ಕುಂದಾಪುರ (ಆ ,03): ವಿದ್ಯಾರ್ಥಿಗಳಿಗೆ ಗಣಿತ ಮತ್ತು ಸಂಖ್ಯಾಶಾಸ್ತ್ರ ವಿಷಯಗಳ ಅವಶ್ಯಕತೆ ತುಂಬಾ ಇದೆ. ಆದರೆ ಇವೆಲ್ಲಾ ಕಬ್ಬಿಣದ ಕಡಲೆಯಂತೆ ತಪ್ಪು ಗ್ರಹಿಕೆ ಅವರಲ್ಲಿದೆ. ಭವಿಷ್ಯದ ಪೀಳಿಗೆಗೆ ಎಲ್ಲಾ ಸಂದರ್ಭಗಳಲ್ಲಿಯೂ, ಅನೇಕ ವ್ಯವಹಾರಗಳಲ್ಲಿ ಮತ್ತು ಸಂವಹನಗಳಲ್ಲಿ ಸಂಖ್ಯಾಶಾಸ್ತ್ರ ಅವಶ್ಯಕವಾಗಿದೆ. ನಮ್ಮ ರಾಜ್ಯದ ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಸಂಖ್ಯಾಶಾಸ್ತ್ರ ಸಂಯೋಜನೆ ತುಂಬಾ ಅವಶ್ಯಕತೆಯಿದೆ, ಇಡೀ ಜಗತ್ತಿನ ಆರ್ಥಿಕ ಬಲವರ್ಧನೆಯ ಅಧ್ಯಯನ ಕೂಡಾ ಇದರಿಂದಲೇ ಸಾಧ್ಯ, ಹಾಗಾಗಿ ಸಂಖ್ಯಾಶಾಸ್ತ್ರ ರಾಷ್ಟ್ರದ ಅಭ್ಯುದಯದ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಸಿ ಎ ಫೌಂಡೇಶನ್ ಫಲಿತಾಂಶ: ವ ಕ್ರಿಯೇಟಿವ್ ಪಿಯು ಕಾಲೇಜು ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
ಕಾರ್ಕಳ (ಆ,03): ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿ ಎ ಫೌಂಡೇಶನ್ ಫಲಿತಾಂಶವು 29 ಜುಲೈ 2024 ರಂದು ಪ್ರಕಟಗೊಂಡಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಕೆ.ವಿ ಮೌರ್ಯ, ಭಕ್ತಿ ಕಾಮತ್, ಸುಪ್ರೀತ್ ಎಸ್ ಹೆಗ್ಡೆ, ವಿನಯ್ ಪ್ರಶಾಂತ ಹಿರೇಮಠ, ಸಾನ್ವಿ ರಾವ್ ರವರು ಕ್ರಮವಾಗಿ 273, 253, 248, 238, 223 ಅಂಕಗಳನ್ನು ಗಳಿಸುವುದರ ಮೂಲಕ ಅರ್ಹತೆಯನ್ನು ಗಳಿಸಿಕೊಂಡಿರುತ್ತಾರೆ.
ಕನ್ನಡ ಕರಾವಳಿ ಭಾಗದಲ್ಲಿ ರೋಗಿಗಳಿಗೆ ರಕ್ತದ ಅವಶ್ಯಕತೆ ಕೇಳಿ ಬಂದಾಗ ಮೊದಲು ನೆನಪಾಗುವ ಹೆಸರು ಸತೀಶ್ ಸಾಲ್ಯಾನ್ ಮಣಿಪಾಲ್
ದಾನದಲ್ಲೇ ಅತ್ಯಂತ ಶ್ರೇಷ್ಠ ದಾನ ಅದು ರಕ್ತದಾನ ಎಂದು ನಂಬಿದ ವ್ಯಕ್ತಿ ರಕ್ತದ ಆಪತ್ಪಾಂಧವ ಶ್ರೀ ಸತೀಶ್ ಸಾಲ್ಯಾನ್ ಮಣಿಪಾಲ್ . ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾಡುವ ಸೇವೆಯಲ್ಲಿ ದೇವರನ್ನು ಕಾಣುವ ವ್ಯಕ್ತಿತ್ವ ಸತೀಶರದ್ದು. ಸತೀಶ್ ಸಾಲ್ಯಾನ್ ಓರ್ವ ರಕ್ತದಾನಿ, ರಕ್ತದ ಜೊತೆಗಾರ ಎನ್ನುವುದು ಎಷ್ಟು ಸತ್ಯವೋ ಅಷ್ಟೇ ಅವರೊಬ್ಬ ಅಪ್ಪಟ ಹೃದಯವಂತ, ಸಂವೇದನಶೀಲ ಮತ್ತು ಮಾನವೀಯತೆ ತುಂಬಿಕೊಂಡಿರುವ ಕರುಣಾಮಯಿ ಮತ್ತು ಮಗುವಿನಂತ ಮನಸ್ಸಿನವರು ಎಂದರೆ ಅತೀಶಯೋಕ್ತಿ ಆಗದು. ಸತೀಶ್ […]
ಲಯನ್ಸ್ ಕ್ಲಬ್ ಕುಂದಾಪುರ ಇಂಜಿನೀಯರ್ಸ್ ವತಿಯಿಂದ ಕುಂದಾಪುರ ಕಾಲೇಜಿಗೆ ವ್ಹೀಲ್ ಚೇರ್ ಕೊಡುಗೆ
