ಯಾರವರು ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಶಾಲಾ […]
ಮಣೂರು ಸರಕಾರಿ ಸಂಯುಕ್ತ ಫ್ರೌಢಶಾಲೆ:ಉಚಿತ ಪೊಲ್ಡ್ ಸ್ಕೋಪ್ ವಿತರಣೆ ಮತ್ತು ಬಳಕೆ ಕುರಿತು ಕಾರ್ಯಗಾರ
ಕೋಟ(ಜ.8): ಇಲ್ಲಿನ ಮಣೂರು ಸರಕಾರಿ ಸಂಯುಕ್ತ ಫ್ರೌಢಶಾಲೆಯ 6ನೆ ತರಗತಿಯ ವಿದ್ಯಾರ್ಥಿಗಳಿಗೆ ಗೀತಾನಂದ ಫೌಂಡೇಶನ್ ಮಣೂರು ಪಡುಕರೆ, ಸ್ಟ್ಯಾನಪೊರ್ಡ್ ಯುನಿವರ್ಸಿಟಿ ಯು ಎಸ್ ಎ, ಪೊಲ್ಡ್ ಸ್ಕೋಪ್ ಇನ್ಸ್ಟ್ರುಮೆಂಟ್ಸ್ ಸಂಸ್ಥೆ, ದಯಾಲಾಬಾಗ್ ಎ್ಯಜುಕೇಶನ್ ಇನ್ಸ್ಟಿಟ್ಯೂಟ್ ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಲ್ಲಿ ಕಲಿಕಾಸಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರಳ ಮ್ಯೆಕ್ರೊಸ್ಕೋಪ್ ಮಾದರಿಯ ಸಾಧನ ಪೊಲ್ಡೆಸ್ಕೋಪ್ ನ್ನು ಉಚಿತವಾಗಿ ವಿತರಿಸುದರ ಜೊತೆಗೆ ಅದರ ಬಳಕೆಯ ಬಗ್ಗೆ ಒಂದು ದಿನದ ಕಾರ್ಯಾಗಾರವನ್ನು ಇತ್ತೀಚೆಗೆ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. […]
ಜ.13 ರಂದು ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಕ್ಯಾಂಪಸ್ ಸಂದರ್ಶನ
ಶಿರ್ವ( ಜ.8): ಶಿರ್ವ ಸಂತ ಮೇರಿ ಕಾಲೇಜಿನಲ್ಲಿ ಜನವರಿ 13ರಂದು ಮಂಗಳೂರಿನ ಪ್ರತಿಷ್ಠಿತ ದಿಯಾ ಸಿಸ್ಟಮ್ ಸಂಸ್ಥೆ(ಗ್ಲೋಟಚ್ ಟೆಕ್ನಾಲಜೀಸ್) ಯು ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ. ಈಗಾಗಲೇ ಬಿಸಿಎ, ಬಿಎಸ್ಸಿ (ಸಿ. ಎಸ್),ಬಿಇ( ಸಿವಿಲ್ ಮತ್ತು ಮೆಕಾನಿಕಲ್ ಹೊರತುಪಡಿಸಿ), ಬಿಕಾಂ( ಕಂಪ್ಯೂಟರ್ ಅಪ್ಲಿಕೇಶನ್), ಡಿಪ್ಲೋಮಾ( ಸಿ ಎಸ್),ಎಂಎಸ್ಸಿ, ಎಂಸಿಎ ಮುಗಿಸಿಕೊಂಡಿರುವ ಅಭ್ಯರ್ಥಿಗಳಿಗೆ ಪೂರ್ವಹ್ನ 9.00 ಗಂಟೆಗೆ ಕಾಲೇಜಿನ ಫಾ. ಹೆನ್ರಿ ಕ್ಯಾಸ್ಟಲಿನೊ ಸಭಾಂಗಣದಲ್ಲಿ ಸಂದರ್ಶನ ನಡೆಯಲಿದೆ. ಅಭ್ಯರ್ಥಿಗಳು ಆಧಾರ್ ಕಾರ್ಡ್, […]
ಸಂತ ಮೇರಿ ಮಹಾವಿದ್ಯಾಲಯದಲ್ಲಿ ಲಸಿಕಾ ಅಭಿಯಾನ
