ಕಂಪ್ಯೂಟರ್, ಮೊಬೈಲ್ ಮತ್ತು ಇಂಟರ್ನೆಟ್ ಗಳ ವಿವಿಧ ಮೂಲಗಳನ್ನು ದುರ್ಬಳಕೆ ಮಾಡಿಕೊಂಡು ಕೆಲವು ದುಷ್ಕರ್ಮಿಗಳು ಸಾರ್ವಜನಿಕರನ್ನು ಮೋಸಗೊಳಿಸುವುದು, ವೈಯಕ್ತಿಕ ಬ್ಯಾಂಕ್ ಖಾತೆಗೆ ಕನ್ನ ಹಾಕುವಂಥದ್ದು, ಸುಳ್ಳು ಮಾಹಿತಿ ಮೂಲಕ ದಾರಿ ತಪ್ಪಿಸುವಂತದ್ದು, ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ.
Day: March 18, 2021
ಡಾ. ಬಿ.ಬಿ. ಹೆಗ್ಡೆ ಕಾಲೇಜು : ಎನ್ . ಎಸ್. ಎಸ್. ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ(ಮಾ.15): ಭಾರತ ಕರ್ಮಭೂಮಿ, ಈ ದೇಶದಲ್ಲಿ ಜನಿಸಿರುವುದೇ ನಮ್ಮೆಲ್ಲರ ಸೌಭಾಗ್ಯ. ಭಾರತದಂತಹ ದೇಶದಲ್ಲಿ ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡುವಲ್ಲಿ ಎನ್.ಎಸ್.ಎಸ್. ಪ್ರಮುಖ ಪಾತ್ರವಹಿಸುತ್ತಿದೆ. ವಿದ್ಯಾರ್ಥಿಗಳು ಎನ್.ಎಸ್.ಎಸ್. ಕಾರ್ಯಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ಶಿಸ್ತು-ಸಂಯಮ, ಸಹಬಾಳ್ವೆಯೊಂದಿಗೆ ತಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು,ಜೊತೆಗೆ ದೇಶ ಕಟ್ಟುವ ಕಾರ್ಯದಲ್ಲಿ ಪ್ರವೃತ್ತರಾಗಬೇಕೆಂದು ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಉಪನ್ಯಾಸಕರಾದ ಶ್ರೀ ಸಂಜೀವ ಗುಂಡ್ಮಿ ಹೇಳಿದರು. ಅವರು ಡಾ| ಬಿ. ಬಿ . ಹೆಗ್ಡೆ ಪ್ರಥಮ ದರ್ಜೆ […]
ದೇಶ ಕಟ್ಟುವ ಕಾರ್ಯದಲ್ಲಿ ಎನ್.ಎಸ್.ಎಸ್ ಮಹತ್ವ ಪಾತ್ರ ವಹಿಸುತ್ತಿದೆ : ಮೈಸೂರು ವಿ.ವಿ. ವಿಶ್ರಾಂತ ಕುಲಪತಿ ಪ್ರೊ. ಕೆ.ಎಸ್. ರಂಗಪ್ಪ ಅಭಿಪ್ರಾಯ
ಮೈಸೂರು ( ಮಾ.16) ದೇಶದ ಸಮಗ್ರ ಅಭಿವ್ರದ್ದಿ ಹಾಗೂ ದೇಶ ಕಟ್ಟುವ ಕಾರ್ಯದಲ್ಲಿ ಎನ್.ಎಸ್ .ಎಸ್ ಮಹತ್ವದ ಪಾತ್ರ ವಹಿಸುತ್ತಿದೆ.ಗ್ರಾಮಗಳ ಅಭಿವೃದ್ಧಿಯಲ್ಲಿ ಎನ್.ಎಸ್.ಎಸ್ ರಚನಾತ್ಮಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮೈಸೂರು ವಿ.ವಿ ಯ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಹೇಳಿದರು. ಅವರು ಮಾರ್ಚ್ 16 ರಿಂದ 22 ರ ತನಕ ಮೈಸೂರಿನ ಸರಸ್ವತಿಪುರಂನ ಎನ್.ಎಸ್.ಎಸ್ ಭವನದಲ್ಲಿ ರಾಜ್ಯದ ವಿವಿಧ ಕಾಲೇಜಿನಿಂದ ಆಗಮಿಸಿದ ಎನ್ನೆಸ್ಸೆಸ್ ಯೋಜನಾಧಿಕಾರಿಗಳಿಗೆ ಆಯೋಜಿಸಿದ್ದ ಇಟಿಐ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ […]
ಶ್ರೀ ಚೆನ್ನ ಬಸವೇಶ್ವರ ಭಜನಾ ಮಂದಿರ : ಗಾಯಕ ಗಣೇಶ್ ಗಂಗೊಳ್ಳಿ ಯವರಿಗೆ ಸನ್ಮಾನ
ಗಂಗೊಳ್ಳಿ (ಮಾ. 17) : ಕುಂಭಾಶಿ ಗ್ರಾಮದ ಹೊಳೆ ಕಟ್ಟು ಶ್ರೀಚೆನ್ನಬಸವೇಶ್ವರ ಭಜನಾ ಮಂದಿರದ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಗಣೇಶ್ ಗಂಗೊಳ್ಳಿ ಮತ್ತು ಬಳಗದವರಿಂದ ಭಕ್ತಿಗೀತೆಗಳ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಕಲಾವಿದರಾದ ಗಣೇಶ್ ಗಂಗೊಳ್ಳಿ ಯವರನ್ನು ಶ್ರೀ ಚೆನ್ನಬಸವೇಶ್ವರ ಭಜನಾ ಮಂದಿರದ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸರ್ವ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿರಿದ್ದರು