ತಲ್ಲೂರು(ಜ.24): ಅರ್ಭಕ್ಕ ದಾರಕ ನಂದಿಕೇಶ್ವರ ಸಹಪರಿವಾರ ಧೈವಸ್ಥಾನ ತಾಯ್ಕಲ್ ಬೆಟ್ಟ್, ಹಟ್ಟಿಯಂಗಡಿ ಇದರ ಪ್ರಥಮ ವರ್ಷದ ವಾರ್ಷಿಕ ಗೆಂಡಸೇವೆಯು ಇದೇ ಜನವರಿ 25 ಹಾಗೂ 26 ರಂದು ನಡೆಯಲಿದ್ದು ,ಆ ಪ್ರಯುಕ್ತ ವಿಶೇಷ ಪೂಜೆ, ಹಾಲುಹಬ್ಬ ಮತ್ತು ಅನ್ನ ಸಂತರ್ಪಣೆ ನೆಡಯಲಿದೆ ಎಂದು ದೈವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
Month: January 2022
ವಾರಾಹಿ ಕಾಲುವೆ ಯೋಜನೆಯ ಅವೈಜ್ಞಾನಿಕ ಕಾಮಗಾರಿಗೆ ದಂಡ ತೆತ್ತ ಅಮಾಯಕ ಯುವಕ
ವಕ್ವಾಡಿ(ಜ.24): ವಕ್ವಾಡಿಯಲ್ಲಿ ನಡೆಯುತ್ತಿರುವ ವಾರಾಹಿ ಕಾಲುವೆ ಯೋಜನೆ, ಆರಂಭದಿಂದಲೂ ಒಂದಿಲ್ಲೊಂದು ಸಮಸ್ಯೆ ತಂದೊಡ್ಡುತ್ತಲೇ ಇದೆ. ಈ ಎಲ್ಲ ಸಮಸ್ಯೆಗಳನ ಕುರಿತು, ಸ್ಥಳಿಯರು, ಗ್ರಾಮ ಪಂಚಾಯತ್ ನೊಂದಿಗೆ ಸೇರಿ ಅನೇಕ ಬಾರಿ ಕಂಪೆನಿ ಯೊಂದಿಗೆ ಸಭೆ ನಡೆಸಿ, ಸಮಸ್ಯೆ ಗಳ ಶೀಘ್ರ ಪರಿಹಾರ ಕ್ಕೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರೂ ಯಾವುದೇ ಪ್ರಯೋಜನ ಆಗಲಿಲ್ಲ. ಇದೀಗ ಈ ಕಾಮಗಾರಿ ನಡೆಸುತ್ತಿರುವ ಕಂಪೆನಿ ಯ ಔದಾಸಿನ್ಯಕ್ಕೆ ಹಿಡಿದು ಕೈಗನ್ನಡಿಯಂತೆ, ಬೇಕು ಬೇಕಾದಲ್ಲಿ ಹೊಂಡ ತೆರೆದು, […]
ಗೋಪಾಡಿ: ಜ.25 ,26 ರಂದು ಶ್ರೀ ಮಲಸಾವರಿ ಪಂಜುರ್ಲಿ ಪರಿವಾರ ದೈವಸ್ಥಾನದ ವಾರ್ಷಿಕ ವರ್ಧಂತ್ಯುತ್ಸವ
ಗೋಪಾಡಿ(ಜ.23): ಕುಂದಾಪುರ ತಾಲೂಕು ಗೋಪಾಡಿ (ಪಡು) ಗ್ರಾಮದ ಶ್ರೀ ಮಲಸಾವರಿ ಪಂಜುರ್ಲಿ ಹಾಗೂ ಪರಿವಾರ ದೈವಸ್ಥಾನದ 8ನೇ ವರ್ಷದ ವರ್ಧಂತ್ಯುತ್ಸವ ಜನವರಿ 25ರ ಮಂಗಳವಾರ ಹಾಗೂ 26 ರ ಬುಧವಾರದಂದು ನಡೆಯಲಿದೆ. ಕೋಟ ವೇದಮೂರ್ತಿ ಶ್ರೀಚಂದ್ರಶೇಖರ ಸೋಮಯಾಜಿಯವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಅನ್ನ ಸಂತರ್ಪಣೆ ನಡೆಯಲಿದ್ದು ,ಶ್ರೀ ರಾಮ ಮಹಿಳಾ ಭಜನಾ ಮಂಡಳಿ ಯವರಿಂದ ಭಜನಾ ಕಾರ್ಯಕ್ರಮ ಹಾಗೂ ಸವಿನಯ ಚಂಡೆ ಬಳಗ ಗೋಪಾಡಿ (ಪಡು) ಇವರಿಂದ 2 […]
ಸಂತ ಮೇರಿ ಕಾಲೇಜು ಶಿರ್ವ: ಎನ್.ಎಸ್.ಎಸ್ ಮಾಹಿತಿ ಕಾರ್ಯಕ್ರಮ
ಶಿರ್ವ(ಜ.23):ಇಲ್ಲಿನ ಸಂತ ಮೇರಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಪ್ರಥಮ ವರ್ಷದ ಸ್ವಯಂ ಸೇವಕರಿಗೆ ಮಾಹಿತಿ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಕಾಲೇಜಿನ ಎನ್.ಎಸ್.ಎಸ್ ಸಹ ಯೋಜನಾಧಿಕಾರಿ ಹಾಗೂ ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀ ಸ್ಯಾಮ್ಜೋಯಲ್ ಡಯಾಸ್ರವರು ಎನ್.ಎಸ್.ಎಸ್. ಸ್ವಯಂ ಸೇವಕರು ಸದಾ ಕಾರ್ಯ ಪ್ರವೃತ್ತವಾಗುವುದರೊಂದಿಗೆ ಸಮಾಜಕ್ಕಾಗಿ ಅರ್ಪಣಾ ಮನೋಭಾವನೆಯನ್ನು ಹೊಂದಿರಬೇಕು ಎಂದು ಹೇಳುತ್ತಾ ಎನ್,ಎಸ್.ಎಸ್ನ ಧ್ಯೇಯ, ವ್ಯಾಪ್ತಿ ಹಾಗೂ ವಿದ್ಯಾರ್ಥಿ ಜೀವನದಲ್ಲಿ ಎನ್.ಎಸ್.ಎಸ್ನ […]
ಸಂತ ಮೇರಿ ಕಾಲೇಜು ಶಿರ್ವ: ರಾಷ್ಟ್ರೀಯ ಯುವ ಸಪ್ತಾಹ 2022 -ವಿಶೇಷ ಕಾರ್ಯಕ್ರಮ
ಶಿರ್ವ(ಜ.23): ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ ಮಂಗಳೂರು, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಹಾಗೂ ಸಂತ ಮೇರಿ ಕಾಲೇಜು ಶಿರ್ವ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾಮೀ ವಿವೇಕಾನಂದರ 159 ನೇ ಜನ್ಮ ದಿನದ ಅಂಗವಾಗಿ ರಾಷ್ಟ್ರೀಯ ಯುವ ಸಪ್ತಾಹ-2022 ವಿಶೇಷ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಮಾತನಾಡಿದ ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಕೆ. ಆರ್ ಪಾಟ್ಕರ್ರವರು ಯುವಕರು ಸ್ವಾಮಿ ವಿವೇಕಾನಂದರ […]
ಬೈಂದೂರು ಶಾಸಕರ ವಿರುದ್ಧ ಅವಾಚ್ಯ ಪದ ಬಳಕೆ : ಪ್ರಕರಣ ದಾಖಲು
ಶಂಕರನಾರಾಯಣ (ಜ.22): ಬೈಂದೂರು ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿಯವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಹಲವಷ್ಟು ದಿನಗಳಿಂದ ಕಂಡು ಬರುತ್ತಿದ್ದು, ಅವಾಚ್ಯ ಪದಬಳಕೆ ಮಾಡಿದ ಉದಯ ಬಿಜೂರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ತಕ್ಷಣಕ್ಕೆ ಆತನನ್ನು ಬಂಧಿಸಬೇಕು, ಇಲ್ಲದಿದ್ದಲ್ಲಿ ಎಲ್ಲಾ ಬಿಜೆಪಿ ಕಾರ್ಯಕರ್ತರು ಮತ್ತು ಶಾಸಕರ ಅಭಿಮಾನಿಗಳು ಠಾಣೆಗೆ ಮುತ್ತಿಗೆ ಹಾಕಲಿದ್ದಾರೆ ಎಂದು ಬೈಂದೂರು ಬಿಜೆಪಿಯ ಯುವ ನಾಯಕ ಕಲ್ಗದ್ದೆ ಉಮೇಶ್ ಶೆಟ್ಟಿಯವರು ಆಗ್ರಹಿಸಿದ್ದಾರೆ.
ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ರಕ್ತದಾನ ಶಿಬಿರ
ಪುತ್ತೂರು(ಜ.21): ಮಾನವನ ಪಾಲಿಗೆ ರಕ್ತ ಜೀವದ್ರವ, ರಕ್ತದಾನದ ಕುರಿತು ಅರಿವು ಅತ್ಯವಶ್ಯಕ ಎಂದು ಪುತ್ತೂರಿನ ರೋಟರಿ-ಕ್ಯಾಂಪ್ಕೋ ಬ್ಲಡ್ ಬ್ಯಾಂಕಿನ ವೈದ್ಯಾಧಿಕಾರಿ ಡಾ.ರಾಮಚಂದ್ರ ಭಟ್.ಕೆ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಯೂತ್ ರೆಡ್ಕ್ರಾಸ್ ಘಟಕ ಮತ್ತು ರೋಟರಿ ಕ್ಲಬ್ ಪುತ್ತೂರು ನಗರ ಇದರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ಏರ್ಪಡಿಸಿದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತಾಡಿದರು. ಕಾಯಿಲೆ, ಶಸ್ತ್ರಚಿಕಿತ್ಸೆ, ಅಪಘಾತಗಳ […]
ಡಾ.ಬಿ.ಬಿ. ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಂದ ವಂಡ್ಸೆ ಎಸ್ಎಲ್ಆರ್ಎಂ ಘಟಕಕ್ಕೆ ಭೇಟಿ
ಕುಂದಾಪುರ (ಜ.21): ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿಗಳು ವಂಡ್ಸೆ ಗ್ರಾಮ ಪಂಚಾಯತ್ನ ಘನ ಮತ್ತು ದ್ರವ ತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದರು. ವಿಸ್ತರಣಾ ಚಟುವಟಿಕೆಯ ಅಂಗವಾಗಿ ಭೇಟಿ ನೀಡಿದ ವಿದ್ಯಾರ್ಥಿಗಳು, ತ್ಯಾಜ್ಯ ನಿರ್ವಹಣೆಯ ಕುರಿತಂತೆ ಸಂಪೂರ್ಣ ಮಾಹಿತಿಗಳನ್ನು ಪಡೆದರು. ಭೇಟಿಯ ಸಂದರ್ಭದಲ್ಲಿ ರಾಜ್ಯದಲ್ಲಿಯೇ ಮಾದರಿತ್ಯಾಜ್ಯ ನಿರ್ವಹಣಾ ಘಟಕವಾಗಿ ರೂಪಿಸಿದ ರೂವಾರಿಗಳು, ವಂಡ್ಸೆ ಗ್ರಾಮ ಪಂಚಾಯತ್ನ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ ಅಡಿಕೆಕೋಡ್ಲು ಅವರು ಉಪಸ್ಥಿತರಿದ್ದು […]
ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ
ಗಂಗೊಳ್ಳಿ(ಜ.20): ವಿವೇಕಾನಂದರ ಚಿಂತನೆಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಹೊಂದಿರುವಂಥವು. ಅವರ ಜೀವನವನ್ನು ಅಭ್ಯಸಿಸುವುದರ ಜೊತೆಗೆ ಅಂತಹ ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರತಿಯೊಬ್ಬರೂ ಪ್ರಯತ್ನಿಸಿದಾಗ ಜೀವನವು ಸಾರ್ಥಕವಾಗಲು ಸಾಧ್ಯ ಎಂದು ಜೆ.ಸಿ ರಾಷ್ಟ್ರೀಯ ತರಬೇತುದಾರರಾದ ಕೆ.ಕೆ ಶಿವರಾಮ ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. […]
ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ: ಸಿಎಸ್ ಪರೀಕ್ಷೆಯಲ್ಲಿ ಶ್ರೇಷ್ಠ ಸಾಧನೆ
ಕುಂದಾಪುರ(ಜ.20): ಇಲ್ಲಿನ ಕುಂದೇಶ್ವರ ರಸ್ತೆಯ ಸಿರಿ ಬಿಲ್ಡಿಂಗ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಸಿಎ/ಸಿಎಸ್ ಮತ್ತು ಬ್ಯಾಂಕಿಂಗ್ ತರಬೇತಿ ಸಂಸ್ಥೆ (ಸ್ಪೇಸ್) ಇದರ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ಜನವರಿ 2022 ರಲ್ಲಿ ನಡೆಸಿದ ಸಿಎಸ್ ಫೌಂಡೇಶನ್ (ಸಿಎಸ್ಇಇಟಿ) ಪರೀಕ್ಷೆ ಬರೆದ 6 ವಿದ್ಯಾರ್ಥಿಗಳಲ್ಲಿ 5 ವಿದ್ಯಾರ್ಥಿಗಳು ತೇರ್ಗಡೆ ಹೊಂದುವುದರ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಮಿಥುನ್ ಪೂಜಾರಿ […]










