ಕೋಡಿ(ಆ,14): ಇಲ್ಲಿನ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ “ವಿದ್ಯಾರ್ಥಿ ಪ್ರೇರಣಾ ಕಾರ್ಯಕ್ರಮ”ವನ್ನು ಆಗಸ್ಟ್ .14 ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಶ್ರೀಕಾಳಾವರ ಉದಯ ಕುಮಾರ್ ಶೆಟ್ಟಿ ಮಾತನಾಡಿ ಯೋಚನೆ ಹಾಗೂ ಯೋಜನೆಗಳಿದ್ದಲ್ಲಿ ಯಾವುದೇ ಸಾಧನೆಗೆ ಹಿನ್ನಡೆಯಿಲ್ಲ, ಒಂದು ಸಂಸ್ಥೆ ಬೆಳೆಯಬೇಕಾದರೆ ಐದು ಅಂಶಗಳು ಮುಖ್ಯ ಆಡಳಿತ ಮಂಡಳಿ, ವಿದ್ಯಾರ್ಥಿಗಳು, ಪೋಷಕರು, ಬೋಧಕರು ಮತ್ತು ಹಳೆ ವಿದ್ಯಾರ್ಥಿಗಳು ಇವರ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಬಿ. ಬಿ. ಹೆಗ್ಡೆ ಕಾಲೇಜು :ಕೈಗಾರಿಕಾ ಭೇಟಿ
ಕುಂದಾಪುರ (ಆ, 10): ಕುಂದಾಪುರದ ಪ್ರತಿಷ್ಠಿತ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಮತ್ತು ಬೈಂದೂರು ಮಾಜಿ ಶಾಸಕರು ಹಾಗೂ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ.ಎಮ್. ಸುಕುಮಾರ ಶೆಟ್ಟಿಯವರ ಕೈಗಾರಿಕೆಗಳಾದ ಮುಳ್ಳುಗುಡ್ಡೆ ಸೌಪರ್ಣಿಕ ಹೆಂಚಿನ ಕಾರ್ಖಾನೆ, ಸೌಪರ್ಣಿಕ ಡೆಕೋರೇಟಿವ್ ಟೈಲ್ಸ್, ಸೌಪರ್ಣಿಕ ಗೇರುಬೀಜ ಕಾರ್ಖಾನೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಯಿತು. ಪದವಿಪೂರ್ವ ಹಂತದಲ್ಲಿ ವಾಣಿಜ್ಯೇತರ ವಿಭಾಗಗಳಲ್ಲಿ ತೇರ್ಗಡೆಗೊಂಡು ಪ್ರಸ್ತುತ ವಾಣಿಜ್ಯ ಹಾಗೂ ನಿರ್ವಹಣಾ ವಿಭಾಗದಲ್ಲಿ ಪ್ರವೇಶಾತಿ ಪಡೆದ […]
ಆರ್. ಎನ್.ಶೆಟ್ಟಿ ಪಿ ಯು ಕಾಲೇಜಿನ ಉಪಪ್ರಾಂಶುಪಾಲರಾಗಿ ಶ್ರೀ ಪ್ರೀತೇಶ್ ಶೆಟ್ಟಿ ಅಧಿಕಾರ ಸ್ವೀಕಾರ
ಕುಂದಾಪುರ (ಆ.14): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಕುಂದಾಪುರದ ಆರ್. ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾಗಿ ಶ್ರೀ ಪ್ರೀತೇಶ್ ಶೆಟ್ಟಿ ಅಧಿಕಾರ ಸ್ವೀಕರಿಸಿದ್ದಾರೆ. ರಸಾಯನ ಶಾಸ್ತ್ರ ವಿಷಯದಲ್ಲಿ ಎಮ್. ಎಸ್.ಸಿ ವ್ಯಾಸಂಗ ಮಾಡಿರುವ ಇವರು ಕಳೆದ 22 ವರ್ಷಗಳಿಂದ ಸಹ ಸಂಸ್ಥೆಯಾದ ವಿ.ಕೆ. ಆರ್. ಆಂಗ್ಲಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ನೂತನ ಉಪಪ್ರಾಂಶುಪಾಲರಾಗಿ ನೇಮಕಗೊಂಡ ಶ್ರೀ ಪ್ರೀತೇಶ್ ಶೆಟ್ಟಿಯವರನ್ನು ಕಾಲೇಜಿನ ಸಂಚಾಲಕರಾದ ಶ್ರೀ ಬಿ.ಎಮ್. […]
ಬಿ. ಬಿ. ಹೆಗ್ಡೆ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ‘ಪ್ರೇರಣಾ’- ಪರಿಚಯ ಕಾರ್ಯಕ್ರಮ
