ಗಂಗೊಳ್ಳಿ(ಫೆ.9) : ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ಇತ್ತೀಚೆಗೆ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಗಂಗೊಳ್ಳಿಯ ಹುಣಸೆ ಹಿತ್ತಲುವಿನ ನಿವಾಸಿಯೊಬ್ಬರಿಗೆ ಮತ್ತು ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ವೀರೇಶ್ವರ ದೇವಸ್ಥಾನದ ಬಳಿಯಲ್ಲಿನ ಮಹಿಳೆಯೊಬ್ಬರಿಗೆ ಆರ್ಥಿಕ ನೆರವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷರಾದ ಜಿ. ಗೋಪಾಲ ಪೂಜಾರಿ, ಉಪಾಧ್ಯಕ್ಷ ಜಿ. ಕೆ.ವೆಂಕಟೇಶ ಕೊಡೇರಿ ಮನೆ, ಕಾರ್ಯದರ್ಶಿ ಜಿ. ಆರ್ .ಲಕ್ಷ್ಮಣ ಬಿಲ್ಲವ, ಕೋಶಾಧಿಕಾರಿ ಮಂಜುರಾಜ್ ಗಂಗೊಳ್ಳಿ ಉಪಸ್ಥಿತರಿದ್ದರು ವರದಿ : […]
Month: February 2022
ಇ ಸಿ ಆರ್ ಕಾಲೇಜು: ಕ್ಯಾನ್ಸರ್ ಅರಿವು ಕಾರ್ಯಕ್ರಮ
ಮಧುವನ(ಫೆ.9): ಇಲ್ಲಿನ ಇ ಸಿ ಆರ್ ಕಾಲೇಜಿನಲ್ಲಿ ವಿಶ್ವ ಕ್ಯಾನ್ಸರ್ ದಿನದ ಪ್ರಯುಕ್ತ ಫೆ.4 ರಂದು “ಫ್ಲಾಶ್ ಮೊಬ್ – ಕ್ಯಾನ್ಸರ್ ಅರಿವು ಕಾರ್ಯಕ್ರಮ” ಆಯೋಜಿಸಲಾಗಿತ್ತು. ಕಾಲೇಜಿನಪ್ರಾಂಶುಪಾಲ ಶ್ರೀ ಆಕಾಶ್ ಸಾವಳ ಸಂಗ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ನೃತ್ಯ ರೂಪಕದ ಮೂಲಕ ಧೂಮಪಾನ, ಮಧ್ಯಪಾನ ಸೇವನೆಯಿಂದಾಗಿ ಕ್ಯಾನ್ಸರ್ಗೆ ಕಾರಣವಾಗುತ್ತದೆ ಹಾಗೆಯೇ ಇದರ ಸೇವನೆ ತ್ಯಜಿಸಿ ಉತ್ತಮ ಜೀವನ ಶೈಲಿಯನ್ನು ರೂಢಿಸಿಕೊಂಡು ಬದುಕು ನಡೆಸುವ ಬಗೆಗೆ ಅರಿವು ಮೂಡಿಸಿದರು. ಕಾಲೇಜಿನ […]
ಬಸ್ರೂರು: ಕೋಟೆ ಆಂಜನೇಯ ದೇವಸ್ಥಾನ ಕ್ಕೆ ಸ್ಯಾಂಡಲ್ ವುಡ್ ನಟ ಹಾಗೂ ನಿರ್ದೇಶಕರು ಭೇಟಿ
ಬಸ್ರೂರು(ಫೆ.6): ಖ್ಯಾತ ಸ್ಯಾಂಡಲ್ ವುಡ್ ನಟ ಯಶ್ ಹಾಗೂ ಸಂಗೀತ ನಿರ್ದೇಶಕರಾದ ರವಿ ಬಸ್ರೂರು ಕೋಟೆ ಆಂಜನೇಯ ದೇವಸ್ಥಾನಕ್ಕೆ ಇತ್ತೀಚೆಗೆ ಭೇಟಿ ನೀಡಿದರು. ಈ ಸಂಧರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶ್ರೀಕಾಂತ್ ಕೆರೆಕಟ್ಟೆ, ಸುಬ್ರಹ್ಮಣ್ಯ ಭಟ್,ಸದಾನಂದ ಮಾರ್ಗೋಳಿ, ಕೃಷ್ಣ ಪೈಂಟರ್, ಸಂಜೀವ ಮೇಸ್ತ್ರಿ, ಸುಬ್ರಹ್ಮಣ್ಯಕಾಂತ್ ಕೆರೆಕಟ್ಟೆ, ಬಾಲಕೃಷ್ಣ ಶೇರೆಗಾರ್,ಪ್ರದೀಪ ಕುಮಾರ್ ಬಸ್ರೂರು,ಗುರುಪ್ರಸಾದ್ ದೇವಾಡಿಗ,ಶಿವಪ್ರಸಾದ್ ಭಟ್,ಮಹೇಶ್ ಕಿಣಿ ಹಾಗೂ ಸಂತೋಷ್ ಬಳ್ಕೂರು ಉಪಸ್ಥಿತರಿದ್ದರು.
ಬಗ್ವಾಡಿ: ರಸ್ತೆ ದುರಸ್ತಿಗೆ ಶಾಸಕ ಬಿ.ಎಮ್.ಸುಕುಮಾರ್ ಶೆಟ್ಟಿಯವರಿಗೆ ಮನವಿ
ವಂಡ್ಸೆ(ಫೆ.6): ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನಕ್ಕೆ ಹೋಗುವ ರಸ್ತೆಯ ಸೇತುವೆ ನಂತರದ ಸುಮಾರು 600 ಮೀಟರ್ ರಸ್ತೆ ಸಂಪೂರ್ಣ ಹಾಳಾಗಿದ್ದು , ರಸ್ತೆ ದುರಸ್ತಿ ಮಾಡಲು ಶಾಸಕ ಶ್ರ್ರೀ ಸುಕುಮಾರ್ ಶೆಟ್ಟಿ ಯವರಿಗೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಶಾಸಕರ ಗ್ರಹ ಕಛೇರಿಯಲ್ಲಿ ಮನವಿ ನೀಡಲಾಯಿತು. ದೇವಸ್ಥಾನದ ಜಾತ್ರೆಯೊಳಗೆ ರಸ್ತೆ ನಿರ್ಮಿಸಿ ಕೊಡುವುದಾಗಿ ಶಾಸಕರು ಭರವಸೆ ನೀಡಿದ್ದಾರೆ. ಈ ಸಂಧರ್ಭದಲ್ಲಿ ಮೊಗವೀರ ಮಹಾಜನ ಸಂಘ(ರಿ). ಬಗ್ವಾಡಿ ಹೋಬಳಿಯ ಕುಂದಾಪುರ ಶಾಖೆಯ […]
ಸೈಬ್ರಕಟ್ಟೆ: ಆರೋಗ್ಯ ಅರಿವು ಕಾರ್ಯಕ್ರಮ
ಸೈಬ್ರಕಟ್ಟೆ(ಫೆ.6): ಜಿಲ್ಲಾ ಪಂಚಾಯತ್ ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಸೈಬ್ರಕಟ್ಟೆ ಹಾಗೂ ರೋಟರಿ ಕ್ಲಬ್ ಸೈಬ್ರಕಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ಕಾಜ್ರಹಳ್ಳಿ ಶ್ರೀ ವಿಘ್ನೇಶ್ವರ ಗೇರುಬೀಜ ಕಾರ್ಖಾನೆಯ ವಠಾರದಲ್ಲಿ ಕಲಾವಿದರಾದ ಡಾ.ಗಣೇಶ್ ಗಂಗೊಳ್ಳಿ ಮತ್ತು ಬಳಗದವರಿಂದ ಜಾನಪದ ಕಲಾ ಪ್ರದರ್ಶನ ,ಬೀದಿನಾಟಕದ ಮೂಲಕ ತಾಯಿ ಮಕ್ಕಳ ಆರೋಗ್ಯ ಹಾಗೂ ಕರೋನ / ಸಾಂಕ್ರಾಮಿಕ ರೋಗಗಳ ಕುರಿತು […]
ಕುಂದಾಪುರ ಸ.ಪ.ಪೂ ಕಾಲೇಜು: ವಿಶ್ವಾಸ ಕಿರಣ ಕಾರ್ಯಕ್ರಮ
ಕುಂದಾಪುರ (ಫೆ.6): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದ ವಿದ್ಯಾರ್ಥಿಗಳಿಗಾಗಿ ಒಂದು ತಿಂಗಳ ಆಂಗ್ಲ ಭಾಷಾ ವಿಷಯದ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆ ಹಮ್ಮಿಕೊಂಡಿರುವ ವಿಶ್ವಾಸ ಕಿರಣ ತರಗತಿಗಳನ್ನು ಕುಂದಾಪುರ ಸ.ಪ.ಪೂ ಕಾಲೇಜಿನಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 101 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿದ್ದು, ಪ್ರತಿ ದಿನವೂ ಮೂರು ತಂಡಗಳನ್ನು ಮಾಡಿ ತರಗತಿಗಳನ್ನು ನಡೆಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲ ಶ್ರೀ […]
ಡಾ.ಬಿ.ಬಿ ಹೆಗ್ಡೆ ಕಾಲೇಜು: ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ವಾರ್ಷಿಕ ಚಟುವಟಿಕೆ ಉದ್ಘಾಟನೆ
