ಕುಂದಾಪುರ(ಜು,02): ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿನ ಹಳೆ ವಿದ್ಯಾರ್ಥಿ ಸಂಘದವರಿಂದ ಕಾಲೇಜಿನ ದೂರದ 150 ವಿದ್ಯಾರ್ಥಿಗಳಿಗೆ ಪ್ರತಿವರ್ಷ ಊಟದ ವ್ಯವಸ್ಥೆ ಮಾಡುತ್ತಿದ್ದು ಈ ಸಾಲಿನಲ್ಲಿಯೂ ಅದರ ವ್ಯವಸ್ಥೆ ಮಾಡಲಾಗಿದ್ದು ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳು ಹಾಗೂ ಆಡಳಿತ ಮಂಡಳಿ ಸದಸ್ಯರಾದ ಶ್ರೀ ಸೀತಾರಾಮ ನಕತ್ತಾಯ, ಶ್ರೀ ನಾರಾಯಣ , ಯು.ಎಸ್ ಶೆಣೈ ವಿದ್ಯಾರ್ಥಿಗಳಿಗೆ ಊಟ ಬಡಿಸುವುದರೊಂದಿಗೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಬಿ. ಬಿ. ಹೆಗ್ಡೆ ಕಾಲೇಜು : ಸೈಬರ್ ಸೆಕ್ಯೂರಿಟಿ ಅರಿವು ಕಾರ್ಯಕ್ರಮ
ಕುಂದಾಪುರ(ಜು,29) : ಇಲ್ಲಿನ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಸೈಬರ್ ಸೆಕ್ಯೂರಿಟಿಯ ಕುರಿತು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ರಾಷ್ಟ್ರೀಯ ಶಿಕ್ಷಣ ನೀತಿ ವಿಷಯಾಧರಿತ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಶ್ರೀ ಟಿ.ವಿ. ದೇವರಾಜ್ ಅಡಿಷನಲ್ ಎಸ್.ಐ., ಸೈಬರ್ ಕ್ರೈಂ ಡಿಪಾರ್ಟ್ಮೆಂಟ್, ಮಣಿಪಾಲ ಇವರು ವಿವಿಧ ರೀತಿಯ ಸೈಬರ್ ಅಪರಾಧವನ್ನು ತಡೆಗಟ್ಟುವುದು ಮತ್ತು ಅದರಿಂದ ತಪ್ಪಿಸಿಕೊಳ್ಳುವ ರೀತಿಯ ಬಗ್ಗೆ ಮಾತನಾಡುತ್ತಾ, ಹದಿಹರೆಯದ […]
ಸರಸ್ವತಿ ವಿದ್ಯಾಲಯ ಪಿ ಯು ಕಾಲೇಜು, ಗಂಗೊಳ್ಳಿ : ಮಾದಕ ದ್ರವ್ಯ ವಿರೋಧಿ ದಿನಾಚರಣೆ
ಗಂಗೊಳ್ಳಿ(ಜು,29): ಈಗಿನ ಯುವ ಜನತೆಗೆ ಮಾದಕ ದ್ರವ್ಯಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗೆಗೆ ಸಮಗ್ರ ಅರಿವು ಇರಬೇಕು. ಸಮಾಜದಲ್ಲಿ ಈ ವಿಚಾರದ ಬಗ್ಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳಲ್ಲಿ ತಮ್ಮನ್ನು ಸ್ವಯಂ ಪ್ರೇರಿತರಾಗಿ ತೊಡಗಿಸಿಕೊಳ್ಳಬೇಕು ಎಂದು ಗಂಗೊಳ್ಳಿಯ ಆರಕ್ಷಕ ಠಾಣೆಯ ಕ್ರೈಂ ಪಿಎಸ್ಐ ಬಸವರಾಜ ಕನಶೆಟ್ಟಿ ಹೇಳಿದರು. ಉಡುಪಿ ಜಿಲ್ಲಾ ಪೊಲೀಸ್ ಕುಂದಾಪುರ ಉಪ ವಿಭಾಗ ಗಂಗೊಳ್ಳಿ ಆರಕ್ಷಕ ಠಾಣೆ ಮತ್ತು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ […]
ವಿ. ಕೆ. ಅರ್ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ: ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ
ಕುಂದಾಪುರ (ಜು,28): ವಿದ್ಯಾರ್ಥಿಗಳ ಸಾಧನೆಯು ನಮ್ಮ ಸಂಸ್ಥೆಗೆ ಹೆಮ್ಮೆ ತಂದಿದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಛಲವು ಸಾಧನೆಯ ಶಿಖರವನ್ನೇರಿಸಿದೆ. ಮುಂದೆಯೂ ಕೂಡ ಹೆಚ್ಚು ಹೆಚ್ಚು ಸಾಧಿಸುವ ಸಾಧಕರು ನೀವಾಗಿ ಭವಿಷ್ಯದಲ್ಲಿ ನಿಮಗೆ ಒಳ್ಳೆಯದಾಗಲಿ ಎಂದು ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.)ಯ ಸಂಚಾಲಕರು, ಅಧ್ಯಕ್ಷರಾದ ಶ್ರೀ ಬಿ. ಎಮ್. ಸುಕುಮಾರ್ ಶೆಟ್ಟಿಯವರು ಮಾತನಾಡಿದರು. ಅವರು ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಸಂಸ್ಥೆಗಳು 2024-25ನೇ ಸಾಲಿನಲ್ಲಿ ಆಯೋಜಿಸಿದ ಮೊದಲ ಶಿಕ್ಷಕ […]
ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ : ವಿಶ್ವ ರಕ್ತದಾನಿಗಳ ದಿನ
ಕುಂದಾಪುರ (ಜೂನ್ 15) ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 & 2 ಮತ್ತು ಯುವ ರೆಡ್ಕ್ರಾಸ್ ಘಟಕಗಳ ಜಂಟಿ ಆಶ್ರಯದಲ್ಲಿ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ, ಕುಂದಾಪುರ ಇವರ ಸಹಯೋಗದೊಂದಿಗೆ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ರಕ್ತದಾನ ಶಿಬಿರ ಮತ್ತು ಹೆಚ್ಚು ಬಾರಿ ರಕ್ತದಾನ ಮಾಡಿದವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಹೆಚ್ಚು ಬಾರಿ ರಕ್ತದಾನ ಮಾಡಿದ ಕಾಲೇಜಿನ […]
ಆರ್. ಎನ್. ಶೆಟ್ಟಿ ಪಿ ಯು ಕಾಲೇಜು ಕುಂದಾಪುರ: ಮಾದಕ ದ್ರವ್ಯ ವ್ಯಸನದ ದುಷ್ಪರಿಣಾಮಗಳ ಕುರಿತು ಮಾಹಿತಿ ಕಾರ್ಯಕ್ರಮ
ಕುಂದಾಪುರ(ಜು,27): ಡ್ರಗ್ಸ್ ಸೇವನೆಯಂಥ ದುಶ್ಚಟವು ವ್ಯಕ್ತಿಯ ಕೌಟುಂಬಿಕ ಮತ್ತು ಸಾಮಾಜಿಕ ವಲಯಗಳಲ್ಲೂ ಮಾರಕ ಪರಿಣಾಮ ಬೀರುತ್ತದೆ. ಮಾದಕ ದ್ರವ್ಯ ವ್ಯಸನಿಗಳು ದುಶ್ಚಟಕ್ಕೊಳಗಾದ ಎಷ್ಟೋ ವರ್ಷಗಳ ನಂತರವೂ ಸುಭದ್ರ ಜೀವನವನ್ನು ಸಡೆಸುವುದು ಕಷ್ಟವಾಗುವುದರಿಂದ ಪ್ರಾರಂಭದಲ್ಲೇ ದುಶ್ಚಟಗಳಿಂದಾಗುವ ಹಾನಿಗಳ ಬಗ್ಗೆ ಎಚ್ಚರವಹಿಸಬೇಕು ” ಎಂದು ಕುಂದಾಪುರ ಪೊಲೀಸ್ ಠಾಣಾಧಿಕಾರಿ ಶ್ರೀ ವಿನಯ್ ಕೊರ್ಲಳ್ಳಿಯವರು ಹೇಳಿದರು. ಅವರು ಅಂತಾರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ದಿನಾಚರಣೆ- 2024, ಇದರ ಪ್ರಯುಕ್ತ ಕುಂದಾಪುರ ಪೊಲೀಸ್ ಠಾಣೆಯ ಸಹಯೋಗದಲ್ಲಿ ಆರ್.ಎನ್. […]
ಆರ್.ಎನ್.ಶೆಟ್ಟಿ ಪಿ ಯು ಕಾಲೇಜು ಕುಂದಾಪುರ:ಸಿ.ಎ/ ಸಿ.ಪಿ.ಟಿ ಮತ್ತು ಸಿ.ಎಸ್ ಕೋರ್ಸ್ ಗಳ ಬಗ್ಗೆ ಓರಿಯಂಟೇಶನ್ ಕಾರ್ಯಕ್ರಮ
ಕುಂದಾಪುರ(ಜು.26): ಕಾಲೇಜು ಜೀವನದ ಆರಂಭದ ವರ್ಷಗಳಿಂದಲೇ ಪಡೆಯುವ ಸಿ.ಎ/ ಸಿ.ಎಸ್ ಕೋಚಿಂಗ್ ವಿದ್ಯಾರ್ಥಿಗಳಿಗೆ ಪರೀಕ್ಷೆಯ ವಿವಿಧ ಹಂತಗಳಲ್ಲಿ ಉತ್ತೀರ್ಣಗೊಳ್ಳಲು ಸಹಕಾರಿಯಾಗುವುದು ಮಾತ್ರವಲ್ಲದೇ ಇನ್ನಿತರ ಉನ್ನತ ಅಧ್ಯಯನಕ್ಕೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಪಡೆಯಲು ಕೂಡ ಅನುಕೂಲವಾಗುವುದು ” ಎಂದು ಉಡುಪಿಯ ತ್ರಿಶಾ ಸಮೂಹ ಸಂಸ್ಥೆಗಳ ಸ್ಥಾಪಕರಾದ C.A ಗೋಪಾಲಕೃಷ್ಣ ಭಟ್ ರವರು ತಿಳಿಸಿದರು. ಅವರು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಸಿ.ಎ/ ಸಿ.ಪಿ.ಟಿ ಮತ್ತು ಸಿ.ಎಸ್ […]
