ಬೆಂಗಳೂರು (ಜು, 18) : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಜು. 20ಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟವಾಗಲಿದೆ ಎಂದು ಪಿ.ಯು ಶಿಕ್ಷಣ ಇಲಾಖೆಯ ನಿರ್ದೇಶಕರ ಕಛೇರಿಯಿಂದ ಪ್ರಕಟಣೆ ಹೊರಬಿದ್ದಿದೆ. 2020-21ನೇ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಹೊಸ ಮತ್ತು ಪುನರಾವರ್ತಿತ ವಿದ್ಯಾರ್ಥಿಗಳು ಫಲಿತಾಂಶವನ್ನು ವೀಕ್ಷಿಸುವ ಸಲುವಾಗಿ ನೋಂದಣಿ ಸಂಖ್ಯೆ ನೀಡಲಾಗುತ್ತಿದೆ.ಫಲಿತಾಂಶ ಪ್ರಕಟಗೊಳಿಸುವ ವಿಚಾರದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ […]
Day: July 17, 2021
ರೋಟರಿ ಕ್ಲಬ್ ಕುಂದಾಪುರ : 2021-22 ನೇ ಸಾಲಿನ ಪದಪ್ರಧಾನ ಸಮಾರಂಭ
ಕುಂದಾಪುರ (ಜು, 17): ರೋಟರಿ ಕ್ಲಬ್ ಕುಂದಾಪುರ ದ 2021- 22 ನೇ ಸಾಲಿನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಜುಲೈ,16 ರಂದು ಕೋಟೇಶ್ವರದ ಸಹನ ಕನ್ವೆನ್ಷನ್ ಸೆಂಟರ್ ನಲ್ಲಿ ಅದ್ದೂರಿಯಾಗಿ ಜರುಗಿತು. ರೋಟರಿ ವರ್ಷ 2021- 22ರ ಕ್ಲಬ್ ನ ಸಾರಥ್ಯವನ್ನು Rtn Phf ಶಶಿಧರ್ ಹೆಗ್ಡೆಯವರು ವಹಿಸಿಕೊಂಡರು. ಸಮಾಜಸೇವೆಯಲ್ಲಿ ರೋಟರಿಯ ಮಹತ್ವ ಹಾಗೂ ತಮ್ಮ ಮುಂದಿರುವ ಸವಾಲುಗಳ ಬಗ್ಗೆ ತಿಳಿಸಿ ಸದಸ್ಯರ ಸಹಕಾರವನ್ನು ಕೋರಿದರು. ಈ ಕಾರ್ಯಕ್ರಮಕ್ಕೆ ಮುಖ್ಯ […]
ಭಾಗಮಂಡಲ : ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ತುರ್ತು ಸಂದರ್ಭದಲ್ಲಿ ಉಚಿತ ಆಟೋ ರೀಕ್ಷಾ ಸೇವೆ
ಭಾಗಮಂಡಲ (ಜು, 17) : ಕೋವಿಡ್ ಸಂಕಷ್ಟ ಹಾಗೂ ಸವಾಲುಗಳ ನಡುವೆಯೂ ಕರ್ನಾಟಕ ಸರಕಾರವು ಅತ್ಯಂತ ಸುರಕ್ಷಿತ ಮುಂಜಾಗ್ರತಾ ಕ್ರಮ ಗಳೊಂದಿಗೆ ಈ ಬಾರಿಯ ಎಸ್. ಎಸ್. ಎಲ್. ಸಿ. ಪರೀಕ್ಷೆ ಯನ್ನು ಇದೇ ಜುಲೈ 19 ರಿಂದ ನಡೆಸಲು ತೀರ್ಮಾನಿಸಿದೆ. ಹಾಗೆಯೇ ಪರೀಕ್ಷಾ ಕೇಂದ್ರಕ್ಕೆ ತೆರಳಲು ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆಯನ್ನು ಕೂಡ ಸರ್ಕಾರದ ವತಿಯಿಂದ ಮಾಡಲಾಗಿದೆ. ಒಂದು ವೇಳೆ ದೂರದಿಂದ ಕಾಲ್ನಡಿಗೆಯಲ್ಲಿ ಬಂದು ಆಕಸ್ಮಿಕ ವಾಗಿ ಬಸ್ಸು […]
ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ
ಗಂಗೊಳ್ಳಿ (ಜು, 17) : ಇಲ್ಲಿನ ಸಮುದಾಯ ಹಿತರಕ್ಷಣಾ ಸಮಿತಿ(ರಿ). ಗಂಗೊಳ್ಳಿ ವತಿಯಿಂದ ಭಾರತದ 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದೆ. 2021- 22 ನೇ ಶೈಕ್ಷಣಿಕ ಸಾಲಿನಲ್ಲಿ 8, 9 ಮತ್ತು 10ನೇ ತರಗತಿಯಲ್ಲಿ ಕಲಿಯುತ್ತಿರುವ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ಮಾತ್ರ ಈ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಪ್ರಬಂಧದ ವಿಷಯ ದೇಶಪ್ರೇಮ ಎಂದರೆ?. […]