ಕುಂದಾಪುರ (ಫೆ:03): ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಇದರ ಜಿಲ್ಲಾ ತರಬೇತಿ ಆಯುಕ್ತರಾದ ಆನಂದ ಅಡಿಗ ರವರು ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ರೇಂಜರ್ಸ್ ಮತ್ತು ರೋವರ್ಸ್ ಘಟಕದ 2021 -2022 ನೇ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಹೆಚ್ಚಾಗಬೇಕು, ಪ್ರತಿಫಲದ ಅಪೇಕ್ಷೆ ಇಲ್ಲದೇ ಕಾರ್ಯಮಾಡಲು ಮುಂದಾಗಬೇಕು. ವಿಧೇಯತೆ, ವಿನಯತೆ ಅಳವಡಿಸಿಕೊಂಡು ಪರೋಕಾರಕ್ಕೆ ಸ್ಪಂದಿಸಬೇಕು ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. […]
ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ
ಕೋಟೇಶ್ವರ (ಫೆ.2): ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ವಿಧ್ಯಾರ್ಥಿಗಳಿಗೆ ನೆನಪಿನ ಶಕ್ತಿ ವೃದ್ಧಿಸುವ ಹಾಗೂ ಪರಿಣಾಮಕಾರಿ ಕಲಿಕೆ ಕುರಿತಾದ ತರಬೇತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರೊ.ಮೆಲ್ವಿನ್ ಡಿ’ಸೋಜ ರವರು ಸಂಪನ್ಮೂಲ ವ್ಯಕ್ತಿ ಯಾಗಿ ಆಗಮಿಸಿ ವಿದ್ಯಾರ್ಥಿಗಳು ಯಾವ ರೀತಿಯಲ್ಲಿ ತಮ್ಮ ಎಡ ಹಾಗೂ ಬಲ ಭಾಗದ ಮೆದುಳನ್ನು ಸಮತೋಲನದಲ್ಲಿ ಇರಿಸಿಕೊಂಡು ನೆನಪಿನ ಶಕ್ತಿ ಹೆಚ್ಚಿಸ ಬೇಕು ಎಂಬುದನ್ನು […]
ಅನಾರೋಗ್ಯ ಪೀಡಿತ ಮಗುವಿನ ಬಾಳಲ್ಲಿ ಬೆಳಕಾದ ಡಾ. ಗೋವಿಂದ ಬಾಬು ಪೂಜಾರಿ
ಡಾ. ಗೋವಿಂದ ಬಾಬು ಪೂಜಾರಿ ಇವರ ಹೆಸರು ಕೇಳದೆ ಇರುವವರು ಅತೀ ವಿರಳ. ಕನಾರ್ಟಕದ ಕರಾವಳಿ ಭಾಗದಿಂದ ಹಿಡಿದು ವಿವಿದ ರಾಜ್ಯಗಳಲ್ಲಿ ತಮ್ಮ ಉದ್ಯಮವನ್ನು ವಿಸ್ತಾರ ಮಾಡಿದ ಉದ್ಯಮ ಸಾಹಸಿ .ಕಡು ಬಡತನದಲ್ಲಿ ಜನಿಸಿದ ಇವರು ತಮ್ಮ ಸ್ವ ಪರಿಶ್ರಮದಿಂದನೆ ದುಡಿದು ಬಹುದೊಡ್ಡ ಯುವ ಉದ್ಯಮಿಗಳ ಸಾಲಿನಲ್ಲಿ ಗುರುತಿಸಿಕೊಂಡಿದ್ದಾರೆ. ಡಾ.ಗೋವಿಂದ ಪೂಜಾರಿಯವರು ತನ್ನ ದುಡಿಮೆಯ ಒಂದು ಭಾಗವನ್ನು ಸಮಾಜ ಸೇವೆಗೆ ಮೀಸಲಿರಿಸಿ ಕಡುಬಡವರು, ಅನಾರೋಗ್ಯ ಪೀಡಿತರು, ನಿರ್ಗತಿಕರು, ವಸತಿರಹಿತರ ಪಾಲಿಗೆ […]
ಡಾ. ಬಿ.ಬಿ. ಹೆಗ್ಡೆ ಕಾಲೇಜು : ರಕ್ಷಕ- ಶಿಕ್ಷಕ ಸಭೆ
ಕುಂದಾಪುರ (ಫೆ.1):ಈಗಿನ ಆಹಾರ ಪದ್ಧತಿ, ಮೊಬೈಲ್ ಬಳಕೆಗಳ ಕಾರಣಕ್ಕೆ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚಾಗುತ್ತಿವೆ. ದುರ್ಬಲ ಮನಸ್ಸಿನ ಮಕ್ಕಳ ಬಗ್ಗೆ ಪೋಷಕರು ಎಚ್ಚರಿಕೆ ವಹಿಸಬೇಕು. ಇಂತಹ ವಿದ್ಯಾರ್ಥಿಗಳನ್ನು ತರಗತಿಯಲ್ಲಿ ಸಾಮೂಹಿಕವಾಗಿ ವಿಚಾರಿಸುವುದಕ್ಕಿಂತ ಸಾಧ್ಯವಾದಷ್ಟು ಪ್ರತ್ಯೇಕವಾಗಿ ವಿಚಾರಣೆ ಅತಿ ಅವಶ್ಯಕ ಎಂದು ಖ್ಯಾತ ಮನೋವೈದ್ಯ ಡಾ.ಪಿ.ವಿ ಭಂಡಾರಿಯವರು ಹೇಳಿದರು. ಅವರು ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ರಕ್ಷಕ ಶಿಕ್ಷಕ ಸಂಘದ ಸಭೆಯಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಸಭೆಯ […]