ಕುಂದಾಪುರ (ನ.11): ಕುಂದಾಪುರದಲ್ಲಿ ವೈದ್ಯಕೀಯ, ಶಿಕ್ಷಣ ಮತ್ತು ಉದ್ಯಮ ಕ್ಷೇತ್ರದಲ್ಲಿ ಮಹತ್ತರ ಸಾಧನೆಗೈದ ಪ್ರಮುಖರಲ್ಲಿ ಡಾ| ಬಿ. ಬಿ. ಹೆಗ್ಡೆ ಅವರು ಅಗ್ರಪಂಕ್ತಿಯಲ್ಲಿದ್ದಾರೆ. ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ಮಾಡುವುದರ ಜೊತೆಗೆ ನೂರಾರು ಜನರಿಗೆ ಬದುಕನ್ನು ಕಟ್ಟಿಕೊಳ್ಳಲು ಡಾ| ಬಿ. ಬಿ. ಹೆಗ್ಡೆಯವರ ಹೆಸರಿನಲ್ಲಿ ಸ್ಥಾಪಿಸಲ್ಪಟ್ಟ ಈ ಸಂಸ್ಥೆಯಲ್ಲಿ ಡಾ| ಬಿ. ಬಿ. ಹೆಗ್ಡೆಯವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಎಚ್ ಎಮ್ ಎಮ್ ಮತ್ತು ವಿ ಕೆ ಆರ್ : ಚೆಸ್ ನಲ್ಲಿ ಸಾಧನೆ
ಕುಂದಾಪುರ ( ನ ,10): ಕುಂದಾಪುರ ಎಜುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಗಳ 6ನೇ ತರಗತಿಯ ಅದ್ಯಾನ್ ಜಾವೆದ್ ಸಾಗರದ ಕಿಂಗ್ಸ್ ಮೇಜ್ ಅಕಾಡೆಮಿ ಇವರು ಆಯೋಜಿಸಿದ ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್ ಅಂಡರ್ 12 ಕೆಟಗರಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾನೆ. ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್, ವಿವಿಧ ವಿಭಾಗಗಳ […]
ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್ ನಲ್ಲಿ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗಳ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ (ನ,.5) : ಕುಂದಾಪುರ ಎಜುಕೇಶನ್ ಸೊಸೈಟಿ (ರಿ. ) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ಶ್ರೀ ಸಿದ್ಧಿ ವಿನಾಯಕ ಚೆಸ್ ಅಕಾಡೆಮಿ (ರಿ.) ಉಪ್ಪುಂದ ಮತ್ತು ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ (ರಿ.) ಉಡುಪಿ ಇವರ ಸಹಭಾಗಿತ್ವದಲ್ಲಿ ನಡೆಸಿದ “ಶ್ರೀ ಸಿದ್ಧಿ ವಿನಾಯಕ ಟ್ರೋಫಿ” ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್ – 2025 ಸ್ಪರ್ಧೆಯಲ್ಲಿ ಬಹುಮಾನಗಳನ್ನು […]
ರಾಜ್ಯ ಮಟ್ಟದ ಕ್ರೀಡಾಕೂಟ: ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ( ನ ,5): ಈಗಾಗಲೇ ನಡೆಯುತ್ತಿರುವ ರಾಜ್ಯ ಮಟ್ಟದ ವಿವಿಧ ಕ್ರೀಡಾ ಕೂಟಗಳಲ್ಲಿ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಯೋಗೀಶ (ನೆಟ್ ಬಾಲ್ )ಆದಿತ್ಯ (ವಾಲಿಬಾಲ್ )ಸಾಹಿಮ್ (ಕಬಡ್ಡಿ )ಪ್ರಣೀತ (ಕುಸ್ತಿ )ಭಾಗವಹಿಸಿ ಉತ್ತಮ ಸಾಧನೆಗೈದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪುರದ ಹೆಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮದ ಆಚರಣೆ
ಕುಂದಾಪುರ : (ನ.1) : ಕುಂದಾಪುರ ಎಜುಕೇಶನ್ ಸೊಸೈಟಿ (ರಿ. ) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗಳಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಸಂಸ್ಥೆಯ ಉಪಪ್ರಾಂಶುಪಾಲರಾದ ಶ್ರೀಮತಿ ಶುಭ ಕೆ ಎನ್ ಅವರು ಕನ್ನಡ ನಾಡು ನುಡಿಯ ಬಗ್ಗೆ ಹೆಮ್ಮೆ ಇರಬೇಕು. ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ನಮ್ಮೆಲ್ಲರ ಪಾತ್ರ ಪ್ರಮುಖವಾದದ್ದು. ಕನ್ನಡ ಭಾಷೆ ಹೃದಯದ ಧ್ವನಿಯಾಗಿದೆ ಎಂದು […]
ಬಿ. ಬಿ. ಹೆಗ್ಡೆ ಕಾಲೇಜು: ‘ಉಗಮ-2025’ ಸಂಪನ್ನ
