ಕೆರಾಡಿ(ಸೆ,17): ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜು ಕೆರಾಡಿ ಇದರ ದ್ವಿತೀಯ ಪಿ ಯು ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ ಗಳಾದ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಶಿಕ್ಷಣದ ಪ್ರವೇಶ ಪರೀಕ್ಷೆಗಳಾದ NEET, CET, ಮತ್ತು JEE ಎದುರಿಸಿ ಯಶಸ್ವಿಯಾಗಲು ಪೂರ್ವ ತಯಾರಿಯ ಕುರಿತು ಒಂದು ದಿನದ ಮಾಹಿತಿ ಕಾರ್ಯಾಗಾರ ದಿನಾಂಕ ಸಪ್ಟೆಂಬರ್ 13 ರಂದು ನಡೆಯಿತುಸಂಪನ್ಮೂಲ ವ್ಯಕ್ತಿ ಎಮ್.ಎಸ್ ರಾಮಚಂದ್ರ ಐಐಟಿ ರೂರ್ಕೆ ರವರು ವಿದ್ಯಾರ್ಥಿಗಳಿಗೆ ಸಮಗ್ರ […]
Month: September 2021
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ : ವಿವಿಧ ಬೇಡಿಕೆ ಇಡೇರಿಸುವಂತೆ ತಹಶೀಲ್ದಾರರಿಗೆ ಮನವಿ
ಕುಂದಾಪುರ(ಸೆ,27): ರಾಜ್ಯಾದ್ಯಂತ ಗ್ರಾಮೀಣ ಭಾಗದ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲಾ ಗ್ರಾಮಗಳಿಗೆ ಬಸ್ ಸೇವೆ ಪುನರಾಂಭಿಸಬೇಕು, ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ತಕ್ಷಣಕ್ಕೆ ಬಿಡುಗಡೆಗೊಳಿಸಿ, ಹಾಸ್ಟಲ್ಗಳನ್ನು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪ್ರಾರಂಭಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ತಾಲೂಕು ಇದರ ವತಿಯಿಂದ ತಹಶೀಲ್ದಾರರಾದ ಶ್ರೀ ಕಿರಣ್ ಗೊರಯ್ಯ ಇವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಎಬಿವಿಪಿಯ ಪ್ರಮುಖರಾದ ಜಯಸೂರ್ಯ ಶೆಟ್ಟಿ, ಸುಪ್ರಸಾದ್ ಶೆಟ್ಟಿ, ಪೂರ್ಣಚಂದ್ರ ಶೆಟ್ಟಿ , ಸುಚಿನ್, ದಿನೇಶ್, ರೋಹಿತ್, […]
ಸಂಜೀವ ಪಾರ್ವತಿ ಪ್ರಕಾಶನ ಗಂಗೊಳ್ಳಿ : ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ಫಲಿತಾಂಶ ಪ್ರಕಟ
