ಗಂಗೊಳ್ಳಿ (ನ,29): ನಮ್ಮ ಭಾರತದ ಸಂವಿಧಾನದ ಬಗೆಗೆ ಅರಿವನ್ನು ಮೂಡಿಸುವಲ್ಲಿ ಪ್ರಾಥಮಿಕ ಹಂತದಿಂದಲೇ ಪಠ್ಯಪುಸ್ತಕಗಳಲ್ಲಿ ಅದರ ಬಗೆಗಿನ ಹೆಚ್ಚಿನ ವಿವರಗಳನ್ನು ನೀಡಬೇಕಿದೆ. ದೇಶದ ಜವಾಬ್ದಾರಿಯುತ ನಾಗರಿಕನಾಗಿ ಸಂವಿಧಾನದ ಅರಿವನ್ನು ಹೊಂದಿರಬೇಕಾದುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಆಂಗ್ಲಭಾಷಾ ಉಪನ್ಯಾಸಕರಾದ ಥಾಮಸ್ ಪಿ. ಎ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ಸಂವಿಧಾನ ದಿವಸದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಕವಿತಾ […]
Year: 2021
ಹೆಮ್ಮಾಡಿ:ಮನೆ ಮನೆ ಭಜನೆ ಕಾರ್ಯಕ್ರಮ
ಹೆಮ್ಮಾಡಿ(ನ,28): ಕುಂದಾಪುರ ತಾಲೂಕು ಭಜನಾ ಮಂಡಳಿಗಳ ಒಕ್ಕೂಟ ಕುಂದಾಪುರ, ವಂಡ್ಸೆ ವಲಯ ಭಜನಾ ಒಕ್ಕೂಟ ಹಾಗೂ ಶ್ರೀ ಲಕ್ಷ್ಮಿ ನಾರಾಯಣ ಭಜನಾ ಮಂಡಳಿ ಹೆಮ್ಮಾಡಿ ಸಹಯೋಗದಲ್ಲಿ ಶ್ರೀ ಲಕ್ಷ್ಮಿ ನಾರಾಯಣ ಭಜನಾ ಮಂಡಳಿ ಹೆಮ್ಮಾಡಿ ಯವರ 20 ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಮನೆ ಮನೆ ಭಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮನೆ ಮನೆ ಭಜನೆ ಶ್ರೀ ರಾಮನಾಮ ಹರಿ ಸ್ಮರಣೆ, 108 ಮನೆಯಂಗಳದಲ್ಲಿ ಭಜನಾ ಕಾರ್ಯಕ್ರಮ ಮತ್ತು ಭಜನಾ ತಾಳ […]
ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ & ಟೆಕ್ನಾಲಜಿ : ಪರಿಸರ ಕಾಳಜಿ ಕುರಿತು ಉಪನ್ಯಾಸಕ ಕಾರ್ಯಕ್ರಮ
ಪುತ್ತೂರು (ನ, 26) : ದಕ್ಷಿಣ ಧ್ರುವದ ಸುತ್ತ ವ್ಯಾಪಿಸಿರುವ ಹಿಮಚ್ಚಾದಿತ ಪ್ರದೇಶ ಅಂಟಾರ್ಕ್ಟಿಕ್ ವಿಸ್ಮಯಗಳ ಆಗರ ಮತ್ತು ಇದೊಂದು ಪ್ರಯೋಗಶಾಲೆಯಿದ್ದಂತೆ ಎಂದು ಮಣಿಪಾಲದ ಮಣಿಪಾಲ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರೊಫೆಸರ್ ಡಾ. ಅನೀಶ್.ಕೆ ವಾರಿಯರ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆದ ಅಂಟಾರ್ಕ್ಟಿಕಾದ ಹವಾಮಾನ ಬದಲಾವಣೆ ಮತ್ತು […]
ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ & ಟೆಕ್ನಾಲಜಿ : ಸಂವಿಧಾನ ದಿನಾಚರಣೆ
ಪುತ್ತೂರು (ನ, 26) : ದೇಶದ ಸಂವಿಧಾನದವು ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ಅಧಿಕಾರ ವ್ಯಾಪ್ತಿಯನ್ನು ಹಾಗೂ ಪ್ರಜೆಗಳ ಹಕ್ಕು ಮತ್ತು ಕರ್ತವ್ಯಗಳನ್ನು ನಿರ್ಧರಿಸುತ್ತದೆ. ಹೀಗಾಗಿ ಸಂವಿಧಾನವು ಎಲ್ಲಾ ಕಾನೂನುಗಳಿಗಿಂತ ಮಿಗಿಲಾದುದು ಎಂದು ಬಿಇಎಲ್ ಸಂಸ್ಥೆಯ ವಿಶ್ರಾಂತ ಹಿರಿಯ ಉಪ ಪ್ರಧಾನ ವ್ಯವಸ್ಥಾಪಕ ಟಿ.ಎನ್.ಸಿ. ಲಕ್ಷ್ಮಿ ನರಸಿಂಹನ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ಆಶ್ರಯದಲ್ಲಿ ಶ್ರೀರಾಮ ಸಭಾ ಭವನದಲ್ಲಿ ನಡೆದ […]
ನ,27 ರಂದು ಗಂಗೊಳ್ಳಿಯಲ್ಲಿ ಜಿ. ಶಂಕರ್ ಆರೋಗ್ಯ ಸುರಕ್ಷಾ ಕಾರ್ಡ್ ನೋಂದಾವಣಿ ಅಭಿಯಾನ
ಗಂಗೊಳ್ಳಿ (ನ,26): ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ) ಅಂಬಲಪಾಡಿ ಮತ್ತು ಮಣಿಪಾಲ್ ಸಿಗ್ನಾ ಆರೋಗ್ಯ ವಿಮಾ ಕಂಪನಿಯ ಸಹಯೋಗದೊಂದಿಗೆ ಮಾಹೆ ಮಣಿಪಾಲ ಇವರ ಸಹಕಾರದೊಂದಿಗೆ ಯಾವುದೇ ಜಾತಿ, ಮತ,ಧರ್ಮ ಬೇಧಭಾವವಿಲ್ಲದೇ ಸಮಾಜದ ಎಲ್ಲಾ ವರ್ಗದವರಿಗೆ ಲಭ್ಯವಿರುವ ಜಿ. ಶಂಕರ್ ಆರೋಗ್ಯ ಸುರಕ್ಷಾ ಕಾರ್ಡುಗಳ ನೋಂದಾವಣಿ ನ,15 ರಿಂದ ಪ್ರಾರಂಭಗೊಂಡಿದ್ದು ಪ್ರಯುಕ್ತ ನ,27ರಂದು ಶನಿವಾರ ಮಧ್ಯಾಹ್ನ ಸಮಯ 2 ರಿಂದ 5 ಗಂಟೆಯ ತನಕ ಗಂಗೊಳ್ಳಿ ಗ್ರಾಮ ಪಂಚಾಯತ್ ಎದುರುಗಡೆ ಇರುವ ಮಂಜುನಾಥ […]
ಬಂಟಕಲ್ ಕಾಲೇಜಿನ ವಿದ್ಯಾರ್ಥಿ ಪರಿಷತ್ ಉದ್ಘಾಟನೆ
ಬಂಟಕಲ್(ನ,26): ಶ್ರೀ ಮಧ್ವ ವಾದಿರಾಜ ಇಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್ಮೆಂಟ್ ಬಂಟಕಲ್ ಇದರ ಪ್ರಸಕ್ತ ಸಾಲಿನ ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಕಾರ್ಯಕ್ರಮವು ದಿನಾಂಕ ನ,24 ರಂದು ಕಾಲೇಜಿನ ಆವರಣದಲ್ಲಿ ಜರುಗಿತು. ಶಿರ್ವ ಪೋಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಶ್ರೀ ಶ್ರೀಶೈಲ ಮುರುಗೋಡ್ ರವರು 2021-22ನೇ ಸಾಲಿನ ವಿದ್ಯಾರ್ಥಿ ಪರಿಷತ್ತನ್ನು ಉದ್ಘಾಟಿಸಿದರು. ವಿದ್ಯಾರ್ಥಿ ಪರಿಷತ್ತಿಗೆ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಪದ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ […]
ಶ್ರೀ ಧವಲಾ ಕಾಲೇಜು ಮೂಡಬಿದಿರೆ: ಕೋಮುಸೌಹಾರ್ದತೆಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ
ಮೂಡಬಿದಿರೆ(ನ,26):ಇಲ್ಲಿನ ಶ್ರೀ ಧವಲಾ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ನ,25 ರಂದು ವಿದ್ಯಾರ್ಥಿಗಳಿಗೆ ಕೋಮುಸೌಹಾರ್ದತೆ ಎನ್ನುವ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ನಿತೇಶ್ ಬಲ್ಲಾಳ್ ಸಹಶಿಕ್ಷಕರು ಜೈನ್ ಹೈ ಸ್ಕೂಲ್ ಮೂಡಬಿದ್ರಿ ಇವರು ಭಾಗವಹಿಸಿದ್ದರು . ಭಾರತದ ಧರ್ಮ ಸಂಸ್ಕೃತಿ ವಿಚಾರಗಳನ್ನು ತಿಳಿಸುವುದರ ಜೊತೆಗೆ ವಿದ್ಯಾರ್ಥಿಗಳು ಪರಸ್ಪರ ಹೇಗೆ ಸಹಕಾರಿಗಳಾಗಿ ಬದುಕಬೇಕು ಮತ್ತು ಸಮಾಜದಲ್ಲಿ ಇಂತಹ ಮನಸ್ಥಿತಿಯನ್ನು ಬೆಳೆಸುವ ಕೆಲಸ ಮಾಡಬೇಕು […]
