ಜಿಲ್ಲೆಯ ಪ್ರಸಿದ್ದ ಧಾರ್ಮಿಕ ಕೇಂದ್ರಗಳಲ್ಲೊಂದಾದ,ಮೊಗವೀರ ಸಮುದಾಯದ ಆರಾಧ್ಯ ದೇವರು ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ನೂತನ ಗರ್ಭಗುಡಿಗೆ ಶಿಲಾನ್ಯಾಸ ಕಾರ್ಯಕ್ರಮ ಫೆಬ್ರವರಿ 21 ರಂದು ಬೆಳಗ್ಗೆ 8.30ಕ್ಕೆ ನಡೆಯಿತು.
Month: February 2021
ಫೆ. 22 ರಂದು ಗಂಗೊಳ್ಳಿಯ ಗ್ರಾಮ ಪಂಚಾಯತ್ ವಿರುದ್ದ ಹಿಂದು ಜಾಗರಣ ವೇದಿಕೆ ಪ್ರತಿಭಟನೆ
ಗಂಗೊಳ್ಳಿ (ಫೆ.21) ಕಳೆದ 2 ವರ್ಷಗಳ ಹಿಂದೆ ಗಂಗೊಳ್ಳಿಯ ಮುಖ್ಯರಸ್ತೆಯಲ್ಲಿನ ನೀರಿನ ಟ್ಯಾಂಕ್ ಬಳಿ ಖಾಸಗಿ ಸ್ಥಳವೊಂದರಲ್ಲಿ ಪಂಚಾಯತ್ ನ ಅನುಮತಿ ಪಡೆಯದೇ ಅನುಮಾನಸ್ಪದ ಅಕ್ರಮ ಕಟ್ಟಡಗಳು ತಲೆ ಎತ್ತುತ್ತಿದ್ದು, ಜೊತೆಗೆ ಅನೇಕ ಅನುಮಾನಾಸ್ಪದ ವ್ಯಕ್ತಿಗಳು ಹೊತ್ತಲ್ಲದ ಹೊತ್ತಿನಲ್ಲಿ ಈ ಭಾಗದಲ್ಲಿ ಜಮಾವಣೆಗೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಗಂಗೊಳ್ಳಿಯ ಹಿಂದು ಜಾಗರಣ ವೇದಿಕೆ ಸ್ಥಳೀಯಾಡಳಿತವಾದ ಗಂಗೊಳ್ಳಿ ಗ್ರಾಮ ಪಂಚಾಯತ್ ನಲ್ಲಿ ಕಾನೂನು ಹೋರಾಟವನ್ನು ನಿರಂತರವಾಗಿ ಮಾಡಿದರೂ ಗ್ರಾಮ ಪಂಚಾಯತ್ ಇದನ್ನು ಗಂಭೀರ […]
ಮತ್ತೆ ಕರೋನಾ ಆತಂಕದ ಕರಿ ಛಾಯೆ
ಉಡುಪಿ (ಫೆ.21) ಕರೋನಾ ಆತಂಕದ ಕಹಿನೆನೆಪು ಮಾಸುವ ಮುನ್ನವೇ ಮತ್ತೆ ಕಾಡತೋಡಗಿದೆ. ಹೌದು ! ಸರಿಸುಮಾರು 1 ವರ್ಷ ಕಳೆದರೂ ಕೋವಿಡ್ ಆರ್ಭಟ ಇನ್ನೂ ನಿಂತಿಲ್ಲ. ಮತ್ತೆ ರಾಜ್ಯದ ಜನತೆಗೆ ಕೋವಿಡ್ ಭಯ ಎದುರಾಗಲಿದೆ! ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಕೋವಿಡ್ ಎರಡನೇ ಅಲೆಯಿಂದ ಉಂಟಾಗುವ ತೊಂದರೆಗಳಿಂದ ರಾಜ್ಯದ ಜನತೆಯನ್ನು ರಕ್ಷಿಸುವ ಕುರಿತು ಸಕಲ ಸಿದ್ದತೆಗೆ ಮುಂದಾಗಿದೆ . ಇಗಾಗಲೇ ಕೇರಳ ಮತ್ತು ಮಹಾರಾಷ್ಟ್ರದಿಂದ ಬರುವ ಜನರ ಬಗ್ಗೆ […]
ಕೊಡಗಿನಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ
ಕೊಡಗು ಹಾಗೂ ಹಾಸನದಲ್ಲಿ ಆಲಿಕಲ್ಲು ಸಹಿತ ಮಳೆ ನಿರಂತರವಾಗಿ ಸುರಿದಿದ್ದು ಕೆಲವೊಂದು ಭಾಗಗಳಲ್ಲಿ ಮಂಜು ಹಾಸಿದಂತೆ ಕಂಡುಬಂದವು.
ಡಾ. ಬಿ. ಬಿ. ಹೆಗ್ಡೆ ಕಾಲೇಜು – ಫೆ.24 ರಂದು ಅಂತರ್ ಕಾಲೇಜು ಮಹಿಳಾ ವಿಭಾಗದ ತ್ರೋಬಾಲ್ ಪಂದ್ಯಾಕೂಟ
ಕುಂದಾಪುರ ಎಜುಕೇಶನ್ ಸೊಸೈಟಿ(ರಿ) ಪ್ರವರ್ತಿತ ಡಾl ಬಿ.ಬಿ ಹೆಗ್ದೆ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಕುಂದಾಪುರ ವಲಯ ಮಟ್ಟದ ಮಹಿಳಾ ವಿಭಾಗದ ತ್ರೋಬಾಲ್ ಪಂದ್ಯಾಕೂಟ ಇದೇ ಫೆಬ್ರವರಿ 24ರಂದು ಕಾಲೇಜಿನ ಬಿ.ಎಂ.ಎಸ್. ಕ್ರೀಡಾಂಗಣದಲ್ಲಿ ನಡೆಯಲಿದೆ.
ಪದುವಾ ಕಾಲೇಜು : ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರ್ಕಾರ, ರಾಜ್ಯ ಎನ್ನೆಸ್ಸೆಸ್ ಘಟಕ ಹಾಗೂ ಮಂಗಳೂರು ವಿಶ್ವವಿದ್ಯಾಲಯದ ಆಶ್ರಯದಲ್ಲಿ ರಾಷ್ಟ್ರೀಯ ಭಾವೈಕ್ಯತಾ ಶಿಬಿರ ಮಂಗಳೂರಿನ ಪದುವಾ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಫೆಬ್ರವರಿ 23 ರಿಂದ ಮಾರ್ಚ್ 1ರ ತನಕ ನಡೆಯಲಿದೆ.
ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕಾರಿಗೆ ಬಸ್ ಡಿಕ್ಕಿ : ಅಪಾಯದಿಂದ ಪಾರು
ಬಿಡದಿ ಬಳಿಯಿರುವ ಕದಂಬ ಹೋಟೆಲ್ ಮುಂಭಾಗದಲ್ಲಿ ರಸ್ತೆ ಕ್ರಾಸ್ ಮಾಡುವಾಗ ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರ ಕಾರು ಅಪಘಾತಕ್ಕೆ ಈಡಾಗಿದೆ.
ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಹಿಳಾ ಮೋರ್ಚಾದ ಕಾರ್ಯಕಾರಣಿ ಸಭೆ
ಭಾರತೀಯ ಜನತಾ ಪಾರ್ಟಿ ಕುಂದಾಪುರ ವಿಧಾನಸಭಾ ಕ್ಷೇತ್ರ ಕುಂದಾಪುರ ಮಂಡಲ ಮಹಿಳಾ ಮೋರ್ಚಾದ ಪ್ರಥಮ ಕಾರ್ಯಕಾರಣಿ ಸಭೆ ಫೆಬ್ರವರಿ 18ರಂದು ಭಾಜಪ ಕಾರ್ಯಾಲಯ ಕುಂದಾಪುರದಲ್ಲಿ ನಡೆಯಿತು.
ಮರವಂತೆ ಕಡಲ ತೀರದಲ್ಲಿ ವಿದ್ಯುತ್ ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ
ಸುಶಿ ಗ್ಲೋಬಲ್ ರಿಸರ್ಚ್ ಸೆಂಟರ್ ವತಿಯಿಂದ ಮರವಂತೆಯ ಕಡಲ ಕಿನಾರೆಯಲ್ಲಿ ಸಮುದ್ರದ ಅಲೆಗಳ ಮೂಲಕ ವಿದ್ಯುತ್ ಉತ್ಪಾದನೆಯ ಬಹುದೊಡ್ಡ ಮಹತ್ವಾಕಾಂಕ್ಷೆಯ ಯೋಜನೆಗೆ ಗುದ್ದಲಿ ಪೂಜೆಯ ಕಾರ್ಯಕ್ರಮ ನೆರವೇರಿತು.
ಪ.ಜಾ ., ಪ.ಪಂಗಡ ದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ
ಕುಂದಾಪುರ ಹಾಗೂ ಬೈಂದೂರು ತಾಲೂಕಿನ 2020-21 ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ರಾಜ್ಯ ವಿದ್ಯಾರ್ಥಿ ವೇತನಕ್ಕೆ (State Scholarship Portal) ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ.