ಕುಂದಾಪುರ (ಏ, 6): ಸೈಬರ್ ಸೆಕ್ಯೂರಿಟಿ ಉತ್ಕೃಷ್ಟತೆಯ ಕೇಂದ್ರ, ಕರ್ನಾಟಕ ಮತ್ತು ರಾಷ್ಟ್ರೀಯ ಸಾಫ್ಟ್ ವೇರ್ & ಸರ್ವಿಸ್ ಕಂಪನಿಗಳ ಅಸೋಸಿಯೇಷನ್ ವತಿಯಿಂದ ನಡೆಸಲ್ಪಟ್ಟ ‘ಮಾರ್ಚ್ ಫಾರ್ ಸೆಕ್ಯೂರ್ ಕೋಡ್’ ಎಂಬ ಅತೀ ಬೇಗ ಕೋರ್ಸ್ ಮುಗಿಸುವ ಸ್ಪರ್ಧೆಯಲ್ಲಿ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಶಶಾಂಕ್ 10,000 ರೂ ನಗದು ಬಹುಮಾನದೊಂದಿಗೆ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯ […]
Month: April 2021
ಮೇ 1ರಿಂದ 10 – ಟಾರ್ಪಡೋಸ್ ಸ್ಪೋರ್ಟ್ಸ್ ಕ್ಲಬ್ ಆಯೋಜನೆಯಲ್ಲಿ ಕ್ರೀಡಾ ಹಬ್ಬ
ಕುಂದಾಪುರ (ಏ, 6): ರಾಜ್ಯದ ಪ್ರತಿಷ್ಠಿತ ಸ್ಪೋರ್ಟ್ ಕ್ಲಬ್ ಗಳಲ್ಲಿ ಒಂದಾದ ಟಾರ್ಪಡೋಸ್ ಸ್ಪೋರ್ಟ್ಸ್ ಕ್ಲಬ್ ಆಯೋಜನೆಯಲ್ಲಿ ಮೇ 01 ರಿಂದ 10ರ ವರೆಗೆ ಕುಂದಾಪುರ ಹಾಗೂ ಮಂಗಳೂರಿನ ವಿವಿಧೆಡೆಗಳಲ್ಲಿ ಟಾರ್ಪಡೋಸ್ ಕ್ರೀಡಾ (ಸ್ಪೋರ್ಟ್ಸ್ ಕಾರ್ನಿವಲ್) ಹಬ್ಬ ನಡೆಯಲಿದೆ ಎಂದು ಪ್ರತಿಷ್ಠಿತ ಟಾರ್ಪಡೋಸ್ ಕ್ಲಬ್ನ ಗೌತಮ್ ಶೆಟ್ಟಿ ತಿಳಿಸಿದ್ದಾರೆ. ಸರಿ ಸುಮಾರು 1 ಕೋ. ರೂ. ವೆಚ್ಚದಲ್ಲಿ ಈ ಕ್ರೀಡಾ ಹಬ್ಬವನ್ನು ಆಯೋಜಿಸಲಾಗಿತ್ತಿದ್ದು, ಟೆನಿಸ್ ಹಾಗೂ ಲೆದರ್ ಬಾಲ್ ಕ್ರಿಕೆಟ್ […]
ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ “ಗೆಲುವಿನ ಹೆಜ್ಜೆ” ಪುಸ್ತಕ ಬಿಡುಗಡೆ
ಉಡುಪಿ (ಏ, 5): ಕರೋನಾ ಕಾರಣದಿಂದಾಗಿ ಎಸ್.ಎಸ್.ಎಲ್.ಸಿ ತರಗತಿಗಳು 7 ತಿಂಗಳು ವಿಳಂಬವಾಗಿ ಆರಂಭವಾದ ಹಿನ್ನೆಲೆಯಲ್ಲಿ ಪಠ್ಯಕ್ರಮಕ್ಕೆ ಸಂಭಂಧಪಟ್ಟಂತೆ ಎಲ್ಲಾ ವಿಷಯಗಳಿಗೆ ಸರಳ ಅಧ್ಯಯನ ಕ್ರಮ ಅನುಸರಿಸಿ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾಗುವ ಅದರಲ್ಲೂ ವಿಶೇಷವಾಗಿ ನಿಧಾನಗತಿಯ ಕಲಿಕೆಯ ವಿದ್ಯಾರ್ಥಿಗಳು ಓದಿ ಕಲಿತು ಪರೀಕ್ಷೆ ಪಾಸಾಗಲು ಯೋಗ್ಯವಾಗಿರುವ 280 ಪುಟಗಳ” ಗೆಲುವಿನ ಹೆಜ್ಜೆ “ಪುಸ್ತಕವನ್ನು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅನಾವರಣಗೊಳಿಸಿದರು. ಅವರುಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಸಿದ್ಧಪಡಿಸಿದ “ಗೆಲುವಿನ ಹೆಜ್ಜೆ” […]
ಸರ್ಕಾರಿ ಬಸ್ಸ್ ನೌಕರರ ಮುಷ್ಕರ ಹಿನ್ನೆಲೆ ಎಪ್ರಿಲ್ 7 ರಂದು ನಡೆಯ ಬೇಕಿದ್ದ ಮಂಗಳೂರು ವಿ.ವಿ. ಪದವಿ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ
ಮಂಗಳೂರು (ಏ, 6): ವೇತನ ಹೆಚ್ಚಳ ಸಂಬಂಧಿಸಿದಂತೆ ರಾಜ್ಯ ಸಾರಿಗೆ ಇಲಾಖೆಯ ನೌಕರರು ಎಪ್ರಿಲ್ 7 ರಂದು ಕರೆ ನೀಡಿದ ಅನಿರ್ದಿಷ್ಟಾವಧಿ ಮುಷ್ಕರದಿಂದಾಗಿ ಎಪ್ರಿಲ್ 7 ರ ಬುಧವಾರ ನಡೆಯಬೇಕಿದ್ದ ಮಂಗಳೂರು ವಿ.ವಿ. ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ಅನಿವಾರ್ಯವಾಗಿ ಮುಂದೂಡಲಾಗಿದೆ ಎಂದು ಮಂಗಳೂರು ವಿ.ವಿ ಪರೀಕ್ಷಾಂಗ ಕುಲಸಚಿವರಾದ ಪ್ರೊ ಪಿ.ಎಲ್ ಧರ್ಮ ರವರು ತಿಳಿಸಿರುತ್ತಾರೆ.ಹಾಗೆಯೇ ಎಪ್ರಿಲ್ 7 ರಂದು ನಡೆಯ ಬೇಕಿದ್ದ ಪರೀಕ್ಷೆಯ ಮುಂದೂಡಲ್ಪಟ್ಟ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು […]
ಶ್ರೀ ಜಯ ಸಿ. ಕೋಟ್ಯಾನ್ ರವರಿಗೆ ಸನ್ಮಾನ
ಹೆಮ್ಮಾಡಿ (ಎ. 4): ಕರ್ನಾಟಕ ಕರಾವಳಿಯ ಮೀನುಗಾರರ ಕ್ರಿಯಾ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ(ರಿ) ಉಚ್ಚಿಲ ಇದರ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್ ಇವರನ್ನು ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ 1941) ಇದರ ಕುಂದಾಪುರ ಶಾಖೆಯ ವತಿಯಿಂದ ಸನ್ಮಾನಿಸಲಾಯಿತು. ಎಪ್ರಿಲ್, 4 ರಂದು ಬಗ್ವಾಡಿಯ ಶ್ರೀ ಮಹಿಷಾಸುರಮರ್ದಿನಿ ಸಭಾಭವನದಲ್ಲಿ ಆಯೋಜಿಸಿದ್ದ ಗುರಿಕಾರರ ಸಭೆ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಇವರನ್ನು ಸನ್ಮಾನಿಸಲಾಯಿತು. […]
ಸರಸ್ವತಿ ವಿದ್ಯಾಲಯಕ್ಕೆ ಪ್ರಥಮ ಸ್ಥಾನ
ಗಂಗೊಳ್ಳಿ (ಏ, 5): ಪದವಿ ಪೂರ್ವ ಶಿಕ್ಷಣ ಇಲಾಖೆ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಮತ್ತು ಶ್ರೀ ಗುರು ಜ್ಯೋತಿ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ ಜರಗಿದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಬಾಲ್ ಬ್ಯಾಡ್ಮಿಂಟನ್ ಮತ್ತು ಟೆನ್ನಿಕಾಯ್ಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಬಾಲಕರ ತಂಡ ಟೆನ್ನಿಕಾಯ್ಟ್ ಮತ್ತು ಬಾಲ್ ಬ್ಯಾಡ್ಮಿಂಟನ್ ಎರಡರಲ್ಲೂ ಪ್ರಥಮ ಸ್ಥಾನ ಗಳಿಸಿದರು.ಹಾಗೆಯೇ ಬಾಲಕಿಯರು ಟೆನ್ನಿಕಾಯ್ಟ್ ನಲ್ಲಿ ಪ್ರಥಮ […]
ಡಾ. ಸತ್ಯಮೂರ್ತಿ ವಿ. ಪರ್ವತಕರ್ ರವರಿಗೆ ಪಿಹೆಚ್.ಡಿ ಪದವಿ ಪ್ರದಾನ
ಹುಬ್ಬಳ್ಳಿ (ಎ, 5): ಬೆಳಗಾವಿ ಜೈನ್ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ರಿಸರ್ಚ್ ಮಹಾವಿದ್ಯಾಲಯದ ಗಣಿತ ಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ಸಹಾಯಕ ಪ್ರಾಧ್ಯಾಪಕ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸಹ್ಯಾದ್ರಿ ಕಾಲೊನಿ ನಿವಾಸಿಯಾದ ಡಾ.ಸತ್ಯಮೂರ್ತಿವಿ.ಪರ್ವತಕರ್ ರವರಿಗೆ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ನೀಡಿದೆ. ಡಾ. ಸದಾನಂದ ಎಂ ಪಾಟೀಲ್ ರವರ ಮಾರ್ಗದರ್ಶನದಲ್ಲಿ ಡಾ.ಸತ್ಯಮೂರ್ತಿವಿ.ಪರ್ವತಕರ್ ರವರು ಮಂಡಿಸಿದ THE STUDY OF SOME GENERALIZATION […]
ಶ್ರೀಮತಿ ವೀಣಾ ಭಾಸ್ಕರ್ ಮೆಂಡನ್ ಹಾಗೂ ಶ್ರೀಮತಿ ರತ್ನಾ ರಮೇಶ್ ವಿ. ಕುಂದರ್ ರವರಿಗೆ ಸನ್ಮಾನ
ಹೆಮ್ಮಾಡಿ (ಎ. 4): ಕುಂದಾಪುರ ಪುರಸಭೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀಮತಿ ವೀಣಾ ಭಾಸ್ಕರ್ ಮೆಂಡನ್ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಸದಸ್ಯರಾದ ಶ್ರೀಮತಿ ರತ್ನಾ ರಮೇಶ್ ವಿ. ಕುಂದರ್ ಇವರನ್ನು ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ 1941) ಇದರ ಕುಂದಾಪುರ ಶಾಖೆಯ ವತಿಯಿಂದ ಸನ್ಮಾನಿಸಲಾಯಿತು. ಎಪ್ರಿಲ್, 4 ರಂದು ಬಗ್ವಾಡಿಯ ಶ್ರೀ ಮಹಿಷಾಸುರಮರ್ದಿನಿ ಸಭಾಭವನದಲ್ಲಿ ಆಯೋಜಿಸಿದ್ದ ಗುರಿಕಾರರ ಸಭೆ ಮತ್ತು […]
ಮೇ 2 ರಂದು ಸಾಮೂಹಿಕ ವಿವಾಹ ಕಾರ್ಯಕ್ರಮ
ಹಾಲಾಡಿ (ಎ, 4): ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ) ಅಂಬಲಪಾಡಿ ಉಡುಪಿ ಹಾಗೂ ಮೊಗವೀರ ಯುವ ಸಂಘಟನೆ(ರಿ) ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ಜರುಗಲಿರುವ ಮೊಗವೀರ ಸಮುದಾಯದ 25 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ಹಾಲಾಡಿಯ ಶಾಲಿನಿ ಜಿ.ಶಂಕರ್ ಕನ್ವೆನ್ಷನ್ ಸೆಂಟರ್ ನಲ್ಲಿ ಮೇ 02 ರಂದು ನಡೆಯಲಿದೆ ಎಂದು ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾದ ಶಿವರಾಮ ಕೋಟ ಹೇಳಿದರು. ನಾಡೋಜ ಡಾ.ಜಿ ಶಂಕರ್ […]
ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ವತಿಯಿಂದ 90 ನೇ ವಾರದ ಸ್ವಚ್ಛತಾ ಕಾರ್ಯಕ್ರಮ
ಕೋಟೇಶ್ವರ (ಎ. 4): ಕೋಟೇಶ್ವರ ಸಮೀಪದ ಗೋಪಾಡಿ ಕಡಲತೀರದಲ್ಲಿ ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ವತಿಯಿಂದ 90 ನೇ ವಾರದ ಸ್ವಚ್ಛತಾ ಕಾರ್ಯಕ್ರಮ ಎಪ್ರಿಲ್ 04 ರಂದು ಜರುಗಿತು. ನಿರಂತರವಾಗಿ ಸ್ವಚ್ಛತಾ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿರುವ ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ಕಾರ್ಯಕರ್ತರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು 20 ಚೀಲಗಳಷ್ಟು ತ್ಯಾಜ್ಯಗಳನ್ನು ಸಂಗ್ರಹಿಸಿ ಸಮರ್ಪಕ ವಿಲೇವಾರಿಗೆ ವ್ಯವಸ್ಥೆ ಮಾಡಿದರು. ನಿರಂತರವಾಗಿ ಕುಂದಾಪುರ ಕೋಡಿ ,ಬೀಜಾಡಿ ಹಾಗೂ ಗೋಪಾಡಿ ಕಡಲತೀರದಲ್ಲಿ ಸ್ವಚ್ಛತಾ ಅಭಿಯಾನ, ಕಡಲಾಮೆ […]










