ಕುಂದಾಪುರ(ಅ,17): ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಶ್ರಾವ್ಯ ಇವಳು ಬೆಂಗಳೂರು ನಗರ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಬೆಂಗಳೂರು ದಕ್ಷಿಣ ಜಿಲ್ಲೆ ಇಲ್ಲಿ ನಡೆದ 17ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ವಿಜೇತಳಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ:ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಕುಂದಾಪುರ (ಅ.15): ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ 07 ದಿನಗಳ ವಾರ್ಷಿಕ ವಿಶೇಷ ಶಿಬಿರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೆದೂರು ಇಲ್ಲಿ ಉದ್ಘಾಟನೆಗೊಂಡಿತು. ಕೆದೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಉದ್ಯಮಿಗಳಾದ ಶಾನಾಡಿ ಶ್ರೀ ಸಂಪತ್ ಕುಮಾರ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಕೆದೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಈ ಶಿಬಿರದ ನೇತೃತ್ವ ವಹಿಸಿರುವ […]
ಅ.15 ರಂದು ಬೆಂಗಳೂರಿ ನಲ್ಲಿ ಆಪದ್ಬಾಂಧವ- ಜೀವ ರಕ್ಷಕ ಈಶ್ವರ್ ಮಲ್ಪೆಯವರಿಗೆ ಡಾ.ಎ ಪಿ ಜಿ ಕಲಾಂ ಪ್ರಶಸ್ತಿ ಪ್ರದಾನ
ಕುಕಂದಾಪುರ(ಅ.15): ಕರಾವಳಿಯ ಆಪದ್ಬಾಂಧವ- ಜೀವ ರಕ್ಷಕ ಈಶ್ವರಮಲ್ಪೆ ಯವರು ಅಕ್ಟೋಬರ್ 15 ಬೆಂಗಳೂರಿನಲ್ಲಿ ಅಕ್ಷಯ ಪಾತ್ರೆ ಮಾನವ ಫೌಂಡೇಶನ್ ವತಿಯಿಂದ ಕೊಡಲಾಗುವ ಡಾ. ಎಪಿಜೆ ಕಲಾಂ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಪ್ರಶಸ್ತಿಯನ್ನು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಪ್ರಧಾನ ಮಾಡಲಿದ್ದು ಈ ಕಾರ್ಯಕ್ರಮದಲ್ಲಿ ದಿ ಗ್ರೇಟ್ ಕಲಿ ಮಹಿಮಾ ಚೌದ್ರಿ ಬಾಲಿವುಡ್ ಸಿಂಗರ್ ಜಾವೇದ್ ಆಲಿ ಮಿಸ್ ಇಂಡಿಯಾ ಸಿಮ್ರಾನ್ ಅಹುಜಾ ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಗಣ್ಯ […]
ಶ್ರೀ ಗುರುಕುಲ ತಿಲಕ ಪುರಸ್ಕಾರಕ್ಕೆ ಕೃಷ್ಣಮೂರ್ತಿ ಡಿಬಿ ಆಯ್ಕೆ
ಕುಂದಾಪುರ (ಆ,12):ಅಂತರರಾಷ್ಟ್ರೀಯ ಶಿಕ್ಷಕರ ದಿನಾಚರಣೆಯ (ಅಕ್ಟೋಬರ್ 5) ಪ್ರಯುಕ್ತ “ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆ (ರಿ) ಇವರು ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ನೀಡುವ ಶ್ರೀ ಗುರುಕುಲ ತಿಲಕ ಪುರಸ್ಕಾರ ಕ್ಕೆ ಉಪನ್ಯಾಸಕ ಕೃಷ್ಣಮೂರ್ತಿ ಡಿಬಿ ಆಯ್ಕೆ ಯಾಗಿದ್ದಾರೆ ಕೃಷ್ಣಮೂರ್ತಿ ಡಿಬಿ ಯವರು ಕುಂದಾಪುರದ ಆರ್ ಎನ್ ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ಕನ್ನಡ ವಿಭಾಗದ ಮುಖ್ಯಸ್ಥರಾದ ಕೆಲಸ ನಿರ್ವಹಿಸುತಿದ್ದಾರೆ.
ಸೇವಾ ಮನೋ ಭಾವನೆ ಹಾಗೂ ಸಹಬಾಳ್ವೆ ಮೂಲಕ ಬದುಕು ಕಲಿಸಲು ಎನ್ ಎಸ್ ಎಸ್ ಸಹಕಾರಿ-ವಿ. ಸುನಿಲ್ ಕುಮಾರ್
ಕಾರ್ಕಳ(ಆ,12): ಸೇವಾ ಮನೋ ಭಾವನೆ ಹಾಗೂ ಸಹಬಾಳ್ವೆ ಮೂಲಕ ಬದುಕು ಕಲಿಸಲು ಎನ್ ಎಸ್ ಎಸ್ ಸಹಕಾರಿ ಯಾಗಿದೆ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು ಅವರು ಕಾರ್ಕಳ ತಾಲೂಕಿನ ಕ್ರಿಯೆಟಿವ್ ಕಾಲೇಜು ವತಿಯಿಂದ ಹಿರ್ಗಾನದ ಬಿ.ಎಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸುಲೋಚನಾ ಸುಂದರ ಶೆಟ್ಟಿ ಕಲಾ ವೇದಿಕೆಯಲ್ಲಿ ನಡೆದ ಕಾಲೇಜಿನ ಮೊದಲ ಎನ್ ಎಸ್ ಎಸ್ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಸೇವಾ ಭಾವನೆ ಜೀವನದ […]
ನೆತ್ತರ ನೆರವು ಕಾರ್ಯಕ್ರಮದ ಸಂಯೋಜಕರಾಗಿ ಲ .ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು ಆಯ್ಕೆ
ಕುಂದಾಪುರ(ಆ10): ಕುಂದಾಪುರ ತಾಲೂಕು ಯುವ ಬಂಟರ ಸಂಘ(ರಿ) ಕುಂದಾಪುರದ ನೆತ್ತರ ನೆರವು ಕಾರ್ಯಕ್ರಮದ ಸಂಯೋಜಕರಾಗಿ ಲ .ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು ಆಯ್ಕೆಯಾಗಿದ್ದಾರೆ. ಕುಂದಾಪುರ ತಾಲೂಕು ಯುವ ಬಂಟರ ಸಂಘ(ರಿ) ಕುಂದಾಪುರ ,ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ರಕ್ತ ನಿಧಿ ಕೇಂದ್ರ ಕುಂದಾಪುರ, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್, ರಾಷ್ಟ್ರೀಯ ಸೇವಾ ಯೋಜನಾ ಘಟಕ ಡಾ.ಬಿ.ಬಿ ಹೆಗ್ಡೆ ಕಾಲೇಜು, ಭಂಡಾಕಾರ್ಸ್ ಆರ್ಟ್ಸ್ ಮತ್ತು ಸಾಯನ್ಸ್ ಕಾಲೇಜು, ಶ್ರೀ ವರದರಾಜ ಶೆಟ್ಟಿ […]
ರಾಜ್ಯ ಮಟ್ಟದ ಗ್ರಾಮೀಣ ಐ.ಟಿ.ಕ್ವಿಜ್ ಗೆ ಹೆಮ್ಮಾಡಿ ಜನತಾ ಪಿ ಯು ಕಾಲೇಜಿನ ತೇಜಸ್ವಿ ಮಿಥುನ್ ಆಯ್ಕೆ
ಹೆಮ್ಮಾಡಿ(ಆ,10): ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಜಿಲ್ಲಾ ಮಟ್ಟದ ಗ್ರಾಮೀಣ ಐ.ಟಿ. ಕ್ವಿಜ್ ನಲ್ಲಿ ಸ್ಪರ್ಧಿಸಿದ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗ ವಿದ್ಯಾರ್ಥಿ ತೇಜಸ್ವಿ ಮಿಥುನ್ ಜಿಲ್ಲಾ ಮಟ್ಟದಲ್ಲಿ ವಿಜೇತರಾಗಿ ರಾಜ್ಯ ಮಟ್ಟದ ಗ್ರಾಮೀಣ ಐ.ಟಿ.ಕ್ವಿಜ್ ಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಡಾ|ಬಿ.ಬಿ.ಹೆಗ್ಡೆ ಕಾಲೇಜು: ವೈಬ್ರೆಂಟ್ ಸ್ಟಾರ್ಟ್ ಅಪ್@ Rs100 ಸ್ಪರ್ಧೆ
