ಕುಂದಾಪುರ ( ಡಿ ,15): ಇಂಡಿಯನ್ ಡೆಫ್ ಕ್ರಿಕೆಟ್ ಅಸೋಸಿಯೇಷನ್’ ಆಯೋಜನೆಯ ಅಡಿಯಲ್ಲಿ ಆಂಧ್ರಪ್ರದೇಶದ ಅನಂತಪುರದಲ್ಲಿ ನವೆಂಬರ್ 25 ರಿಂದ 28 ರವರೆಗೆ ನಡೆದ ರಾಷ್ಟ್ರೀಯ ಮಟ್ಟದ 19 ವರ್ಷದೊಳಗಿನ ಟಿ20 ಕ್ರಿಕೆಟ್ ಪಂದ್ಯಕೂಟದಲ್ಲಿ ಐಎಂಜೆ ಪದವಿ ಕಾಲೇಜಿನ ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿ ಸನಿತ್ ಶೆಟ್ಟಿ ಒಡಿಶಾ ತಂಡವನ್ನು ಪ್ರತಿನಿಧಿಸಿ ತಂಡವು ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪಂದ್ಯಕೂಟದ ಫೈನಲ್ ನಲ್ಲಿ ಒಡಿಶಾ ತಂಡ ಹರಿಯಾಣ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಬಿ. ಬಿ. ಹೆಗ್ಡೆ ಕಾಲೇಜು : ಅಕ್ಷರ-ಅಕ್ಕರೆಯ ಹೊನಲು–ವಿಶೇಷ ಉಪನ್ಯಾಸ
ಕುಂದಾಪುರ (ಡಿ.03): ನಮ್ಮ ದೇಶಕ್ಕೆ ಇಂದು ಅಗತ್ಯವಿರುವುದು ಬರಿಯ ವಿದ್ಯಾವಂತರಲ್ಲ, ಪ್ರಾಮಾಣಿಕರು, ಸತ್ಯವಂತರು, ಸಚ್ಚಾರಿತ್ರ್ಯವುಳ್ಳವರ ಅಗತ್ಯವಿದೆ. ಇದು ಶಿಕ್ಷಣದಿಂದ ಸಾಧ್ಯವಾದಾಗ ಮಾತ್ರ ಶಿಕ್ಷಣ ನಿಜವಾದ ಅರ್ಥವಂತಿಕೆಯಿಂದ ಇರಲು ಸಾಧ್ಯ ಎಂದು ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಸಂಸ್ಥಾಪಕರಾದ ಶ್ರೀ ಬಸವ ಕುಮಾರ ಪಾಟೀಲ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಂಘ ಹಾಗೂ ಕುಂದಗನ್ನಡ ಸಂಘ ಆಯೋಜಿಸಿದ ‘ಅಕ್ಷರ-ಅಕ್ಕರೆಯ ಹೊನಲು’ ವಿಶೇಷ ಉಪನ್ಯಾಸ […]
ಕುಂದಾಪುರ : ಬಾಕ್ಸಿಂಗ್ ನಲ್ಲಿ ಕಂಚಿನ ಪದಕ ವಿಜೇತ ಎಚ್.ಎಮ್.ಎಮ್ ಶಾಲೆಯ ಸದ್ವಿನ್
ಕುಂದಾಪುರ (ಡಿ.12) : ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಮತ್ತು ಗ್ಲಾಡಿಯೇಟರ್ಸ್ ಬಾಕ್ಸಿಂಗ್ ಅಕಾಡೆಮಿ (ರಿ). ಜಂಟಿ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲ್ಪಟ್ಟ ಇಂಟರ್ ಕ್ಲಬ್ ಬಾಕ್ಸಿಂಗ್ ಚಾಂಪಿಯನ್ ಶಿಪ್ 2024ರಲ್ಲಿ ಕುಂದಾಪುರದ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ 7ನೇ ತರಗತಿ ವಿದ್ಯಾರ್ಥಿ ಸದ್ವಿನ್ ಶೆಟ್ಟಿ 48ರಿಂದ 50ಕೆ.ಜಿ ಕಬ್ಸ್ ವಿಭಾಗದ ಬಾಕ್ಸಿಂಗ್ ನಲ್ಲಿ ಭಾಗವಹಿಸಿ, ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ […]
ಅಂತರಾಷ್ಟ್ರೀಯ ಮಟ್ಟದ ಯೋಗ ಸ್ಪರ್ಧೆ: ಹೆಮ್ಮಾಡಿ ಜನತಾ ಪಿ ಯು ಕಾಲೇಜಿನ ಧನ್ವಿ ಮರವಂತೆಗೆ ಚಿನ್ನದ ಪದಕ
