ಗಂಗೊಳ್ಳಿ (ಜ.30): ನಮ್ಮ ಸಂವಿಧಾನದ ಉನ್ನತ ಆಶಯಗಳನ್ನು ಅರ್ಥಮಾಡಿಕೊಳ್ಳಬೇಕಾದರೆ ಅದನ್ನು ಅಧ್ಯಯನ ಮಾಡುವಂತಹ ಕೌಶಲ್ಯವನ್ನು ನಾವು ಬೆಳೆಸಿಕೊಳ್ಳಬೇಕಿದೆ. ಪೂರ್ವಾಪರಗಳನ್ನು ಅರಿಯದೆ ಎಲ್ಲ ವಿಚಾರಗಳಿಗೂ ಅನಗತ್ಯವಾಗಿ ಸಂವಿಧಾನವನ್ನು ತಳುಕು ಹಾಕುವ ಕೆಟ್ಟ ಪ್ರವೃತ್ತಿ ನಮ್ಮಲ್ಲಿ ಕೊನೆಗಾಣಬೇಕಿದೆ ಎಂದು ಯುವ ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಇಲ್ಲಿನ ಗುಜ್ಜಾಡಿ ಗೋಪಾಲನಾಯಕ ಇಂಡೋರ್ ಸ್ಟೇಡಿಯಂನಲ್ಲಿ ಗಂಗೊಳ್ಳಿ ರೋಟರಾಕ್ಟ್ ಕ್ಲಬ್ ಮತ್ತು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ […]
Day: January 30, 2022
ಇ ಸಿ ಆರ್ ಕಾಲೇಜ್: 73 ನೇ ಗಣರಾಜ್ಯೋತ್ಸವ
ಮಧುವನ(ಜ.30): ಇ ಸಿ ಆರ್ ಕಾಲೇಜಿನಲ್ಲಿ 73ನೇ ಗಣರಾಜ್ಯೋತ್ಸವ ಸಂಭ್ರಮದಿಂದ ನೆರವೇರಿತು. ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಮಧು ಟಿ ಭಾಸ್ಕರನ್ ಧ್ವಜಾರೋಹಣ ನೆರವೇರಿಸಿ ಪ್ರಜಾ ಪ್ರಭುತ್ವದ ಕುರಿತು ಮಾತನಾಡಿದರು. ಸಂಸ್ಥೆಯ ಆಡಳಿತಾಧಿಕಾರಿಗಳಾದ ಶ್ರೀ ಜೋಬಿನ್ ಜೋಸೆಫ್, ಶ್ರೀ ಅನಿಲ್ ಪಣಿಕ್ಕರ್, ಪ್ರಾಂಶುಪಾಲರಾದ ಶ್ರೀ ಆಕಾಶ್ ಸಾವಳ ಸಂಗ್, ಕೆನರಾ ಕಾಲೇಜ್ ಆಫ್ ನರ್ಸಿಂಗ್ನ ಪ್ರಾಂಶುಪಾಲರಾದ ಶ್ರೀ ನಟರಾಜ್ ಕೆ, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಕುಮಾರಿ ಸುಷ್ಮಿತಾ ಸ್ವಾಗತಿಸಿದರು, […]
ಸಂತ ಮೇರಿ ಮಹಾವಿದ್ಯಾಲಯದ 73 ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ
ಶಿರ್ವ(ಜ.29): ಸಂತ ಮೇರಿ ಮಹಾವಿದ್ಯಾಲಯದ 73ನೆ ಗಣರಾಜ್ಯೋತ್ಸವ ದಿನಾಚರಣೆ ಕಾಲೇಜಿನ ಎನ್.ಸಿ.ಸಿಯ ಭೂಯುವ ಸೇನಾದಳ ನೇತೃತ್ವದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಪ್ರೌಢಶಾಲೆಯ ಮುಖೋಪಾಧ್ಯಾಯರಾದ ಶ್ರೀ ಗಿಲ್ಬರ್ಟ್ ಪಿಂಟೋರವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ಇಂದು ಈ ಗಣರಾಜ್ಯೋತ್ಸವ ದಿನಾಚರಣೆಯನ್ನು 75ನೇ ಸ್ವಾತಂತ್ರ್ಯ ಅಮೃತಮಹೋತ್ಸವ ಪ್ರಯುಕ್ತ ಸರ್ಕಾರದ ಆದೇಶದಂತೆ ಶಾಲಾ-ಕಾಲೇಜಿನಲ್ಲಿ ಕೋವಿಡ್ 19 ರ ಮಾರ್ಗಸೂಚಿ ಅನ್ವಯ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರದೊಂದಿಗೆ ಆಚರಿಸುತ್ತಿದ್ದೇವೆ. ಇಂದು ನಮ್ಮ ರಾಷ್ಟ್ರ […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಸ್ವಚ್ಛತಾ ಅಭಿಯಾನ
ಶಿರ್ವ(ಜ.29):73 ನೇ ಗಣರಾಜ್ಯೋತ್ಸವ ದಿನದಂದು ಶಿರ್ವ-ಮಂಚಕಲ್ ಲಯನ್ಸ್ ಕ್ಲಬ್ ಹಾಗೂ ಶಿರ್ವ ಸಂತ ಮೇರಿ ಕಾಲೇಜಿನ ಎನ್ ಸಿ ಸಿ, ಎನ್ ಎಸ್ ಎಸ್, ರೆಂಜರ್ಸ್ ಮತ್ತು ರೋವರ್ಸ್ ಘಟಕಗಳ ಜಂಟಿ ಆಶ್ರಯದಲ್ಲಿ ಶಿರ್ವದ ಪ್ರವಾಸಿ ಮಂದಿರ ವಠಾರವನ್ನು ಸ್ವಚ್ಛಗೊಳಿಸುವ “ಶ್ರಮದಾನ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಡಾ.ಹೆರಾಲ್ಡ್ ಐವನ್ ಮೋನಿಸ್,ಅಲ್ಲದೆ ಪ್ರಾದ್ಯಾಪಕರುಗಳಾದ ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ.ಪ್ರವೀಣ್ಕುಮಾರ್,ಎನ್ ಎಸ್ ಎಸ್ ಯೋಜನಾಧಿಕಾರಿ ಶ್ರೀ ಪ್ರೇಮನಾಥ್, […]
ಕಟ್ ಬೆಲ್ತೂರು: ರಾಷ್ಟ್ರೀಯ ಮತದಾರರ ದಿನಾಚರಣೆ
ಕಟ್ಟ್ ಬೆಲ್ತೂರು(ಜ.29): ಇಲ್ಲಿನ ಸುಳ್ಸೆ ಗ್ರಾಮದಲ್ಲಿ ರಾಷ್ಟ್ರೀಯ ಮತದಾರರ ದಿನ ಆಚರಣೆ, ಹೊಸ ಮತದಾರರಿಗೆ ಗುರುತಿನ ಚೀಟಿ ನೀಡಿ ಮತದಾರರ ಆದ್ಯ ಕರ್ತವ್ಯ ಮತ್ತು ರೀತಿ ನೀತಿ ನಿಯಮಗಳನ್ನು ಪ್ರತಿಜ್ಞಾ ವಿಧಿಯನ್ನು ಭೋಧಿಸುವ ಮೂಲಕ ತಿಳಿಸಲಾಯಿತು. ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ […]