ಕಾರ್ಕಳ( ಜೂ ,18): 2026-27ನೇ ಸಾಲಿನ JOSAA ಕೌನ್ಸೆಲಿಂಗ್ನ ಮೊದಲ ಸುತ್ತಿನ ಸೀಟ್ ಹಂಚಿಕೆ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 26 ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಐ.ಐ.ಟಿ, ಎನ್.ಐ.ಟಿ ಹಾಗೂ ಐ.ಐ.ಐ.ಟಿ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಆಯ್ಕೆಯಾಗಿದ್ದಾರೆ. ಆಯ್ಕೆಯಾದವರಲ್ಲಿ 4 ವಿದ್ಯಾರ್ಥಿಗಳು ಐ.ಐ.ಟಿ, 9 ವಿದ್ಯಾರ್ಥಿಗಳು ಎನ್.ಐ.ಟಿ ಹಾಗೂ 13 ವಿದ್ಯಾರ್ಥಿಗಳು ಐ.ಐ.ಐ.ಟಿ ಸಂಸ್ಥೆಗಳಿಗೆ ಪ್ರವೇಶ ಪಡೆದಿದ್ದಾರೆ. ಐ.ಐ.ಟಿ ಪ್ರವೇಶ ಪಡೆದ ವಿದ್ಯಾರ್ಥಿಗಳು: ನಾಗದೇವ್ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಕುಂದಾಪುರ: ಎಚ್.ಎಂ.ಎಂ. ಪೂರ್ವ ಪ್ರಾಥಮಿಕ ವಿಭಾಗ ಆರಂಭೋತ್ಸವ
ಕುಂದಾಪುರ(ಜೂ,20): ಕುಂದಾಪುರ ಎಜುಕೇಶನ್ ಸೊಸೈಟಿ ಪೂರ್ವ ಪ್ರಾಥಮಿಕ ವಿಭಾಗದ ಹೊಸ ಶೈಕ್ಷಣಿಕ ವರ್ಷದ ಮೊದಲ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಉಪ ಪ್ರಾಂಶುಪಾಲರಾದ ಶ್ರೀಮತಿ ಶುಭ ಕೆ ಎನ್ ಮಕ್ಕಳಿಗೆ ಮತ್ತು ಪೋಷಕರಿಗೆ ಆತ್ಮೀಯ ಸ್ವಾಗತ ಕೋರಿ, ಹೊಸ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು. ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ .ಜಿ. ಭಟ್ ಹಾಗೂ ತರಗತಿ ಶಿಕ್ಷಕರೆಲ್ಲರೂ ಸೇರಿ, ಮಕ್ಕಳಿಗೆ ಆರತಿ ಎತ್ತಿ ಪ್ರೀತಿಯಿಂದ ಬರಮಾಡಿಕೊಂಡರು. […]
ಡಾ. ಬಿ.ಬಿ.ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿನಿ ಶ್ರಾವ್ಯ ಶೆಟ್ಟಿ ಸಿ.ಎ. ಫೈನಲ್ನಲ್ಲಿ ತೇರ್ಗಡೆ
ಕುಂದಾಪುರ(ಜೂ,22): ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆoಟ್ಸ್ ಆಫ್ ಇಂಡಿಯಾ (ICAI) ನಡೆಸಿದ ಸಿ.ಎ. ಫೈನಲ್ ಮೇ 2026ರ ಪರೀಕ್ಷೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಕ್ತನ ವಿದ್ಯಾರ್ಥಿನಿ ಶ್ರಾವ್ಯ ಶೆಟ್ಟಿ ಅವರು ಚೊಚ್ಚಲ ಪ್ರಯತ್ನದಲ್ಲಿಯೇ ಸಿ.ಎ. ಪರೀಕ್ಷೆಯ ಎಲ್ಲಾ ಹಂತಗಳಲ್ಲಿ ಉತ್ತೀರ್ಣರಾಗುವ ಮೂಲಕ ದಾಖಲೆ ನಿರ್ಮಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಸಿ.ಎ. ಪರೀಕ್ಷೆಯು ದೇಶದ ಅತ್ಯಂತ ಪ್ರತಿಷ್ಠಿತ ಹಾಗೂ ಸವಾಲಿನ ವೃತ್ತಿಪರ ಪರೀಕ್ಷೆಗಳಲ್ಲಿ […]
ಕುಂದಾಪುರ : ಎಚ್.ಎಂ.ಎಂ. ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕ-ಪೋಷಕ ಸಭೆ