ಕುಂದಾಪುರ (ಜು,27): ಲಯನ್ಸ್ ಕ್ಲಬ್ ಕುಂದಾಪುರ ಇಂಜಿನೀಯರ್ಸ್ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದ ಅಂಗವಿಕಲ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಅತೀ ಅಗತ್ಯವಾದ ವ್ಹೀಲ್ ಚೇರ್ನ್ನು ಲಯನ್ಸ್ ಕ್ಲಬ್ ಕುಂದಾಪುರ ಇಂಜಿನೀಯರ್ಸ್ ಇದರ ಅಧ್ಯಕ್ಷರಾದ ಶ್ರೀ ದಿನೇಶ ಹೆಗ್ಡೆಯವರು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ ಜಿ ಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಈ ಕೊಡುಗೆ ಪ್ರಾಯೋಜಕರಾದ ಲಯನ್ ಆರ್ಕಿಟೆಕ್ಟ್ ಇಕ್ಬಾಲ್ ಅಧ್ಯಕ್ಷರು ಇಂಜಿನೀಯರ್ಸ್ ì ಅಸೋಸಿಯೇಶನ್ ಹಾಗೂ ಲಯನ್ […]
ಬಿ. ಬಿ. ಹೆಗ್ಡೆ ಕಾಲೇಜು: ಕಾರ್ಗಿಲ್ ವಿಜಯ ದಿವಸ
ಕುಂದಾಪುರ (ಜುಲೈ 26): ವೀರ ಸೈನಿಕರ ತ್ಯಾಗ ಮತ್ತು ಬಲಿದಾನವನ್ನು ನೆನಪಿಸುವುದರ ಜೊತೆಗೆ ದೇಶದ ಐತಿಹಾಸಿಕ ಗೆಲುವಿಗೆ ಅಭಿನಂದನೆ ಸಲ್ಲಿಸುವ ಉದ್ದೇಶದಿಂದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ. ಘಟಕದ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಮಂಜು ಮೊಗವೀರ, ನಿವೃತ್ತ ಸೈನಿಕರು ಮಾತನಾಡಿ, ಸೇನಾ ದಿನಗಳ ಸವಿನೆನಪನ್ನು ಬಿಚ್ಚಿಡುವುದರ ಜೊತೆಗೆ ಕಾರ್ಗಿಲ್ ಯುದ್ಧದಲ್ಲಿ ಸೈನಿಕರ ಶೌರ್ಯವನ್ನು […]
ಗಂಗೊಳ್ಳಿ: ಬಿಲ್ಲವರ ಹಿತರಕ್ಷಣಾ ವೇದಿಕೆ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ
ಗಂಗೊಳ್ಳಿ (ಜು,27): ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಲಿಕೆಯ ಜೊತೆ ಜೊತೆಗೆ ಮಕ್ಕಳನ್ನು ಸಂಸ್ಕಾರದ ಮೌಲ್ಯಗಳೊಂದಿಗೆ ಬೆಳೆಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಹೆತ್ತವರು ಮತ್ತು ಶಿಕ್ಷಕರ ಜವಾಬ್ದಾರಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕುಂದಾಪುರದ ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ .ಕೆ. ಉಮೇಶ್ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ಮೂರನೇ ವಾರ್ಷಿಕ […]
ಬಿ. ಬಿ. ಹೆಗ್ಡೆ ಕಾಲೇಜು: ‘ಗ್ರಾಜುಯೇಷನ್ ಡೇ’