ಶಿರ್ವ(ಜ.8): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ವಿವಿಧ ಘಟಕಗಳಾದ ಎನ್ಸಿಸಿ, ಎನ್ಎಸ್ಎಸ್, ಯೂತ್ ರೆಡ್ ಕ್ರಾಸ್, ರೋವರ್ಸ-ರೇಂಜರ್ಸ್, ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಜಿಲ್ಲಾ ಸರ್ಕಾರಿ ಆಸ್ಪತ್ರೆ, ಉಡುಪಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಜಂಟಿಯಾಗಿ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಲಸಿಕಾ ಅಭಿಯಾನವನ್ನು ಕಾಲೇಜಿನ ದೃಶ್ಯ ಶ್ರವ್ಯ ಕೊಠಡಿದಲ್ಲಿ ಜನವರಿ 03 ರಿಂದ ಆಯೋಜಿಸಲಾಯಿತು. ಪದವಿ ಕಾಲೇಜುಗಳಲ್ಲಿ ಹೊಸತಾಗಿ ಸೇರ್ಪಡೆ ಪಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕೋವಿಡ್ […]
ಮೂಡ್ಲಕಟ್ಟೆ ಎಂ ಐ ಟಿ: ಸೈಬರ್ ಭದ್ರತೆ ಕಾರ್ಯಾಗಾರ
ಮೂಡ್ಲಕಟ್ಟೆ (ಜ.5): ಯು.ಜಿ.ಸಿ ನವದೆಹಲಿಯ ನಿರ್ದೇಶನದಂತೆ, ರಾಷ್ಟ್ರೀಯ ಸೈಬರ್ ಭದ್ರತಾ ದಿನಾಚರಣೆ ಅಂಗವಾಗಿ ಮೂಡ್ಲಕಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೈಬರ್ ಸೇಫ್ ಕ್ಯಾಂಪಸ್ ಎಂಬ ವಿಷಯದ ಮೇಲೆ ಕಾರ್ಯಾಗಾರ ಇತ್ತೀಚೆಗೆ ನಡೆಯಿತು . ಸಂಪನ್ಮೂಲ ವ್ಯಕ್ತಿಯಾಗಿ ಕರ್ನಾಟಕ ನ್ಯಾಯಾಂಗ ಅಕಾಡೆಮಿ ಹಾಗೂ ಕರ್ನಾಟಕ ಪೊಲೀಸ್ ಅಕಾಡೆಮಿಯ ಸೈಬರ್ ಕಾನೂನು ಹಾಗೂ ಸೈಬರ್ ಭದ್ರತೆ ತರಬೇತುದಾರಾದ ಡಾ.ಅನಂತ್ ಪ್ರಭು ಜಿ, ಪ್ರೊಫೆಸರ್, ಸಹ್ಯಾದ್ರಿ ಕಾಲೇಜು ಇವರು ಆಗಮಿಸಿದ್ದರು. ಅವರು ಮಾತನಾಡಿ ವಿವಿಧ ಬಗೆಯ ಸೈಬರ್ ಕ್ರೈಮ್ ಗಳ […]
ಡಾ.ಬಿ.ಬಿ.ಹೆಗ್ಡೆ ಕಾಲೇಜು: ಭಿತ್ತಿ ಚಿತ್ರ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನ
ಕುಂದಾಪುರ (ಜ.5): ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಉಡುಪಿ ಇವರು ವಿಶ್ವ ಏಡ್ಸ್ ದಿನದ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಐವಿ / ಏಡ್ಸ್ ಕುರಿತು ಆಯೋಜಿಸಿದ್ದ ಜಿಲ್ಲಾ ಮಟ್ಟದ ಭಿತ್ತಿ ಚಿತ್ರ ಸ್ಪರ್ಧೆಯಲ್ಲಿ ಡಾ.