ಗಂಗೊಳ್ಳಿ (ಸೆ,16): ಸಂಜೀವ ಪಾರ್ವತಿ ಪ್ರಕಾಶನ ಗಂಗೊಳ್ಳಿ ವತಿಯಿಂದ ಎಸ್ ಎಂ ಗೋಪಾಲಕೃಷ್ಣ ಬೆಳ್ಳಾರೆ ಮತ್ತು ಪೈ ಟೆಕ್ಸ್ ಟೈಲ್ಸ್ ಮತ್ತು ಪೈ ಗಾರ್ಮೆಂಟ್ಸ್ ಗಂಗೊಳ್ಳಿ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಉಡುಪಿ ಜಿಲ್ಲೆಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ “ನನ್ನ ಪ್ರೇರಣೆಯ ಶ್ರೀಕೃಷ್ಣ ” ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ಹಾಲಾಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶಿವಾನಿ ಬಿ ಶೆಟ್ಟಿ ಮತ್ತು ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ […]
ಹಾಲಾಡಿ: ಸಮುದಾಯಾಧಾರಿತ ಔದ್ಯೋಗಿಕ ತರಬೇತಿ ಕಾರ್ಯಕ್ರಮ
ಹಾಲಾಡಿ(ಸೆ,16): ಜಿಲ್ಲಾ ವಿಕಲಚೇತನರ ಇಲಾಖೆ ಉಡುಪಿ ಜಿಲ್ಲೆ , ಎಪಿಡಿ ಸಂಸ್ಥೆ ಬೆಳಗಾವಿ, ಗ್ರಾಮ ಪಂಚಾಯತ್ ಹಾಲಾಡಿ ಹಾಗೂ ಗ್ರಾಮ ಪಂಚಾಯತ್ ಹಾರ್ದಳ್ಳಿ-ಮಂಡಳ್ಳಿ ಆಶ್ರಯದಲ್ಲಿ ಸಮುದಾಯಾಧಾರಿತ ಔದ್ಯೋಗಿಕ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಸಪ್ಟೆಂಬರ್, 15 ರಂದು ಹಾಲಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ತಾಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಶ್ರೀ ಮಂಜುನಾಥ ಹೆಬ್ಬಾರ್ ರವರು ಮಾತನಾಡಿ ವಿಶೇಷ ಚೇತನರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ […]
ಭಾಗಮಂಡಲ: ರಸ್ತೆ ಕಾಮಗಾರಿ ವಿಳಂಬ- ಶೀಘ್ರ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆಗೆ ಕರೆ
ಭಾಗಮಂಡಲ(ಸೆ,16): ಭಾಗಮಂಡಲ ಹೃದಯಭಾಗದಲ್ಲಿ ಮೇಲ್ಸೇತುವೆಯ ಕೆಲಸಗಳು ನಡೆಯುತ್ತಿದ್ದು ,ಮಳೆಗಾಲ ಪ್ರಾರಂಭವಾದ ಜೂನ್ ತಿಂಗಳಿನಿಂದ ಕೆಲಸ ನಿಂತಿರುತ್ತದೆ. ಭಾಗಮಂಡಲ ಪೇಟೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗುತ್ತುದ್ದು, ಜನರಿಗೆ ಒಂದು ಕಿಲೋಮೀಟರ್ ನಷ್ಟು ದೂರ ನಡೆಯಲು ಕಷ್ಟವಾಗುತ್ತಿದೆ. ಪೇಟೆಯ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ಸ್ರಷ್ಠಿಯಾಗಿದ್ದು ತುಂಬಾ ಕೆಸರುಮಯವಾಗಿದೆ, ಜನರು ಪೇಟೆಯಲ್ಲಿ ನಡೆಯಲು ಪರ್ಯಾಯ ರಸ್ತೆಯಿಲ್ಲದ ಕಾರಣ ಹೆಂಗಸರು ಮಕ್ಕಳು ಕೆಸರು ಗುಂಡಿಯಲ್ಲಿಯೆ ನಡೆದಾಡುವಂತಹ ಪರಿಸ್ಥಿತಿ ಭಾಗಮಂಡಲದಲ್ಲಿ ಎದ್ದುಕಾಣುತ್ತಿದೆ. ಸಂಬಂಧಪಟ್ಟವರಿಗೆ ಹಲವು ಬಾರಿ ಮನವಿ ಮಾಡಿಕೊಂಡರೂ […]
