ಗಂಗೊಳ್ಳಿ(ಜ.20): ವಿವೇಕಾನಂದರ ಚಿಂತನೆಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಹೊಂದಿರುವಂಥವು. ಅವರ ಜೀವನವನ್ನು ಅಭ್ಯಸಿಸುವುದರ ಜೊತೆಗೆ ಅಂತಹ ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರತಿಯೊಬ್ಬರೂ ಪ್ರಯತ್ನಿಸಿದಾಗ ಜೀವನವು ಸಾರ್ಥಕವಾಗಲು ಸಾಧ್ಯ ಎಂದು ಜೆ.ಸಿ ರಾಷ್ಟ್ರೀಯ ತರಬೇತುದಾರರಾದ ಕೆ.ಕೆ ಶಿವರಾಮ ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. […]
Day: January 20, 2022
ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ: ಸಿಎಸ್ ಪರೀಕ್ಷೆಯಲ್ಲಿ ಶ್ರೇಷ್ಠ ಸಾಧನೆ
ಕುಂದಾಪುರ(ಜ.20): ಇಲ್ಲಿನ ಕುಂದೇಶ್ವರ ರಸ್ತೆಯ ಸಿರಿ ಬಿಲ್ಡಿಂಗ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಸಿಎ/ಸಿಎಸ್ ಮತ್ತು ಬ್ಯಾಂಕಿಂಗ್ ತರಬೇತಿ ಸಂಸ್ಥೆ (ಸ್ಪೇಸ್) ಇದರ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ಜನವರಿ 2022 ರಲ್ಲಿ ನಡೆಸಿದ ಸಿಎಸ್ ಫೌಂಡೇಶನ್ (ಸಿಎಸ್ಇಇಟಿ) ಪರೀಕ್ಷೆ ಬರೆದ 6 ವಿದ್ಯಾರ್ಥಿಗಳಲ್ಲಿ 5 ವಿದ್ಯಾರ್ಥಿಗಳು ತೇರ್ಗಡೆ ಹೊಂದುವುದರ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಮಿಥುನ್ ಪೂಜಾರಿ […]
ಶ್ರೀ ವನದುರ್ಗಾದೇವಿ ದೇವಸ್ಥಾನ ಕಾಳಾವರ: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಶ್ರೀ ಉದಯ ಕುಮಾರ ಶೆಟ್ಟಿ ಆಯ್ಕೆ
ಕೋಟೇಶ್ವರ (ಜ.20): ಶ್ರೀ ವನದುರ್ಗಾದೇವಿ ದೇವಸ್ಥಾನ ಕಾಳಾವರ ಕ ಇದರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಶ್ರೀ ಉದಯ ಕುಮಾರ ಶೆಟ್ಟಿ ಕಾಳಾವರ ಇವರನ್ನು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾಧಾಯ ದತ್ತಿಗಳ ಇಲಾಖೆ ಆಯ್ಕೆ ಮಾಡಿ ಆದೇಶಿಸಿದೆ. ಪ್ರಧಾನ ಅರ್ಚಕರಾಗಿ ಶ್ರೀ ಸತೀಶ ಜೋಗಿ, ಸಮಿತಿ ಸದಸ್ಯರಾಗಿ ಶ್ರೀ ಎ. ರೋಶನ್ ಶೆಟ್ಟಿ ಸಲ್ವಾಡಿ, ಶ್ರೀ ಕಾಳಿಂಗ ಶೆಟ್ಟಿ ಬೀಡಿನಮನೆ, ಶ್ರೀ ಚಂದ್ರಶೇಖರ ನಾಯ್ಕ ಕಾಳಾವರ, ಶ್ರೀ ವಸಂತ ಶೆಟ್ಟಿ […]