ಬಿ.ಬಿ.ಹೆಗ್ಡೆ ಕಾಲೇಜಿನ ಪ್ರಥಮ ಬಿ.ಸಿ.ಎ ವಿದ್ಯಾರ್ಥಿನಿ ಸೀಮಾ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಈ ಸಂದರ್ಭದಲ್ಲಿ ಕಾರ್ಯಕ್ರಮ ಆಯೋಜಿಸಿದ ಎನ್ಎಸ್ಎಸ್ ಯೋಜನಾಧಿಕಾರಿ ಪ್ರವೀಣ್ ಮೊಗವೀರ […]
ಡಾ.ಬಿ.ಬಿ.ಹೆಗ್ಡೆ ಕಾಲೇಜು: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಕುಂದಾಪುರ (ಜ.4): ಮಂಗಳೂರು ವಿಶ್ವವಿದ್ಯಾನಿಲಯ ನಡೆಸುವ ಅಂತಿಮ ವರ್ಷದ ಫೈನಾನ್ಶಿಯಲ್ ಎಕೌಂಟಿಗ್ ಪರೀಕ್ಷೆಯಲ್ಲಿ ಚಿನ್ನದ ಪದಕ ಪಡೆದುಕೊಂಡ ಕಾಲೇಜಿನ ಐವರು ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು. ಮುನ್ನೂರು ಅಂಕಗಳ ಪರೀಕ್ಷೆಯಲ್ಲಿ ಕಾಲೇಜಿನ ಪ್ರತೀಕ್ಷಾ, ಅಂಕಿತಾ, ಸುಚಿತ್ರಾ ಶೆಟ್ಟಿ, ಬಿಬಿ ಹಾಜಿರಾ, ಅನನ್ಯ, ಮುನ್ನೂರು ಅಂಕಗಳನ್ನು ಪಡೆದು ಸಾಧನೆಗೈದಿದ್ದಾರೆ. ಮಂಗಳೂರು ವಿವಿ ವ್ಯಾಪ್ತಿಯಲ್ಲಿ ಇಂತಹ ಅಪರೂಪದ ಸಾಧನೆಗೆ ಡಾ.ಬಿ.ಬಿ ಹೆಗ್ಡೆ ಕಾಲೇಜು ಸಾಕ್ಷಿಯಾಗಿದೆ. ಈ ಎಲ್ಲಾ ವಿದ್ಯಾರ್ಥಿನಿಯರನ್ನು ಅವರ ಹೆತ್ತವರ ಸಮ್ಮುಖದಲ್ಲಿ ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ […]
ಸುಣ್ಣಾರಿ ಶಾಲೆ: ಪುಸ್ತಕ ಮತ್ತು ಸಮವಸ್ತ್ರ ವಿತರಣೆ
ಕೋಟೇಶ್ವರ (ಜ.4): ವಿವೇಕೋದಯ ಅನುದಾನಿತ ಪ್ರಾಥಮಿಕ ಶಾಲೆ ಹೊಂಬಾಡಿ -ಮಂಡಾಡಿ ಸುಣ್ಣಾರಿ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳು ಮತ್ತು ಪಂಚಾಯತ್ ನಿಂದ ಕೊಡಲ್ಪಟ್ಟ ಪುಸ್ತಕ ಮತ್ತು ಸಮವಸ್ತ್ರವನ್ನು ಇತ್ತೀಚೆಗೆ ವಿತರಣೆ ಮಾಡಲಾಯಿತು. ಶಾಲಾ ಸಂಚಾಲಕರಾದ ಕಿಶೋರ ಶೆಟ್ಟಿ ಸುಣ್ಣಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾಗಿದ್ದು ಕಳೆದ ವರ್ಷ ನಿಧನರಾದ ಎಸ್ ದಿನಕರ ಶೆಟ್ಟಿ ಯವರ ಪ್ರಥಮ ವರ್ಷದ ಪುಣ್ಯಸ್ಮರಣೆ ಮಾಡಲಾಯಿತು. ಶಾಲಾ ಸಂಸ್ಥಾಪಕರಾದ ಕಾಪು ದಿ. ಸಂಜೀವ […]