ರಾಷ್ಟ್ರೀಯ ಶಿಕ್ಷಣ ನೀತಿ ವಿದ್ಯಾರ್ಥಿ ಕೇಂದ್ರಿತ ನೀತಿ – ಡಾ. ಕರುಣಾಕರ್. ಎ.ಕೋಟೆಗಾರ್
ಕುಂದಾಪುರ (ಸೆ,16): ರಾಷ್ಟ್ರೀಯ ಶಿಕ್ಷಣ ನೀತಿ 2021 – 22 ವಿದ್ಯಾರ್ಥಿ ಕೇಂದ್ರಿತ ನೀತಿಯಾಗಿದ್ದು, ಇದರಲ್ಲಿನ ಪ್ರತಿ ಅಂಶವನ್ನೂ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ರೂಪಿಸಲಾಗಿದೆ. ಹೊಸ ಶಿಕ್ಷಣ ನೀತಿಯ ಮೂಲಕ ಆಸಕ್ತಿ-ಕೌಶಲ್ಯ ಆಧಾರಿತ ಕಲಿಕೆ ಹಾಗೂ ದೇಶದ ಮಾನವ ಸಂಪನ್ಮೂಲದ ಸದ್ಬಳಕೆ ನಿಜಾರ್ಥದಲ್ಲಿ ಆಗಲಿದೆ ಎಂದು ಮಣಿಪಾಲ ಎಂಐಟಿಯ ಪ್ರಾಧ್ಯಾಪಕ ಹಾಗೂ ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಡಾ. ಕರುಣಾಕರ ಕೊಟೇಗಾರ್ ಹೇಳಿದರು. ಅವರು ಗುರುವಾರ ಕುಂದಾಪುರದ ಡಾ. […]
ಕುಂದಾಪುರ: ಶಾಲಾ ಮಕ್ಕಳಿಗೆ ಅಪೌಷ್ಟಿಕತೆ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ
ಕುಂದಾಪುರ(ಸೆ,15): ಇಲ್ಲಿನ ಕಲಾಮಂದಿರದಲ್ಲಿ ರೋಟರಿ ಕುಂದಾಪುರ, ತಾಲೂಕು ಆರೋಗ್ಯ ಇಲಾಖೆ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರ ತಾಲೂಕಿನ ಶಾಲಾ ಮಕ್ಕಳಿಗೆ ಅಪೌಷ್ಟಿಕತೆ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಏರ್ಪಡಿಸಲಾಯಿತು. ತಾಲೂಕಿನ ಬೇರೆ ಬೇರೆ ಗ್ರಾಮಗಳಿಂದ ಆಗಮಿಸಿದ ಸುಮಾರು 500 ಮಕ್ಕಳಿಗೆ ಚಿಕಿತ್ಸೆಯನ್ನು ನೀಡಲಾಯಿತು. ಸಮಾರಂಭವನ್ನು ಸಹಾಯಕ ಆಯುಕ್ತರಾದ ಶ್ರೀ ರಾಜು ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಮಾರಂಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ. ರಾಜೇಶ್ವರಿ, ತಾಲೂಕು ಆಸ್ಪತ್ರೆ ಆಡಳಿತಾಧಿಕಾರಿ ಡಾ.ರಾಬರ್ಟ್, […]
ಅತೀ ಶೀಘ್ರದಲ್ಲಿ ನಿಮ್ಮ ಮುಂದೆ ಬರಲಿದ್ದಾನೆ “ಅರ್ಜುನ್ ಸನ್ಯಾಸಿ”