ಕುಂದಾಪುರ (ಜುಲೈ 24): ವಿದ್ಯಾರ್ಥಿಗಳು ಅವಕಾಶಗಳನ್ನು ಪ್ರೀತಿಸುವಂತಾಗಬೇಕು ಮತ್ತು ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಅವಕಾಶದೊಂದಿಗೆ ಅಭಿವೃದ್ಧಿ ಹೊಂದಿದಾಗ ಹೆತ್ತವರ, ಗುರುಗಳ ಮತ್ತು ಸಮಾಜದ ಕಾಳಜಿ ವಹಿಸಬೇಕು. ಆ ಮೂಲಕ ಪಡೆದ ಪದವಿಗೆ ಗೌರವ ದೊರೆಯುವಂತಾಗಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಕುಲಪತಿ ಪ್ರೊ| ಹೇಮಂತ್ ಕುಮಾರ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಐಕ್ಯೂಎಸಿ ಸಂಯೋಜಿಸಿದ ‘ಗ್ರಾಜುಯೇಷನ್ ಡೇ’ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕುಂದಾಪುರ […]
ಕುಂದಾಪುರ : ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಶಾಲೆ:ಟೀಚರ್ ಟ್ರೈನಿಂಗ್ ವಿಭಾಗದ ಉದ್ಘಾಟನಾ ಸಮಾರಂಭ
ಕುಂದಾಪುರ(ಜು,24): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಹಾಗೂ ವಿ.ಕೆ.ಆರ್ ಶಾಲೆಗಳಲ್ಲಿ 2024-25ರ ಶೈಕ್ಷಣಿಕ ವರ್ಷದಲ್ಲಿ ಹೊಸದಾಗಿ ಸೇರ್ಪಡೆಗೊಂಡಿರುವ ಟೀಚರ್ ಟ್ರೈನಿಂಗ್ ವಿಭಾಗದ ಉದ್ಘಾಟನೆ ಜುಲೈ 22 ರಂದು ಸಂಸ್ಥೆಯ ಪ್ರಾಂಶುಪಾಲರಾಗಿರುವ ಡಾ. ಚಿಂತನಾ ರಾಜೇಶ್ ರವರ ಮಾರ್ಗದರ್ಶನದಲ್ಲಿ ನೆರವೇರಿತು. ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ. ಜಿ ಭಟ್ ರವರು ಮುಖ್ಯ ಅತಿಥಿಗಳಾಗಿ ಶಿಕ್ಷಕ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಿಕ್ಷಕ ವಿದ್ಯಾರ್ಥಿಗಳಿಗೆ ಪುಷ್ಪವನ್ನು ನೀಡುವ […]
ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನಲ್ಲಿ ‘ಜನತಾ ನವನೀತ 2024’ ಸಂಪನ್ನ
ಕುಂದಾಪುರ;(ಜು,23): ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ‘ಜನತಾ ನವನೀತ-2024’ ಕಾರ್ಯಕ್ರಮ ಕುಂದಾಪುರದ ಮೊಗವೀರ ಭವನದಲ್ಲಿ ಜುಲೈ 22 ರಂದು ಜರುಗಿತು.ಸಮಾರಂಭವನ್ನು ಉದ್ಘಾಟನೆಗೈದ ಶಿಕ್ಷಕರು ಮತ್ತು ರಾಷ್ಟ್ರೀಯ ಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಶ್ರೀ ರಾಜೇಂದ್ರ ಭಟ್ ಕೆ.ಯವರು ಮಾತನಾಡಿ ಜೀವನದಲ್ಲಿ, ಪರೀಕ್ಷೆಯಲ್ಲಿ, ಬದುಕಿನಲ್ಲಿ ಸೋತವರ ಕಥೆಗಳು ನಮ್ಮನ್ನು ಪ್ರೇರೇಪಿಸುತ್ತಾ ಹೋಗುತ್ತವೆ. ಸೋತವರ ಕಥೆಗಳು ನಮಗೆ ಆದರ್ಶಗಳಾಗುತ್ತವೆ.ಗೆದ್ದಾಗ ಮಾತ್ರ ಸಂಭ್ರಮಿಸುವುದಲ್ಲ. ಸೋತಾಗಲೂ ಸಂಭ್ರಮಿಸಬೇಕು. ಸಣ್ಣ ಸಣ್ಣ ಸೋಲುಗಳನ್ನು ಎದುರಿಸುವುದನ್ನು ಅತ್ಯದ್ಭುತವಾಗಿ ಕಲಿಯಬೇಕು. […]