ಕುಂದಾಪುರ (ಅ.31): ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೆ ಅವಕಾಶ ನೀಡಿದಾಗ ಮಕ್ಕಳು ಬೌದ್ಧಿಕವಾಗಿ ಬೆಳೆಯಲು ಸಾಧ್ಯ. ಹೀಗಾಗಿ ಮಕ್ಕಳಿಗೆ ನೀಡಿದ ಈ ಅವಕಾಶ ಪ್ರಶಂಸನೀಯ ಎಂದು ಗುತ್ತಿಗೆದಾರರಾದ ಯಡಾಡಿ-ಮತ್ಯಾಡಿಯ ಲಯನ್ ಅರುಣ್ ಕುಮಾರ್ ಹೆಗ್ಡೆ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಉಗಮ-2025’ರ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ| ಕೆ. ಉಮೇಶ್ […]
ಬಿ. ಬಿ. ಹೆಗ್ಡೆ ಕಾಲೇಜು : ಸರ್ದಾರ್ ವಲ್ಲಭಭಾಯಿ ಪಟೇಲ್ 150 ನೇ ಜನ್ಮ ದಿನಾಚರಣೆ
ಕುಂದಾಪುರ (ಅ.31): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 ಮತ್ತು 2 ರ ಆಶ್ರಯದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಪ್ರಯುಕ್ತ ಸ್ವಚ್ಛ ಸಂಗಮ್ ಸ್ವಚ್ಛತಾ ಕಾರ್ಯಕ್ರಮ ಹಾಗೂ ‘ಸರ್ದಾರ್ ವಲ್ಲಭಭಾಯಿ ಪಟೇಲ್: ಭಾರತದ ರಾಷ್ಟ್ರ ಶಿಲ್ಪಿ’ ಎನ್ನುವ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ […]
ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ 2025 ಸ್ಪರ್ಧೆ: ಆಧ್ಯಾ ವಿ. ಮೊಗವೀರ ಪ್ರಥಮ ಸ್ಥಾನ
ಕುಂದಾಪುರ (ಆ ,31): ಮೂಡಬಿದ್ರೆ ಆಳ್ವಾಸ್ ಪಿ ಯು ಕಾಲೇಜಿನ ಕೆ . ಅಮರ್ ನಾಥ ಶೆಟ್ಟಿ ವೇದಿಕೆಯಲ್ಲಿ ಅಕ್ಟೋಬರ್ 26 ರಂದು ನಡೆದ ಐಡಿಯಲ್ ಪ್ಲೇ ಅಬಕಸ್ ಇಂಡಿಯಾ( ಪ್ರೈ) ಲಿಮಿಟೆಡ್ ವತಿಯಿಂದ ನಡೆದ 20ನೇ ರಾಜ್ಯ ಮಟ್ಟದ ಅಬಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ 2025 ಸ್ಪರ್ಧೆಯಲ್ಲಿ ಮಂಕಿ ಶಾಲೆಯ 3ನೇ ತರಗತಿಯ ಆಧ್ಯಾ ವಿ. ಮೊಗವೀರ ಓಪನ್ ಕೇಟಗರಿ ZEL ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. […]
ಸಂದೀಪ್ ಪೂಜಾರಿ ತ್ರಾಸಿ ಅಂತರಾಷ್ಟ್ರೀಯ ಯೋಗ ಸ್ಪರ್ಧೆಗೆ ಆಯ್ಕೆ
ಕುಂದಾಪುರ ( ನ .02): ವರ್ಷಿಣಿ ಯೋಗ ಶಿಕ್ಷಣ, ಸಾಂಸ್ಕೃತಿಕ ಮತ್ತು ಕ್ರೀಡಾ ಟ್ರಸ್ಟ್ (ರಿ.),ಶಿವಮೊಗ್ಗ, ಮತ್ತು ಕಲಾ ಯೋಗಾಸನ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಕಾಡೆಮಿ ತುಮಕೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತುಮಕೂರು ಇವರ ಇವರ ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ 8 ನೇ ವರ್ಷದ ರಾಷ್ಟ್ರಮಟ್ಟದ ಯೋಗಾಸನಾ ಸ್ಪರ್ಧೆ 2025-26 ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣ ತುಮಕೂರು ನಲ್ಲಿ ನಡೆದ 8 ನೇ ವರ್ಷದ […]
ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಆರಿತ್ಮೆಟಿಕ್ಸ್ – 2025 ಸ್ಪರ್ಧೆ : ಶ್ರೀಧರ್ ಗಾಣಿಗ ದ್ವಿತೀಯ ರನ್ನರ್ ಆಪ್
ಕುಂದಾಪುರ ( ಆ ,31): ಮೂಡಬಿದಿರೆಯ ಆಳ್ವಾಸ್ ಪಿಯು ಕಾಲೇಜಿನ ಕೆ.ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಡೆದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ಸ್ – 2025 ಸ್ಪರ್ಧೆಯಲ್ಲಿ ಗಂಗೊಳ್ಳಿ ಸ್ಟೆಲ್ಲಾ ಮಾರಿಸ್ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿಯ ಶ್ರೀಧರ್ ಗಾಣಿಗ ZX ವಿಭಾಗದ ಸ್ಪರ್ಧೆಯಲ್ಲಿ ದ್ವಿತೀಯ ರನ್ನರ್ ಆಪ್ ಸ್ಥಾನವನ್ನು ಪಡೆದಿದ್ದಾರೆ. ಈತನಿಗೆ ಐಡಿಯಲ್ ಪ್ಲೇ […]










