ಕುಂದಾಪುರ (ಜು, 19): ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪ್ರಮುಖ ಪೀಠವಾದ ಪರ್ತಗಾಳಿ ಜೀವೋತ್ತಮ ಮಠದ ಸ್ವಾಮಿಗಳಾದ ಪರಮಪೂಜ್ಯ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಮಹಾಸ್ವಾಮಿಗಳು(76) ಜುಲೈ 19 ರಂದು ಹೃದಯಾಘಾತದಿಂದ ದೈವೈಕ್ಯರಾಗಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿಯ ಸೇನಾಪುರ ಆಚಾರ್ಯ ಮನೆತನದವರಾದ ಅವರು ಗಂಗೊಳ್ಳಿಯ ವೆಂಕಟರಮಣ ದೇವಾಲಯದ ಅರ್ಚಕ ಮನೆತನದವರು.ದ್ವಾರಕಾನಾಥ ತೀರ್ಥ ಸ್ವಾಮೀಜಿ ಅವರಿಂದ 1967ರ ಫೆಬ್ರುವರಿ 26ರಂದು ಸನ್ಯಾಸ ದೀಕ್ಷೆ ಸ್ವೀಕರಿಸಿ, 1973ರ […]
Day: July 19, 2021
ಹಟ್ಟಿಯಂಗಡಿ ಪಂಚಾಯತ್ ವ್ಯಾಪ್ತಿಯ ಚೀನಿಬೆಟ್ಟು ರಸ್ತೆ ಕೆಸರುಮಯ – ಸಾರ್ವಜನಿಕ ಸಂಚಾರಕ್ಕೆ ಅಡಚಣೆ
ತಲ್ಲೂರು (ಜು, 19): ಕುಂದಾಪುರ ತಾಲೂಕಿನ ಹಟ್ಟಿಯಂಗಡಿ ಪಂಚಾಯತ್ ವ್ಯಾಪ್ತಿಯ ಚೀನಿಬೆಟ್ಟು ರಸ್ತೆ ಅತಿಯಾಗಿ ಸುರಿದ ಮಳೆಯ ಕಾರಣದಿಂದಾಗಿ ಕೆಸರುಮಯವಾಗಿದ್ದು ಸಾರ್ವಜನಿಕರಿಗೆ ಓಡಾಡಲು ಕಷ್ಟಕರವಾಗಿದೆ. ವಾಹನ ಸವಾರರು ಈ ರಸ್ತೆಯಲ್ಲಿ ಸಂಚರಿಸಲು ಹರಸಾಹಸ ಪಡುತ್ತಿದ್ದು ,ಸ್ವಲ್ಪ ಹೆಚ್ಚು ಕಡಿಮೆಯಾದರೆ ಕೈ ಕಾಲು ಮುರಿದುಕೊಳ್ಳವ ಭೀತಿಯಲ್ಲಿದ್ದಾರೆ. ಗ್ರಾಮ ಪಂಚಾಯತ್ ಈ ಕುರಿತು ಗಮನ ಹರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೂಡ ಬೇಕೆಂದು ಸಾರ್ವಜನಿಕರು ಮನವಿ ಸಲ್ಲಿಸಿದ್ದಾರೆ.
ಕಟ್ಟ್ ಬೆಲ್ತೂರು ಗ್ರಾಮ ಪಂಚಾಯತ್ : ಕೋವಿಡ್ ಲಸಿಕಾ ಅಭಿಯಾನ
ಹೆಮ್ಮಾಡಿ (ಜು, 19 ): ಕಟ್ಟ್ ಬೆಲ್ತೂರು ಗ್ರಾಮ ಪಂಚಾಯತ್ ವತಿಯಿಂದ ಕರೋನಾ ವಿರುದ್ದ ಲಸಿಕಾಕರಣವನ್ನು ಜುಲೈ 19 ರಂದು ಸುಳ್ಸೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು. ಆಟೋ ರಿಕ್ಷಾ ಚಾಲಕರಿಗೆ, ಹೋಟೆಲ್ ಕಾರ್ಮಿಕರಿಗೆ, ಪರ ಊರುಗಳಲ್ಲಿ ಉದ್ಯೋಗಕ್ಕೆ ತೆರಳುವವರಿಗೆ ಆದ್ಯತೆಯ ಮೇರೆಗೆ ಹಾಗೂ 18ರಿಂದ 45 ಪ್ರಾಯದವರಿಗೆ ಲಸಿಕೆ ನೀಡಲಾಯಿತು. ಈ ಸಂದರ್ಭದಲ್ಲಿ ಕಟ್ ಬೆಲ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗರಾಜ್ ಪುತ್ರನ್ ಮತ್ತು ಉಪಾಧ್ಯಕ್ಷೆ ಶ್ವೇತಾ ಉಪಸ್ಥಿತರಿದ್ದರು. […]
ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣೆ
ಕುಂದಾಪುರ (ಜು, 19) : ಡಾ|ಬಸ್ರೂರು ಭುಜಂಗ ಹೆಗ್ಡೆಯವರ ನೆನಪಿನಲ್ಲಿ ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜನ್ನು ನಿರ್ಮಿಸಲು ಸ್ಥಳದಾನ ಮಾಡಿದ ಸೌಕೂರು ಸೇರ್ವೆಗಾರ್ ಮನೆತನದ ವಿಶಾಲಾಕ್ಷಿ ಬಿ.ಹೆಗ್ಡೆಯವರ ಸಂಸ್ಮರಣಾ ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲ ಪ್ರೊ.ಕೆ .ಉಮೇಶ್ ಶೆಟ್ಟಿ ಸಂಸ್ಮರಣಾ ಮಾತುಗಳನ್ನಾಡಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿಯವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.ಇಂಗ್ಲಿಷ್ ಉಪನ್ಯಾಸಕಿ ಶ್ರೀಮತಿ ದೀಪಿಕಾ ರಾಘವೇಂದ್ರ ಮತ್ತು ಭೌತಶಾಸ್ತ್ರ […]