ಹೆಮ್ಮಾಡಿ ( ಡಿ,12): ಥೈಲ್ಯಾಂಡ್ ಯೂತ್ ಯೋಗ ಅಸೋಸಿಯೇಷನ್ ಮತ್ತು ವರ್ಲ್ಡ್ ಯೂಥ್ ಯೋಗ ಫೆಡರೇಶನ್ ಹಾಗೂ ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್ ರಿಜಿಸ್ಟರ್ಡ್ ಶಿವಮೊಗ್ಗ ಕರ್ನಾಟಕ ಇವರ ಸಹಭಾಗಿತ್ವದಲ್ಲಿ ಡಿಸೆಂಬರ್ 09 ರಂದು ಥೈಲ್ಯಾಂಡ್ ನ ಪಟ್ಟಾಯದಲ್ಲಿ ನಡೆದ 6ನೇ ವರ್ಷದ ಅಂತರಾಷ್ಟ್ರೀಯ ಯೋಗ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಏಳು ದೇಶಗಳ ಸ್ಪರ್ಧಿಗಳಲ್ಲಿ ಸುಮಾರು 80 ಜನ ಸ್ಪರ್ಧಿಗಳು ಭಾಗವಹಿಸಿದ್ದರು. […]
ಕ್ರಿಯೇಟಿವ್ ಕಾಲೇಜಿನಲ್ಲಿ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಮತ್ತು ಪಠ್ಯೇತರ ಸ್ಪರ್ಧೆಗಳು
ಉಡುಪಿ ( ಡಿ.12): ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ( ಪದವಿಪೂರ್ವ ) ಉಡುಪಿ ಜಿಲ್ಲೆ ಹಾಗೂ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ವಿದ್ಯಾರ್ಥಿಗಳ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಮತ್ತು ಪಠ್ಯೇತರ ಸ್ಪರ್ಧೆಗಳು ಡಿಸೆಂಬರ್ 09 ರಂದು ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ […]
ಬಿ. ಬಿ. ಹೆಗ್ಡೆ ಕಾಲೇಜು: ಸಿಬ್ಬಂದಿಗಳ ವಾರ್ಷಿಕ ಸಭೆ
ಕುಂದಾಪುರ (ಡಿ.09): ಸಂಸ್ಥೆಯ ಬೆಳವಣಿಗೆಗೆ ವಿದ್ಯಾರ್ಥಿಗಳಷ್ಟೇ ಸಿಬ್ಬಂದಿ ವರ್ಗದವರೂ ಮುಖ್ಯ. ಸಿಬ್ಬಂದಿ ಸಂಘದ ಮುಖೇನ ನಾವೆಲ್ಲರೂ ಸಮಾನ ಮನಸ್ಕರಾಗಿ ದುಡಿದಾಗ ಸಂಸ್ಥೆಯ ಯಶಸ್ಸು ಸಾಧ್ಯ ಎಂದು ಕಾಲೇಜಿನ ಪಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಕಾಲೇಜಿನ ಸಿಬ್ಬಂದಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ವಾರ್ಷಿಕ ಸಭೆಯನ್ನು ಉದ್ಧೇಶಿಸಿ ಮಾತನಾಡಿದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಸಿದರು. ಸಿಬ್ಬಂದಿ ಸಂಘದ ಕಾರ್ಯದರ್ಶಿ, ಕಾರ್ಯಕ್ರಮದ ಸಂಯೋಜಕ ಶ್ರೀ ಮಹೇಶ್ […]
ಗಂಗೊಳ್ಳಿ : ನಿಭೃತ ಕಾದಂಬರಿ ಬಿಡುಗಡೆ
ಗಂಗೊಳ್ಳಿ( ಡಿ.10): ಪತ್ತೆದಾರಿಯಂತಹ ಕಾದಂಬರಿಗಳನ್ನು ಬರೆಯುವುದು ಯಾವುದೇ ಲೇಖಕನಿಗೆ ಬಹಳ ದೊಡ್ಡ ಸವಾಲು. ಈ ಸವಾಲನ್ನು ನರೇಂದ್ರ ಅವರು ಯಶಸ್ವಿಯಾಗಿ ನಿಭಾಯಿಸಿದ್ದಾರೆ ಎಂದು ನಿವೃತ್ತ ಇತಿಹಾಸ ಉಪನ್ಯಾಸಕ ಎಚ್ ಭಾಸ್ಕರ್ ಶೆಟ್ಟಿ ಹೇಳಿದರು. ಅವರು ಗಂಗೊಳ್ಳಿಯಲ್ಲಿ ನಡೆದ ಯುವ ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಅವರ ನಿಭೃತ ಪತ್ತೆದಾರಿ ಕಾದಂಬರಿಯನ್ನು ಜಂಟಿಯಾಗಿ ಬಿಡುಗಡೆಗೊಳಿಸಿ ಮಾತನಾಡಿದರು. ಕುಂದಾಪುರದ ಚಿನ್ಮಯ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಉಮೇಶ್ ಪುತ್ರನ್ ಅವರು ಮಾತನಾಡಿ ಪುಸ್ತಕಗಳು […]
