ಗೋಪಾಡಿ(ನ,25): ಗ್ರಾಮ ವಿಕಾಸ ಸಮಿತಿ ಪಡು ಗೋಪಾಡಿ ಆಯೋಜನೆಯಲ್ಲಿ ಮನೆ ಮನೆ ಭಜನೆ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಕುಟುಂಬ ಪ್ರಬೋಧನ ಪ್ರಮುಖ್ ಗುರುರಾಜ್ ರಾವ್. ಕೋಟೇಶ್ವರ ರವರು ಇತ್ತೀಚೆಗೆ ಚಾಲನೆ ನೀಡಿದ್ದು, ಭಜನೆಯ ಮೂಲಕ ಜನರಲ್ಲಿ ಭಕ್ತಿ ಮತ್ತು ಧಾರ್ಮಿಕ ಶ್ರದ್ಧೆಯನ್ನು ಉದ್ದೀಪನಗೊಳಿಸುವ ನೆಲೆಯಲ್ಲಿ ಗೋಪಾಡಿ ಪಡು ಗ್ರಾಮ ವಿಕಾಸ ಸಮಿತಿಯ ಸಂಚಾಲಕ ಸುರೇಂದ್ರ ಸಂಗಮ್ ರವರ ನೇತೃತ್ವದಲ್ಲಿ ಮನೆ ಮನೆ ಭಜನೆ ಕಾರ್ಯಕ್ರಮ ನಿರಂತರವಾಗಿ ನಡೆಯುತ್ತಿದೆ. ಯಾವುದೇ ರೀತಿಯ ಹಣ […]
Month: November 2021
ಸಿಎಸ್ಇಇಟಿ ಪರೀಕ್ಷಾ ಫಲಿತಾಂಶ: ಡಾ. ಬಿ.ಬಿ. ಹೆಗ್ಡೆ ವಿದ್ಯಾರ್ಥಿಗಳ ಉತ್ಕ್ರಷ್ಟ ಸಾಧನೆ
ಕುಂದಾಪುರ(ನ,25): ಇತ್ತೀಚೆಗೆ ನಡೆದ ಸಿ.ಎಸ್.ಇ.ಇ.ಟಿ. ಪರೀಕ್ಷೆಯಲ್ಲಿ ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು 87% ಫಲಿತಾಂಶ ಪಡೆದಿದ್ದಾರೆ. ಒಟ್ಟು 23 ವಿದ್ಯಾರ್ಥಿಗಳು ಸಿ.ಎಸ್. ಪರೀಕ್ಷೆ ಬರೆದಿದ್ದು 20 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಇದರ ಅಧ್ಯಕ್ಷರು ಹಾಗೂ ಬೈಂದೂರು ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿಯವರು ಶುಭ ಹಾರೈಸಿದರು. ದ್ವಿತೀಯ ಬಿ.ಕಾಂ.ನ ತೇಜಸ್ 84.5% ಹಾಗೂ ಧ್ವನಿ ಶೆಟ್ಟಿ 84.5% ಅಂಕಗಳೊಂದಿಗೆ ಕಾಲೇಜಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದು, […]
ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ: ಸಿಎಸ್ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಕುಂದಾಪುರ(ನ,22): ವಿದ್ಯಾರ್ಥಿಗಳು ಜೀವನದಲ್ಲಿ ಗುರಿಯನ್ನು ಬೆನ್ನಟ್ಟಿ ನಿರಂತರ ಪ್ರಯತ್ನ ನಡೆಸಿದರ ಅಸಾಧ್ಯವಾದುದು ಯಾವುದೂ ಇಲ್ಲ .38 ವಿದ್ಯಾರ್ಥಿಗಳಲ್ಲಿ 34 ವಿದ್ಯಾರ್ಥಿಗಳು ಸಿಎಸ್ ಫೌಂಡೇಶನ್ (ಸಿಎಸ್ಇಇಟಿ) ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವುದು ಸುಲಭದ ಮಾತಲ್ಲ. ವಿದ್ಯಾರ್ಥಿಗಳನ್ನು ಈ ಮಟ್ಟಿಗೆ ಸಿದ್ಧಗೊಳಿಸಿದ ಶಿಕ್ಷ ಪ್ರಭಾ ಅಕಾಡೆಮಿ ಮತ್ತು ಸಾಧಕ ವಿದ್ಯಾರ್ಥಿಗಳು ಅಭಿನಂದನಾರ್ಹರು ಎಂದು ಸಿಎಸ್ ರಮ್ಯ ರಾವ್ ಹೇಳುದರು. ಅವರು ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಸಿಎ/ ಸಿಎಸ್ ತರಬೇತಿ ಸಂಸ್ಥೆಯಲ್ಲಿ […]
ಸಂಜಯಗಾಂಧಿ ಪ್ರೌಢ ಶಾಲೆ ಅಂಪಾರು:-ಕನ್ನಡ ಜಾನಪದ ರಾಜ್ಯೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮ
ಅಂಪಾರು (ನ,22): ಕನ್ನಡ ಜಾನಪದ ಪರಿಷತ್, ಬೆಂಗಳೂರು, ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕ, ಕನ್ನಡ ಜಾನಪದ ಪರಿಷತ್ ಕುಂದಾಪುರ ತಾಲೂಕು ಘಟಕ, ಸಂಜಯ್ ಗಾಂಧಿ ಪ್ರೌಢ ಶಾಲೆ ಅಂಪಾರು, ಸಂಜಯ್ ಗಾಂಧಿ ಆಂಗ್ಲ ಮಾಧ್ಯಮ ಶಾಲೆ ಅಂಪಾರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಂಪಾರು ಹಾಗೂ ಲಯನ್ಸ್ ಕ್ಲಬ್ ಕೋಸ್ಟಲ್ ಕುಂದಾಪುರ ವಲಯ ಪ್ರಾಂತ್ಯ ಜಿಲ್ಲೆ317ಸಿ ಇವರ ಸಂಯುಕ್ತ ಆಶ್ರಯದಲ್ಲಿ ಜನರೆಡೆಗೆ ಹೋಗೋಣ, ಜಾನಪದ ಉಳಿಸೋಣ,ಜಾನಪದವೇ ಸತ್ಯ,ಜಾನಪದವೇ […]
ಸೂರ್ಯ ಚೈತನ್ಯ ಹೈಸ್ಕೂಲ್ ಕುತ್ಯಾರು: ನ,26 ರಂದು ಡಾ. ಗಣೇಶ್ ಗಂಗೊಳ್ಳಿಯವರಿಗೆ ಸನ್ಮಾನ ಮತ್ತು ಗೀತಗಾಯನ ಕಾರ್ಯಕ್ರಮ
ಕುತ್ಯಾರು(ನ,22): ಇಲ್ಲಿನ ಸೂರ್ಯ ಚೈತನ್ಯ ಹೈಸ್ಕೂಲ್ ಆಶ್ರಯದಲ್ಲಿ ನವೆಂಬರ್ 26 ರಂದು ಕನ್ನಡ ಜಾನಪದ ಪರಿಷತ್ ಉಡುಪಿ ಇದರ ಜಿಲ್ಲಾಧ್ಯಕ್ಷರು ಹಾಗೂ ಖ್ಯಾತ ಜನಪದ ಗಾಯಕರಾದ ಡಾ.ಗಣೇಶ್ ಗಂಗೊಳ್ಳಿ ಯವರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಕನ್ನಡ ಜಾನಪದ ಕೋಗಿಲೆ ಬಿರುದಾಂಕಿತ ಡಾ.ಗಣೇಶ್ ಗಂಗೊಳ್ಳಿಯವರು ಕನ್ನಡ ನಾಡಿನ ಜನಪದ ಸಂಸ್ಕೃತಿ, ಕಲೆ ಮತ್ತು ಸಾಹಿತ್ಯ ಪರಂಪರೆಯನ್ನು ಉಳಿಸಿ ಬೆಳೆಸಿನಲ್ಲಿ ವಿಶಿಷ್ಟ ಕೊಡುಗೆಯನ್ನು ನೀಡುತ್ತಿರುವ ಕಲಾಸಾಧಕ. ಕರ್ನಾಟಕ ಜನಪದ ಸಾಹಿತ್ಯ ಸೇವೆಗಾಗಿ ಅವರಿಗೆ […]
ಎಕ್ಸಲೆಂಟ್ ಕಾಲೇಜು ಸುಣ್ಣಾರಿ: ಕಾನೂನು ಅರಿವು ಕಾರ್ಯಗಾರ
ಕೋಟೇಶ್ವರ (ನ,22): ಸುಣ್ಣಾರಿಯ ಎಕ್ಸಲೆಂಟ್ ಪದವಿಪೂರ್ವಕಾಲೇಜಿನ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಾಗಾರವನ್ನು ನ,19 ರಂದು ಹಮ್ಮಿಕೊಳ್ಳಲಾಯಿತು. ಕುಂದಾಪುರದ ಡಿವೈಎಸ್ಪಿ ಕೆ. ಶ್ರೀಕಾಂತ್ ರವರು ಕಾರ್ಯಾಗಾರವನ್ನು ಉದ್ಘಾಟಿಸಿ ,ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಕಾನೂನು ಅರಿವು ಮೂಡಿಸುವುದರ ಬಗ್ಗೆ ವಿವರಿಸುತ್ತಾ ಇಂದಿನ ವಿದ್ಯಾರ್ಥಿಗಳು ಮಾದಕದ್ರವ್ಯ ವ್ಯಸನಕ್ಕೆ ಒಳಪಡುವ ಪ್ರಕರಣ ಹೆಚ್ಚಾಗಿ ಕಾಣುತ್ತಿದ್ದೇವೆ. ಇದರಿಂದ ತಮ್ಮ ಇಡೀ ವಿದ್ಯಾರ್ಥಿ ಜೀವನವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ ಹಾಗೂ ಮೊಬೈಲ್ ಬಳಕೆ, ಫೇಸ್ಟುಕ್, ಇನ್ಸ್ಟಾಗ್ರಾಂ, ವಾಟ್ಸಾಪ್ ಗಳನ್ನು ತುಂಬಾ ಜಾಗ್ರತೆಯಿಂದ […]
ಉಚ್ಚಿಲ ಮೊಗವೀರ ಭವನ : ಉದ್ಘಾಟನಾ ಸಮಾರಂಭ
ಉಚ್ಚಿಲ(ನ,21): ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ (ರಿ.) ಉಚ್ಚಿಲ, ಎಂ. ಆರ್.ಪಿ.ಎಲ್ ಕಾರ್ಪೊರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ ಇನ್ಸ್ಟಿಟ್ಯೂಟ್ ಸಹಯೋಗದೊಂದಿಗೆ ನಿರ್ಮಾಣಗೊಂಡ “ಮೊಗವೀರ ಭವನದ ಉದ್ಘಾಟನಾ ಸಮಾರಂಭ” ನ,21 ರಂದು ಬಹಳ ಅದ್ದೂರಿಯಾಗಿ ನಡೆಯಿತು. ಉಡುಪಿ ಶಾಸಕ ಶ್ರೀ ಕೆ ರಘುಪತಿ ಭಟ್ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ನ ಪ್ರವರ್ತಕರಾದ ನಾಡೋಜ ಜಿ. ಶಂಕರ್,ಶ್ರೀಮತಿ ಶಾಲಿನಿ ಜಿ . […]
ಪ್ರೇಕ್ಷಕರ ಬಹುನಿರೀಕ್ಷೆಯ ‘ಕಪೋ ಕಲ್ಪಿತಂ’ ಕನ್ನಡ ಚಿತ್ರ ನ. 26 ರಂದು ತೆರೆಗೆ
ಮಂಗಳೂರು (ನ, 21) : ಅಕ್ಷರಪ್ರೊಡಕ್ಷನ್ ಹಾಗೂ ಸವ್ಯಸಾಚಿ ಕ್ರಿಯೇಷನ್ ಬ್ಯಾನರ್ನಡಿ ಮೂಡಿ ಬಂದಿರುವ ‘ಕಪೋ ಕಲ್ಪಿತಂ’ ಕನ್ನಡ ಚಿತ್ರ ನ.26 ರಂದು ರಾಜ್ಯದಾದ್ಯಂತ ತೆರೆ ಕಾಣಲಿದೆ. ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಕಪೋ ಕಲ್ಪಿತಂ ಚಿತ್ರದ ನಿರ್ದೇಶಕಿ ಹಾಗೂ ನಾಯಕಿ ಸುಮಿತ್ರ ಗೌಡ ಚಿತ್ರ ಬಿಡುಗಡೆಯ ದಿನಾಂಕವನ್ನು ತಿಳಿಸಿದರು. ನಮ್ಮ ಕರಾವಳಿಯ ಅನೇಕ ಪ್ರತಿಭೆಗಳು ಚಿತ್ರದಲ್ಲಿ ನಟಿಸಿದ್ದು, ದ.ಕ., ಉಡುಪಿ, ಬೆಳ್ತಂಗಡಿ ಸೇರಿದಂತೆ ವಿವಿಧ ಭಾಗಗಳಲ್ಲಿ ಚಿತ್ರೀಕರಣ ನಡೆದಿದ್ದು ಚಿತ್ರ […]
ರಾಜ್ಯಮಟ್ಟದ ಕರಾಟೆಯಲ್ಲಿ ಗಂಗೊಳ್ಳಿಯ ಕೆ.ಡಿ.ಎಫ್ ಕರಾಟೆ ಎಂಡ್ ಫಿಟ್ನೆಸ್ ಅಕಾಡೆಮಿಯ ವಿದ್ಯಾರ್ಥಿಗಳ ಉತ್ತಮ ಸಾಧನೆ
ಗಂಗೊಳ್ಳಿ(ನ ,21): ಶೋರಿನ್ ರಿಯೂ ಕರಾಟೆ ಎಂಡ್ ಕೊಬುಡೊ ಅಸೋಸಿಯೇಷನ್ ವತಿಯಿಂದ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಇತ್ತೀಚಿಗೆ ನಡೆದ 18ನೇ ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯ ಕಟಾ ಮತ್ತು ಕುಮಿಟೊ ಭಾಗದಲ್ಲಿ ವಿಜೇತರಾದ ಗಂಗೊಳ್ಳಿಯ ಕೆ.ಡಿ.ಎಫ್ ಕರಾಟೆ ಎಂಡ್ ಫಿಟ್ನೆಸ್ ಅಕಾಡೆಮಿಯ ವಿದ್ಯಾರ್ಥಿಗಳು ಕಟಾ ಮತ್ತು ಕುಮಿಟಿ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ತರಬೇತುದಾರರಾದ ಟಿ ಶಶಾಂಕ್ ಶೆಣೈ ಇವರಿಗೆ ತರಬೇತಿ ನೀಡಿದ್ದರು.ನಿಂತವರು : ಶ್ಯಾಮ್ […]
ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಸಮವಸ್ತ್ರ ವಿತರಣೆ
ಗಂಗೊಳ್ಳಿ(ನ ,20): ಇಲ್ಲಿನ ಸರಸ್ವತಿ ವಿದ್ಯಾಲಯ ಪ್ರೌಢಶಾಲಾ ಕನ್ನಡ ಮಾಧ್ಯಮ ವಿಭಾಗದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಇಲ್ಲಿನ ಅಧ್ಯಾಪಕರ ಆರ್ಥಿಕ ಸಹಾಯದೊಂದಿಗೆ ಪ್ರತಿವರ್ಷದಂತೆ ಈ ಬಾರಿ ಕೂಡ ಉಚಿತವಾಗಿ ಸಮವಸ್ತ್ರಗಳನ್ನು ನೀಡಲಾಯಿತು. ಜಿ. ಎಸ್. ವಿ ಎಸ್ ಅಸೋಸಿಯೇಷನ್ ಕಾರ್ಯದರ್ಶಿ ಹೆಚ್. ಗಣೇಶ್ ಕಾಮತ್ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಪ್ರೌಢಶಾಲಾ ಉಪಪ್ರಾಂಶುಪಾಲರಾದ ಉಮೇಶ್ ಕರ್ಣಿಕ್ ಮತ್ತು ಅಧ್ಯಾಪಕರು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಶಾಲಾ ಆರಂಭದ ದಿನಗಳಲ್ಲಿ ಇಲ್ಲಿನ […]