ಕುಂದಾಪುರ (ಜೂ,22): ಕುಂದಾಪುರ ಎಜುಕೇಶನ್ ಸೊಸೈಟಿ ಪೂರ್ವ ಪ್ರಾಥಮಿಕ ವಿಭಾಗದ ಹೊಸ ಶೈಕ್ಷಣಿಕ ವರ್ಷದ ಮೊದಲ ಸಭೆಜೂನ್ 22 ರಂದು ನಡೆಯಿತು. ಸಂಸ್ಥೆಯ ಉಪ ಪ್ರಾಂಶುಪಾಲರಾದ ಶ್ರೀಮತಿ ಶುಭ ಕೆ ಎನ್ ಮಕ್ಕಳಿಗೆ ಮತ್ತು ಪೋಷಕರಿಗೆ ಆತ್ಮೀಯ ಸ್ವಾಗತ ಕೋರಿ, ಹೊಸ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು.ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ .ಜಿ. ಭಟ್ ಶಾಲೆಯ ಹೊಸ ಶೈಕ್ಷಣಿಕ ವರ್ಷದ ಯೋಜನೆ ಹಾಗೂ ಯೋಚನೆಗಳನ್ನು ಮಂಡಿಸಿದರು. ಸಹಾಯಕ […]
ಚಿತ್ರಕಲಾ ಸ್ಪರ್ಧೆ : ಸಂಜಿತ್ ಎಂ ದೇವಾಡಿಗ ಪ್ರಥಮ
ಬೈಂದೂರು( ಜು ,12): ಸುರಭಿ (ರಿ.) ಬೈಂದೂರು ಮತ್ತು ಚಿತ್ತಾರ ಹಳ್ಳಿಹೊಳೆ ಇವರ ಸಂಯುಕ್ತ ಆಶಯದಲ್ಲಿ ಬೈಂದೂರು ಜಾತ್ರೆಯ ಪ್ರಯುಕ್ತ ಇತ್ತೀಚಿಗೆ ನಡೆದ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸಂಜಿತ್ ಎಂ ದೇವಾಡಿಗ ಪ್ರಥಮ ಸ್ಥಾನವನ್ನು ಪಡೆದಿರುತ್ತಾನೆ. ಈತ ಗಂಗೊಳ್ಳಿಯ ಚಿತ್ರ ಕಲಾವಿದ ಮಾಧವ ದೇವಾಡಿಗ ಹಾಗೂ ಉಪನ್ಯಾಸಕಿ ಸಾವಿತ್ರಿ ಎಸ್ ದಂಪತಿ ಯವರ ಪುತ್ರ .
ಎಸ್. ಎಸ್. ಎಲ್. ಸಿ ಪರೀಕ್ಷೆ – 2 ಮರುಮೌಲ್ಯಮಾಪನ – ಅಂಕ ಹೆಚ್ಚಳ – ರಾಜ್ಯಕ್ಕೆ 9ನೇ ರ್ಯಾಂಕ್ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆ ಕುಂದಾಪುರ
ಕುಂದಾಪುರ( ಜು ,12): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿಯರಾದ ಶ್ರಾವ್ಯಾ ಎ. ಪಿ., ಮೇ 2026ರಲ್ಲಿ ನಡೆದ ಎಸ್. ಎಸ್. ಎಲ್. ಸಿ ಪರೀಕ್ಷೆ-2ರಲ್ಲಿ 616 ಅಂಕ ಗಳಿಸಿ, ಮರುಮೌಲ್ಯಮಾಪನದಲ್ಲಿ 1 ಅಂಕ ಹೆಚ್ಚುವರಿ ಪಡೆದು 617 ಅಂಕಗಳೊಂದಿಗೆ ರಾಜ್ಯಕ್ಕೆ 9ನೇ ರ್ಯಾಂಕ್ ಮತ್ತು ಪ್ರಾಪ್ತಿ ಮಡಪ್ಪಾಡಿ ಮೇ 2026ರಲ್ಲಿ ನಡೆದ ಎಸ್. ಎಸ್. […]
ಎಚ್ಎಂಎಂ ಹಾಗೂ ವಿಕೆಆರ್ ಶಾಲೆ ಕುಂದಾಪುರ : ಉಚಿತ ಆರೋಗ್ಯ ತಪಾಸಣಾ ಶಿಬಿರ
ಕುಂದಾಪುರ (ಜೂ.12): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ಎಂಎಂ ಹಾಗೂ ವಿಕೆಆರ್ ಶಾಲೆಗಳಲ್ಲಿ ಸಮಾಜ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿರುವ ಸ್ವಾಸ್ಥ್ಯ ಹೆಲ್ತ್ ಕೇರ್ ಸಂಸ್ಥೆಯ ವತಿಯಿಂದ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರದಲ್ಲಿ ವೈದ್ಯರು ಸಿಬ್ಬಂದಿಯ ಆರೋಗ್ಯ ತಪಾಸಣೆ ನಡೆಸಿ, ಆರೋಗ್ಯದ ಬಗ್ಗೆ ಅಗತ್ಯ ಸಲಹೆ ಹಾಗೂ ಮಾರ್ಗದರ್ಶನ ನೀಡಿದರು. ಈ ಕಾರ್ಯಕ್ರಮದ ಪ್ರಯೋಜನವನ್ನು ಶಾಲೆಯ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಪಡೆದುಕೊಂಡರು. […]
ಕುಂದಾಪುರ: ಆರ್.ಎನ್.ಶೆಟ್ಟಿ ಪಿ.ಯು ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬಗ್ಗೆ ಮಾಹಿತಿ ಉಪನ್ಯಾಸ
