ಹೇ ಭಾರತಾಂಬೆ, ನಾ ನಿನ್ನ ಮಡಿಲಲ್ಲಿ ನಲಿದಾಡುವ ಕಂದನೂರು ಜನ್ಮ ತಾಳಿದರು ತಿರಿಸಲಾರೆ ನಾ ನಿನ್ನ ಋಣಾನುಬಂಧ. ನಿನ್ನ ಮಡಿಲೇ ಗಂಧದ ಗುಡಿ ನನಗೆಹಚ್ಚ ಹಸಿರಿನ ಗಿರಿವನಗಳೆ ನೀನಿತ್ತ ಉಸಿರು ನನಗೆ ನೀ ಸಿರಿ ದೇವತೆ, ನೀ ಜ್ಞಾನಮಯಿನೀ ಶಕ್ತಿ ದೇವತೆ, ನೀ ಕರುಣಾಮಯಿ ನೀ ನಮ್ಮ ಬಾಳ ಜ್ಯೋತಿನಿನ್ನಿಂದಲೇ ಜೇವನದ ಕಾಂತಿಸದಾ ನಮಿಪೆ ನಿನ್ನ ಚರ್ಣಗಳಿಗೆ ಹೇ ಭಾರತಾಂಬೆ.ಜೈ ಭಾರತಾಂಬೆ, ಜೈ ಭಾರತಾಂಬೆ. ಕವಿಯತ್ರಿ: ಡಾ. ಉಮ್ಮೆ ಸಲ್ಮಾ […]
Day: August 15, 2021
ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ 75ನೇ ಸ್ವಾತಂತ್ರ್ಯೋತ್ಸವ
ಗಂಗೊಳ್ಳಿ (ಆ,15): ಇಲ್ಲಿನ ಸರಸ್ವತಿ ವಿದ್ಯಾಲಯದ ಪದವಿಪೂರ್ವ ಕಾಲೇಜು, ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆ ಮತ್ತು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವತಿಯಿಂದ ಭಾರತದ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ನಾಗರಾಜ ಶೆಟ್ಟಿ ಧ್ವಜಾರೋಹಣವನ್ನು ನೆರವೇರಿಸಿದರು. ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲ ಉಮೇಶ್ ಕರ್ಣಿಕ್, ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ- ಬೈಂದೂರು-ಶಿರೂರು ಘಟಕ : ಸ್ವತಂತ್ರ ದಿನದ ಅಮೃತೋತ್ಸವದ ಸಂಭ್ರಮ
ಬೈಂದೂರು (ಆ, 15) : ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಬೈಂದೂರು-ಶಿರೂರು ಘಟಕದ ಸ್ವತಂತ್ರ ದಿನದ ಅಮೃತೋತ್ಸವದ ಸಂಭ್ರಮವು ಸಂಘಟನೆಯ ಆಡಳಿತ ಕಛೇರಿಯಲ್ಲಿ ಆಗಸ್ಟ್ 15, ರಂದು ಜರುಗಿತು. ಕಾರ್ಯಕ್ರಮದ ಅಂಗವಾಗಿ ಧ್ವಜವಂದನೆ ಹಾಗೂ ಸಸಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಧ್ವಜಾರೋಹಣ ವನ್ನು ಕುಂದಾಪುರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀಮತಿ ಶ್ಯಾಮಲಾ ಕುಂದರ್ ನೆರವೇರಿಸಿದರು. ಅರಣ್ಯ ಇಲಾಖೆಯು ಪ್ರಾಯೋಜಿಸಿದ ಸಸಿಗಳನ್ನು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗಂಗಾಧರ […]
ಮೊಗವೀರ ಯುವ ಸಂಘಟನೆ( ರಿ) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ: ಕಾವೇರಿ ಮೊಗವೀರ್ತಿ ಯವರಿಗೆನೂತನ ಮನೆಯ ಕೀಲಿ ಕೈ ಹಸ್ತಾಂತರ ಕಾರ್ಯಕ್ರಮ
ಬೈಂದೂರು (ಆ,15): ಮೊಗವೀರ ಯುವ ಸಂಘಟನೆ( ರಿ) ಉಡುಪಿ ಜಿಲ್ಲೆ ಇದರ ಹೆಮ್ಮಾಡಿ ಘಟಕದ ವತಿಯಿಂದ ಕಾವೇರಿ ಮೊಗವೀರ್ತಿ ಯವರಿಗೆ ನೂತನ ಮನೆಯನ್ನು ನಿರ್ಮಿಸಿ ಕೊಡುವುದರ ಜೊತೆಗೆ ,ಮನೆಯ ಕೀಲಿ ಕೈ ಹಸ್ತಾಂತರ ಕಾರ್ಯಕ್ರಮ ಆಗಸ್ಟ್15 ರಂದು ಜರುಗಿತು. ಜಿಲ್ಲಾ ಸಂಘಟನೆ ಯ ಅಧ್ಯಕ್ಷರು ಶಿವರಾಮ್ ಕೋಟ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಕುಂದಾಪುರ ಶಾಖಾ ಅಧ್ಯಕ್ಷರಾದ ಕೆ .ಕೆ ಕಾಂಚನ, ಸತೀಶ್ ನಾಯಕ್ ನಾಡ ಪಡುಕೋಣೆ, […]
ರೋಟರಿ ಕ್ಲಬ್ ಕುಂದಾಪುರ: ಸಿಇಟಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮಾಸ್ಕ್ ಮತ್ತು ಸ್ಯಾನಿಟೈಜರ್ ಕಿಟ್ ಹಸ್ತಾಂತರ
ಕುಂದಾಪುರ (ಆ,14): ಸಿಇಟಿ ಪರೀಕ್ಷೆಗೆ ಹಾಜರಾಗುವ ಸುಮಾರು 500 ವಿದ್ಯಾರ್ಥಿಗಳಿಗೆ ಮಾಸ್ಕ್ ಮತ್ತು ಸ್ಯಾನಿಟೈಜರ್ಗಳ ಕಿಟ್ ನ್ನು ರೋಟರಿ ಕ್ಲಬ್ ಕುಂದಾಪುರದ ವತಿಯಿಂದ ಕುಂದಾಪುರದ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಮಕೃಷ್ಣಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ, ಕಾರ್ಯದರ್ಶಿ ಮತ್ತು ಹಿರಿಯ ಸದಸ್ಯರು ಉಪಸ್ಥಿತರಿದ್ದರು.