ಮೂಡ್ಲಕಟ್ಟೆ ಎಂ ಐ ಟಿ: ಪ್ರಥಮ ವರ್ಷದ ಇಂಜಿನಿಯರಿಂಗ್ ವಿಧ್ಯಾರ್ಥಿಗಳಿಗೆ ಕಾರ್ಯಗಾರ
ಕುಂದಾಪುರ(ನ,26): ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಕಾರ್ಯಕ್ರಮದ ಪ್ರಯುಕ್ತ ” ಯಶಸ್ಸಿನ ಗುಟ್ಟು” ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆರ್ಟ್ ಆಫ಼್ ಲಿವಿಂಗ್ ಇದರ ಪ್ರತಿನಿಧಿ ಶ್ರೀ ಪ್ರಶಾಂತ್ ಪೈ ಆಗಮಿಸಿದ್ದರು. “ ವಿದ್ಯಾರ್ಥಿಗಳ ಯಶಸ್ಸಿಗೆ ಮನಸ್ಸು ಬಹಳ ಪ್ರಮುಖ ಪಾತ್ರ ವಹಿಸುತ್ತದೆ, ಮನಸ್ಸಿನ ಸ್ಪಷ್ಟತೆ, ಏಕಾಗ್ರತೆ, ಬದ್ಧತೆ ಹಾಗೂ ಆತ್ಮವಿಶ್ವಾಸ ಈ ನಾಲ್ಕು ವಿಚಾರವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ […]
ಮೂಡ್ಲಕಟ್ಟೆ ಎಂ ಐ ಟಿ: ಇoಡಕ್ಷನ್ ಮತ್ತು ಓರಿಯಂಟೇಶನ್ ಕಾರ್ಯಕ್ರಮ
ಕುಂದಾಪುರ(ನ,24): ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಇಂಜಿನಿಯರಿಂಗ್ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಮತ್ತು ಓರಿಯಂಟೇಶನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಆರ್.ಏನ್. ಶೆಟ್ಟಿ ಪಿಯು. ಕಾಲೇಜು ಕುಂದಾಪುರ ಇದರಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಕೃಷ್ಣಮೂರ್ತಿ ಆಗಮಿಸಿದ್ದರು. “ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಶಿಕ್ಷಣದ ಜೊತೆಗೆ ಶಿಸ್ತು ಸಂಯಮವನ್ನು ಅಳವಡಿಸಿಕೊಳ್ಳಬೇಕು, ಪದವಿ ಜೊತೆಗೆ ಕ್ರಿಯಾಶೀಲರಾಗಿರುವುದನ್ನು ಕಲಿಯಬೇಕು. ಈ ನಿಟ್ಟಿನಲ್ಲಿ ವಿಧ್ಯಾರ್ಥಿಗಳು ಶ್ರಮ ತ್ಯಾಗ, ಪ್ರಾರ್ಥನೆ ,ಪ್ರಯತ್ನ […]
ನಿರಂತರ ಪರಿಶ್ರಮದಿಂದ ಕಲಾಸಾಧನೆ ಸಾಧ್ಯ: ಡಾ.ಗಣೇಶ್ ಗಂಗೊಳ್ಳಿ ಅಭಿಮತ
ಉಡುಪಿ (ನ,26): ಕಲೆಯು ಯಾವಾಗಲೂ ಓರ್ವ ಸಾಧಕನ ಸ್ವತ್ತು. ತನ್ನ ಆಯ್ದ ಕ್ಷೇತ್ರದಲ್ಲಿ ಸಾಧನೆಗೈಯಲು ಶೃದ್ಧೆ, ಸತತ ಪರಿಶ್ರಮ, ಆತ್ಮವಿಶ್ವಾಸ ಹಾಗೂ ವಿನಮ್ರತೆ ಅಗತ್ಯ. ಜೀವನದಲ್ಲಿ ಬರುವ ಅಡೆತಡೆಗಳನ್ನೆದುರಿಸಿ ಸಾಧನೆಯ ಹಾದಿಯಲ್ಲಿ ದೃಢ ಸಂಕಲ್ಪದೊಂದಿಗೆ ಹೆಜ್ಜೆಯಿಡಬೇಕು. ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಸೂರ್ಯ ಚೈತನ್ಯ ಸಂಸ್ಥೆಯ ಪ್ರಯತ್ನ ಶ್ಲಾಘನೀಯ ಎಂದು ಕನ್ನಡ ಜಾನಪದ ಪರಿಷತ್ ನ ಉಡುಪಿ ಜಿಲ್ಲಾಧ್ಯಕ್ಷ , ಖ್ಯಾತ ಜಾನಪದ ಗಾಯಕ ಡಾ. ಗಣೇಶ್ […]