ಕುಂದಾಪುರ(ಜು,13): ಪರೀಕ್ಷೆ ಬಗ್ಗೆ ಮಾಹಿತಿ ಉಪನ್ಯಾಸ ವಿದ್ಯಾರ್ಥಿಗಳು ನೀಟ್ ನಂಥ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯಸಿಸುವಾಗ ತಮ್ಮ ಸ್ಪರ್ಧೆಯಿರುವುದು ಬೇರೆಯವರೊಂದಿಗೆ ಅಲ್ಲ, ತನ್ನದೇ ಆದ ನಿನ್ನೆಯ ಸಾಮರ್ಥ್ಯದೊಂದಿಗೆ ಇಂದಿನ ಕೌಶಲ್ಯವನ್ನು ಸ್ಪರ್ಧೆಗೊಡ್ಡಿ, ನಿರಂತರತೆ, ಶಿಸ್ತು ಮತ್ತು ದೊಡ್ಡ ಕನಸು ಕಾಣುವ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಪ್ರತಿದಿನ ಕನಿಷ್ಠ ಒಂದು ಪ್ರತಿಶತವಾದರೂ ನಿನ್ನೆಗಿಂತ ಉತ್ತಮರಾಗಬೇಕೆಂದು ಮನಗಂಡು ಯಶಸ್ಸು ಸಾಧಿಸಬೇಕು” ಎಂದು ಕುವೈಟ್ ನ ಅಲ್ ಸಭಾ ಆಸ್ಪತ್ರೆಯ ಮಕ್ಕಳತಜ್ಞ, ಸೀನಿಯರ್ ರಿಜಿಸ್ಟ್ರಾರ್, ಡಾ. ಶಿಶಿರ್ ಶೆಟ್ಟಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ.ಶಿಶಿರ್ ಶೆಟ್ಟಿಯವರನ್ನು ಸಭೆಗೆ ಪರಿಚಯಿಸಿ ಸ್ವಾಗತಿಸಿದರು. ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿಯರಾದ ಸಹನಾ ಮತ್ತು ಮೇಘನಾ ಪ್ರಾರ್ಥನೆಗೈದರು.ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ಜಾನೀಸ್ ನತಾಶಾ ಡಿಸೋಜಾ ರವರು ನಿರೂಪಿಸಿ ವಂದನಾರ್ಪಣೆಗೈದರು.
ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್: ಪ್ರತಿಭಾ ಪುರಸ್ಕಾರ, ಕ್ರೀಡಾಪಟುಗಳಿಗೆ ಗೌರವ ಸನ್ಮಾನ, ವಿದ್ಯಾರ್ಥಿವೇತನ ಹಾಗೂ ಉಚಿತ ನೋಟ್ ಪುಸ್ತಕ ವಿತರಣೆ
ಕುಂದಾಪುರ(ಜು ,12): ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ (ರಿ.), ಮೊಳಹಳ್ಳಿ ಇವರ ಆಶ್ರಯದಲ್ಲಿ ರಾಜ್ಯಮಟ್ಟದಲ್ಲಿ ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಸಾಧನೆಗೈದ ಕ್ರೀಡಾಪಟುಗಳಿಗೆ ಗೌರವ ಸನ್ಮಾನ, ಮೊಳಹಳ್ಳಿ ಗ್ರಾಮದ ವಿಶಿಷ್ಟ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಹಾಗೂ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಬಿದ್ಕಲ್ ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ (ಪ್ರೌಢಶಾಲಾ […]
ಮೊಗವೀರ ಯುವ ಸಂಘಟನೆ ಹೆಮ್ಮಾಡಿ : ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ತ್ರಾಸಿ ಕಡಲ ತೀರ ಸ್ವಚ್ಛತೆ
ಕುಂದಾಪುರ (ಜೂ. 05): ಮೊಗವೀರ ಯುವ ಸಂಘಟನೆ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ,ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ, ಹಾಗೂ ಗ್ರಾಮ ಪಂಚಾಯತ್ ತ್ರಾಸಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜೂನ್, 05 ರಂದು ತ್ರಾಸಿ ಕಡಲತೀರ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮೊಗವೀರ ಯುವ ಸಂಘಟನೆಯ ಹೆಮ್ಮಾಡಿ ಘಟಕದ ಅಧ್ಯಕ್ಷರಾದ ಪ್ರವೀಣ್ ಮೊಗವೀರ ಗಂಗೊಳ್ಳಿ, ಕಾರ್ಯದರ್ಶಿ ಜಯಂತ್ ಕುಂದರ್ ಬಾಳಿಕೆರೆ, […]










