ಇಂಗ್ಲಿಷ್ ಹಾಗೂ ಹಿಂದಿ ಭಾಷೆಯಲ್ಲಿ ಬ್ಯಾಂಕ್ ಸಿಬ್ಬಂದಿಗಳ ಜೊತೆ ವ್ಯವಹರಿಸಲು ಗ್ರಾಮೀಣ ಭಾಗದ ಜನತೆಗೆ ಕಷ್ಟ ವಾಗುತ್ತಿದ್ದು, ಇದರಿಂದಾಗಿ ಬ್ಯಾಂಕ್ ಸಿಬ್ಬಂದಿಗಳು ಹಾಗೂ ಗ್ರಾಹಕರ ನಡುವೆ ಭಾಷಾ ಸಂವಹನದ ವಿಷಯದಲ್ಲಿ ಸಂಘರ್ಷಗಳು ಹೆಚ್ಚಾಗುತ್ತಿದೆ.ಆ ನಿಟ್ಟಿನಲ್ಲಿ ಬ್ಯಾಂಕ್ ಗಳಲ್ಲಿ ಪ್ರಾದೇಶಿಕ ಭಾಷೆಗೆ ಹೆಚ್ಚಿನ ಮಹತ್ವ ನೀಡಬೇಕೆಂದು ಡಾ.ಬಿ ಬಿ ಹೆಗ್ಡೆ ಕಾಲೇಜಿನ ವಿದ್ಯಾರ್ಥಿ ಸುಶಾಂತ್ ಶೆಟ್ಟಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ನಿರ್ದೇಶಕರಾದ ಶ್ರೀ ಸತೀಶ ಮರಾಠೆ ಅವರಲ್ಲಿ ಮನವಿ ಮಾಡಿಕೊಂಡರು.ಮಹಾಲಕ್ಷ್ಮಿ […]
Day: January 16, 2021
ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ವಿವಿಧ ಆರ್ಥಿಕ ನೆರವು
ಕುಂದಾಪುರದ ಆರ್. ಎನ್ ಶೆಟ್ಟಿ ಮಿನಿ ಹಾಲ್ ನಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ, ಅಶಕ್ತರಿಗೆ ವೈದ್ಯಕೀಯ ನೆರವು, ಹೊಸ ಮನೆ ನಿರ್ಮಾಣ ಮತ್ತು ಮನೆ ರಿಪೇರಿ ಕುರಿತ ಸಹಾಯಧನದ ಚೆಕ್ ವಿತರಣಾ ಕಾರ್ಯಕ್ರಮ ನಡೆಯಿತು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಸಹಾಯಧನದ ಚೆಕ್ ವಿತರಿಸಿದರು. ಗೌರವ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ ಪ್ರಾಸ್ತಾವಿಸಿದರು.ಇದೇ ಸಂದರ್ಭ ಎಸ್ಎಸ್ಎಲ್ […]
ನಾಳೆ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಸಂಭ್ರಮ -ಉದ್ಘಾಟನಾ ಸಮಾರಂಭ
ಗುಜ್ಜಾಡಿ ಪರಿಸರದಲ್ಲಿ ಶಿಕ್ಷಣದ ಕಂಪನ್ನು ಪಸರಿಸಿ, ಅಕ್ಷರದ ಅಕ್ಕರೆಯನ್ನು ತೋರಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ವರ್ಷ 2019- 20 ರ ಸವಿನೆನಪಿನ ಶತಮಾನೋತ್ಸವ ಭವನ, ರಂಗಮಂದಿರ ಹಾಗೂ ಸ್ಮಾರ್ಟ್ ತರಗತಿಯ ಉದ್ಘಾಟನಾ ಸಮಾರಂಭ ಜನವರಿ 17, 2021 ರಂದು ನಡೆಯಲಿದೆ. ಶತಮಾನೋತ್ಸವ ಭವನದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಂದೂರಿನ ಶಾಸಕರಾದ ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರು ವಹಿಸಲಿದ್ದಾರೆ. ಹಾಗೆಯೇ ಉದ್ಯಮಿಗಳಾದ ಶ್ರೀ ಎನ್.ಟಿ ಪೂಜಾರಿ ಶಾಲೆಯ […]
ಡಾ| ಬಿ. ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ರಾಷ್ಟ್ರೀಯ ಯುವ ದಿನಾಚರಣೆ:
ವಿವೇಕಾನಂದರ ಜಯಂತಿ ಕೇವಲ ಜಯಂತಿಗಷ್ಟೇ ಸೀಮಿತವಾಗಬಾರದು,ವಿದ್ಯಾರ್ಥಿಗಳು ವಿವೇಕಾನಂದರ ತತ್ವ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಆ ಮೂಲಕ ರಾಷ್ಟ್ರೀಯ ಯುವ ದಿನಾಚರಣೆ ಅರ್ಥಪೂರ್ಣವಾಗಬೇಕು ಎಂದು ಕೆನರಾ ಕಿಡ್ಸ್ನ ಸಂಚಾಲಕರಾದ ಶ್ರೀಸುಬ್ರಹ್ಮಣ್ಯ ಶೆಟ್ಟಿ ಹೇಳಿದರು.