ಅಂಪಾರು (ಡಿ,22) :ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ) ಅಂಬಲಪಾಡಿ ,ಮೊಗವೀರ ಯುವ ಸಂಘಟನೆ (ರಿ.)ಉಡುಪಿ ಜಿಲ್ಲೆ ಹಾಗೂ ಬೈಂದೂರು – ಶಿರೂರು ಘಟಕದ ಸಹಕಾರದೊಂದಿಗೆ ,ಘಟಕದ ಅಧ್ಯಕ್ಷರಾದ ರವಿರಾಜ್ ಚಂದನ್ ಕಳವಾಡಿ ಯವರು ತಮ್ಮ ಹುಟ್ಟುಹಬ್ಬವನ್ನು ಡಿ,20 ರಂದು ವಾಗ್ಜ್ಯೋತಿ ಶ್ರವಣ ದೋಷವುಳ್ಳ ಮಕ್ಕಳ ವಸತಿ ಶಾಲೆ ಮೂಡುಬಗೆ ಅಂಪಾರು ಇಲ್ಲಿನ ವಿಶಿಷ್ಟ ಚೇತನ ಮಕ್ಕಳೊಂದಿಗೆ ಬೆರೆತು ಅವರ ಜೊತೆ ಸಹಭೋಜನ ಹಾಗೂ ಸಿಹಿತಿಂಡಿ ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿಕೊಂಡರು. ಮೊಗವೀರ ಯುವಸಂಘಟನೆ ಉಡುಪಿ […]
Day: December 23, 2021
ಕೊಡೇರಿ: ಕಡಲಾಮೆ ರಕ್ಷಣೆ
ಉಪ್ಪುಂದ(ಡಿ,22) : ಇಲ್ಲಿನ ಕೋಡೇರಿ ಸಮುದ್ರ ತೀರದಲ್ಲಿ ಮೊಟ್ಟೆ ಇಡಲು ಬಂದ ಕಡಲಾಮೆಯೊಂದನ್ನು ಸ್ಥಳೀಯರು ರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಒಪ್ಪಿಸಿದರು. ಅರಣ್ಯ ಇಲಾಖೆಯ ಸಿಬ್ಬಂದಿಗಳು ಆಮೆಗೆ ಸಣ್ಣ ಪುಟ್ಟ ಗಾಯಗಳಾಗಿರುವುದರಿಂದ ಆಮೆಯ ಚಿಕಿತ್ಸೆಗೆ ಕುಂದಾಪುರದ ಕೋಡಿ ಕಡಲಾಮೆ ಸಂರಕ್ಷಣಾ (FSL) ಘಟಕಕ್ಕೆ ರವಾನಿಸಿದ್ದಾರೆ. ವರದಿ : ಈಶ್ವರ್ ಸಿ ನಾವುoದ
ಸಹಕಾರದಿಂದ ಸಮ್ರದ್ದಿ- ಬಿಂದು ನಾಯರ್
ಮೂಡಬಿದಿರೆ(ಡಿ,22): ಶ್ರೀ ಧವಲಾ ಕಾಲೇಜಿನ ಅರ್ಥಶಾಸ್ತ್ರ ಮತ್ತು ಸಹಕಾರ ವಿಭಾಗ, ವಾಣಿಜ್ಯ ಶಾಸ್ತ್ರ ವಿಭಾಗದೊಂದಿಗೆ ಜಂಟಿಯಾಗಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಬಿಂದು ನಾಯರ್ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ಸಹಕಾರ ತತ್ವದ ಆಶಯಗಳು, ಪ್ರಯೋಜನಗಳು, ಸಹಕಾರ ಕ್ಷೇತ್ರದ ಪ್ರಗತಿ ಹಾಗೂ ದೇಶದ ಅಭಿವೃದ್ಧಿಯಲ್ಲಿ ಸಹಕಾರಿ ಸಂಸ್ಥೆಗಳ ಕೊಡುಗೆಗಳ ಬಗ್ಗೆ ಹಾಗೂ ಸಹಕಾರಿ ಕ್ಷೇತ್ರದ ಉದ್ಯೋಗಾವಕಾಶಗಳ ಕುರಿತು ಉಪಯುಕ್ತ […]
ಹಾಲಾಡಿ:ಸಮುದಾಯಾಧಾರಿತ ಔದ್ಯೋಗಿಕ ತರಬೇತಿ ಕಾರ್ಯಕ್ರಮ ಸಂಪನ್ನ
ಹಾಲಾಡಿ(ಡಿ,22): ಜಿಲ್ಲಾ ವಿಕಲಚೇತನರ ಇಲಾಖೆ ಉಡುಪಿ ಜಿಲ್ಲೆ , ಎಪಿಡಿ ಸಂಸ್ಥೆ ಬೆಂಗಳೂರು, ಗ್ರಾಮ ಪಂಚಾಯತ್ ಹಾಲಾಡಿ ಹಾಗೂ ಗ್ರಾಮ ಪಂಚಾಯತ್ ಹಾರ್ದಳ್ಳಿ ಮಂಡಳ್ಳಿ ಆಶ್ರಯದಲ್ಲಿ ಸಮುದಾಯಾಧಾರಿತ ಔದ್ಯೋಗಿಕ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ಪ್ರಮಾಣ ಪತ್ರ ವಿತರಣಾ, ಹೊಲಿಗೆ ಯಂತ್ರ ವಿತರಣೆ ಸಮಾರಂಭ ಕಾರ್ಯಕ್ರಮ ಡಿ. 20ರಂದು ಹಾಲಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ಶ್ರೀಮತಿ ರತ್ನಾ […]