ವರಲಕ್ಷೀ ಚಾರಿಟೇಬಲ್ ಟ್ರಸ್ಟ್(ರಿ) ಉಪ್ಪುಂದ : ಸ್ವಾತಂತ್ಯ್ರೋತ್ಸವ ದಿನದಂದು ಶ್ರೀ ಗೋವಿಂದ ಬಾಬು ಪೂಜಾರಿಯವರಿಂದ ಬಡ ಕುಟುಂಬಕ್ಕೆ ಮನೆ ಹಸ್ತಾಂತರ
ತ್ರಾಸಿ (ಆ,15): ತ್ರಾಸಿ ಸಮೀಪದ ಕಂಚುಗೋಡು ಭಗತ್ ನಗರದ ಶ್ರೀಮತಿ ಪುಷ್ಪಾ ಉಲ್ಲಾಸ್ ದಂಪತಿಗೆ ಅಗಸ್ಟ್ 15 ರಂದು ನೂತನ ಮನೆಯನ್ನು ಉದ್ಯಮಿ ,ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರು ತಮ್ಮಕುಟಂಬದ ಸದಸ್ಯರು, ಅಭಿಮಾನಿಗಳು , ಸೇವಾ ಸಂಕಲ್ಪ ಸಂಸ್ಥೆಯ ಸದಸ್ಯರು ಹಾಗೂ ಊರ ಜನತೆಗಳ ಉಪಸ್ಥಿತಿಯಲ್ಲಿ ಶ್ರೀಮತಿ ಪುಷ್ಪಾ ಉಲ್ಲಾಸ್ ದಂಪತಿಗೆ ಮನೆಯ ಕೀ ನೀಡುವುದರ ಮೂಲಕ ಹಸ್ತಾಂತರಿಸಿದರು. ಹಲವು ಬಡ ಕುಟುಂಬಗಳಿಗೆ ಆಶ್ರಯದಾತರಾಗಿರುವ ಶ್ರೀ ಗೋವಿಂದ ಬಾಬು ಪೂಜಾರಿಯವರು ಮಾಧ್ಯಮ […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯ: 75ನೇ ಸ್ವಾತಂತ್ರ್ಯ ಸಂಭ್ರಮದ “ಅಮೃತ ಮಹೋತ್ಸವ” ದಿನಾಚರಣೆ
ಶಿರ್ವ(ಆ,15): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಆಗಸ್ಟ್ 15 ರಂದು 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆಯನ್ನು ಕೋವಿಡ್ 19 ಮಾರ್ಗಸೂಚಿಯಂತೆ ಆಚರಿಸಲಾಯಿತು. ಕಾಲೇಜಿನ ಆಡಳಿತಾತ್ಮಕ ಸಹಾಯಕ ಸಿಬ್ಬಂದಿ ಶ್ರೀರಂಗ ರವರು ಧ್ವಜಾರೋಹಣವನ್ನು ನೆರವೇರಿಸಿದ್ದರು. ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸರವರು ,ಮಾತನಾಡಿ ದೇಶದ ಬುನಾದಿಯಾದ ಯುವಜನರು ಹಲವಾರು ಕ್ಷೇತ್ರಗಳಲ್ಲಿ ಸರ್ವತೋಮುಖವಾಗಿ ಪ್ರಗತಿ ಸಾಧಿಸಲು ಕಠಿಣ ಪರಿಶ್ರಮ,ಸರಿಯಾದ ಮಾರ್ಗದರ್ಶನವನ್ನು ಪಡೆದುಕೊಂಡು ನವಸಮಾಜ ನಿರ್ಮಾಣ ಜೊತೆಗೆ ದೇಶಾಭಿವೃದ್ಧಿಗಾಗಿ ತಮ್ಮ ಕೈಲಾದ […]
ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ:75 ನೇ ಸ್ವಾತ್ರಂತ್ರ್ಯ ದಿನಾಚರಣೆ
ಉಡುಪಿ (ಆ,15): ರಾಜ್ಯೋತ್ಸವ ಪುರಸ್ಕ್ರತ ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಇದರ ಜಿಲ್ಲಾ ಕಚೇರಿಯಲ್ಲಿ 75 ನೇ ಸ್ವಾತ್ರಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ಸಂಘಟನೆಯ ಜಿಲ್ಲಾಧ್ಯಕ್ಷರಾದ ಶ್ರೀ ಶಿವರಾಮ ಕೋಟ ನೆರವೇರಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಸುವರ್ಣ ಹಿರಿಯಡ್ಕ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.