ಎಕ್ಸಲೆಂಟ್ ಕಾಲೇಜು ಕುಂದಾಪುರ: ವಿಶ್ವ ಯೋಗ ದಿನಾಚರಣೆ
ಕುಂದಾಪುರ(ಜು,26): ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆ, ಸುಣ್ಣಾರಿಯಲ್ಲಿ ವಿಶ್ವಯೋಗ ದಿನಾಚರಣೆಯನ್ನು ಪ್ರಸಿದ್ಧ ಯೋಗ ತರಬೇತುದಾರರ ಸಮ್ಮುಖದೊಂದಿಗೆ ಅದ್ಧೂರಿಯಾಗಿ ಆಚರಿಸಲಾಯಿತು. ಈ ಸುಸಂದರ್ಭದಲ್ಲಿ ರಾಜ್ಯ ಕಂಡ ಶ್ರೇಷ್ಠ ಯೋಗ ತರಬೇತುದಾರರಾದ ಅಟಕೆರೆ ಬಾಬು ಪೈ ಹಾಗೂ ಮಹಿಳಾ ಯೋಗ ತರಬೇತುದಾರರಾದ ರೂಪಾ ಬಾಬು ಪೈ ಯವರು ವಿಶೇಷ ಅತಿಥಿಗಳಾಗಿ ಆಗಮಿಸಿ ದೀಪ ಬೆಳಗಿಸುವ ಮೂಲಕ ವಿದ್ಯಾರ್ಥಿಗಳಿಗೆ ಯೋಗದ ಮಹತ್ವದ ಬಗ್ಗೆ ಹಾಗೂ ಯೋಗದ ಹಲವಾರು ಭಂಗಿಗಳ ಪ್ರಯೋಜನದ ಸಾರವನ್ನು […]
ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜು : ಅಂತರಾಷ್ಟ್ರೀಯ ಯೋಗ ದಿನಾಚರಣೆ
ಮೂಡ್ಲಕಟ್ಟೆ (ಜು,26): ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಾಲೇಜಿನ ಎನ್ ಎಸ್ ಎಸ್ ಘಟಕ ಹಾಗೂ ವೈ ಆರ್ ಸಿ ಘಟಕದ ವತಿಯಿಂದ ಯೋಗ ತರಭೇತಿ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಯೋಗ ಶಿಕ್ಷಕರಾದ ಶ್ರೀ ಮಂಜುನಾಥ ಬಿಜೂರು ಆಗಮಿಸಿದ್ದರು. ಯೋಗ ಎಂದರೆ ಕೇವಲ ಆಸನಗಳಲ್ಲ, ಅದಕ್ಕೂ ಹೊರತಾಗಿ ನಾವು ಪಾಲಿಸಬೇಕಾದ ನಿಯಮಗಳನ್ನು ವಿವರವಾಗಿ ತಿಳಿಸಿಕೊಟ್ಟಿದ್ದಲ್ಲದೆ ದಿನನಿತ್ಯ ಮಾಡಬಹುದಾದ ಕೆಲವು ಸರಳ […]
ಸರಸ್ವತಿ ವಿದ್ಯಾಲಯ ಗಂಗೊಳ್ಳಿ: ವಾರ್ಷಿಕ ಸಂಚಿಕೆ ‘ದೃಷ್ಟಿ’ ಅನಾವರಣ
ಗಂಗೊಳ್ಳಿ (ಜು,26): ಯಾವುದೇ ವಿದ್ಯಾಸಂಸ್ಥೆಯ ವಾರ್ಷಿಕ ಸಂಚಿಕೆಯು ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ಕಾರಣವಾಗುತ್ತದೆ ಹಾಗೂ ಸುಪ್ತ ಮನಸ್ಸಿನ ಭಾವನೆಗಳಿಗೆ ವೇದಿಕೆಯಾಗುತ್ತದೆ. ಶಿಕ್ಷಣವು ಉದ್ಯಮವಾಗುತ್ತಿರುವ ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಕ್ರಿಯಾಶೀಲತೆ ಶೂನ್ಯವಾಗುತ್ತಿದೆ ಇಂತಹ ಸಮಯದಲ್ಲಿ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪಿಯು ಕಾಲೇಜಿನ ವಾರ್ಷಿಕ ಸಂಚಿಕೆ ವಿದ್ಯಾರ್ಥಿಗಳಲ್ಲಿನ ಕೌಶಲ್ಯವನ್ನು ಹೊರಹೊಮ್ಮಿಸುವಲ್ಲಿ ಗಮನಾರ್ಹ ಕಾರ್ಯವಾಗಿದೆ ಎಂದು ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಉದಯ ಕುಮಾರ್ ಶೆಟ್ಟಿ ಹೇಳಿದರು. ಇತ್ತೀಚಿಗೆ ಗಂಗೊಳ್ಳಿಯ […]