ಮುಂದಿನ ತಿಂಗಳು ತೆರೆ ಕಾಣಲಿರುವ ನಮ್ಮೂರ ಹುಡುಗ ಸಿ .ಸಿ. ರಾವ್ ನಾಯಕ ನಟನಾಗಿ ಅಭಿನಯಿಸಿರುವ “ಅರ್ಜುನ್ ಸನ್ಯಾಸಿ” ಚಿತ್ರದ ಪೋಸ್ಟರ್ ಇತ್ತೀಚಿಗೆ ಸೋಶಿಯಲ್ ಮೀಡಿಯಾ ಮತ್ತು ಸಿನಿಮಾರಂಗದಲ್ಲಿ ಹವಾ ಸ್ರಷ್ಟಿಸುತ್ತಿದೆ. ಉತ್ತಮ ಅಭಿನಯ ಹಾಗೂ ನಿರ್ದೇಶನದ ಬಗ್ಗೆ ಒಳ್ಳೆ ಮಾತುಗಳು ಪತ್ರಿಕಾ ವಲಯ ಮತ್ತು ಸೋಶಿಯಲ್ ಮೀಡಿಯಾದಲ್ಲಿ ಕೇಳಿ ಬರುತ್ತಿದೆ. ಈಶ್ವರ್ ಪೋಲಂಕಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ನಿರ್ದೇಶನ ಹಾಗೂ ನಿರ್ಮಾಣ ಮಾಡುತ್ತಿದ್ದು ಗುರುಮೂರ್ತಿ ಹೆಗಡೆ ,ಕಣ್ಣಿ ಪಾಲ್, […]
ಕುಂದಾಪುರ: ಅತ್ಯಾಚಾರ ಪ್ರಕರಣಗಳ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಕಾನೂನು ಜಾರಿಗೊಳಿಸಲು ಎ ಬಿ ವಿ ಪಿ ಆಗ್ರಹ
ಕುಂದಾಪುರ(ಸೆ,15): “ಯತ್ರ ನಾರ್ಯಸ್ತು ಪೂಜ್ಯಂರಮಂತೇ ತತ್ರ ದೇವತಾಃ” ಎನ್ನುವ ನಮ್ಮ ದೇಶದಲ್ಲಿ ಎಳೆ ವಯಸ್ಸಿನ ಮಕ್ಕಳಿಂದ ಹಿಡಿದು ಇಳಿವಯಸ್ಸಿನವರ ಮೇಲೆ ಅತ್ಯಾಚಾರ, ಹಿಂಸೆ,ದೌರ್ಜನ್ಯ ಪ್ರಕರಣಗಳು ನಡೆಯುತ್ತಿರುವುದು ದುಃಖಕರ ಸಂಗತಿ. ದೇಶದಲ್ಲಿ ನಿರಂತರವಾಗಿ ನಡೆಯುತ್ತಲೇ ಇರುವ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗುವ ಕಾನೂನು ಜಾರಿಯಾಗಬೇಕೆಂದು ವಿದ್ಯಾರ್ಥಿನಿ ಪ್ರಮುಖ್ ನಿರಕ್ಷಿತಾ ಹೇಳಿದರು. ಅವರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕುಂದಾಪುರದ ವತಿಯಿಂದ ಕುಂದಾಪುರ ಮಿನಿವಿಧಾನಸೌಧದ ಎದುರು ಸೆಪ್ಟೆಂಬರ್,15 ರಂದು ದೇಶಾದ್ಯಂತ […]
ಭಾರತೀಯ ಸಿನಿಮಾ ರಂಗಕ್ಕೆ ನಾಯಕ ನಟನಾಗಿ ಪಾದಾರ್ಪಣೆಗೈಯಲ್ಲಿರುವ ಕುಂದಾಪುರದ ಯುವ ಪ್ರತಿಭೆ ಸಿ. ಸಿ. ರಾವ್
ಕುಂದಾಪುರ ತಾಲೂಕು ಸಿದ್ಧಾಪುರ ಎಂಬ ಗ್ರಾಮದ ಖಾಸಗಿ ಬಸ್ ಚಾಲಕರಾಗಿ ಕೆಲಸ ನಿರ್ವಹಿಸುತ್ತಿರುವ ಚಂದ್ರಶೇಖರ ಭಟ್ ಹಾಗೂ ಸತ್ಯವತಿ ದಂಪತಿಯ ಮಗನಾದ ಚೇತನ್ ಚಂದ್ರಶೇಖರ ರಾವ್ ಯಾನೆ ಸಿ.ಸಿ ರಾವ್ ರವರು ಬಾಲ್ಯದಲ್ಲಿ ತಂದೆ-ತಾಯಿಯ ಪ್ರೀತಿ ಮತ್ತು ಸ್ನೇಹದೊಂದಿಗೆ ಬೆಳೆದರು. ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ.ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ಪದವಿ ವಿದ್ಯಾಭ್ಯಾಸ ಮುಗಿಯುತ್ತಿದ್ದಂತೆ ತಾನು ಬದುಕಿನಲ್ಲಿ ಏನಾದರು ಸಾಧಿಸಬೇಕು ಎನ್ನುವ ಛಲದೊಂದಿಗೆ ಕನ್ನಡ ಚಿತ್ರರಂಗದಲ್ಲಿ ತನ್ನದೇ ಛಾಪನ್ನು ಮೂಡಿಸಬೇಕೆಂದು ಹುಟ್ಟೂರ […]