ಕುಂದಾಪುರ (ಆ,06): ವಿದ್ಯಾರ್ಥಿ ದೆಸೆಯಲ್ಲಿಯೇ ಉದ್ಯಮಶೀಲತೆಯ ಕೌಶಲ್ಯಗಳನ್ನು ಬೆಳೆಸುವ ಸಲುವಾಗಿ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಗಳಿಗೆ ವೈಬ್ರೆಂಟ್ ಸ್ಟಾರ್ಟ್ ಅಪ್@ Rs100 ಸ್ಪರ್ಧೆಯನ್ನು ಆಯೋಜಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ ಉಮೇಶ್ ಶೆಟ್ಟಿಯವರು ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಶುಭ ಹಾರೈಸಿದರು. ವಿಭಾಗದ ಮುಖ್ಯಸ್ಥರಾದ ನಂದಾ ರೈ ಉಪಸ್ಥಿತರಿದ್ದರು. ನೂರು ರೂಪಾಯಿ ಒಳಗಿನ ಮೊತ್ತದ ಕಚ್ಚಾ […]
ಕಾರ್ಕಳ ಕ್ರಿಯೇಟಿವ್ ಕಾಲೇಜಿನ ಎನ್.ಎಸ್.ಎಸ್ ಶಿಬಿರದ ಪೂರ್ವಭಾವಿ ಸಭೆ
ಕಾರ್ಕಳ(ಆ,06): ಇಲ್ಲಿನ ಮೂರೂರಿನಲ್ಲಿ ಅಕ್ಟೋಬರ್ 12 ರಿಂದ 18 ರ ವರೆಗೆ ಬಿ. ಎಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ರಿಯೇಟಿವ್ ಕಾಲೇಜಿನ ಎನ್.ಎಸ್.ಎಸ್ ಶಿಬಿರವು ನಡೆಯಲಿದ್ದು ಅದರ ಪೂರ್ವಭಾವಿಯಾಗಿ ಊರಿನ ಹಿರಿಯರು ಹಾಗೂ ಗಣ್ಯರ ಮಾರ್ಗದರ್ಶನದಲ್ಲಿ ಶಿಬಿರದ ಪೂರ್ವಭಾವಿ ಸಭೆ ಇತ್ತೀಚೆಗೆ ನಡೆಯಿತು. ಕ್ರಿಯೇಟಿವ್ ವಿದ್ಯಾ ಸಂಸ್ಥೆಯ ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ ಯವರು ಶಿಬಿರದ ಆಯೋಜನೆಯ ಉದ್ದೇಶ ಮತ್ತು ನಾಗರಿಕ ಸಮುದಾಯಗಳ ಪ್ರಗತಿ, ಊರಿನವರ ಸಹಕಾರ […]
ಪವರ್ ಲಿಫ್ಟಿಂಗ್ ನಲ್ಲಿ ವೈಷ್ಣವಿಗೆ ಎರಡು ಚಿನ್ನ
ಕುಂದಾಪುರ( ಆ,06): ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಷನ್ ಆಶ್ರಯದಲ್ಲಿ ಮಂಗಳೂರಿನಲ್ಲಿ ನಡೆದ ಪವರ್ ಲಿಫ್ಟಿಂಗ್ ಪಂದ್ಯಕೂಟದಲ್ಲಿ 69 ಕೆ.ಜಿ. ಸಬ್ ಜೂನಿಯರ್ ಬೆಂಚ್ ಪ್ರೆಸ್ ಕ್ಲಾಸಿಕ್ ಮತ್ತು ಇಕ್ವಿಪ್ದ್ ವಿಭಾಗದಲ್ಲಿ ಗಂಗೊಳ್ಳಿಯ ವೈಷ್ಣವಿ ಖಾರ್ವಿ ಅವರು ಪ್ರಥಮ ಸ್ಥಾನ ಪಡೆದು ಎರಡು ಚಿನ್ನದ ಪದಕಗಳನ್ನು ಗಳಿಸಿರುತ್ತಾರೆ. ಈಕೆ ಕುಂದಾಪುರದ ನ್ಯೂ ಹರ್ಕುಲಸ್ ಜಿಮ್ ನ ಸದಸ್ಯೆ. ತರಬೇತುದಾರ ಸತೀಶ್ ಖಾರ್ವಿ ಮತ್ತು ಕಾರ್ತಿಕ್ ಪೂಜಾರಿ ತರಬೇತಿ ನೀಡಿರುತ್ತಾರೆ. ಈಕೆ ಗಂಗೊಳ್ಳಿಯ […]