ಕುಂದಾಪುರ (ಆ, 12): ಪದವಿ ಪ್ರವೇಶಿಸಿದ ವಿದ್ಯಾರ್ಥಿಗಳು ಮೊಟ್ಟ ಮೊದಲು ಆಯ್ಕೆ ಮಾಡಿಕೊಂಡ ವಿಷಯವನ್ನು ಮತ್ತು ಸಂಸ್ಥೆಯನ್ನು ಪ್ರೀತಿಸಿ, ಆ ಮೂಲಕ ಕೇಳಿ ಕಲಿಯಲು ಆರಂಭಿಸುತ್ತೀರಿ. ಈ ಆರಂಭ ಹೊಸ ಆಲೋಚನೆಗಳನ್ನು ಹುಟ್ಟು ಹಾಕುವ ಮೂಲಕ ಸೃಜನಾತ್ಮಕವಾಗಿ ಬೆಳೆಯುವಿರಿ. ಆಗ ಪಡೆದ ಪದವಿ ಅರ್ಥಪೂರ್ಣವಾಗುತ್ತದೆ ಎಂದು ಉಡುಪಿಯ ಎಸ್.ಡಿ.ಎಮ್. ಆಯುರ್ವೇದ ಕಾಲೇಜಿನ ವೈದ್ಯಕೀಯ ಅಧೀಕ್ಷಕ ಡಾ| ನಾಗರಾಜ್ ಎಸ್. ಹೇಳಿದರು. ಅವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ […]
ಬಸ್ರೂರು ಮ್ಯಾರಥಾನ್ 2024 : ಕುಂದಾಪುರ ಟ್ರ್ಯಾಕ್& ಫೀಲ್ಡ್ ಉತ್ತಮ ಸಾಧನೆ
ಬಸ್ರೂರು (ಆ, 11): ದೇಶದ 77 ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಬಸ್ರೂರು ಸ್ಪೋರ್ಟ್ಸ್ ಕ್ಲಬ್ ಬಸ್ರೂರು (ರಿ.) ವತಿಯಿಂದ ನೀರಿದ್ದರೆ ನರ – ಕಾಡಿದ್ದರೆ ವರ ಎನ್ನುವ ಅಭಿಯಾನದಡಿ ಆಗಸ್ಟ್ 11 ರಂದು ಬಸ್ರೂರಿನಲ್ಲಿ ನಡೆದ ತಾಲೂಕು ಮಟ್ಟದ ಮ್ಯಾರಥಾನ್ ನಲ್ಲಿ ಕುಂದಾಪುರ ಟ್ರ್ಯಾಕ್ &ಫೀಲ್ಡ್ ಕ್ರೀಡಾ ಸಂಸ್ಥೆಯ ವಿದ್ಯಾರ್ಥಿಗಳು ಸಮಗ್ರ 10 ಪದಕಗಳನ್ನು ಪಡೆದುಕೊಂಡು ಸಾಧನೆಗೈದಿದ್ದಾರೆ. 21 ವರ್ಷ ಕೆಳ ವಯಸ್ಸಿನ ಹುಡುಗರ ವಿಭಾಗದಲ್ಲಿ ಶ್ರೀ ಸಿದ್ಧಿ ವಿನಾಯಕ […]
ಮೂಡ್ಲಕಟ್ಟೆ ಎಂ ಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ದೀಕ್ಷಾರಂಭ ಕಾರ್ಯಕ್ರಮಕ್ಕೆ ಚಾಲನೆ
ಮೂಡ್ಲಕಟ್ಟೆ (ಆ,13): ಇಲ್ಲಿನ ಐ ಎಂ ಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ನೂತನ ವಿದ್ಯಾರ್ಥಿಗಳಿಗೆ 12 ದಿನದ ದೀಕ್ಷಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಪ್ರಥಮ ದಿನವಾದ ಇಂದು ದೀಪ ಬೆಳಗಿಸುವುದರ ಮೂಲಕ ಹಾಗೂ ವಿದ್ಯಾರ್ಥಿಗಳು ಹಣತೆಯನ್ನ ಹಚ್ಚುವ ಮೂಲಕ ವಿಭಿನ್ನವಾಗಿ ಪದವಿ ಜೀವನಕ್ಕೆ ಕಾಲಿಟ್ಟ ವಿದ್ಯಾರ್ಥಿಗಳಿಗೆ ದೀಕ್ಷೆಯನ್ನು ತೊಡಿಸಲಾಯಿತು. ಇದೇ ಸಂದರ್ಭದಲ್ಲಿ ಐ ಎಂ ಜೆ ಶಿಕ್ಷಣ ಸಂಸ್ಥೆಯ ಪ್ರಾರ್ಥನೆಯ ಧ್ವನಿ ಮುದ್ರಣವನ್ನು ಗಣ್ಯರಿಂದ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದ ಮುಖ್ಯ […]
ಮಂಗಳೂರು ವಿ. ವಿ ರಾಜ್ಯಶಾಸ್ತ್ರ ಶಿಕ್ಷಕರ ಸಂಘ : ವಾರ್ಷಿಕ ಸಾಮಾನ್ಯ ಸಭೆ ಹಾಗೂ ಸನ್ಮಾನ ಕಾರ್ಯಕ್ರಮ