“ಸೈನ್ಸ್ ಟೀಚಿಂಗ್ ಸ್ಕಿಲ್ಸ್” ವಿಶೇಷ ಕಾರ್ಯಾಗಾರ
ಕುಂದಾಪುರ (ಡಿ. 4): ಟೀಚರ್ ಟ್ರೈನಿಂಗ್ ಅಕಾಡೆಮಿ, ಕುಂದಾಪುರ ಇಲ್ಲಿನ ಶಿಕ್ಷಕ ವಿದ್ಯಾರ್ಥಿಗಳಿಗೆ “ಸೈನ್ಸ್ ಟೀಚಿಂಗ್ ಸ್ಕಿಲ್ಸ್” ಕುರಿತ ವಿಶೇಷ ತರಬೇತಿ ಕಾರ್ಯಾಗಾರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕವಿತಾ ಭಟ್ ಮತ್ತು ರವಿಚಂದ್ರರು ಪಾಲ್ಗೊಂಡು ತಮ್ಮ ಅನುಭವನ್ನು ಹಂಚಿಕೊಂಡರು. ಪ್ರೀಸ್ಕೂಲ್ ಶಿಕ್ಷಕರಿಗೆ ಮಕ್ಕಳಿಗೆ ವಿಜ್ಞಾನ ಕಲಿಸುವುದು ಹೇಗೆ ಸರಳ ಮತ್ತು ಆಕರ್ಷಕವಾಗಿರಬಹುದು ಎಂಬುದರ ಬಗ್ಗೆ ತರಬೇತಿ ನೀಡುವುದರ ಮೂಲಕ ತಮ್ಮ ಪ್ರಸ್ತುತಿಯಲ್ಲಿ, “ಚಿಕ್ಕ ಮಕ್ಕಳಿಗೆ ಕಲಿಕೆ […]
ವಿಭಾಗಿಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ಕಾರ್ಕಳ ಜ್ಞಾನಸುಧಾದ ಇಬ್ಬರು ರಾಜ್ಯಮಟ್ಟಕ್ಕೆ
ಉಡುಪಿ(ಡಿ.11) : ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಹಾಗೂ ಕ್ರಿಯೆಟಿವ್ ಪಿ.ಯು.ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 2024-25ನೇ ಸಾಲಿನಲ್ಲಿ ನಡೆಸಲಾದ ಪದವಿ ಪೂರ್ವ ಕಾಲೇಜುಗಳ ಮೈಸೂರು ವಿಭಾಗೀಯ ಮಟ್ಟದ ವತಿಯಿಂದ ಡಿಸೆಂಬರ್ 9ರಂದು ನಡೆದ 2024-25ನೇ ಸಾಲಿನ ಉಡುಪಿ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಇಂಗ್ಲಿಷ್ ಪ್ರಬಂಧದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಮಯೂರ್.ಎಂ.ಗೌಡ ದ್ವಿತೀಯ […]
ಧನ್ವಿ ಮರವಂತೆ ಅಂತಾರಾಷ್ಟ್ರೀಯ ಯೋಗ ಚಾಂಪಿಯನ್ ಶಿಫ್ ಸ್ಪರ್ಧೆಗೆ ಆಯ್ಕೆ
ಹೆಮ್ಮಾಡಿ( ಡಿ .9): ಥಾಯ್ಲೆಂಡ್ ನಲ್ಲಿ ನೆಡೆಯುವ ಅಂತರಾಷ್ಟ್ರೀಯ ಮಟ್ಟದ ವರ್ಷಿಣಿ ಯೋಗ ಎಜ್ಯುಕೇಶ ನ್ ಆಂಡ್ ಕಲ್ಚರಲ್ ಸ್ಪೋರ್ಟ್ಸ್ ಟ್ರಸ್ಟ್. ರಿ.ಶಿವಮೊಗ್ಗ ಇವರ ವತಿಯಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಶಿಫ್ ಸ್ಪರ್ಧೆಗೆ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಧನ್ವಿ ಪೂಜಾರಿ ಮರವಂತೆ ಆಯ್ಕೆಯಾಗಿರುತ್ತಾಳೆ. ಆಯ್ಕೆಯಾದ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.