ಮಂಗಳೂರು(ಆ, 12): ಮಂಗಳೂರು ವಿಶ್ವವಿದ್ಯಾನಿಲಯ ರಾಜ್ಯಶಾಸ್ತ್ರ ಶಿಕ್ಷಕರ ಸಂಘ ಇದರ ವಾರ್ಷಿಕ ಸಾಮಾನ್ಯ ಸಭೆ ಹಾಗೂ ನಿವೃತ್ತ ಪ್ರಾಧ್ಯಾಪಕರಿಗೆ ಸನ್ಮಾನ ಕಾರ್ಯಕ್ರಮ ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಅಗಸ್ಟ್ 12ರಂದು ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ವಿ.ವಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಜಯರಾಜ್ ಅಮೀನ್ ಮಾತನಾಡಿ ಮಂಗಳೂರು ವಿ. ವಿ ರಾಜ್ಯಶಾಸ್ತ್ರ ಶಿಕ್ಷಕರ ಸಂಘದ ರಚನಾತ್ಮಕ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದರು. ಹಾಗೆಯೇ ನಿವೃತ್ತ ಪ್ರಾಧ್ಯಾಪಕರಿಗೆ ಸನ್ಮಾನ ಕಾರ್ಯಕ್ರಮವನ್ನು […]
ಸರಕಾರಿ ಪಿ ಯು ಕಾಲೇಜು ಹೊಸಂಗಡಿ: ಎನ್ ಎಸ್ ಎಸ್ ವತಿಯಿಂದ ವಿಶೇಷ ಕಾರ್ಯಕ್ರಮ
ಹೊಸಂಗಡಿ(ಆ,13): ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ಪ್ರವೀಣ್ ಕುಮಾರ್ ಶೆಟ್ಟಿ ಶಾನ್ಕಟ್ಟು ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ಹಾಗೂ ಕೌಶಲ್ಯಗಳ ಸಮರ್ಪಕ ಬಳಕೆಯ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ನೀಡಿದರು. ವಿದ್ಯಾರ್ಥಿಗಳಲ್ಲಿ ಸಾಮಾನ್ಯವಾಗಿ ಇರಬೇಕಾದ ಕೌಶಲ್ಯಗಳು ಹಾಗೂ ಪ್ರಸಕ್ತ ಸಮಯದಲ್ಲಿ ಅದರ ಅಗತ್ಯತೆ ಬಗ್ಗೆ ಉದಾಹರಣೆಗಳ ಮೂಲಕ ತಿಳಿಸಿದರು. ವಿದ್ಯಾರ್ಥಿಗಳಿಗೆ ಪೂರಕ ಪ್ರಶ್ನೆಗಳ ಮೂಲಕ ಸಂವಹನ ನಡೆಸಿ […]
ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದ:ಅಗ್ರಸ್ಥಾನಿಗೆ ನಗದು ಬಹುಮಾನ
ನಾವುಂದ(ಆ,13): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2023-24ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಾಲೇಜಿಗೆ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದ ವಿದ್ಯಾರ್ಥಿನಿ ಕ್ಷಮಿತಾ ಜಿ ದೇವಾಡಿಗ ಅವರಿಗೆ 1995 -96ನೇ ಸಾಲಿನ ಕಾಲೇಜಿನ ವಿಜ್ಞಾನ ವಿಭಾಗದ ಹಳೆಯ ವಿದ್ಯಾರ್ಥಿಗಳು ನೀಡಿದ 15000 ರೂಪಾಯಿ ಪ್ರೋತ್ಸಾಹ ಧನವನ್ನು ಕಾಲೇಜಿನಲ್ಲಿ ವಿತರಿಸಲಾಯಿತು. ಹಳೆ ವಿದ್ಯಾರ್ಥಿಗಳ ಪರವಾಗಿ ಮಣಿಪಾಲದ ನವಿತಾಸ್ ಲೈಫ್ ಸೈನ್ಸ್ ನಲ್ಲಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯ ಹಳೆ ವಿದ್ಯಾರ್ಥಿ […]